Bank Irregularities: ಪದೇಪದೆ ಅಕ್ರಮ; 2 ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡಲು ಸರ್ಕಾರ ಸೂಚನೆ - Vistara News

ಕರ್ನಾಟಕ

Bank Irregularities: ಪದೇಪದೆ ಅಕ್ರಮ; 2 ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡಲು ಸರ್ಕಾರ ಸೂಚನೆ

Bank Irregularities: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ ಮಾಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

VISTARANEWS.COM


on

Bank Irregularities
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬ್ಯಾಂಕ್‌ಗಳಲ್ಲಿ ಪದೇಪದೆ ಹಣ ಅಕ್ರಮ ವರ್ಗಾವಣೆ (Bank Irregularities) ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ ಮಾಡಿದೆ. ಎರಡು ರಾಷ್ಟ್ರೀಕೃತ ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಪಿ.ಸಿ. ಜಾಫರ್‌ ಸುತ್ತೋಲೆ ಹೊರಡಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ಗೆ ಸೂಚನೆ ನೀಡಿದ್ದಾರೆ. ಈ ಎರಡು ಬ್ಯಾಂಕ್‌ಗಳ ಎಲ್ಲ ಬ್ರ್ಯಾಂಚ್‌ಗಳಿಂದ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ಯುನಿವರ್ಸಿಟಿ ಮತ್ತಿತರ ಸಂಸ್ಥೆಗಳು ಠೇವಣಿ, ಹೂಡಿಕೆಗಳನ್ನು ತಕ್ಷಣದಿಂದ ಹಿಂಪಡೆಯಲು ಸೂಚಿಸಿದ್ದಾರೆ. ಇನ್ನು ಮುಂದೆ ಈ ಎರಡು ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಠೇವಣಿ ಹೂಡಿಕೆ ಇಡಬಾರದು. ಎಲ್ಲ ಇಲಾಖೆಗಳು ಅಕೌಂಟ್ ಕ್ಲೋಷರ್ ವರದಿಯನ್ನು ಸೆ.20ರ ಒಳಗೆ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಸರ್ಕಾರದ ಈ ನಿರ್ಧಾರಕ್ಕೆ ಕಾರಣವೇನು?

ಸರ್ಕಾರದ ನಿರ್ಧಾರಕ್ಕೆ ಪ್ರಮುಖವಾಗಿ ಎರಡು ಘಟನೆಗಳು ಕಾರಣವಾಗಿವೆ. ಕೆಐಎಡಿಬಿ 2011ರಲ್ಲಿ ರಾಜಾಜಿನಗರದ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 25 ರೂ.ಗಳನ್ನು ಒಂದು ವರ್ಷದ ನಿಶ್ಚಿತ ಠೇವಣಿ ಹೂಡಿಕೆ ಇಟ್ಟಿತ್ತು. ಇದಕ್ಕೆ ಪ್ರತಿಯಾಗಿ ಇದೇ ಬ್ಯಾಂಕಿನ ಮತ್ತೊಂದು ಶಾಖೆಯಿಂದ 12 ಕೋಟಿಗಳ ಒಂದು ರಸೀದಿ ಹಾಗೂ 13 ಕೋಟಿಗಳ ಮತ್ತೊಂದು ರಸೀದಿ ನೀಡಲಾಗಿತ್ತು. ಅವಧಿ ಮುಕ್ತಾಯವಾದ ನಂತರ 13 ಕೋಟಿಗಳ ಠೇವಣಿ ನಗದೀಕರಿಸಲಾಗಿದೆ. ಆದರೆ ಎರಡನೇ ರಸೀದಿಗೆ 10 ವರ್ಷ ಕಳೆದರೂ ಹಣ ನಗದೀಕರಣವಾಗಿಲ್ಲ. ಅಕ್ರಮವಾಗಿ ಬ್ಯಾಂಕ್ ಅಧಿಕಾರಿಗಳು 14 ಕೋಟಿ ವರ್ಗಾವಣೆ ಮಾಡಿ ವಂಚನೆ ಎಸಗಿರುವ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

