Site icon Vistara News

Ballari News: ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರುವ ಕೆಲಸ ಮಾಡಿ: ನ್ಯಾ.ಪುಷ್ಪಾಂಜಲಿ ದೇವಿ

World Anti Child Labor Day awareness rally at Ballari

ಬಳ್ಳಾರಿ: ಕೆಲಸದಲ್ಲಿ ತೊಡಗಿದ ಮಕ್ಕಳನ್ನು (Children) ಗುರುತಿಸಬೇಕು ಹಾಗೂ ಎಲ್ಲೇ ಕಂಡುಬಂದರೂ ವರದಿ (Report) ಮಾಡಬೇಕು, ಪೋಷಕರ (Parents) ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತರುವ ಕೆಲಸ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಎಸ್.ಎಚ್.ಪುಷ್ಪಾಂಜಲಿ ದೇವಿ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ, ವಿವಿಧ ಇಲಾಖೆಗಳ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ‘Social Justice for all End Child Labour’ ಎಂಬ ಘೋಷವ್ಯಾಕ್ಯದೊಂದಗೆ ಸೋಮವಾರ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ತರಬೇತಿ ಶಿಕ್ಷಣ ಸಂಸ್ಥೆ ಬಳಿಯಿಂದ ಹಮ್ಮಿಕೊಂಡಿದ್ದ ಜಾಗೃತಿ ಮೂಡಿಸುವ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: Monsoon Festivals: ಧೋ ಎಂದು ಸುರಿಯುವ ಮಳೆಯ ನಡುವೆ ಮನಸೆಳೆವ ಹಬ್ಬಗಳು!

ಯಾವುದೇ ಕಾರಣಕ್ಕೂ ಕಾನೂನು ಬಾಹಿರವಾಗಿ ಮಕ್ಕಳನ್ನು ದುಡಿಸಿಕೊಳ್ಳುವಂತಿಲ್ಲ. ಈ ಮೂಲಕ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಎಷ್ಟೇ ಬಡತನ ಇದ್ದರೂ ಮಕ್ಕಳು ಕಾರ್ಮಿಕರಾಗಿ ದುಡಿಯದೇ ಉತ್ತಮ ಶಿಕ್ಷಣ ಪಡೆದು ಒಳ್ಳೆಯ ಪ್ರಜೆಯಾಗಿ ಹೊರಹೊಮ್ಮಬೇಕು ಎಂದರು.

ಜಾಥಾವು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಆವರಣದಿಂದ ಆರಂಭವಾಗಿ ರೇಡಿಯೋ ಪಾರ್ಕ್‍ನಿಂದ ಕೌಲ್‍ಬಜಾರ್ ಪೊಲೀಸ್ ಠಾಣೆಯ ಮೂಲಕ ಬಾಬು ಜಗಜೀವನ್‍ ರಾಂ ಭವನದ ವೇದಿಕೆ ಕಾರ್ಯಕ್ರಮದವರೆಗೆ ತಲುಪಿತು.

ಇದನ್ನೂ ಓದಿ: UPSC Prelims Result 2023 : ಯುಪಿಎಸ್‌ಸಿ ಫೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟ

ವೇದಿಕೆ ಕಾರ್ಯಕ್ರಮ

ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯ ಬಾಬು ಜಗಜೀವನ್‍ರಾಂ ಭವನದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ವೇದಿಕೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್.ಹೊಸಮನೆ ಉದ್ಘಾಟಿಸಿದರು.

ಬಳ್ಳಾರಿ ನಗರದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್‌ ಎನ್. ಹೊಸಮನೆ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಶಿಕ್ಷಣ ಎಂಬುದು ಪ್ರತಿಯೊಂದು ಮಗುವಿನ ಹಕ್ಕು; ಪ್ರತಿಯೊಂದು ಮಗುವಿಗೂ ಕೂಡ ಶಿಕ್ಷಣ ಒದಗಿಸಬೇಕು. ಪ್ರತಿಯೊಂದು ಮಗುವನ್ನು ತಮ್ಮ ಮಗುವೆಂದು ಪರಿಭಾವಿಸಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕೆಲಸ ಮಾಡಬೇಕು ಎಂದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಎಲ್ಲಾ ಸೌಲಭ್ಯ ನೀಡಿದ್ದರೂ, ಖಾಸಗಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಹೊಂದುತ್ತಿದ್ದಾರೆ. ಸರ್ಕಾರಿ ಸೌಲಭ್ಯ ಪಡೆದುಕೊಂಡು ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ 18 ವರ್ಷ ಒಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದಿಲ್ಲ ಎಂಬ ಪ್ರತಿಜ್ಞಾವಿಧಿ ಬೋಧಿಸಿದರು.

ಇದನ್ನೂ ಓದಿ: ಮಂಗಳೂರು-ಮುಂಬಯಿ ಮಾರ್ಗದಲ್ಲಿ ಇನ್ನೊಂದು ಹೊಸ ವಿಮಾನ ಸಂಚಾರ ಪ್ರಾರಂಭ; ವೇಳಾಪಟ್ಟಿ ಹೀಗಿದೆ

ಕಾರ್ಯಕ್ರಮದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಮೌನೇಶ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ತಹಶೀಲ್ದಾರ ಬಲರಾಮ ಕಟ್ಟಿಮನಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎರ್ರಿಗೌಡ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಬಿ.ರವೀಂದ್ರನಾಥ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version