Site icon Vistara News

Ballari News: ಮಾನವನ ದುರಾಸೆಗೆ ಪರಿಸರ ನಾಶ: ವಿಎಸ್‌ಕೆ ವಿವಿಯ ಕುಲಪತಿ ಪ್ರೊ. ಸಿದ್ದು ಪಿ. ಆಲಗೂರ

World Environment Day celebration at VSK University

ಬಳ್ಳಾರಿ: ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು, ಪರಿಸರವನ್ನು (Environment) ನಿರಂತರವಾಗಿ ನಾಶ (Destroyed) ಮಾಡುತ್ತಿದ್ದಾನೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿದ್ದು ಪಿ. ಆಲಗೂರ ಹೇಳಿದರು.

ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ನಿಮಿತ್ತ 50ಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಮತ್ತೊಂದು ಆಘಾತ! ಖರ್ಗೆಗೆ ‘ಕೈ’ ಕೊಟ್ಟು ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಯುವ ನಾಯಕ

ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ಪರಿಸರ ರಕ್ಷಣೆ ಉತ್ತೇಜಿಸಲು ಆಚರಿಸಲಾಗುತ್ತದೆ. ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವುದು ಪ್ರಸಕ್ತ ವರ್ಷದ ಧ್ಯೇಯವ್ಯಾಕ್ಯವಾಗಿದೆ. ಭೂಮಿಯ ಮೇಲಿನ ಪ್ರತಿಯೊಂದು ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Krishi Khajane : ಆರೋಗ್ಯಕರ ಅನಾನಸ್‌ ಬೆಳೆಯುವುದು ಕಷ್ಟವೇನಲ್ಲ!

ಈ ಸಂದರ್ಭದಲ್ಲಿ ವಿವಿಯ ಕುಲಸಚಿವ ಪ್ರೊ. ಎಸ್. ಸಿ. ಪಾಟೀಲ್, ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ಗೌರಿ ಮಾಣಕ್ ಮಾನಸ, ಕಾರ್ಯಕ್ರಮಾಧಿಕಾರಿಗಳಾದ ಡಾ.ಜ್ಯೋತಿಲಿಂಗ ವಿ., ವಾತ್ಸಲ್ಯ ಆರ್. ಮತ್ತು ಅರಣ್ಯ ಇಲಾಖೆ ಬಳ್ಳಾರಿ ಪ್ರಾದೇಶಿಕ ವಿಭಾಗದ ಸಿಬ್ಬಂದಿ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version