ಇದುವರೆಗೂ ಅದೆಷ್ಟೇ ಮೀಟಿಂಗ್, ಪತ್ರ ವ್ಯವಹಾರ ನಡೆದರೂ ಹಣ ವಾಪಸ್ ಆಗಿಲ್ಲ. ಇನ್ನೊಂದು ಪ್ರಕರಣ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. 2013ರಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯು ಅವೆನ್ಯೂ ರೋಡ್‌ನ ಎಸ್‌ಬಿಐ ಬ್ರ್ಯಾಂಚ್‌ನಲ್ಲಿ 10 ಕೋಟಿ ನಿಶ್ಚಿತ ಠೇವಣಿ ಇಟ್ಟಿತ್ತು. ಅವಧಿ ಮುಕ್ತಾಯವಾಗುವ ಮೊದಲೇ ಬ್ಯಾಂಕ್ ಅಧಿಕಾರಿಗಳಿಂದ ಅಕ್ರಮ ಎಸಗಲಾಗಿದೆ. ಖಾಸಗಿ ಕಂಪನಿಯ ಸಾಲಕ್ಕೆ ಸರ್ಕಾರದ ಹಣವನ್ನು ನಕಲಿ ದಾಖಲೆ ಸೃಷ್ಟಿಸಿ ಹೊಂದಾಣಿಕೆ ಮಾಡಲಾಗಿದೆ. ಇದುವರೆಗೂ 10 ಕೋಟಿ ಹಣ ಸರ್ಕಾರಕ್ಕೆ ವಾಪಸ್ ಆಗಿಲ್ಲ.

ಇದನ್ನೂ ಓದಿ | Ram Path: ಬೀದಿ ದೀಪಗಳನ್ನೂ ಬಿಡದ ಕಳ್ಳರು; ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಲೈಟ್ಸ್‌ ನಾಪತ್ತೆ

ಈ ಎರಡು ಪ್ರಕರಣಗಳ ಬಗ್ಗೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯಲ್ಲಿ ಚರ್ಚೆಯಾಗಿ ನಡಾವಳಿ ಸಲ್ಲಿಕೆಯಾಗಿದೆ. ಇದೇ ಮಾದರಿಯಲ್ಲಿ ಹತ್ತಾರು ಬ್ಯಾಂಕ್ ಅಕೌಂಟ್‌ಗಳಲ್ಲಿ ಅಕ್ರಮ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಸ್ಟೇಟ್ ಬ್ಯಾಂಕ್ ಇಂಡಿಯಾ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಕೌಂಟ್ ಗಳ ಕ್ಲೋಸ್ ಮಾಡಲು ಸರ್ಕಾರದ ನಿರ್ಧಾರ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Vidhana Soudha: ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ!

Vidhana Soudha: ತಾಯಿಯನ್ನು ಅವಾಚ್ಯ ಶಬ್ದಗಳಿಂದ ಪೊಲೀಸರು ಬೈದಿದ್ದಾರೆ ಎಂದು ಆಕ್ರೋಶಗೊಂಡ ಯುವಕ, ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಬೆಂಕಿ ಇಟ್ಟಿದ್ದಾನೆ.

VISTARANEWS.COM


on

Vidhana Soudha
Koo

ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ (Vidhana Soudha) ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಬುಧವಾರ ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ.

ಟ್ರೆಕ್ಕಿಂಗ್ ಹೋಗಿ ಪೃಥ್ವಿ ನಾಪತ್ತೆಯಾಗಿದ್. ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ | ಇದನ್ನೂ ಓದಿ: Physical Abuse : ತಪಾಸಣೆಗೆ ಬಂದ ರೋಗಿಗಳಿಬ್ಬರನ್ನು ಅತ್ಯಾಚಾರ ಮಾಡಿದ ಸರ್ಕಾರಿ ವೈದ್ಯ; ಜೂನಿಯರ್​ ವೈದ್ಯರ ಪೆಟ್ಟು ತಿಂದು ಐಸಿಯು ಸೇರಿದ ಆರೋಪಿ

ಮೂರು ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಮನೆಯಲ್ಲೇ ಇತ್ತು!

body found dharwad news
body found dharwad news

ಧಾರವಾಡ: ವ್ಯಕ್ತಿಯೊಬ್ಬರು ಕಣ್ಮರೆಯಾಗಿ ಮೂರು ವರ್ಷಗಳ ನಂತರ ಅವರ ಅಸ್ಥಿಪಂಜರ (Body Found) ಪತ್ತೆಯಾಗಿದೆ. ಅದೂ ಧಾರವಾಡ (Dharwad news) ನಗರದಲ್ಲಿ ಅವರ ಸ್ವಂತ ಮನೆಯಲ್ಲೇ! ಶವ ಮನೆಯಲ್ಲಿ ಮಲಗಿದ ಸ್ಥಿತಿಯಲ್ಲೇ ಕಂಡುಬಂದಿದೆ. ಆದರೆ ಮೂರು ವರ್ಷಗಳಿಂದ ಯಾರೂ ಇದನ್ನು (Viral News) ಗಮನಿಸಿಲ್ಲ!

