Site icon Vistara News

Banavasi Kadambhotsava: ಸಿಎಂ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ ಕಾಂಗ್ರೆಸ್; ವಿ.ಎಸ್. ಪಾಟೀಲ್ ನೇತೃತ್ವದಲ್ಲಿ ಆಕ್ರೋಶ

VS Patil protested Banavasi Kadambhotsava CM

#image_title

ಶಿರಸಿ: ಉತ್ತರ ಕನ್ನಡ ಜಿಲ್ಲೆ ಬನವಾಸಿಯಲ್ಲಿ ಆರಂಭವಾಗಲಿರುವ ಕದಂಬೋತ್ಸವಕ್ಕೆ (Banavasi Kadambhotsava) ಆಗಮಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ಪ್ರತಿಭಟನೆ ಬಿಸಿ ತಟ್ಟಿದೆ. ಕಾಂಗ್ರೆಸ್ ಮುಖಂಡ ವಿ.ಎಸ್. ಪಾಟೀಲ್ ನೇತೃತ್ವದಲ್ಲಿ ಬನವಾಸಿ ಬ್ಲಾಕ್ ಕಾಂಗ್ರೆಸ್‌ ಸಮಿತಿಯ ಕಾರ್ಯಕರ್ತರು ಸಿಎಂ ವಿರುದ್ಧ ಘೋಷಣೆ ಕೂಗಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕಿ ಸಿಎಂಗೆ ಮುಜುಗರಗೊಳಿಸಿದರು.

ಸಿಎಂ‌ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಪ್ರತಿಭಟನೆಯಿಂದ ಮುಜುಗರ ಉಂಟಾಯಿತು. ಬೆಳಗ್ಗೆ ಪೇ ಸಿಎಂ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಇದೀಗ ಸಿಎಂಗೆ ವಿರೋಧ ವ್ಯಕ್ತಪಡಿಸಿದರು.

ಬನವಾಸಿಗೆ ಆಗಮಿಸಿದ ಸಿಎಂ‌ ಬಸವರಾಜ ಬೊಮ್ಮಾಯಿ ವಿರುದ್ಧ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ವಿ.ಎಸ್. ಪಾಟೀಲ್, ಕದಂಬೋತ್ಸವ ಒಂದು ಪಕ್ಷದ ಉತ್ಸವವಾಗಿ ಮಾಡಲಾಗುತ್ತಿದೆ. ಈ ಭಾಗದಲ್ಲಿ ಕರೆಂಟ್ ಹಾಗೂ ನೀರಿಲ್ಲ. ಆದರೂ ಏತ ನೀರಾವರಿ ಯೋಜನೆ‌‌ ಉದ್ಘಾಟನೆ ಮಾಡಲಾಗುತ್ತಿದೆ. ಬನವಾಸಿ ಏತ ನೀರಾವರಿ ಯೋಜನೆಗೆ ಮಾಜಿ‌ ಸಿಎಂ ಸಿದ್ದರಾಮಯ್ಯ ಅನುದಾನ ಬಿಡುಗಡೆ ಮಾಡಿದ್ದರು. ಆದರೆ, ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ಕದಂಬೋತ್ಸವ ಯಾವುದೇ ಒಂದು ಪಕ್ಷದ ಕಾರ್ಯಕ್ರಮ ಅಲ್ಲ. ನಾನು ಕೂಡ ಕಾಂಗ್ರೆಸ್ ಬಾವುಟ ಹಾಕಿ‌ ಪ್ರತಿಭಟನೆ ಮಾಡುತ್ತೇನೆ ಅಂದರು. ಆ ಬಳಿಕ ಮಾಜಿ ಸಚಿವ ವಿ.ಎಸ್. ಪಾಟೀಲ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಬಿಡುಗಡೆಗೊಳಿಸಲಾಯಿತು.

ಇದನ್ನೂ ಓದಿ: GDP Growth : 2022ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಜಿಡಿಪಿ 4.4% ಏರಿಕೆ

Exit mobile version