ಬೆಂಗಳೂರು, ಕರ್ನಾಟಕ: ಬೆಳಗಾವಿ ಜಿಲ್ಲೆಯ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿರುವ ಬೈಲಹೊಂಗಲ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಹಾಲಿ ಶಾಸಕ, ಕೈ ಅಭ್ಯರ್ಥಿ ಮಹಾಂತೇಶ್ ಕೌಜಲಗಿ ಅವರು 58,408 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿ ಜಗದೀಶ್ ಮೆಟಗುಡ್ 55,630 ಮತಗಳನ್ನು ಪಡೆದುಕೊಂಡರೆ, ಪಕ್ಷೇತರ ಅಭ್ಯರ್ಥಿಯು 25 ಸಾವಿರ ಚಿಲ್ಲರೆ ಮತಗಳನ್ನು ಸಂಪಾದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಯ ಅಭ್ಯರ್ಥಿಯ ವಿರುದ್ಧ ಮಹಾಂತೇಶ್ ಕೌಜಲಗಿ ಅವರು 2778 ಮತಗಳ ಅಂತರದಲ್ಲಿ ಗೆದ್ದಿದ್ದಾರೆ(Bailahongal Election Results).
2023ರ ಚುನಾವಣಾ ಅಭ್ಯರ್ಥಿಗಳು
ಕಾಂಗ್ರೆಸ್‌ನ ಹಾಲಿ ಶಾಸಕ ಮಹಾಂತೇಶ್ ಕೌಜಲಗಿ ಅವರು ಮತ್ತೆ ಕಣದಲ್ಲಿದ್ದರು. ಜಗದೀಶ್ ಮೆಟಗುಡ್ ಅವರಿಗೆ ಮತ್ತೆ ಟಿಕೆಟ್ ನೀಡಿತ್ತು. ಜೆಡಿಎಸ್‌ನಿಂದ ಶಂಕರ್ ಮಾದಲಿಗಿ ಅವರಿ ಕಣದಲ್ಲಿದ್ದರು.
ಇದನ್ನೂ ಓದಿ: Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ
2018ರ ಚುನಾವಣೆಯ ಫಲಿತಾಂಶ ಏನಾಗಿತ್ತು?
ಬೈಲಹೊಂಗಲ ಬೆಳಗಾವಿ ಜಿಲ್ಲೆಯ ಮತ್ತೊಂದು ಪ್ರಮುಖ ಕ್ಷೇತ್ರವಾಗಿದೆ. ಈ ಕೇತ್ರವು ಕಾಂಗ್ರೆಸ್ ಮತ್ತು ಜನತಾ ದಳದ ಪ್ರಾಬಲ್ಯ ಹೊಂದಿದ ಕ್ಷೇತ್ರವಾಗಿದೆ. ಇತ್ತೀಚೆಗೆ ಬಿಜೆಪಿ ಕೂಡ ತನ್ನ ಪ್ರಾಬಲ್ಯವನ್ನು ಮೆರೆಯುತ್ತಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮಹಾಂತೇಶ್ ಕೌಜಲಗಿ ಅವರು 47050 ಮತಗಳನ್ನು ಪಡೆದುಕೊಂಡು ಗೆದ್ದಿದ್ದರು. ಇವರ ಪ್ರತಿಸ್ಪರ್ಧಿ ಅಭ್ಯರ್ಥಿ ಜಗದೀಶ್ ಮೆಟಗುಡ್ ಅವರು 41918 ಮತಗಳನ್ನು ಪಡೆದುಕೊಂಡರೆ ಮೂರನೇ ಸ್ಥಾನದಲ್ಲಿದ್ದ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಈರನಗೌಡ ಪಾಟೀಲ್ ಅವರು 37498 ಮತಗಳನ್ನು ಪಡೆದುಕೊಂಡಿದ್ದರು. ನಾಲ್ಕನೇ ಸ್ಥಾನದಲ್ಲಿದಲ್ಲಿ ಜೆಡಿಎಸ್ ಅಭ್ಯರ್ಥಿ 13 ಸಾವಿರ ಚಿಲ್ಲರೆ ಮತ ಪಡೆದಿದ್ದರು.