Site icon Vistara News

Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

Bangalore Hotels

ಬೆಂಗಳೂರು: ರಾಜಧಾನಿಯಲ್ಲಿ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ (Bangalore Hotels) ವ್ಯಾಪಾರ-ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮನವಿ ಪುರಸ್ಕರಿಸಿರುವ ಸರ್ಕಾರ, ಬೆಳಗ್ಗೆ 9ರಿಂದ ರಾತ್ರಿ 1 ಗಂಟೆವರೆಗೆ ವ್ಯಾಪಾರ-ವಹಿವಾಟು ನಡೆಸಲು ಅನುಮತಿ ನೀಡಿದೆ.

ಈ ಬಗ್ಗೆ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್‌ ಎನ್‌.ಕೆ. ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಸಿಎಲ್‌ 4, ಸಿಎಲ್‌ 6, ಸಿಎಲ್‌ 7, ಸಿಎಲ್‌ 7D ಲೈಸೆನ್ಸ್ ಪಡೆದ ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌ಗೆ ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆವರೆಗೆ ಹಾಗೂ ಸಿಎಲ್‌ 9 ಲೈಸೆನ್ಸ್ ಪಡೆದ ಬಾರ್‌ಗಳಿಗೆ ಬೆಳಗ್ಗೆ 10ರಿಂದ ಮಧ್ಯರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿನ ಸಮಯ ನಿಗದಿಪಡಿಸಲಾಗಿದೆ.

2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 269 ರಲ್ಲಿ ಘೋಷಿಸಲಾದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ವ್ಯಾಪಾರದ ದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯಾರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜುಲೈ 06 ರಂದು ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆ ಸಹಮತಿ ನೀಡಿದ ಹಿನ್ನೆಲೆ ವ್ಯಾಪಾರ-ವಹಿವಾಟು ವಿಸ್ತರಣೆಗೆ ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | Almonds For Health: ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು?

Lalbagh Flower Show: ಆ.8ರಿಂದ 19ವರೆಗೆ ಲಾಲ್‌ಬಾಗ್‌ ಫ್ಲವರ್‌ ಶೋ; ಅನಾವರಣವಾಗಲಿದೆ ಭೀಮ ಸಂದೇಶ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಲಾಲ್‌ಬಾಗ್‌ ಸಸ್ಯೋದ್ಯಾನದಲ್ಲಿ ಆ.8ರಿಂದ 19ವರೆಗೆ 216ನೇ ಫಲಪುಷ್ಪ ಪ್ರದರ್ಶನ (Lalbagh Flower Show) ನಡೆಯಲಿದೆ. ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ (Dr BR Ambedkar) ಅವರ ಜೀವನಗಾಥೆಯ ಥೀಮ್‌ ನೋಡುಗರನ್ನು ರಂಜಿಸಲಿದ್ದು, ಆಗಸ್ಟ್ 8 ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಫ್ಲವರ್‌ ಶೋಗೆ ಚಾಲನೆ ನೀಡಲಿದ್ದಾರೆ.

ಈ ಬಗ್ಗೆ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಶಾಮಲಾ ಇಕ್ಬಾಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಆಗಸ್ಟ್ 8 ರಿಂದ 19ವರೆಗೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಅಂಬೇಡ್ಕರ್ ಅವರ ಜೀವನ ಆಧಾರಿತ ಪುಷ್ಪ ಪ್ರದರ್ಶನ ಇರಲಿದ್ದು, ಆಗಸ್ಟ್ 8ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಲಿದ್ದಾರೆ. ಇನ್ನು ಮುಖ್ಯ ಅತಿಥಿಯಾಗಿ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ್ ಅವರು ಬರಲಿದ್ದಾರೆ ಎಂದ ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾತನಾಡಿ, ಈ ಬಾರಿ ಲಾಲ್‌ಬಾಗ್‌ ಪರಿಸರದಲ್ಲಿ ಭೀಮ ಸಂದೇಶ ಅನಾವರಣವಾಗಲಿದೆ. 12 ದಿನಗಳ ಕಾಲ 6 ಆಂಬ್ಯುಲೆನ್ಸ್ ಸೇರಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಡೆಂಗ್ಯೂ ಆತಂಕ ಇರುವುದರಿಂದ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಆಗಿತ್ತು, ಈ ಬಾರಿ ಅಂತಹ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಪ್ರವೇಶ ಶುಲ್ಕ ಎಷ್ಟು?

168 ವಿವಿಧ ಪ್ರಭೇದದ ಸಸ್ಯಗಳನ್ನು ನಾವೇ ಬೆಳೆದಿದ್ದೇವೆ. ದ್ವಿ ಚಕ್ರ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ, ಸಂಚಾರ ದಟ್ಟಣೆ ಕಡಿಮೆ ಮಾಡಲು ಜನರು ಆದಷ್ಟು ಮೆಟ್ರೋ ಬಳಸಬೇಕು. ಆನ್‌ಲೈನ್‌ ಟಿಕೆಟ್ ಕೂಡ ಲಭ್ಯವಿರುತ್ತದೆ. ಪ್ರವೇಶ ಶುಲ್ಕ ಮಕ್ಕಳಿಗೆ 30 ರೂ., ಸಾಮಾನ್ಯರಿಗೆ 100 ರೂ. ಇರಲಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾಹಿತಿ ನೀಡಿದರು.

Women PG: ಬೆಂಗಳೂರಿನಲ್ಲಿ ಮಹಿಳಾ ಪಿಜಿಗಳಿಗೆ ಇನ್ನು ಮುಂದೆ ಕಟ್ಟುನಿಟ್ಟಿನ ರೂಲ್ಸ್! ಫಾಲೋ ಮಾಡದಿದ್ದರೆ ಕೇಸ್

ಕಳೆದ ಬಾರಿ 60-70 ಲಕ್ಷ ಲಾಭ ಆಗಿದೆ.. ಈ ಬಾರಿ ಕೂಡ ಸಾಕಷ್ಟು ಆದಾಯ ಬರುವ ನಿರೀಕ್ಷೆ ಇದೆ. ವಾಕಿಂಗ್ ಬರುವವರು ಕೂಡ ಟಿಕೆಟ್ ತೆಗೆದುಕೊಂಡು ಬರಬೇಕು. ಪಾರ್ಕ್‌ನಲ್ಲಿ ಜೇನು ಹುಳುಗಳು ಇಲ್ಲ, ಎರಡು ವರ್ಷಗಳ ಹಿಂದೆ ಇತ್ತು, ಈಗ ಇಲ್ಲ. ಬಹುತೇಕ ಪ್ಲಾಸ್ಟಿಕ್ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

Exit mobile version