ಬೆಂಗಳೂರು: ಸಹಕಾರಿ ಬ್ಯಾಂಕ್‌ಗಳ ಹಗರಣದ (Bank Fraud) ಸಂತ್ರಸ್ತರಿಂದ ಜನವರಿ 10ರಿಂದ ಪ್ರಧಾನಿ, ಕೇಂದ್ರ ಗೃಹ ಮಂತ್ರಿ ಹಾಗೂ ಮುಖ್ಯಮಂತ್ರಿಗೆ ಪತ್ರ ರವಾನಿಸುವ ಸಲುವಾಗಿ ಸಹಿ ಸಂಗ್ರಹ ಕಾರ್ಯ ನಡೆಯಲಿದೆ ಎಂದು ಶ್ರೀ ಗುರು ರಾಘವೇಂದ್ರ ಕೋ- ಆಪರೇಟಿವ್ ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆ ಮುಖ್ಯ ಪೋಷಕ ಡಾ. ಶಂಕರ ಗುಹಾ ದ್ವಾರಕಾನಾಥ್ ಬೆಳ್ಳೂರು ತಿಳಿಸಿದ್ದಾರೆ.
ಗುರು ರಾಘವೇಂದ್ರ ಬ್ಯಾಂಕ್ ಹಗರಣ ಬೆಳಕಿಗೆ ಬಂದು ಮೂರು ವರ್ಷವಾಗಿದೆ. ಬಸವನಗುಡಿಯಲ್ಲಿರುವ ಗುರು ರಾಘವೇಂದ್ರ ಬ್ಯಾಂಕ್ ಮುಂಭಾಗದಲ್ಲಿ ಜ.೧೦ ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಎಲ್ಲ ಸಹಕಾರಿ ಬ್ಯಾಂಕ್ ಹಗರಣದ ಸಂತ್ರಸ್ತರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರು ಹಾಗೂ ಸಹಕಾರಿ ಸಚಿವರಾದ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರವನ್ನು ರಮಾನಿಸುವ ಸಲುವಾಗಿ ಸಹಿ ಸಂಗ್ರಹ ಕಾರ್ಯ ನಡೆಯಲಿದೆ.
ಪತ್ರದಲ್ಲಿ, ಸಹಕಾರಿ ಬ್ಯಾಂಕ್‌ಗಳ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿ ಮತ್ತು ಸಂತ್ರಸ್ತ ಠೇವಣಿದಾರರು ಹಾಗೂ ಷೇರುದಾರರಿಗೆ ಹಣ ಶೀಘ್ರವಾಗಿ ನೀಡುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | ವಿಸ್ತಾರ TOP 10 NEWS | ಸಕ್ಕರೆ ನಾಡಿಗೆ ತೆರಳಲಿರುವ ನುಡಿತೇರಿನಿಂದ, ಸ್ಯಾಂಟ್ರೊ ರವಿಯ ಇನ್ನಷ್ಟು ಪಾತಕಗಳವರೆಗೆ ಪ್ರಮುಖ ಸುದ್ದಿಗಳು