ಧಾರವಾಡದ ಮಾಳಮಡ್ಡಿ ಬಡಾವಣೆಯ ಕೆನರಾ ಬ್ಯಾಂಕ್ ಬಳಿ ಘಟನೆ ನಡೆದಿದೆ. ಚಂದ್ರಶೇಖರ್ ಎಂಬ ಈ ವ್ಯಕ್ತಿ ಮೂರು‌ ವರ್ಷಗಳಿಂದ ಎಲ್ಲೂ ಕಾಣಿಸಿರಲಿಲ್ಲ. ಕಳೆದ ತಿಂಗಳು ಈತ ಕಾಣುತ್ತಿಲ್ಲ ಎಂದು ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ಒಬ್ಬರು ದೂರು ಕೊಟ್ಟಿದ್ದರು. ಚಂದ್ರಶೇಖರ್‌ ಅವರನ್ನು ಎಲ್ಲ ಕಡೆ ಹುಡುಕಾಡಿದ್ದ ಪೊಲೀಸರು, ನಿನ್ನೆ ಅವರ ಮನೆಗೆ ಹೋಗಿದ್ದರು. ಅಲ್ಲಿ ಹೋದಾಗ‌ ಪೊಲೀಸರಿಗೆ ಅಚ್ಚರಿಯಾಗುವಂತೆ ಚಂದ್ರಶೇಖರ್ ಅಸ್ಥಿಪಂಜರ ಮನೆಯಲ್ಲೇ ಪತ್ತೆಯಾಗಿದೆ.

ಚಂದ್ರಶೇಖರ್ ತಮ್ಮ ಪತ್ನಿಯ ಸಾವಿನ ನಂತರ ಮನೆಯಲ್ಲಿ ಒಬ್ಬನೇ ಇರುತ್ತಿದ್ದರು. ಅದಾದ ಬಳಿಕ ಕೋವಿಡ್ ಬಂದಿತ್ತು. ಕೋವಿಡ್ ವೇಳೆಯೇ ಇವರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತ ವ್ಯಕ್ತಿಯ ಸಂಬಂಧಿಕರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇರುವ ಬಗ್ಗೆ ಮಾಹಿತಿ ಇದೆ. ಯಾರೂ ಇವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿರಲಿಲ್ಲ.

ಇದನ್ನೂ ಓದಿ | Bank Irregularities: ಪದೇಪದೆ ಅಕ್ರಮ; 2 ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡಲು ಸರ್ಕಾರ ಸೂಚನೆ

ಇವರು ಹಾಲು, ಪೇಪರ್‌ ಕೂಡ ಹಾಕಿಸಿಕೊಳ್ಳುತ್ತಿರಲಿಲ್ಲ. ಹೀಗಾಗಿ ವ್ಯಕ್ತಿ ಸತ್ತದ್ದು ಯಾರ ಗಮನಕ್ಕೂ ಬಂದಿಲ್ಲ. ಸುತ್ತಮುತ್ತ ಮನೆಗಳಿದ್ದರೂ ಯಾರಿಗೂ ಗೊತ್ತಾಗಿಲ್ಲ ಎಂಬುದು ವಿಚಿತ್ರ. ಸದ್ಯ ಅಸ್ಥಿಪಂಜರವನ್ನು ವಶಕ್ಕೆ ಪಡೆದ ಪೊಲೀಸರು, ಇದು ಅವರದೇನಾ ಎಂದು ತಿಳಿಯಲು ವಿಧಿವಿಜ್ಞಾನ ತಪಾಸಣೆಗೆ ಕಳಿಸಿದ್ದಾರೆ.

Continue Reading

ಬೆಂಗಳೂರು

Actor Darshan: ನಟ ದರ್ಶನ್‌ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Actor Darshan: ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ನ್ಯಾಯಾಂಗ ಬಂಧನ‌ ಮುಂದುವರಿಸುವಂತೆ ಪೊಲೀಸರು ಕೋರಿದ್ದರಿಂದ ಕೋರ್ಟ್‌ ವಿಸ್ತರಣೆ ಮಾಡಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ (Actor Darshan) ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ‌ ಮುಂದುವರಿಸುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿ‌ ಸಲ್ಲಿಸಿದ್ದರು. ಹೀಗಾಗಿ ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯದ ಇನ್‌ಚಾರ್ಜ್ ಕೋರ್ಟ್‌, ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.

ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಮುಂದೆ ಹಾಜರು ಪಡಿಸಲಾಗಿತ್ತು. ಆದರೆ, ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿರುವುದರಿಂದ ದರ್ಶನ್ ಗ್ಯಾಂಗ್‌ಗೆ ಸೆರೆವಾಸ ಮುಂದುವರಿದಿದೆ.

