Site icon Vistara News

ಎಂಜಿ ರಸ್ತೆ-ಬೈಯಪ್ಪನಹಳ್ಳಿ ನಿಲ್ದಾಣದ ನಡುವೆ ಶನಿವಾರ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Namma Metro

ಬೆಂಗಳೂರು: ‌ಬೆಂಗಳೂರು ಮೆಟ್ರೋ ರೈಲು ನಿಗಮದ ನೇರಳೆ ಮಾರ್ಗದ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಜೂ.25ರಂದು ರಾತ್ರಿ 9.30 ಗಂಟೆಯಿಂದ ಎಂ.ಜಿ.ರಸ್ತೆ ನಿಲ್ದಾಣದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ನೇರಳೆ ಮಾರ್ಗದಲ್ಲಿ ಕೊನೆಯ ಮೆಟ್ರೋ ರೈಲು ಸೇವೆ ಕೆಂಗೇರಿ ಮೆಟ್ರೋ ನಿಲ್ಯಾಣದಿಂದ ಬೈಯಪ್ಪನಹಳ್ಳಿ ಕಡೆಗೆ ರಾತ್ರಿ 8.40 ಗಂಟೆಗೆ ಹೊರಡಲಿದೆ ಹಾಗೂ ಬೈಯಪ್ಪನಹಳ್ಳಿಯಿಂದ ಕೆಂಗೇರಿ ಕಡೆಗೆ ಕೊನೆಯ ಮೆಟ್ರೋ ರೈಲು ಸೇವೆ ರಾತ್ರಿ 9.30 ಗಂಟೆಗೆ ಲಭ್ಯವಿರುತ್ತದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ(ಮೆಜೆಸ್ಟಿಕ್‌)ದಿಂದ ಬೈಯಪ್ಪನಹಳ್ಳಿ ನಿಲ್ದಾಣಕ್ಕೆ ಹೋಗುವ ಕೊನೆಯ ರೈಲು ಸೇವೆ ರಾತ್ರಿ 9.10 ಕ್ಕೆ ಲಭ್ಯವಿರುತ್ತದೆ.

ಆದಾಗ್ಯೂ, ಮೆಟ್ರೋ ರೈಲು ಸೇವೆಯು ಎಂ.ಜಿ. ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ರಾತ್ರಿ 9.30 ಗಂಟೆಯಿಂದ ರಾತ್ರಿ 11.00 ಗಂಟೆಯವರೆಗೆ ವೇಳಾಪಟ್ಟಿಯ ಪ್ರಕಾರ ಲಭ್ಯವಿರುತ್ತದೆ. ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ. ಭಾನುವಾರ(ಜೂ.26) ನೇರಳೆ ಮಾರ್ಗದಲ್ಲಿ ಪೂರ್ಣವಾಗಿ ಬೆಳಗ್ಗೆ 7 ಗಂಟೆಯಿಂದ ವೇಳಾಪಟ್ಟಿಯ ಪ್ರಕಾರ ರೈಲು ಸೇವೆ ಮರು ಆರಂಭಿಸಲಾಗುತ್ತದೆ ಎಂದು ಬಿಎಂಆರ್‌ಸಿಎಲ್‌ ಮುಖ್ಯ ಸಾರ್ವಜನಿಕರ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ | ಮೆಟ್ರೋ ಸಂಪರ್ಕಕ್ಕಾಗಿ ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್‌

Exit mobile version