Modi In Karnataka: ಚನ್ನಪಟ್ಟಣದಲ್ಲಿ ಭಾನುವಾರ ಮೋದಿ ಪ್ರಚಾರ; ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ - Vistara News

ಕರ್ನಾಟಕ

Modi In Karnataka: ಚನ್ನಪಟ್ಟಣದಲ್ಲಿ ಭಾನುವಾರ ಮೋದಿ ಪ್ರಚಾರ; ಬೆಂಗಳೂರು-ಮೈಸೂರು ಹೆದ್ದಾರಿ ಬಂದ್

Modi In Karnataka: ಚನ್ನಪಟ್ಟಣದಲ್ಲಿ ನಡೆಯುವ ಬೃಹತ್‌ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಹಾಗಾಗಿ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇದಕ್ಕಾಗಿ, ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

VISTARANEWS.COM


on

bangalore mysore expressway restricted on Sunday For the Sake Of Modi Campaign In Channapatna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ (Modi In Karnataka) ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಾಲು ಸಾಲು ಚುನಾವಣೆ ರ‍್ಯಾಲಿ, ರೋಡ್‌ ಶೋಗಳ ಮೂಲಕ ಮತ ಬೇಟೆ ಆರಂಭಿಸಿದ್ದಾರೆ. ಇನ್ನು ಏಪ್ರಿಲ್‌ 30ರಂದು ನರೇಂದ್ರ ಮೋದಿ ಅವರು ಚನ್ನಪಟ್ಟಣದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಕಾರಣ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನ ಚನ್ನಪಟ್ಟಣ-ಮದ್ದೂರು ನಡುವೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಚನ್ನಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಬೃಹತ್‌ ಸಮಾವೇಶ ಆಯೋಜಿಸಲಾಗಿದ್ದು, ಮೋದಿ ಅವರು ಪ್ರಚಾರ ಕೈಗೊಳ್ಳಲಿದ್ದಾರೆ. ಸಮಾವೇಶದಲ್ಲಿ ಲಕ್ಷಾಂತರ ಜನ ಪಾಲ್ಗೊಳ್ಳಲಿದ್ದು, ಈಗಾಗಲೇ ವೇದಿಕೆ ನಿರ್ಮಾಣವಾಗಿದೆ. ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಹೆಚ್ಚಿನ ವಾಹನ ದಟ್ಟಣೆ ಇರಲಿದೆ. ಹಾಗೆಯೇ, ನರೇಂದ್ರ ಮೋದಿ ಅವರ ಭದ್ರತಾ ದೃಷ್ಟಿಯಿಂದಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಸಂಚಾರವನ್ನು ನಿರ್ಬಂಧಿಸಿ ರಾಮನಗರ ಹಾಗೂ ಮಂಡ್ಯ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ.

ಬದಲಿ ಮಾರ್ಗಗಳ ಸೂಚನೆ

ನಿರ್ಬಂಧದ ಜತೆಗೆ ಹೆದ್ದಾರಿಯಲ್ಲಿ ಸಾಗುವ ವಾಹನಗಳಿಗೆ ಪೊಲೀಸ್‌ ಇಲಾಖೆಯು ಬದಲಿ ಮಾರ್ಗವನ್ನು ಸೂಚಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಹೋಗಬೇಕಾದರೆ, ವಾಹನಗಳು ಬಿಡದಿ-ಹಾರೋಹಳ್ಳಿ-ಕನಕಪುರ-ಮಳವಳ್ಳಿ ಮಾರ್ಗವಾಗಿ ತೆರಳಬಹುದಾಗಿದೆ. ಇನ್ನು ಮೈಸೂರಿನಿಂದ ಬೆಂಗಳೂರಿಗೆ ಆಗಮಿಸುವ ವಾಹನಗಳು ಮದ್ದೂರು-ಕುಣಿಗಲ್‌-ನೆಲಮಂಗಲ ಮೂಲಕ ರಾಜ್ಯ ರಾಜಧಾನಿಯನ್ನು ತಲುಪಬಹುದು.