8 ಕಾರಣ ನೀಡಿ ನ್ಯಾಯಾಂಗ ಬಂಧನ ವಿಸ್ತರಣೆಗೆ ಮನವಿ

  1. ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರುವುದು ತಾಂತ್ರಿಕ ಸಾಕ್ಷ್ಯಾಧಾರಗಳಿಂದ ಧೃಡ.
  2. ಆರೋಪಿಗಳು ಕೊಲೆಗೆ ಮೊದಲು, ನಂತರ ಪ್ರಭಾವಿಗಳ ಸಂಪರ್ಕ ಹೊಂದಿರೋದು ಬೆಳಕಿಗೆ.
  3. ಈ ಸಮಯದಲ್ಲಿ ಜಾಮೀನು ನೀಡಿದರೆ, ಆಮಿಷ ಹಾಗೂ ಬೆದರಿಕೆ ಹಾಕುವ ಸಾದ್ಯತೆ.
  4. ಇನ್ನು ಕೆಲವು ಸಾಕ್ಷಿಗಳ 164 ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ.
  5. ಕೆಲವು ವಸ್ತುಗಳ ಎಫ್ಎಸ್‌ಎಲ್ ವರದಿ ಬಾಕಿ ಇದೆ.
  6. ಇನ್ನು ಕೆಲವು ವಶ ಪಡಿಸಿಕೊಂಡ ವಸ್ತುಗಳನ್ನು ಸಿಎಫ್ಎಸ್‌ಎಲ್‌ಗೆ ಕಳುಹಿಸಿದ್ದ ವರದಿ ಬರಬೇಕಿದೆ
  7. ಕೊಲೆ ಪ್ರಕರಣದ ಎಲ್ಲಾ ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರೋದು ತಾಂತ್ರಿಕ ಹಾಗೂ ಭೌತಿಕವಾಗಿ ದೃಢ.
  8. ತನಿಖೆ ಪ್ರಗತಿಯಲ್ಲಿದ್ದು ಈ ಸಮಯ ಜಾಮೀನು ನೀಡಿದರೆ ತನಿಖೆಗೆ ಅಡಚಣೆ.

ಈ ಕಾರಣಗಳನ್ನ ನೀಡಿ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲು ಪೊಲೀಸರು ಮನವಿ ಮಾಡಿದ್ದಾರೆ. ಹೀಗಾಗಿ ಮತ್ತೆ 14 ದಿನ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶರು ವಿಸ್ತರಣೆ ಮಾಡಿದ್ದಾರೆ.

ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆ ಶುರು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಎಲ್ಲ ರಿಪೋರ್ಟ್‌ಗಳು ಬಂದ ಕಾರಣ ತನಿಖಾಧಿಕಾರಿ ಎಸಿಪಿ ಚಂದನ್ ನೇತೃತ್ವದಲ್ಲಿ ಸಿದ್ಧವಾಗಲಿರುವ ಚಾರ್ಜ್ ಶೀಟ್‌ 3-4 ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ಸಿದ್ಧವಾಗುವ ಸಾಧ್ಯತೆ ಇದೆ.

ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಕೂಡ ಸೂಚಿಸಿದ್ದರಿಂದ ಹೈದರಾಬಾದ್‌ನ ಸಿಎಫ್‌ಎಸ್‌ಎಲ್‌ನಿಂದ ರಿಪೋರ್ಟ್ ಬಂದ ಕೂಡಲೇ ಪೊಲೀಸರು ಚಾರ್ಜ್ ಶೀಟ್ ಸಿದ್ಧಮಾಡುತ್ತಿದ್ದಾರೆ. ಪ್ರಕರಣದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 40ಕ್ಕೂ ಹೆಚ್ಚು ಮಂದಿಯ ಸಿಆರ್‌ಪಿಸಿ 164 ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ನ್ಯಾಯಾಧೀಶರ ಎದುರು ಸಾಕ್ಷಿಗಳ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಇದನ್ನೂ ಓದಿ | Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಮ್ಮೆ ಹಿನ್ನಡೆ; ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಕಾರ

ಈ ಹೇಳಿಕೆಗಳು ಯಾವುದೇ ಕಾರಣಕ್ಕೂ ಬದಲಾಗಬಾರದು ಎಂಬ ಕಾರಣಕ್ಕೆ 164 ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಚಿಕ್ಕಣ್ಣ, ಯಶಸ್ ಸೂರ್ಯ, ದರ್ಶನ್ ಮನೆ ಕೆಲಸದವರು, ವಾಟರ್ ಸರ್ವೀಸ್ ಅಂಗಡಿಯವರು, ಆರೋಪಿಗಳಿಗೆ ಖುಷ್ಕ,ಬೀಡಿ, ಸಿಗರೇಟ್ ತಂದುಕೊಟ್ಟವರು, ಹೀಗೆ 40ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆಯನ್ನು ಪೊಲೀಸರು ಸಂಗ್ರಹ ಮಾಡಿದ್ದಾರೆ. ಇವರೆಲ್ಲರೂ ಪ್ರಕರಣದ ಪ್ರತ್ಯಕ್ಷ ಸಾಕ್ಷಿಗಳಾಗಿ ಪರಿಗಣನೆ ಮಾಡಲಾಗಿದೆ.

