Site icon Vistara News

Ballari News: ಮಾದಕ ವಸ್ತುಗಳಿಂದ ಯುವ ಸಮುದಾಯ ದೂರ ಇರಬೇಕು: ಡಾ. ವೀರೇಂದ್ರ ಕುಮಾರ್

Inauguration of International Day Against Drug Abuse and Trafficking at Ballari

ಬಳ್ಳಾರಿ: ಯುವ ಸಮುದಾಯವು (Youth community) ಮಾದಕ ವಸ್ತುಗಳ (Drugs) ಬಗ್ಗೆ ಅರಿವು ಹೊಂದಬೇಕು ಹಾಗೂ ಅವುಗಳಿಂದ ದೂರವಿರಬೇಕು. ಮಾದಕ ವಸ್ತುಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ವೀರೇಂದ್ರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಅಬಕಾರಿ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರಾಗೃಹ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಸಹಯೋಗದಲ್ಲಿ ‘ಜನತೆ ಕಳಂಕ ಮತ್ತು ತಾರತಮ್ಯ ಮೊದಲು ನಿಲ್ಲಿಸಿ ತಡೆಗಟ್ಟುವಿಕೆಯನ್ನು ಬಲಪಡಿಸಿ’ ಎಂಬ ಘೋಷವಾಕ್ಯದೊಂದಿಗೆ ನಗರದ ಕೌಲ್‍ಬಜಾರ್‌ನ ಜವಾಹರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Viral News: 40 ಸಾವಿರ ರೂ. ಆಸೆಗೆ ಮಗಳನ್ನೇ ಮಾರಿದ ಪೋಷಕರು, ಹಣದ ಮುಂದೆ ಕರುಳ ಕುಡಿ ಶೂನ್ಯವೇ?

ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ವ್ಯಸನವು ಅತೀ ಹೆಚ್ಚಾಗುತ್ತಿದ್ದು, ಅದರಲ್ಲಿ ಯುವ ಜನತೆ ಇದಕ್ಕೆ ದಾಸರಾಗುತ್ತಿರುವುದು ಅತೀ ದುಃಖದ ವಿಷಯವಾಗಿದೆ. ಹಾಗಾಗಿ ಯುವಕರು ಜಾಗೃತರಾಗಿ ಕುಟುಂಬ ಸದಸ್ಯರ ನೆರವಿನಿಂದ ಚಿಕಿತ್ಸೆ ಪಡೆದರೆ ಬೇಗ ಗುಣಮುಖರಾಗಬಹುದು ಎಂದು ತಿಳಿಸಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮಾನಸಿಕ ತಜ್ಞೆ ಡಾ .ಭುವನೇಶ್ವರಿ ದೇವಿ ಮಾತನಾಡಿ, ಮಾದಕ ವಸ್ತುಗಳ ಸೇವನೆ ಮಾಡಿದರೆ ವ್ಯಕ್ತಿಯಲ್ಲಿ ವರ್ತನೆಯಲ್ಲಿ ಬದಲಾವಣೆಗಳಾಗುವುದಲ್ಲದೇ ಮಾನಸಿಕ ಖಿನ್ನತೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಮಾತ್ರೆ ಮತ್ತು ಚುಚ್ಚು ಮದ್ದು ರೂಪದಲ್ಲಿ ಔಷಧಿ ಲಭ್ಯವಿದ್ದು, ಚಟಕ್ಕೆ ದಾಸರಾದ ವ್ಯಕ್ತಿಗಳು ಔಷಧೋಪಚಾರ ಪ್ರಾರಂಭಿಸಿದರೆ ವ್ಯಸನವು ಬೇಗ ಹತೋಟಿಗೆ ಬರುತ್ತದೆ ಎಂದರು.

ಇದನ್ನೂ ಓದಿ: IPL: ಜಾಸ್​ ಬಟ್ಲರ್​ಗೆ ಬಿಗ್ ಆಫರ್ ನೀಡಿದ ರಾಜಸ್ಥಾನ್​ ರಾಯಲ್ಸ್​

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದಿಂದ ಮನೋಚೈತನ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ಮಂಗಳವಾರ ಎಲ್ಲ ತಾಲೂಕು ಕೇಂದ್ರಗಳಲ್ಲಿ ಉಚಿತ ಆರೋಗ್ಯ ಶಿಬಿರ ತಪಾಸಣೆ ಏರ್ಪಡಿಸಿ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ಚಿಕಿತ್ಸೆ ನೀಡಲಾಗುತ್ತದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಂಡು ವ್ಯಸನದಿಂದ ಮುಕ್ತಿ ಹೊಂದಿ ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಮಾಣಪತ್ರ ಮತ್ತು ಬಹುಮಾನಗಳನ್ನು ವಿತರಿಸಲಾಯಿತು.

ಜವಾಹರ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ಮುಖ್ಯ ಗುರು ಇಬ್ರಾಹಿಂ ಖಲೀಲ್ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಪೂರ್ಣಿಮಾ. ಎಸ್ ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿಯಾಂತ್ರಣಾಧಿಕಾರಿ ಡಾ. ಇಂದ್ರಾಣಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ, ಬ್ರೂಸ್‍ಪೇಟೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಸುರೇಖಾ, ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ. ಪವಿತ್ರ ಆಲೂರು, ಪೊಲೀಸ್ ಇನ್ಸ್‍ಪೆಕ್ಟರ್ ನಾಗಭೂಷಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: World Cup 2023 : ವಿಶ್ವ ಕಪ್​ ಮೊದಲು ಬಲಿಷ್ಠ ತಂಡದೊಂದಿಗೆ ಏಕ ದಿನ ಸರಣಿ ಆಯೋಜಿಸಿದ ಬಿಸಿಸಿಐ

ಜಾಗೃತಿ ಜಾಥಾ

ಬಳಿಕ ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ಹಾಗೂ ಚಿಗುರು ಕಲಾ ತಂಡದಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಬೀದಿ ನಾಟಕ ಪ್ರದರ್ಶನದೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

Exit mobile version