ಇದನ್ನೂ ಓದಿ: Modi In Karnataka: ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ ಅಬ್ಬರ; ಇಲ್ಲಿವೆ ಫೋಟೊಗಳು

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಬೃಹತ್‌ ರೋಡ್‌ ಶೋ ಸೇರಿ ಹಲವೆಡೆ ಭಾರಿ ಪ್ರಚಾರ ನಡೆಸಿದ್ದಾರೆ. ಹಾಗೆಯೇ, ಭಾನುವಾರ ಕೋಲಾರ, ಚನ್ನಪಟ್ಟಣ ಹಾಗೂ ಬೇಲೂರಿನಲ್ಲಿ ನಡೆಯುವ ರ‍್ಯಾಲಿಗಳಲ್ಲಿ ಪಾಲ್ಗೊಳ್ಳುವ ಜತೆಗೆ ಮೈಸೂರಿನಲ್ಲಿ ರೋಡ್‌ ಶೋ ನಡೆಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ರಾಜ್ಯಪಾಲರ ಆದೇಶ ಬಿಜೆಪಿ ಪಾದಯಾತ್ರೆಗೆ ದೊರೆತ ಯಶಸ್ಸು, ಮುಡಾ ತನಿಖೆ ಸಿಬಿಐಗೆ ಕೊಡಲಿ: ಆರ್‌. ಅಶೋಕ್

CM Siddaramaiah: ಬಿ.ಎಸ್‌ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್‌ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯವೇ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.

VISTARANEWS.COM


on

CM Siddaramaiah Ashok
Koo

ಬೆಂಗಳೂರು: ಮುಡಾ ಹಗರಣ (MUDA Scam) ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು (Governor) ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ (BJP-JDS Padayatra) ಸಿಕ್ಕಿರುವ ಯಶಸ್ಸು. ಇದನ್ನು ಸಿಬಿಐ (CBI) ತನಿಖೆ ನಡೆಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ (R Ashok) ಹೇಳಿದ್ದಾರೆ.

ರಾಜ್ಯಪಾಲರ ಆದೇಶದ ಬಳಿಕ ಅವರು ‌ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ ಎಂದರು.

86 ಸಾವಿರ ಜನ ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂದು ರಾಜ್ಯದ ಜನತೆಗೆ ಅನುಮೂನ ಮೂಡಿತು ಎಂದರು.

ಮುಡಾ ಹಗರಣದ ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿನೋಟಿಫಿಕೇಶನ್‌, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಕಾಂಗ್ರೆಸ್‌ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್‌ ಪಡೆಯಬೇಕೆಂಬುದು ನಮ್ಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.

ಬಿ.ಎಸ್‌ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್‌ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯವೇ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ. ರಾಜ್ಯಪಾಲರು ಸರ್ಕಾರದ ಭಾಗ. ಅವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಿದರೆ ಅದು ಸಂವಿಧಾನಕ್ಕೆ ತೋರುವ ಅಗೌರವ ಎಂದರು.

ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಶಾಸಕರೇ ತಿರುಗಿಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಸ್ಪಷ್ಟಪಡಿಸಿದರು.

ತಡೆಯಾಜ್ಞೆಗೆ ಕೇವಿಯಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಸಿಎಂ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಪಾಲರು ತನಿಖೆಗೆ ಆದೇಶ ನೀಡಿದ್ದು, ಮೊದಲ ದೂರುದಾರ ಪ್ರದೀಪ್ ಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಅವರು ಸಿಎಂ ತಡೆಯಾಜ್ಞೆ ತರಲು ಮುಂದಾದರೆ ಅದರ ವಿರುದ್ಧ ಕೇವಿಯಟ್‌ ಹಾಕಲು ಮುಂದಾಗಿದ್ದಾರೆ. ಮಧ್ಯಂತರ ಆದೇಶ ನೀಡದಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಮೊದಲ ದೂರುದಾರ ಪ್ರದೀಪ್ ಹೇಳಿದ್ದಾರೆ.‌

