ಬಳ್ಳಾರಿ: ಗಾಂಜಾ (Ganja) ಸೇವಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು (Students) ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದಿರುವ ಕೌಲ್ ಬಜಾರ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಭಾನುವಾರ ಬಳ್ಳಾರಿಯ ಕುವೆಂಪು ನಗರ ಮತ್ತು ಕೋಟೆ ಪ್ರದೇಶದಲ್ಲಿ ನಗರದ ಇಬ್ಬರು ವಿದ್ಯಾರ್ಥಿಗಳು ಗಾಂಜಾ ಸೇವನೆಯ ಮಾಹಿತಿ ಅರಿತ ಪೊಲೀಸರು ದಾಳಿ ಮಾಡಿದ್ದಾರ., ಇಬ್ಬರು ವಿದ್ಯಾರ್ಥಿಗಳ ಮೇಲೆ ಎನ್‌ಡಿಪಿಎಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ. ಆರೋಪಿತ ಇಬ್ಬರು ವಿದ್ಯಾರ್ಥಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೆಲ ತಿಂಗಳ ಹಿಂದೆ ಗಾಂಜಾ ಬಳಕೆ ಮತ್ತು ಮಾರಾಟ, ಪೂರೈಕೆ ಮೇಲೆ ಕೆಲವೊಬ್ಬ ವಿದ್ಯಾರ್ಥಿ ಮತ್ತು ಯುವಕರನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದರು. ಗಾಂಜಾ ಬಳಕೆಯ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟು ತಡೆಯುವ ನಿಟ್ಟಿನಲ್ಲಿ ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ.