Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ - Vistara News

ಕರ್ನಾಟಕ

Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

Bangalore–Mysore Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಜುಲೈ 1ರಿಂದ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಜಾರಿಯಾಗಲಿದೆ. ಇದರಿಂದ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಬೀಳಲಿದೆ.

VISTARANEWS.COM


on

Bangalore–Mysore Expressway
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತಿದೆ. ಇದರ ಭಾಗವಾಗಿ ನಾಳೆಯಿಂದ (ಜುಲೈ 1) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಜಾರಿಯಾಗಲಿದೆ. ಈ ವ್ಯವಸ್ಥೆಯು ಇನ್ನುಮುಂದೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ನೆರವಾಗಲಿದೆ.

ಜುಲೈ 1ರಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ ಜಾರಿ ಆಗಲಿದೆ. ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ಫಾಸ್ಟ್ಯಾಗ್‌ ಮೂಲಕ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ.

ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ತಿಳಿಸಿದ್ದರು.

ಐಟಿಎಂಎಸ್ ಅಥವಾ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್(ಎಎನ್‌ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ)ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂ.4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು.

ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಐಟಿಎಂಎಸ್ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್ ಮೆಸೇಜಿಂಗ್ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್ ಬೋರ್ಡ್ ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್ ಪರಿಸ್ಥಿತಿಯ ಕುರಿತು ಡಿಜಿಟಲ್ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಜುಲೈನಲ್ಲಿ ಟೆಂಡರ್ ಶುರುವಾಗಲಿದೆ. ಗದಗ ಪಟ್ಟಣದಲ್ಲಿಯೂ ಐಟಿಎಂಎಸ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಜೂನ್ 1ರಂದು ರಾಜ್ಯ ಪೊಲೀಸ್ ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್ ಹೆಚ್ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ಕೂಡ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Rain Effect : ಭಾರಿ ಮಳೆ ಎಫೆಕ್ಟ್‌; ಈ ಹೆದ್ದಾರಿ ಮಾರ್ಗದಲ್ಲಿ ನಾಳೆಯಿಂದ 1 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ!

ಹೆಚ್ಚಿನ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್‌ಗಳು, ಕ್ಯಾಮೆರಾಗಳ ಹೊರತಾಗಿಯೂ ಪೊಲೀಸರು ಹೆದ್ದಾರಿಗಳಿಗೆ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್‌ಗಳನ್ನು ಸಂಗ್ರಹಿಸಲು ಹಣ ಹಂಚಿಕೆ ಮಾಡುತ್ತಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವವರನ್ನು ತಡೆಯಲು ಸುಮಾರು 800 ಆಲ್ಕೋಮೀಟರ್‌ಗಳು ಮತ್ತು 155 ಲೇಸರ್ ಸ್ಪೀಡ್ ಗನ್‌ಗಳನ್ನು ಬೆಂಗಳೂರು ಹೊರತುಪಡಿಸಿ ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿಗೆ ವಿತರಿಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

VISTARANEWS.COM


on

ಮಂಗಳೂರು ನಗರವನ್ನು ಬೆಚ್ಚಿಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಈ ಸ್ಫೋಟ ಸಂಭವಿಸಿತ್ತು. ಆರೋಪಿ ಶಾರಿಕ್ ಸ್ಫೋಟಕ ತುಂಬಿದ್ದ ಕುಕ್ಕರ್ ಅನ್ನು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ, ನಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು.

ದೇಶದ ಭದ್ರತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ಉದ್ದೇಶದಿಂದ ಈ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿತ್ತು. ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಇದರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿತ್ತು. ತನಿಖೆಯ ವೇಳೆ ಶಾರಿಕ್ ನಿಷೇಧಿತ ಉಗ್ರಗಾಮಿ ಸಂಘಟನೆಗಳಿಂದ ಪ್ರೇರಿತನಾಗಿದ್ದದ್ದು ಮತ್ತು ಡಾರ್ಕ್ ವೆಬ್ ಮೂಲಕ ವಿದೇಶಿ ಹ್ಯಾಂಡ್ಲರ್‌ಗಳ ಸಂಪರ್ಕದಲ್ಲಿದ್ದು ಬಾಂಬ್ ತಯಾರಿಕಾ ತರಬೇತಿ ಪಡೆದಿದ್ದ ಎಂಬ ಆಘಾತಕಾರಿ ಸತ್ಯಗಳು ಹೊರಬಂದಿದ್ದವು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಎನ್‌ಐಎ ಸಲ್ಲಿಸಿದ್ದ ಸಾಕ್ಷ್ಯಧಾರಗಳನ್ನು ಪುರಸ್ಕರಿಸಿ ಶಾರಿಕ್ ದೋಷಿ ಎಂದು ತೀರ್ಪು ನೀಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೇರಿದಂತೆ ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ಪ್ರಕಟಿಸಿದೆ.

Continue Reading
Advertisement
Latest1 hour ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest3 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest4 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ4 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest5 hours ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

Latest6 hours ago

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

Rakshit Shetty Richard Anthony Produce By Hombale
ಅವಿಭಾಗೀಕೃತ6 hours ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ವಿಸ್ತಾರ ನ್ಯೂಸ್-ಸದಾ ನಿಮ್ಮ ಪರ:

ಕರ್ನಾಟಕ6 hours ago

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ರಾಜಕೀಯ23 hours ago

ಮೋದಿ ಅಥವಾ ದೀದಿ? ಪ.ಬಂಗಾಳದ ಭವಿಷ್ಯ ನಿರ್ಧರಿಸಲಿದೆ 142 ಸೀಟು

Latest24 hours ago

ಸಿದ್ದರಾಮಯ್ಯನವರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’: ಸಿಎಂ ಬದಲಾವಣೆ ಬಗ್ಗೆ ರಾಜಣ್ಣ ನೀಡಿದ ಹೇಳಿಕೆಯ ಮರ್ಮವೇನು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