Continue Reading

ಬೆಂಗಳೂರು

Album Song: ಅನಿವಾಸಿ ಕನ್ನಡಿಗರ ‘ಹನಿ ಹನಿ’ ಆಲ್ಬಂ ಸಾಂಗ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Album Song: ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಜರ್ಮನಿ ಪ್ರಸ್ತುತ ಪಡಿಸಿರುವ, ರಾಘವ ರೆಡ್ಡಿ ನಿರ್ದೇಶನದ, ವಿಶಾಲ್ ನೈದೃವ್ ಸಂಗೀತ ನಿರ್ದೇಶನದ ಹಾಗೂ ರಕ್ಕಿ ಸುರೇಶ್ ಅಭಿನಯದ “ಹನಿ ಹನಿ” ಮ್ಯೂಸಿಕಲ್ ವಿಡಿಯೋ ಆಲ್ಬಂ ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Album Song
Koo

ಬೆಂಗಳೂರು: ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಜರ್ಮನಿ ಪ್ರಸ್ತುತ ಪಡಿಸಿರುವ, ರಾಘವ ರೆಡ್ಡಿ ನಿರ್ದೇಶನದ, ವಿಶಾಲ್ ನೈದೃವ್ ಸಂಗೀತ ನಿರ್ದೇಶನದ ಹಾಗೂ ರಕ್ಕಿ ಸುರೇಶ್ ಅಭಿನಯದ “ಹನಿ ಹನಿ” ಮ್ಯೂಸಿಕಲ್ ವಿಡಿಯೋ ಆಲ್ಬಂ (Album Song) ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ಗೌರವ ಕಾರ್ಯದರ್ಶಿ ಭಾ.ಮ. ಗಿರೀಶ್ ಹಾಗೂ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಹಾಡಿನಲ್ಲಿ ಅಭಿನಯಿಸಿರುವ ರಕ್ಕಿ ಸುರೇಶ್ ನಮ್ಮ ಕುಟುಂಬಕ್ಕೆ ಆಪ್ತರು. ಈ ಹಾಡಿನಲ್ಲಿ ರಕ್ಕಿ ಅವರು ಚೆನ್ನಾಗಿ ಅಭಿನಯಿಸಿದ್ದಾರೆ. ಹಾಡು ಚೆನ್ನಾಗಿದೆ. ಯಶಸ್ವಿಯಾಗಲಿ ಎಂದು ಅಶ್ವಿನಿ ಪುನೀತ್ ರಾಜಕುಮಾರ್ ಹಾರೈಸಿದರು.

ನಾನು ಹುಟ್ಟಿದ್ದು ಇಲ್ಲಿ. ಆದರೆ ಬೆಳೆದದ್ದು ಜರ್ಮನ್‌ನಲ್ಲಿ. ಮೈಸೂರಿನ ಬಳಿಯ ಸಾಲಿಗ್ರಾಮ ನಮ್ಮ ಊರು. ಡಾ. ರಾಜಕುಮಾರ್ ಅವರ “ಹೊಸಬೆಳಕು” ಚಿತ್ರ ನಿರ್ಮಿಸಿದ್ದ ರಾಜಶೇಖರ್ ಅವರು ನನ್ನ ತಾತಾ ಎಂದು ತಮ್ಮ ಹಾಗೂ ಕುಟುಂಬದ ಬಗ್ಗೆ ಮಾಹಿತಿ ನೀಡಿದ ನಟ ರಕ್ಕಿ ಸುರೇಶ್, ಜರ್ಮನ್‌ನಲ್ಲಿ ಎಂಜಿನಿಯರಿಂಗ್ ಹಾಗೂ ಮಾಸ್ಟರ್ಸ್ ಮುಗಿಸಿ ಐಟಿ ಉದ್ಯೋಗದಲ್ಲಿದ್ದೇನೆ. ನಟನೆ ನನ್ನ ಹವ್ಯಾಸ. ಅದರ ಮೊದಲ ಹೆಜ್ಜೆಯಾಗಿ “ಹನಿ ಹನಿ” ಆಲ್ಬಂ ಸಾಂಗ್ ನಲ್ಲಿ ಅಭಿನಯಿಸಿದ್ದೇನೆ‌. ಹಾಡು ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಹಾಗೂ ಗಣ್ಯರಿಗೆ ಧನ್ಯವಾದ ಎಂದು ತಿಳಿಸಿದರು.

