ಬಳ್ಳಾರಿ: ಪರಿಸರ ದಿನ (Environment Day)ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿ ವರ್ಷ ಶಾಲೆಯೊಂದರಲ್ಲಿ (School) ಮಕ್ಕಳ ಹೆಸರಿನಲ್ಲಿ ಗಿಡ ನೆಟ್ಟು, ಮಕ್ಕಳೇ ಪೋಷಣೆ ಮಾಡುವುದರ ಮೂಲಕ ವಿಶೇಷವಾಗಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
ಗಣಿನಗರಿ ಬಳ್ಳಾರಿಯ ಎಸ್.ಕೆ. ಮೋದಿ ನ್ಯಾಷನಲ್ ಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಪ್ರತಿವರ್ಷ ವಿದ್ಯಾರ್ಥಿಗಳ ಹೆಸರಿನಲ್ಲಿ ಸಸಿ ನೆಟ್ಟು ವಿದ್ಯಾರ್ಥಿಗಳೇ ಪೋಷಿಸುವ ಮೂಲಕ ಪರಿಸರ ಜಾಗೃತಿ ಕುರಿತು ಅರಿವು ಮೂಡಿಸಲಾಗುತ್ತಿದೆ.
ಇದನ್ನೂ ಓದಿ: ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್‌ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
ವಿಸ್ತಾರ ನ್ಯೂಸ್ ಸಹಯೋಗದೊಂದಿಗೆ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ವರ್ಷ 60 ಮಕ್ಕಳ ಹೆಸರಿನಲ್ಲಿ ಸಸಿ ನೆಡುವ ಮೂಲಕ ಶಾಲೆ ಮಾದರಿಯಾಗಿದೆ.
ಶಾಲೆಯ ಏಳನೇ ತರಗತಿಯ ಪ್ರತಿಯೊಬ್ಬರ ವಿದ್ಯಾರ್ಥಿಗಳ ಹೆಸರಿನಲ್ಲಿ ನಾನಾ ರೀತಿಯ ಸಸಿಗಳನ್ನು ನೆಡುವ ಮೂಲಕ ಪರಿಸರ ಕಾಳಜಿಯನ್ನು ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ಮೆರೆದಿದ್ದಾರೆ.
ಹಸಿರಾಗಿಸಿದ ಶಾಲೆಯ ಆವರಣ
ಈಗಾಗಲೇ ಕಳೆದ ಎರಡು ವರ್ಷದಿಂದ ಈ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ. ಶಾಲೆಯ ಆವರಣದಲ್ಲಿ ಕಳೆದ ವರ್ಷ ಮಾವು, ಬೇವು, ತೆಂಗು ಹಾಗೂ ನಾನಾ ರೀತಿಯ ಸಸಿಗಳನ್ನು ಐವತ್ತು ವಿದ್ಯಾರ್ಥಿಗಳ ಹೆಸರಿನಲ್ಲಿ ನೆಟ್ಟು ಬೆಳೆಸಿದ್ದಾರೆ. ಅದರಂತೆ ಈ ವರ್ಷ ಕೂಡ 60 ವಿದ್ಯಾರ್ಥಿಗಳ ಹೆಸರಿನಲ್ಲಿ ಪರಿಸರ ದಿನದಂದು ನೆಡುವ ಮೂಲಕ ಪರಿಸರ ಪ್ರೇಮವನ್ನು ಎತ್ತಿಹಿಡಿದ್ದಾರೆ.
ಈ ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ವಿದ್ಯಾರ್ಥಿಗಳಿಗೆ ಸಾಥ್ ನೀಡಿದ್ದಾರೆ.
ಇದನ್ನೂ ಓದಿ: ಇನ್ನು ಬೆಂಗಳೂರಿನಿಂದ ಚೆನ್ನೈಗೆ ಎರಡೇ ಗಂಟೆ ಸಾಕು, ಶೀಘ್ರ ಮೈಸೂರು-ಬೆಂಗಳೂರಿಗೂ ಬರಲಿದೆ ಬುಲೆಟ್ ಟ್ರೈನ್!
ಈ ಸಂದರ್ಭದಲ್ಲಿ ಶಾಲಾ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಜಿ. ರಾಜಶೇಖರ ಗೌಡ, ಮುಖ್ಯಗುರು ಸರಸ್ವತಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.