ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಜೂನ್ 29ರಂದು 11.30ಕ್ಕೆ ನಗರದ ಡಿಜಿ ಕಚೇರಿಯಲ್ಲಿ ಪೊಲೀಸ್ ಆಯುಕ್ತರು ಸೇರಿ 8 ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಸಭೆಗೆ ಹಾಜರಾಗುವಂತೆ ಗುಪ್ತಚರ ಇಲಾಖೆ ಎಡಿಜಿಪಿ ಬಿ.ದಯಾನಂದ್, ಆಡಳಿತ ವಿಭಾಗದ ಎಡಿಜಿಪಿ ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಕೆಎಸ್ಆರ್‌ಪಿ ಎಡಿಜಿಪಿ ಆರ್.ಹಿತೇಂದ್ರ, ಸಂಚಾರ ವಿಭಾಗದ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ, ಪಶ್ಚಿಮ ವಿಭಾಗದ ಸಂಚಾರ ಡಿಸಿಪಿ ಕುಲದೀಪ್ ಕುಮಾರ್ ಜೈನ್, ಉತ್ತರ ವಿಭಾಗದ ಸಂಚಾರ ಡಿಸಿಪಿ ಸವಿತಾ, ಪೂರ್ವ ವಿಭಾಗದ ಸಂಚಾರ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರಿಗೆ ಬುಲಾವ್ ನೀಡಿದ್ದಾರೆ.
ನಗರದಲ್ಲಿ ಮತ್ತೆ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಿರುವ ಕುರಿತು ಉದ್ಯಮಿಗಳು ಹಾಗೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಧಾನಿಯವರ ಗಮನ ಸೆಳೆಯುತ್ತಲೇ ಬಂದಿದ್ದರು. ಅಲ್ಲದೆ ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಹೀಗಾಗಿ ಸಮಸ್ಯೆಯನ್ನು ನಿವಾರಿಸಲು ಸೂಚಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ | ಟ್ವೀಟ್ ಮೂಲಕ ಕೋಮು ಕಿಡಿ ಎಬ್ಬಿಸುತ್ತಿದ್ದ ಜುಬೇರ್, ಪೊಲೀಸ್ ವಿಚಾರಣೆ ತೀವ್ರ