ಸಿಎಂ ಜೊತೆಗೆ ನಾವಿದ್ದೇವೆ: ಡಿಕೆ ಶಿವಕುಮಾರ್‌

ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರೂ, ಸಿದ್ದರಾಮಯ್ಯ ಅವರು ಸಿಎಂ ಆಗಿ ಮುಂದುವರಿಯಲಿದ್ದಾರೆ. ಇಡೀ ಸಚಿವ ಸಂಪುಟ ಹಾಗೂ ಕಾಂಗ್ರೆಸ್‌ ಪಕ್ಷ ಸಿಎಂ ಅವರ ಹಿಂದೆ ನಿಂತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ವಿರುದ್ಧ ಗವರ್ನರ್ ಕಚೇರಿಯನ್ನು ಬಿಜೆಪಿ ಉಪಯೋಗಿಸಿಕೊಂಡು ಕೆಲಸ ಮಾಡುತ್ತಿದೆ. ಗವರ್ನರ್ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಲು ಮುಂದಾಗಿದ್ದಾರೆ. ಕುಮಾರಸ್ವಾಮಿ ಮಾತಿನಂತೆ ಷಡ್ಯಂತ್ರ ನಡೆಯುತ್ತಿದೆ. ಹತ್ತು ತಿಂಗಳ ಒಳಗೆ ಸರ್ಕಾರ ತೆಗೆಯುತ್ತೇವೆಂದು ಹೇಳಿದ್ದರು. ಈಗ ಹಾಗೆ ಮಾಡಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನ ಸಿಎಂ ಸಿದ್ದರಾಮಯ್ಯ ಪರ ಇದ್ದಾರೆ. ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಹೋರಾಟ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.

ಇದನ್ನೂ ಓದಿ: CM Siddaramaiah: ಮುಡಾ ತನಿಖೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌; ಸಿಎಂಗೆ ಸಂಕಷ್ಟ

Continue Reading

ಪ್ರಮುಖ ಸುದ್ದಿ

CM Siddaramaiah: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೀತಾರಾ? ಡಿಕೆ ಶಿವಕುಮಾರ್ ಏನಂದ್ರು?

CM Siddaramaiah: ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ನಡೆಸಲಾದ ಹತ್ತು ಜನ ಸಚಿವರ ಸಾಮೂಹಿಕ ಸುದ್ದಿಗೋಷ್ಠಿಯ ನೇತೃತ್ವ ವಹಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DCM DK Shivakumar) ಮಾತನಾಡಿದರು. ರಾಜ್ಯಪಾಲರ ಕ್ರಮ ಪ್ರಜಾಪ್ರಭುತ್ವಕ್ಕೆ ಮಾರಕ‌ವಾದ ನಡೆ. ಸಂವಿಧಾನ ವಿರೋಧಿ ಪತ್ರವನ್ನು ರಾಜ್ಯಪಾಲರು ಕಳುಹಿಸಿಕೊಟ್ಟಿದ್ದಾರೆ ಎಂದು ಅವರು ಆಪಾದಿಸಿದರು.

VISTARANEWS.COM


on

DK Shivakumar and CM Siddaramaiah
Koo

ಬೆಂಗಳೂರು: ಮುಡಾ ಹಗರಣ (MUDA Scam) ವಿಚಾರದಲ್ಲಿ ರಾಜ್ಯಪಾಲರು (Governor) ಪ್ರಾಸಿಕ್ಯೂಶನ್‌ಗೆ (Prosecution) ಅನುಮತಿ ನೀಡಿದ್ದರೂ, ಸಿದ್ದರಾಮಯ್ಯ (CM Siddaramaiah) ಅವರು ಸಿಎಂ ಆಗಿ ಮುಂದುವರಿಯಲಿದ್ದಾರೆ. ಇಡೀ ಸಚಿವ ಸಂಪುಟ ಹಾಗೂ ಕಾಂಗ್ರೆಸ್‌ (Congress) ಪಕ್ಷ ಸಿಎಂ ಅವರ ಹಿಂದೆ ನಿಂತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DCM DK Shivakumar) ಹೇಳಿದ್ದಾರೆ.

ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ನಡೆಸಲಾದ ಹತ್ತು ಜನ ಸಚಿವರ ಸಾಮೂಹಿಕ ಸುದ್ದಿಗೋಷ್ಠಿಯ ನೇತೃತ್ವ ವಹಿಸಿ ಅವರು ಮಾತನಾಡಿದರು. ರಾಜ್ಯಪಾಲರ ಕ್ರಮ ಪ್ರಜಾಪ್ರಭುತ್ವಕ್ಕೆ ಮಾರಕ‌ವಾದ ನಡೆ. ಸಂವಿಧಾನ ವಿರೋಧಿ ಪತ್ರವನ್ನು ರಾಜ್ಯಪಾಲರು ಕಳುಹಿಸಿಕೊಟ್ಟಿದ್ದಾರೆ ಎಂದು ಅವರು ಆಪಾದಿಸಿದರು.

ದ್ವೇಷದ ಪಿತೂರಿ ಒಳಗೊಂಡ ಪ್ರಾಸಿಕ್ಯೂಶನ್ ಕೋರಿ ಸಲ್ಲಿಸಿರುವ ಅರ್ಜಿ ತಿರಸ್ಕರಿಸುವಂತೆ ಮನವರಿಕೆ ಮಾಡಿಕೊಡುವ ಕೆಲಸವನ್ನು ನಾವು ಮಾಡಿದ್ದೆವು. ಇವು ರಾಜಕೀಯ ಪ್ರೇರಿತ ದೂರುಗಳು ಎಂದು ಹೇಳಿದ್ದೆವು. ನಮ್ಮ ಸಿಎಂ ಅವಧಿಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ. ಹೀಗಾಗಿ ಪ್ರಾಸಿಕ್ಯೂಶನ್ ಕೋರಿ ಸಲ್ಲಿಸಿರುವ ಅರ್ಜಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೆವು. ಸಾಮಾನ್ಯ ತನಿಖೆ ನಡೆಸಿ ಪ್ರಾಸಿಕ್ಯೂಶನ್‌ಗೆ ಕೇಳಿದರೆ ಕೊಡುವುದು ನೋಡಿದ್ದೇವೆ. ಆದರೆ ಈ ಪ್ರಕರಣದಲ್ಲಿ ಯಾವುದೇ ತನಿಖೆ ಆಗಿಲ್ಲ. ಆದರೂ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದಾರೆ ಎಂದು ಅವರು ಆಪಾದಿಸಿದರು.

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣದಲ್ಲಿ ಲೋಕಾಯುಕ್ತದವರೇ ಪ್ರಾಸಿಕ್ಯೂಶನ್‌ಗೆ ಅನುಮತಿ ಕೇಳಿದರೂ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣದಲ್ಲೂ ಅನುಮತಿ ತೀರ್ಮಾನ ಮಾಡಿಲ್ಲ. ಆದರೆ ಸಿದ್ದರಾಮಯ್ಯ ಕೇಸ್ ಅನ್ನು ತ್ವರಿತವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಇದು ಪ್ರಜಾಪ್ರಭುತ್ವ ಸರ್ಕಾರದ ವಿರುದ್ಧ ತೆಗೆದುಕೊಂಡ ತೀರ್ಮಾನ ಎಂದು ಅವರು ಆರೋಪಿಸಿದರು.

ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ವಿರುದ್ಧ ಗವರ್ನರ್ ಕಚೇರಿಯನ್ನು ಬಿಜೆಪಿ ಉಪಯೋಗಿಸಿಕೊಂಡು ಕೆಲಸ ಮಾಡುತ್ತಿದೆ. ಗವರ್ನರ್ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಲು ಮುಂದಾಗಿದ್ದಾರೆ. ಕುಮಾರಸ್ವಾಮಿ ಮಾತಿನಂತೆ ಷಡ್ಯಂತ್ರ ನಡೆಯುತ್ತಿದೆ. ಹತ್ತು ತಿಂಗಳ ಒಳಗೆ ಸರ್ಕಾರ ತೆಗೆಯುತ್ತೇವೆಂದು ಹೇಳಿದ್ದರು. ಈಗ ಹಾಗೆ ಮಾಡಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನ ಸಿಎಂ ಸಿದ್ದರಾಮಯ್ಯ ಪರ ಇದ್ದಾರೆ. ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಹೋರಾಟ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.

ಒಬ್ಬ ಹಿಂದುಳಿದ ವರ್ಗಗಳ ನಾಯಕನನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ. ಇಂಡಿಯಾ ಒಕ್ಕೂಟ ಸಿಎಂ ಪರ ಇದೆ. ಸಿಎಂ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ. ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ. ಸಿಎಂ ಪರ ಕ್ಯಾಬಿನೆಟ್ ಹಾಗೂ ರಾಜ್ಯದ ಜನ ಇದ್ದಾರೆ ಎಂದು ಡಿಕೆಶಿ ಗುಡುಗಿದರು.

ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರು

ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಂಕಷ್ಟ ಬಿಗಡಾಯಿಸಿದೆ. ಪ್ರಾಸಿಕ್ಯೂಶನ್‌ಗೆ (Prosecution) ರಾಜ್ಯಪಾಲರು (Governor) ಇಂದು ಅನುಮತಿ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ (TJ Abraham) ಪ್ರಾಸಿಕ್ಯೂಶನ್‌ಗೆ ಅನುಮತಿ ಕೇಳಿದ್ದರು. ಇವರದೊಂಗಿದೆ ಪ್ರದೀಪ್‌ ಹಾಗೂ ಸ್ನೇಹಮಯಿ ಕೃಷ್ಣ ಎಂಬವರೂ ದೂರು ಸಲ್ಲಿಸಿದ್ದರು.

ಇತ್ತ ಸಿಎಂ ಸಿದ್ದರಾಮಯ್ಯ ಅವರ 10 ಜನರ ಕಾನೂನು ಟೀಮ್ ಫುಲ್ ಆಕ್ಟೀವ್ ಆಗಿದೆ. ರಾಜ್ಯಪಾಲರ ನಡೆ ಪ್ರಶ್ನೆ ಮಾಡಿ ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನಪ್ರತಿನಿಧಿಗಳ ಹಾಗೂ ಲೋಕಾಯುಕ್ತ ಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ವರೆಗೂ ಹೋಗಲು ವಕೀಲರ ಟೀಮ್ ರೆಡಿಯಾಗಿದೆ. ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಅವರಿಂದಲೇ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಯುತ್ತಿದೆ.

ಇದನ್ನೂ ಓದಿ: CM Siddaramaiah: ಮುಡಾ ತನಿಖೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌; ಸಿಎಂಗೆ ಸಂಕಷ್ಟ

Continue Reading

ಪ್ರಮುಖ ಸುದ್ದಿ

CM Siddaramaiah: ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ಧ: ಸಿಎಂ ಸಿದ್ದರಾಮಯ್ಯ

CM Siddaramaiah: ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ʼಮುಖ್ಯಮಂತ್ರಿಗಳಿಗೆ ನಮ್ಮ‌ ಅಭಿನಂದನೆʼ ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.

