ಬೆಂಗಳೂರು: ಕರ್ನಾಟಕ ಪ್ರದೇಶ ಬಲಿಜ ಸಂಘ ವತಿಯಿಂದ 2ಎ ಮೀಸಲಾತಿ ಆಗ್ರಹಿಸಿ ಬಲಿಜ ಸಂಕಲ್ಪ ಸಭೆಯನ್ನು ಶುಕ್ರವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಲಾಗಿತ್ತು. ಸರ್ಕಾರ ನಮ್ಮಿಂದ ಕಿತ್ತುಕೊಂಡ 2ಎ ಮೀಸಲಾತಿಯನ್ನು (2A Reservation) ನಮಗೆ ಮತ್ತೆ ಮರಳಿ ನೀಡಬೇಕು ಎಂದು ಆಗ್ರಹಿಸಿದರು. ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಲಿಜ ಸಮುದಾಯವರು ಸಂಕಲ್ಪ ಸಭೆಯಲ್ಲಿ ಸೇರಿದ್ದರು.
ಕರ್ನಾಟಕ ಪ್ರದೇಶ ಬಲಿಜ ಸಂಘದ ಬೆಂಗಳೂರಿನ ಅಧ್ಯಕ್ಷರಾದ ಪೆರಿಕಲ್ ಎಂ. ಸುಂದರ್ ಮಾತನಾಡಿ, ಶಿಕ್ಷಣ, ಉದ್ಯೋಗ, ರಾಜಕೀಯ ಕ್ಷೇತ್ರದಲ್ಲಿ ನಮ್ಮ ಜನಾಂಗಕ್ಕೆ 2ಎ ಮೀಸಲಾತಿ ಅಗತ್ಯವಿದೆ. ಕಳೆದ 28 ವರ್ಷಗಳಿಂದ ಮೀಸಲಾತಿಗಾಗಿ ನಿರಂತರ ಹೋರಾಟ ನಡೆಸುತ್ತಿದ್ದೇವೆ. ಆದರೂ ಕೂಡ ಸರ್ಕಾರಕ್ಕೆ ನಮ್ಮ ಕೂಗು ಕೇಳಿಸುತ್ತಿಲ್ಲ. ಹೀಗಾಗಿ ಈ ಬಾರಿ ಒಂದು ದಿಟ್ಟ ನಿರ್ಧಾರಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: Bmtc Driver: ಡಿಪೋ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಬಿಎಂಟಿಸಿ ಚಾಲಕ; ವಿಷ ಕುಡಿದು ಆತ್ಮಹತ್ಯೆಗೆ ಯತ್ನ
ಸರ್ಕಾರಕ್ಕೆ ನಮ್ಮ ಕೂಗು ಕೇಳಿಸುವವರೆಗೆ ನಾವು ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ. ಸರ್ಕಾರ ಆದಷ್ಟು ಬೇಗ ನಮಗೆ 2ಎ ಮೀಸಲಾತಿಯನ್ನು ನೀಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ತೀವ್ರ ಮಟ್ಟವನ್ನು ತಲುಪುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.