ಬೆಳಗಾವಿ: ಕೆಲ ರಾಜಕಾರಣಿಗಳಿಂದ ಜಾತಿ, ಧರ್ಮಗಳ ಮಧ್ಯೆ ವ್ಯಾಪಕ ಸಂಘರ್ಷ ಹುಟ್ಟು ಹಾಕುವ ಕೆಲಸ ನಡೆಯುತ್ತಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.
ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಕೀಯ ಧುರೀಣರು ಸರ್ವ ಜನಾಂಗದ ಶ್ರೇಯೋಭಿವೃದ್ಧಿಗೆ ಗಮನ ಹರಿಸುತ್ತಿಲ್ಲ. ಶಾಂತಿ ಮತ್ತು ಸೌಹಾರ್ದತೆ ಬೆಳೆಸದೆ, ಅಧಿಕಾರದ ಗದ್ದುಗೆಗಾಗಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಜನರ ಭಾವನೆಗಳನ್ನು ಕೆರಳಿಸುವಂತಹ ಕೆಲಸವನ್ನು ಕೆಲ ರಾಜಕಾರಣಿಗಳು ಮಾಡುತ್ತಿದ್ದಾರೆ. ಇಂತಹ ಕೃತ್ಯವನ್ನು ಯಾರೂ ಮಾಡಬಾರದೆಂಬ ಸಂದೇಶ ನೀಡಲು ಇಚ್ಛಿಸುತ್ತೇನೆ ಎಂದರು ತಿಳಿಸಿದ್ದಾರೆ.
ಭಾರತೀಯ ಸಂಸ್ಕೃತಿಯಲ್ಲಿ ಎಲ್ಲರೂ ಒಂದಾಗಿ ಬಾಳಬೇಕು. ಶಾಂತಿ, ನೆಮ್ಮದಿಯಿಂದ ಬದುಕು ಕಟ್ಟಿಕೊಳ್ಳಬೇಕು. ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮಗಳಿಗೆ ನಿಷ್ಠೆ ಹೊಂದಬೇಕು. ಪರಧರ್ಮದ ಬಗ್ಗೆ ಸಹಿಷ್ಣತಾ ಮನೋಭಾವ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಧರ್ಮ, ಜಾತಿಗಳ ಮಧ್ಯೆ ಸಂಘರ್ಷ ತಡೆಯಲು ಸಾಧ್ಯ. ಸ್ವಾಭಿಮಾನದ ಕೊರತೆಯಿಂದಾಗಿ ಎಲ್ಲ ರಂಗಗಳಲ್ಲಿ ಅನೇಕ ಸಂಘರ್ಷ ಉಂಟಾಗುತ್ತಿವೆ. ಹೀಗಾಗಿ ಸ್ವಾಭಿಮಾನದ ಜೀವನ ಪ್ರತಿಯೊಬ್ಬರದ್ದಾಗಬೇಕು ಎಂದು ಕರೆ ನೀಡಿದ್ದಾರೆ.
ಇದನ್ನೂ ಓದಿ | ಟಿಪ್ಪು ವಿವಾದ | ಗಿರೀಶ್ ಕಾರ್ನಾಡ್ ಬರೆದ ಪುಸ್ತಕದಲ್ಲೇನಿದೆ? ಅದರಲ್ಲಿ ಮಹಾರಾಜರ ಬಗ್ಗೆ ಏನು ಹೇಳಲಾಗಿದೆ?