VISTARANEWS.COM


on

cm siddaramaiah 1
Koo

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ (Pay Commission) ಶಿಫಾರಸ್ಸುಗಳನ್ನು ಜಾರಿ ಮಾಡಿದ್ದು, ಸರ್ಕಾರಿ ನೌಕರರ (Govt Employees) ಹಿತಾಸಕ್ತಿಯನ್ನು ಕಾಯಲು ಸದಾ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನುಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ʼಮುಖ್ಯಮಂತ್ರಿಗಳಿಗೆ ನಮ್ಮ‌ ಅಭಿನಂದನೆʼ ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.

ಸರ್ಕಾರ ಅಂದ್ರೆ ಎಲ್ಲಾ ಸರ್ಕಾರಿ ನೌಕರರೂ ಸೇರಿರ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ. ಅಂಬೇಡ್ಕರ್, ಗಾಂಧಿ, ಬಸವಾದಿ ಶರಣರು ಸಮ‌ ಸಮಾಜದ ಕನಸು ಕಂಡಿದ್ದರು‌. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ ಎಂದು ಅವರು ಕರೆ ನೀಡಿದರು.

ಸಮ ಸಮಾಜದ ಆಶಯದಿಂದ ಸರ್ಕಾರ ಜಾರಿ ಮಾಡುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಿಮ್ಮಗಳ ಮೇಲಿದೆ. ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಿದಾಗ ಮಾತ್ರ ನಮ್ಮ ನಿಮ್ಮ ಶ್ರಮ ಸಾರ್ಥಕವಾಗುತ್ತದೆ. ಹೀಗೆ ನಾವು ನೀವು ಸೇರಿ ಸ್ವಾಸ್ಥ್ಯ ಸಮಾಜ ರೂಪಿಸಬೇಕಿದೆ ಎಂದರು.

ನಿಮ್ಮೆಲ್ಲರ ಬೇಡಿಕೆಯಂತೆ OPS ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರ್ತೇನೆ. ನಾವು-ನೀವು ಒಟ್ಟಾಗಿ ಜನರ ಜೊತೆ ಇದ್ದು, ಜನರ ಋಣ ತೀರಿಸೋಣ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಶಾಸಕರಾದ ಪ್ರಕಾಶ್ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ರಾಜ್ಯ ಸರ್ಕಾರಿ ನೌಕರರ ಸಂಘದ ನಾನಾ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರು ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

Continue Reading

ಬೆಂಗಳೂರು

Bengaluru Power Cut: ಗಮನಿಸಿ… ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.18ರಂದು ಕರೆಂಟ್‌ ಇರಲ್ಲ

Bengaluru Power Cut: ಬೆಂಗಳೂರು ನಗರದ ʼ220/66/11ಕೆವಿ ಎಸ್‌ಆರ್‌ಎಸ್ ಪೀಣ್ಯʼ ವಿದ್ಯುತ್‌ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಆ.18ರಂದು ಭಾನುವಾರ ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Bengaluru Power Cut
Koo

ಬೆಂಗಳೂರು: ನಗರದ ʼ220/66/11ಕೆವಿ ಎಸ್‌ಆರ್‌ಎಸ್ ಪೀಣ್ಯʼ ವಿದ್ಯುತ್‌ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಆ.18 ರಂದು ಭಾನುವಾರ ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Pralhad Joshi: ಭಾರತ-ಅರ್ಜೆಂಟೀನಾ; ಆಹಾರ ಹಂಚಿಕೆ ಹೆಚ್ಚಳ ಕುರಿತು ಸಚಿವ ಪ್ರಲ್ಹಾದ್‌ ಜೋಶಿ ಚರ್ಚೆ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಎಚ್‌ಎಂಟಿ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್‌ಮೆಂಟ್, ಸಿಎಂಟಿಐ, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಎಂಇಸಿ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ, ರಾಜೇಶ್ವರಿನಗರ, ಆಕಾಶ್ ಥೇಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ ರಸ್ತೆ, ಯುಕೊ ಬ್ಯಾಂಕ್ ರಸ್ತೆ, ಥರ್ಲಾಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್‌ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಇದನ್ನೂ ಓದಿ: Kannada New Movie: ‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ; ರವಿ ಸಾರಂಗ ನಿರ್ದೇಶನದ ಈ ಚಿತ್ರಕ್ಕೆ ರಕ್ಷಿತ-ಪ್ರೇಮ್ ಸಾಥ್

