Site icon Vistara News

Ballari News: ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿ ಪಡೆದ ಶಾಸಕ ನಾರಾ ಭರತ್ ರೆಡ್ಡಿ

Ballari City MLA Nara Bharat Reddy who won the best state exporter award

ಬಳ್ಳಾರಿ: ಬೆಂಗಳೂರಿನ ವಿಧಾನಸೌಧದ (Vidhanasoudha) ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ (Award ceremony) ಶ್ರೀ ರಾಘವೇಂದ್ರ ಎಂಟರ್‌ಪ್ರೈಸಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಬಳ್ಳಾರಿ ನಗರ ಶಾಸಕ (MLA) ನಾರಾ ಭರತ್ ರೆಡ್ಡಿ ಅವರಿಗೆ ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಯಿತು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಪ್ರಶಸ್ತಿ ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Weather report : ಥಂಡಾ ಹೊಡೆದ ಬೆಂಗಳೂರು; ಕರಾವಳಿಯಲ್ಲಿ ಮಳೆ ಜೋರು

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹಾಗೂ ಇತರರು ಪಾಲ್ಗೊಂಡಿದ್ದರು.

Exit mobile version