ಬೆಂಗಳೂರು: ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ನಡುವೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಯ್ಯದ್ ಅಹ್ಮದ್ ಹುಸೇನ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ತಿಳಿಸಿದ್ದಾರೆ.
ಕರ್ನಾಟಕ ವಾಹನದಲ್ಲಿ ತುಂಬಿ ಹೋದ ಜನ
ತಮಿಳುನಾಡು ಬಸ್ಗಳು ಬೆಂಗಳೂರಿನಿಂದ ಆಚೆ ಉಳಿದಿರುವ ಕಾರಣ ಪ್ರಯಾಣಿಕರು ಕರ್ನಾಟಕ ಸಾರಿಗೆ ಮೊರೆ ಹೋಗಿದ್ದಾರೆ. ತಮಿಳುನಾಡಿನಿಂದ ಬೆಂಗಳೂರಿಗೆ ಬರುವ ಬಸ್ ಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಸದ್ಯ ಕರ್ನಾಟಕ ಗಡಿ ಭಾಗದವರೆಗೂ ಮಾತ್ರ ತಮಿಳುಮಾಡಿನ ಖಾಸಗಿ ಬಸ್ ಗಳ ಸೇವೆ ಇದೆ.