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading
Advertisement
CM Siddaramaiah Ashok
ಪ್ರಮುಖ ಸುದ್ದಿ9 mins ago

CM Siddaramaiah: ರಾಜ್ಯಪಾಲರ ಆದೇಶ ಬಿಜೆಪಿ ಪಾದಯಾತ್ರೆಗೆ ದೊರೆತ ಯಶಸ್ಸು, ಮುಡಾ ತನಿಖೆ ಸಿಬಿಐಗೆ ಕೊಡಲಿ: ಆರ್‌. ಅಶೋಕ್

sexual abuse
ಕ್ರೈಂ14 mins ago

sexual abuse: ಪ್ರತಿ ಗಂಟೆಗೆ ನಡೆಯುವ 4 ಅತ್ಯಾಚಾರದಲ್ಲಿ 3 ಪ್ರಕರಣಗಳ ಆರೋಪಿಗಳು ಪರಿಚಿತರೇ! ಆಘಾತಕಾರಿ ಅಂಕಿಅಂಶ

Bajrang Punia
ಕ್ರೀಡೆ32 mins ago

Bajrang Punia: ತ್ರಿವರ್ಣ ಧ್ವಜದ ಪೋಸ್ಟರ್​ ಮೇಲೆ ಕಾಲಿಟ್ಟ ಬಜರಂಗ್ ಪೂನಿಯಾ; ವಿಡಿಯೊ ವೈರಲ್

DK Shivakumar and CM Siddaramaiah
ಪ್ರಮುಖ ಸುದ್ದಿ32 mins ago

CM Siddaramaiah: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೀತಾರಾ? ಡಿಕೆ ಶಿವಕುಮಾರ್ ಏನಂದ್ರು?

cm siddaramaiah 1
ಪ್ರಮುಖ ಸುದ್ದಿ36 mins ago

CM Siddaramaiah: ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ಧ: ಸಿಎಂ ಸಿದ್ದರಾಮಯ್ಯ

Bengaluru Power Cut
ಬೆಂಗಳೂರು40 mins ago

Bengaluru Power Cut: ಗಮನಿಸಿ… ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.18ರಂದು ಕರೆಂಟ್‌ ಇರಲ್ಲ

Viral Video
Latest42 mins ago

Viral Video: 12 ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆಯಾದ 62ರ ಮುದುಕ! ಹೃದಯ ಕರಗಿಸುತ್ತದೆ ಈ ವಿಡಿಯೊ

Amrutha Prem gave sweet news on Varamahalakshmi festival!
ಸ್ಯಾಂಡಲ್ ವುಡ್49 mins ago

Amrutha Prem: ವರಮಹಾಲಕ್ಷ್ಮೀ ಹಬ್ಬದಂದೇ ಸಿಹಿ ಸುದ್ದಿ ಕೊಟ್ಟ ಅಮೃತಾ ಪ್ರೇಮ್!

BMRCL Recruitment 2024
ಉದ್ಯೋಗ57 mins ago

BMRCL Recruitment 2024: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Pakistan Cricket
ಕ್ರೀಡೆ1 hour ago

Pakistan Cricket: ಬಾಡಿಗೆ ಫ್ಲಡ್‌ಲೈಟ್‌ ಅಳವಡಿಸಿ ಚಾಂಪಿಯನ್‌ ಟ್ರೋಫಿ ನಡೆಸಲು ಮುಂದಾದ ಪಾಕಿಸ್ತಾನ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