ನಾನು ಐದು ವರ್ಷಗಳಿಂದ ಜರ್ಮನ್‌ನಲ್ಲಿ ವಾಸಿಸುತ್ತಿದ್ದೇನೆ. ಅನಿವಾಸಿ ಕನ್ನಡಿಗರು ಸೇರಿ ಈ ಹಾಡನ್ನು ನಿರ್ಮಿಸಿದ್ದೇವೆ. ನಾನೇ ನಿರ್ದೇಶನವನ್ನು ಮಾಡಿದ್ದೇನೆ. ಭಾರತದ ರೂಪಾಯಿ ಪ್ರಕಾರ ಹದಿನೈದು ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಹಾಡು ಯೂರೋಪ್‌ನಲ್ಲಿ ಚಿತ್ರೀಕರಣಗೊಂಡಿದೆ. ರಕ್ಕಿ ಸುರೇಶ್, ಅನಾಮಿಕ ಸ್ಟಾರ್ಕ್ ದತ್ತ‌ ಹಾಗೂ ಅಮೃತ ಮಂಡಲ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ವಿಶಾಲ್ ನೈದೃವ್ ಸಂಗೀತ ನೀಡುವುದರ ಜತೆಗೆ ಹಾಡಿದ್ದಾರೆ. ಆಲ್ಬರ್ಟ್ ಜೊಸ್ ಹಾಗೂ ತೇಜಸ್ ಅಹೋಬಲ ಅವರ ಛಾಯಾಗ್ರಹಣ ಈ ಹಾಡಿಗಿದೆ. ನಮ್ಮ ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್‌ನಲ್ಲಿ ಈ ಹಾಡನ್ನು ನೋಡಬಹುದು ಎಂದರು ನಿರ್ದೇಶಕ ರಾಘವ ರೆಡ್ಡಿ.

ನಾನು 23 ವರ್ಷಗಳಿಂದ ಕೀ ಬೋರ್ಡ್ ಪ್ಲೇಯರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಖ್ಯಾತ ಸಂಗೀತ ನಿರ್ದೇಶಕರ ಜತೆಗೆ ನೂರಕ್ಕೂ ಅಧಿಕ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. “ಹನಿ ಹನಿ” ಆಲ್ಬಂ ಸಾಂಗ್‌ಗೂ ಸಂಗೀತ ನೀಡಿದ್ದೇನೆ ಎಂದು ಸಂಗೀತ ನಿರ್ದೇಶಕ ವಿಶಾಲ್ ನೈದೃವ್ ಹೇಳಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

ಈ ಸಂದರ್ಭದಲ್ಲಿ ನಿರ್ದೇಶಕ ವೆಂಕಟ್ ಹಾಗೂ ಗಿರೀಶ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕ್ರೈಂ

Murder Case: ಪೂಜೆಗೆಂದು ಕರೆದೊಯ್ದು ಹೆಂಡತಿಯ ಕೊಂದ ಗಂಡ; ಕೊಲೆಯಾದಳೇಕೆ ಚಿಟ್ಟೆ ಟ್ಯಾಟೂ ಚೆಲುವೆ?

Murder Case: ದಂಪತಿ ನಿನ್ನೆ ಮಾಗಡಿ ಕೋರ್ಟ್‌ಗೆ ಹಾಜರಾಗಿದ್ದರು. ಬಳಿಕ ನಾಟಕವಾಡಿದ್ದ ಉಮೇಶ್‌, ಪತ್ನಿಯನ್ನು ಊಜಗಲ್ಲು ದೇವಸ್ಥಾನಕ್ಕೆ ಕರೆದೊಯ್ದಿದ್ದ. ಊಜಗಲ್ಲು ಬೆಟ್ಟಕ್ಕೆ ಕರೆದೊಯ್ದು, ಅಲ್ಲಿ ಪೂಜೆ ಮಾಡುವ ವೇಳೆ ದಿವ್ಯಾಳನ್ನು ಹತ್ಯೆ ಮಾಡಿದ್ದಾನೆ. ಕೊಂದು ಚೀಲೂರು ಅರಣ್ಯ ಪ್ರದೇಶದಲ್ಲಿ ಶವ ಎಸೆದು ಎಸ್ಕೇಪ್ ಆಗಿದ್ದ.

