Site icon Vistara News

Basavaraj Bommai: ಒಳಮೀಸಲಾತಿಯನ್ನು ಕಾಂಗ್ರೆಸ್‌ ಹಿಂಪಡೆಯಲು ಸಾಧ್ಯವಿಲ್ಲ ಎಂದ ಸಿಎಂ ಬೊಮ್ಮಾಯಿ

karnataka-election: CM Bommai Lambasts Kharge over statement against PM Narendra modi

karnataka-election: CM Bommai Lambasts Kharge over statement against PM Narendra modi

ಬೆಂಗಳೂರು: ತಾವು ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಕಾಂಗ್ರೆಸಿಗರಿಗೆ ಖಾತ್ರಿಯಾಗಿದ್ದು, ಹತಾಶರಾಗಿ ಮನಸೋಯಿಚ್ಛೆ ಮಾತನಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೀಸಲಾತಿ ಕುರಿತು ಸುರ್ಜೇವಾಲಾ ಟ್ವೀಟ್‌ ಕುರಿತು ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಮೀಸಲಾತಿ ಸಂವಿಧಾನ ಬಾಹಿರ ಕಾನೂನು ಬಾಹಿರ ಎಂದು ಹೇಳಿದ್ದಾರೆ. ಕೆಳ ಮಟ್ಟದ ಪದ ಬಳಕೆ ಮಾಡಿದ್ದಾರೆ. ಕಾಂಗ್ರೆಸ್‌ನವರಿಗೆ ಅಂಬೇಡ್ಕರ್ ಮೇಲೆ ಪ್ರೀತಿ ಇಲ್ಲ. ಆ ಸಮುದಾಯದ ಮೇಲೆ ಕಾಳಜಿ ಇಲ್ಲ.

ಕಾಂಗ್ರೆಸ್ ಕಾಲದಲ್ಲಿ ಇದನ್ನ ಮಾಡಲಿಲ್ಲ. ವೋಟ್ ಬ್ಯಾಂಕ್ ಅಂತ ತಿಳಿದುಕೊಂಡು ಸದಾಕಾಲ ಮೋಸ ಮಾಡಿದ್ರು. ನಾಗಮೋಹನ್ ದಾಸ್ ವರದಿ ಬಂದ ತಕ್ಷಣ ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಿದ್ದೇವೆ. ಕ್ಯಾಬಿನೆಟ್ ಲ್ಲಿ ಚರ್ಚೆ ಮಾಡಿ ಕಾಯಿದೆ ತಂದು ಅದನ್ನ ಜಾರಿ ಮಾಡಿದ್ದೇವೆ.

ಸಾಮಾಜಿಕ ನ್ಯಾಯದ ವಿಚಾರಗಳನ್ನ ವಿರೋಧ ಮಾಡ್ತಿದೆ ಕಾಂಗ್ರೆಸ್‌. ದೀನ ದಲಿತರ ವಿರೋಧಿ, ಲಿಂಗಾಯತ, ಒಕ್ಕಲಿಗರ ವಿರೋಧಿ ಕಾಂಗ್ರೆಸ್‌. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ವಾಪಸು ಪಡೆಯುವುದಾಗಿ ಹೇಳಿದ್ದಾರೆ. ಅವರು ವಾಪಸು ಬರಲ್ಲ‌, ಅದನ್ನ ತೆಗೆಯುವುದಕ್ಕೂ ಆಗುವುದಿಲ್ಲ. ಕಾಂಗ್ರೆಸ್ ನಾಯಕರಿಗೆ ಸೋಲಿನ ಭೀತಿ ಕಾಡ್ತಿದೆ. ಹತಾಶರಾಗಿ ಇಂತಹ ಹೇಳಿಕೆ ಕೊಡ್ತಿದ್ದಾರೆ ಎಂದರು.

ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಶಾಸಕರ ಬಗ್ಗೆ ಅಸಮಾಧಾನ ಇಲ್ಲ. ಹಲವು ಕ್ಷೇತ್ರಗಳಲ್ಲಿ ಹತ್ತಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದಾರೆ. ಅದು ನಮ್ಮ ಪಕ್ಷ ಗೆಲ್ಲೋದನ್ನ ತೋರಿಸುತ್ತೆ. ಏಪ್ರಿಲ್ 8ಕ್ಕೆ ಸಂಸದೀಯ ಮಂಡಳಿ ಸಭೆ ಬಳಿಕ ಪಟ್ಟಿ ಬಿಡುಗಡೆ ಮಾಡ್ತೀವಿ ಎಂದು ತಿಳಿಸಿದರು.

ಐದು ಶಾಸಕರಿಗೆ ಅನುಮಾನ

8 ಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸಭೆಯು ನವದೆಹಲಿಯಲ್ಲಿ ನಡೆಯಲಿದ್ದು, 9ನೇ ತಾರೀಖು ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಆಗಲಿದೆ. 9ನೇ ತಾರೀಖು ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮೋದಿ ರಾಜ್ಯಕ್ಕೆ ಬಂದು ಹೋದ ಬಳಿಕ ಸಂಜೆ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ. ಮೊದಲ ಪಟ್ಟಿಯಲ್ಲಿ 130 ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತದೆ. ಹಾಲಿ ಶಾಸಕರಿಗೆ ಬಹುತೇಕ ಟಿಕೆಟ್ ಪಕ್ಕ ಎನ್ನಲಾಗುತ್ತಿದ್ದರೂ, ಐದು ಶಾಸಕರಿಗೆ ಟಿಕೆಟ್ ಅನುಮಾನ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: Karnataka Election 2023: ಬೊಮ್ಮಾಯಿ, ಬಿ.ಸಿ. ಪಾಟೀಲ್‌, ಶ್ರೀರಾಮುಲು ಸೇರಿ ಹಲವರಿಗೆ ಬಿಜೆಪಿ ಟಿಕೆಟ್‌ ಫಿಕ್ಸ್

Exit mobile version