ಆನೇಕಲ್: ಪ್ರವಾಸಿಗರಿಗೇ ಗುಡ್‌ನ್ಯೂಸ್‌ವೊಂದಿದೆ. ಪ್ರತಿ ಮಂಗಳವಾರವೂ ಬನ್ನೇರುಘಟ್ಟ ಪಾರ್ಕ್ (Bannerughatta Park) ಕ್ಲೋಸ್ ಆಗಿರುತ್ತದೆ. ಆದರೆ ಬೆಳಕಿನ ಹಬ್ಬ ದೀಪಾವಳಿ (Deepawalli 2023) ಹಿನ್ನೆಲೆ ಸಾಲು ಸಾಲು ರಜೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ರಜೆ ದಿನವೂ ಪಾರ್ಕ್ ತೆರೆದಿರಲಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗಾಗಿ ಈ ಅವಕಾಶ ಕಲ್ಪಿಸಲಾಗಿದೆ. ಬನ್ನೇರುಘಟ್ಟ ಝೂ ಹಾಗೂ ಸಫಾರಿ ಪ್ರತಿ ಮಂಗಳವಾರ ರಜೆ ಇರುತ್ತಿತ್ತು. ದೀಪಾವಳಿ ಹಬ್ಬದ ರಜೆ ಇರುವುದರಿಂದ ಹೊರ ರಾಜ್ಯಗಳಿಂದಲ್ಲೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹೀಗಾಗಿ ಮಂಗಳವಾರ ಪಾರ್ಕ್ ಓಪನ್ ಮಾಡಿ ಬುಧವಾರ ರಜೆ ನೀಡಲು ನಿರ್ಧಾರ ಮಾಡಲಾಗಿದೆ.
ಒಂದೇ ದಿನ ಹುಲಿ-ಚಿರತೆ ಪ್ರತ್ಯಕ್ಷ
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾಡಂಚಿನಲ್ಲಿ ಹುಲಿ ಹಾಗೂ ಚಿರತೆ ಪ್ರತ್ಯಕ್ಷವಾಗಿದೆ. ಬನ್ನೇರುಘಟ್ಟ ಬಯೋಲಾಜಿಕಲ್ ಅಧಿಕಾರಿಗಳು ಅಳವಡಿಸಿರುವ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ಉದ್ಯಾನವನದಿಂದ ಸಫಾರಿಗೆ ಹೋಗುವ ರಸ್ತೆಯಲ್ಲಿ ಚಿರತೆ ಹಾಗೂ ಹುಲಿ ಕಂಡಿದೆ. ಬಯೊಲಾಜಿಕಲ್ ಪಾರ್ಕ್ ಬೌಂಡರಿ ಬಳಿ ಅಳವಡಿಸಿರುವ ಕ್ಯಾಮೆರಾದಲ್ಲಿ ಕಾಡು ಪ್ರಾಣಿಗಳ ಚಲನವಲನ ಸೆರೆಯಾಗಿದೆ.
ಇದನ್ನೂ ಓದಿ: Physical Abuse : ಸ್ಕೂಟರ್ ಅಡ್ಡಗಟ್ಟಿ ಯುವತಿ ಬಟ್ಟೆ ಹಿಡಿದು ಎಳೆದಾಡಿದ ಕಾಮುಕ!
ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ
ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿ- ಮಾನವ ಸಂಘರ್ಷ ಮಂದುವರಿದಿದೆ. ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಕಾಡಬೇಗೂರು ಕಾಲೋನಿಯಲ್ಲಿ ಹುಲಿ ದಾಳಿಗೆ (Tiger Attack) ಮತ್ತೊಬ್ಬರ ಬಲಿಯಾಗಿದೆ. ಶುಂಠಿ ಹೊಲದಲ್ಲಿ ಕುಳಿತಿದ್ದ ವೇಳೆ ಹುಲಿ ದಾಳಿ ಮಾಡಿ ವ್ಯಕ್ತಿಯನ್ನು ಕೊಂದಿದೆ.
ಬಿ.ಮಟಗೆರೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಾಲಾಜಿ ನಾಯ್ಕ(45) ಮೃತರು. ಟೀ ಕುಡಿದು ಶುಂಠಿ ಹೊಲಕ್ಕೆ ಬಾಲಾಜಿ ನಾಯ್ಕ. ತೆರಳಿದ್ದರು. ಈ ವೇಳೆ ಏಕಾಏಕಿ ಹುಲಿ ದಾಳಿ ಮಾಡಿ ಎಳೆದೊಯ್ದಿದೆ. ಈ ವೇಳೆ ಸ್ಥಳೀಯರು ಗಮನಿಸಿ, ಕೂಗಾಡಿದ್ದಾರೆ. ನಂತರ ಹುಲಿ ಅಲ್ಲಿಂದ ಪರಾರಿಯಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ವನ್ಯಜೀವಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಇತ್ತೀಚೆಗೆ ನಂಜನಗೂಡು ತಾಲೂಕಿನ ಮಹದೇವನಗರ ಗ್ರಾಮದ ದನಗಾಹಿ ಮೇಲೆ ಹುಲಿ ದಾಳಿ ಮಾಡಿತ್ತು. ಹೀಗಾಗಿ ಹುಲಿ ಪತ್ತೆಗೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಹುಲಿ ಕಾರ್ಯಾಚರಣೆಗೆ ಪಾರ್ಥ ಸಾರಥಿ ಹಾಗೂ ಧರ್ಮ ಆನೆ ಎಂಟ್ರಿ ನೀಡಿವೆ. 30ಕ್ಕೂ ಹೆಚ್ಚು ಕಡೆಗಳಲ್ಲಿ ಕ್ಯಾಮರಾ ಅಳವಡಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹುಲಿ ಹೆಜ್ಜೆ ಗುರುತು ಜಾಡು ಹಿಡಿದು ಹೊರಟ ಅರಣ್ಯ ಇಲಾಖೆ ಸಿಬ್ಬಂದಿ ಹೊರಟಿದ್ದಾರೆ. ಆದರೆ, ನಾಲ್ಕು ದಿನವಾದರೂ ಹುಲಿ ಸುಳಿವು ಸಿಕ್ಕಿಲ್ಲ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