VISTARANEWS.COM


on

ramanagara murder case
Koo

ರಾಮನಗರ: ಆಕೆ ತೋಳಿನ ಮೇಲೆ ಚಿಟ್ಟೆ ಟ್ಯಾಟೂ ಧರಿಸಿದ್ದಳು. ಅವಳ ಚೆಲುವು ಕಣ್ಮನ ಸೆಳೆಯುವಂತಿತ್ತು. ಇದೇ ಚೆಲುವೇ ಆಕೆಯ ಸಾವಿಗೆ ಕಾರಣವಾಯಿತಾ? ಮಾಗಡಿ (Magadi news) ತಾಲೂಕಿನಲ್ಲಿ ನಡೆದ ಮಹಿಳೆಯ ಕೊಲೆ (Woman murder case) ಪ್ರಕರಣವೊಂದರ ಶೋಧದಲ್ಲಿ ಪೊಲೀಸರು ಇದೀಗ ಪತ್ನಿಯನ್ನು ಕೊಲೆ ಮಾಡಿದ ಪತಿಯ (husband killed wife) ಬೆನ್ನು ಬಿದ್ದಿದ್ದಾರೆ.

ಪತ್ನಿಯನ್ನು ದೇವಸ್ಥಾನಕ್ಕೆ ಎಂದು ಕರೆದೊಯ್ದ ಪತಿ, ಆಕೆಯನ್ನು ಬೆಟ್ಟದ ಕಾಡಿನೊಳಗೆ ಕರೆದೊಯ್ದು ಕೊಲೆ ಮಾಡಿ ಪರಾರಿಯಾಗಿದ್ದ. ಮಾಗಡಿ ತಾಲೂಕಿನ ಊಜಗಲ್ಲು ಬೆಟ್ಟದಲ್ಲಿ ನಿನ್ನೆ ಈ ಕರಾಳ ಕೃತ್ಯ ನಡೆದಿತ್ತು. ದಿವ್ಯಾ (32) ಗಂಡನಿಂದಲೇ ಕೊಲೆಯಾದ ಮಹಿಳೆ. ಉಮೇಶ್ ಪತ್ನಿಯನ್ನು ಹತ್ಯೆಗೈದಿರುವ ಪಾತಕಿ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ವಿಚ್ಛೇದನ ಪಡೆಯಲು ಮುಂದಾಗಿದ್ದರು. ಪತ್ನಿಯ ಸೌಂದರ್ಯದಿಂದಾಗಿ ಆಕೆಯ ಶೀಲದ ಬಗ್ಗೆ ಅನುಮಾನ ಹೊಂದಿದ್ದ ಉಮೇಶ್‌, ಆಕೆಗೆ ಈ ಕಾರಣಕ್ಕಾಗಿ ಸದಾ ಕಿರುಕುಳ ಕೊಡುತ್ತಿದ್ದ. ಇದೇ ಕಾರಣ ಉಲ್ಬಣಿಸಿ ಕಲಹ ಜೋರಾಗಿದ್ದು, ದಿವ್ಯಾ ಈ ಅನುಮಾನ ಪಿಶಾಚಿಯಿಂದ ದೂರವಾಗಲು ನಿರ್ಧರಿಸಿ ಡೈವೋರ್ಸ್‌ ಮೊರೆ ಹೋಗಿದ್ದಳು.

ದಂಪತಿ ನಿನ್ನೆ ಮಾಗಡಿ ಕೋರ್ಟ್‌ಗೆ ಹಾಜರಾಗಿದ್ದರು. ಬಳಿಕ ನಾಟಕವಾಡಿದ್ದ ಉಮೇಶ್‌, ಪತ್ನಿಯನ್ನು ಊಜಗಲ್ಲು ದೇವಸ್ಥಾನಕ್ಕೆ ಕರೆದೊಯ್ದಿದ್ದ. ಊಜಗಲ್ಲು ಬೆಟ್ಟಕ್ಕೆ ಕರೆದೊಯ್ದು, ಅಲ್ಲಿ ಪೂಜೆ ಮಾಡುವ ವೇಳೆ ದಿವ್ಯಾಳನ್ನು ಹತ್ಯೆ ಮಾಡಿದ್ದಾನೆ. ಕೊಂದು ಚೀಲೂರು ಅರಣ್ಯ ಪ್ರದೇಶದಲ್ಲಿ ಶವ ಎಸೆದು ಎಸ್ಕೇಪ್ ಆಗಿದ್ದ.

ಈ ಪ್ರಕರಣದ ಸಂಬಂಧ ಐವರ ಮೇಲೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಕೊಲೆಗೆ ಸಹಕರಿಸಿದ ಇನ್ನೂ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತಿ ಉಮೇಶ್ ಹಾಗೂ ಮತ್ತೊಬ್ಬ ಆರೋಪಿಗಾಗಿ ಪೊಲೀಸರ ತಲಾಶೆ ನಡೆದಿದೆ.

