ಉಡುಪಿ: ಇಲ್ಲಿನ ಕೃಷ್ಣಪುರ ಮಠದ ಕಟ್ಟಡದಲ್ಲಿರುವ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ವಿರುದ್ಧ ಬಹುಕೋಟಿ ವಂಚನೆ (Bank Fraud) ಆರೋಪ ಕೇಳಿ ಬಂದಿದ್ದು, ಬ್ಯಾಂಕ್ ನಿರ್ದೇಶಕ ಬಿ.ವಿ ಲಕ್ಷ್ಮೀನಾರಾಯಣ ಉಪಾಧ್ಯಾಯ ಬಂಧಿಸಲಾಗಿದೆ.
ಉಡುಪಿಯಲ್ಲಿ ಬಹುಕೋಟಿ ಹಣ ವಂಚನೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಲಕ್ಷ್ಮೀನಾರಾಯಣ ಉಪಾಧ್ಯಾಯ ತಲೆಮರೆಸಿಕೊಂಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದರು. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜೆಎಂಎಫ್‌ಸಿ ಕೋರ್ಟ್‌ನ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಮುಂದೆ ಪೊಲೀಸರು ಹಾಜರುಪಡಿಸಿದ್ದು, ಜನವರಿ 11ರ ವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.
ಇದನ್ನೂ ಓದಿ | IND VS PAK: ಭಾರತ ಮತ್ತು ಪಾಕಿಸ್ತಾನ ನಡುವಣ ಟೆಸ್ಟ್ ಕದನಕ್ಕೆ ವೇದಿಕೆ ಒದಗಿಸಲು ಮುಂದಾದ ಎಂಸಿಸಿ!
ಸುಮಾರು 600 ಠೇವಣಿದಾರರ 93 ಕೋಟಿ ರೂಪಾಯಿ ವಂಚನೆ ಆರೋಪ ಇವರ ಮೇಲಿದೆ. 48 ಕೋಟಿ ರೂಪಾಯಿ ಠೇವಣಿ ಬಾಕಿಯಿದೆ ಎಂದು ನಿರ್ದೇಶಕ ಲಕ್ಷ್ಮೀನಾರಾಯಣ ಹೇಳಿದ್ದಾರೆಂದು ಹೇಳಲಾಗಿದೆ.
ಬ್ಯಾಂಕ್‌ಗೆ ಮುತ್ತಿಗೆ ಹಾಕಿದ್ದ ಗ್ರಾಹಕರು
ಕಳೆದ ಜೂನ್ ತಿಂಗಳಿಂದ ಗ್ರಾಹಕರಿಗೆ ಯಾವುದೇ ಬಡ್ಡಿ ನೀಡಿಲ್ಲ. ಅಸಲು ಕೇಳಿದರೂ ನೀಡಿಲ್ಲ ಎಂದು ಆರೋಪಿಸಿ ಡಿಸೆಂಬರ್ ೧೯ರಂದು ಗ್ರಾಹಕರು ಬ್ಯಾಂಕ್ ಒಳ ನುಗ್ಗಿ ಪ್ರತಿಭಟಿಸಿದ್ದರು. ಅಲ್ಲದೆ, ಸಿಬ್ಬಂದಿ ಮೇಲೆ ಗಲಾಟೆ ಮಾಡಿದ್ದರು. ಈ ವೇಳೆ ಮಹಿಳಾ ಸಿಬ್ಬಂದಿಯನ್ನು ಗ್ರಾಹಕರು ತರಾಟೆಗೆ ತೆಗೆದುಕೊಂಡಿದ್ದರು. ಗ್ರಾಹಕರ ಒತ್ತಡದಿಂದ ನೊಂದ ಮಹಿಳಾ ಸಿಬ್ಬಂದಿ ಬ್ಯಾಗ್‌ನಲ್ಲಿದ್ದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದರಿಂದ ಗ್ರಾಹಕರೇ ತಪ್ಪಿಸಿದ್ದರು.
ಸ್ಥಳಕ್ಕೆ ಉಡುಪಿ ನಗರ ಠಾಣೆ ಪೊಲೀಸರು ಆಗಮಿಸಿ ದೂರು ದಾಖಲಿಸಿಕೊಂಡಿದ್ದರು. ವಿವಿಧ ಸೊಸೈಟಿ ಮತ್ತು ಗ್ರಾಹಕರಿಂದ 100 ಕೋಟಿಗೂ ಅಧಿಕ ಠೇವಣಿ ಸಂಗ್ರಹಿಸಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಗ್ರಾಹಕರ ಠೇವಣಿ ಹಣವನ್ನು ಹಲವು ಕಡೆ ಹೂಡಿಕೆ ಮಾಡಿ ಸೊಸೈಟಿ ನಷ್ಟ ಹೊಂದಿದೆ ಎಂದು ಹೇಳಲಾಗಿದೆ.
ಸಹಕಾರ ಬ್ಯಾಂಕ್‌ಗಳ ಅವ್ಯವಹಾರ
ಬೆಂಗಳೂರಿನಲ್ಲಿ ಗುರು ರಾಘವೇಂದ್ರ ಕೋಆಪರೇಟಿವ್ ಬ್ಯಾಂಕ್, ವಶಿಷ್ಠ ಕೋಆಪರೇಟಿವ್ ಬ್ಯಾಂಕ್ ಹಾಗೂ ಸಿರಿ ವೈಭವ ಪತ್ತಿನ ಸಹಕಾರಿ ಬ್ಯಾಂಕ್ ಮತ್ತು ಶುಶೃತಿ ಕೋಆಪರೇಟಿವ್ ಬ್ಯಾಂಕ್, ಯಾದಗಿರಿಯ ಶ್ರೀ ರೇವಣಸಿದ್ದೇಶ್ವರ ವಿವಿಧೋದ್ದೇಶ ಸಹಕಾರ ಸಂಘ ನಿ. ಬ್ಯಾಂಕ್‌ಗಳಲ್ಲಿ ಈಗಾಗಲೇ ವಂಚನೆಯಾಗಿದ್ದು, ಈ ಸಾಲಿಗೆ ಈಗ ಕಮಲಾಕ್ಷಿ ವಿವಿದ್ಧೋದ್ದೇಶ ಸಹಕಾರಿ ಸಂಘವು ಸೇರಿಕೊಂಡಂತಾಗಿದೆ.
ಇದನ್ನೂ ಓದಿ | Coronavirus | ಹೈರಿಸ್ಕ್ ದೇಶಗಳಿಂದ ಬಂದಿದ್ದ ಮೂವರಿಗೆ ಪಾಸಿಟಿವ್; ಜಿನೋಮಿಕ್ ಟೆಸ್ಟ್‌ಗೆ ಸ್ಯಾಂಪಲ್ಸ್ ರವಾನೆ