Site icon Vistara News

Bangalore-Mysore Highway: ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹ ಗೊಂದಲ; ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡ ಹೈಕೋರ್ಟ್‌

Bangalore Mysore Highway Toll collection High Court registers suo motu case

ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bangalore-Mysore Highway) ಕಾಮಗಾರಿ ಪೂರ್ಣಕ್ಕೆ ಮುನ್ನವೇ ಟೋಲ್ ಸಂಗ್ರಹ ಹಾಗೂ ಫಾಸ್ಟ್‌ಟ್ಯಾಗ್‌ ಇಲ್ಲದೆ ಮ್ಯಾನುವಲ್‌ ಆಗಿ ಟೋಲ್‌ ಸಂಗ್ರಹ ಮಾಡುತ್ತಿರುವ ಬಗ್ಗೆ ಸಾರ್ವಜನಿಕವಾಗಿ ಆಕ್ಷೇಪಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ 3 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಹೈಕೋರ್ಟ್‌ ಸೂಚನೆ ನೀಡಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹ ಸಂಬಂಧ ಕೇಳಿಬಂದ ಆರೋಪಗಳ ಹಿನ್ನೆಲೆಯಲ್ಲಿ ಹಾಗೂ ಮಾಧ್ಯಮಗಳ ವರದಿಯನ್ವಯ ಸುಮೋಟೊ ಪ್ರಕರಣ ದಾಖಲು ಮಾಡಿಕೊಂಡಿರುವ ಹೈಕೋರ್ಟ್ ಎನ್‌ಎಚ್‌ಎಐಗೆ ಈ ಸೂಚನೆ ನೀಡಿದೆ.

ಬೆಂಗಳೂರು-ಕನಕಪುರ ಹೆದ್ದಾರಿ ಕಾಮಗಾರಿ ಕುರಿತಾದ ಪಿಐಎಲ್ ಅನ್ನು ಹೈಕೋರ್ಟ್‌ ವಿಚಾರಣೆ ನಡೆಸಿದೆ. ಈ ವೇಳೆ ಮಾಹಿತಿ ನೀಡಿದ ಎನ್‌ಎಚ್‌ಎಐ, ಹೆದ್ದಾರಿ ಕಾಮಗಾರಿಯನ್ನು ಬೇರೊಂದು ಕಂಪನಿಗೆ ವಹಿಸಲಾಗಿದೆ. ಕಾಮಗಾರಿ ವೇಳೆ ಸುರಕ್ಷತಾ ಕ್ರಮ ಅಳವಡಿಸಿರುವುದಾಗಿ ಹೇಳಿಕೆ ನೀಡಿದೆ.

ಇದನ್ನೂ ಓದಿ: Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಹೆದ್ದಾರಿ ಪ್ರಾಧಿಕಾರದ ಹೇಳಿಕೆ ಬಗ್ಗೆ ಪರಿಶೀಲನೆ ನಡೆಸುವ ಸಂಬಂಧ ಹೈಕೋರ್ಟ್, ಕೋರ್ಟ್ ಕಮಿಷನರ್ ಆಗಿ ವಕೀಲ ಶಿವಪ್ರಸಾದ್ ಶಾಂತನಗೌಡರ್ ಅವರನ್ನು ನೇಮಕ ಮಾಡಿದೆ. ಅಲ್ಲದೆ, ವಿಚಾರಣೆಯನ್ನು ಏಪ್ರಿಲ್‌ 11ಕ್ಕೆ ಮುಂದೂಡಿದೆ. ಈ ಪಿಐಎಲ್ ವಿಚಾರಣೆ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿ ವಿಷಯವನ್ನು ಕೋರ್ಟ್‌ ಪ್ರಸ್ತಾಪ ಮಾಡಿದೆ.

Exit mobile version