ಪ್ರಧಾನಿ ಮೋದಿಯನ್ನು ಟೀಕಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಅವಾಚ್ಯವಾಗಿ ಟೀಕಿಸಿದ ವ್ಯಕ್ತಿಯೊಬ್ಬನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಕೆಎಎಸ್ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಡೆದಿದೆ.

ಹದಿನೈದು ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಎನ್ನಲಾಗಿದೆ. ಈ ಯುವಕನ ಮೇಲೆ ರೊಚ್ಚಿಗೆದ್ದ ಗುಂಪು ಹಲ್ಲೆ ಮಾಡಿ ಮೋದಿ, ಮೋದಿ ಎಂದು ಕೂಗು ಎಂದು ಬಲವಂತ ಮಾಡಿದೆ. ಆದರೆ ಯುವಕ ಇದಕ್ಕೆ ಒಪ್ಪದಿದ್ದಾಗ ಮತ್ತಷ್ಟು ಹಲ್ಲೆ ಮಾಡಿದೆ.

ಸುಮಾರು ಹದಿನೈದು ಜನರ ಯುವಕರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಮಾತ್ರವಲ್ಲ, ನೀನು ಮೋದಿಗೆ ಬೈಯ್ಯುವ ಹಾಗಿಲ್ಲ, ನೀನು ಸಿದ್ದರಾಮಯ್ಯ ಫಾಲೋವರ್ ಆಗಿದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊ ಎಂದು ಎಚ್ಚರಿಸಿದೆ. ಅಲ್ಲದೆ, ಮೋದಿ ಎಂದು ಹೆಸರು ಹೇಳು ಎಂದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಸದ್ಯ ಯುವಕನನ್ನು ಉಪ್ಪಾರಪೇಟೆ ಉಪ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ‌ಘಟನೆ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಹಲ್ಲೆ ನಡೆಸಿದವರನ್ನು ಪೊಲೀಸರು ಶೋಧಿಸುತ್ತಿದ್ದಾರೆ. ವಿಡಿಯೋವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ: Viral Video: ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ

Continue Reading
Advertisement
IPL 2025
ಕ್ರೀಡೆ24 seconds ago

IPL 2025: ಗೆಳೆಯ ಕೆ.ಎಲ್​ ರಾಹುಲ್​ರನ್ನು ಮತ್ತೆ ಆರ್​ಸಿಬಿಗೆ ಕರೆತರಲು ಮುಂದಾದ ಕೊಹ್ಲಿ

Vidhana Soudha
ಕರ್ನಾಟಕ2 mins ago

Vidhana Soudha: ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ!

kolkata doctor murder case
ದೇಶ2 mins ago

Kolkata Doctor Murder Case: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆರೋಪಿ ಸಿಬಿಐ ವಶಕ್ಕೆ

Independence day 2024
ವಿದೇಶ8 mins ago

Independence Day 2024: ಒಂದೇ ದಿನ ಸ್ವಾತಂತ್ರ್ಯ ಪಡೆದಿದ್ದರೂ ಪಾಕಿಸ್ತಾನದಲ್ಲೇಕೆ ಭಾರತಕ್ಕಿಂತ ಮೊದಲು ಸ್ವಾತಂತ್ರ್ಯ ದಿನಾಚರಣೆ?

Sexual Abuse
Latest41 mins ago

Sexual Abuse: ಫೇಲ್ ಮಾಡುವುದಾಗಿ ಹೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 11 ಸಾವಿರ ರೂ. ದಂಡ!

Actor Darshan
ಬೆಂಗಳೂರು54 mins ago

Actor Darshan: ನಟ ದರ್ಶನ್‌ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Job Alert
ಉದ್ಯೋಗ55 mins ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಆ. 16 ಕೊನೆಯ ದಿನ

yogi adityanath
ದೇಶ57 mins ago

Yogi Adityanath: ಪಾಕ್‌ ಭಾರತದ ಜೊತೆ ವಿಲೀನವಾಗುತ್ತೆ…ಇಲ್ಲದಿದ್ದರೆ ಅಸ್ತಿತ್ವದಲ್ಲೇ ಇರಲ್ಲ- ಯೋಗಿ ಆದಿತ್ಯಾನಾಥ್‌

Sexual Abuse
Latest60 mins ago

Sexual Abuse: 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ 9ನೇ ತರಗತಿ ವಿದ್ಯಾರ್ಥಿ!

Viral Video
Latest1 hour ago

Viral Video: ಹಳೆಯ ವಿದ್ಯಾರ್ಥಿಗಳನ್ನು ಸಾಲಾಗಿ ಕರೆಸಿ ಬೆತ್ತದಿಂದ ಹೊಡೆದ ಪ್ರಾಂಶುಪಾಲರು! ಅಪರೂಪದ ವಿಡಿಯೊ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