ಚಿಕ್ಕಬಳ್ಳಾಪುರ: ಬಿಜೆಪಿ ಸರ್ಕಾರವು ಬಡವರ ಪರ ಧೈರ್ಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಸೆಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ನಿರ್ಮಾಣವಾಗಿರುವ ನೂತನ ನಂದಿ ಮೆಡಿಕಲ್ ಕಾಲೇಜು ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದರು.
ಸಚಿವ ಡಾ. ಸುಧಾಕರ್ ಹಠಕ್ಕೆ ಬಿದ್ದು ಮೆಡಿಕಲ್ ಕಾಲೇಜು ಕಟ್ಟಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಅನುದಾನದಲ್ಲಿ ಮೆಡಿಕಲ್ ಕಾಲೇಜು ಕಟ್ಟಿಸಿದ್ದಾರೆ. ಜಿಲ್ಲೆಯಲ್ಲಿ ಮೂರು ಲಕ್ಷ ನಲವತ್ತೊಂಬತ್ತು ಸಾವಿರ ಫಲಾನುಭವಿಗಳಿಗೆ ಕಿಸಾನ್ ಸನ್ಮಾನ್ ಯೋಜನೆ ಮುಟ್ಟಿದೆ. ರೈತ ವಿದ್ಯಾ ನಿಧಿಯಲ್ಲಿ ರೈತರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ನೆರವಾಗಿದೆ.11 ಲಕ್ಷಕ್ಕೂ ಹೆಚ್ವು ಮಕ್ಕಳಿಗೆ ರೈತ ವಿದ್ಯಾನಿಧಿಯಿಂದ ಅನುಕೂಲವಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಿಂದ 1 .50 ಕೋಟಿ ಜನರಿಗೆ ಕಾರ್ಡ್ ನೀಡಿದ್ದಾರೆ. ಯಶಸ್ವಿನಿ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ ಎಂದರು.
ಬಡವರ ಪರ ಬಿಜೆಪಿ ಧೈರ್ಯವಾಗಿ ತೀರ್ಮಾನ ತೆಗೆದುಕೊಳ್ಳುತ್ತದೆ. ಕಾಂಗ್ರೆಸ್ ನವರು ರೈತರಿಗೆ ಮಹಿಳೆಯರಿಗಾಗಿ ಏನು ಮಾಡಿದ್ದೀರಿ.? ಮಾತೆತ್ತಿದರೆ ಅಧಿಕಾರ ಅಧಿಕಾರ ಎಂದು ಗೋಗರೆಯುತ್ತಿದ್ದಾರೆ. ಬಡವರಿಗೆ ನಾನು ಅಸ್ತ್ರ ಕೊಟ್ಟಿದೇನೆ. ನೀವು ಕೊಡುವ ಮತ ನಮ್ಮ ಭರವಸೆ. ಬಡವರಾಗಿ ಹುಟ್ಟಬಹುದು ಆದರೆ ಬಡವರಾಗಿಯೇ ಸಾವಿಬೇಕಂತ ರೂಲ್ಸ್ ಇಲ್ಲ .ದೀನ ದಲಿತರ ಮಕ್ಕಳು ದೊಡ್ಡ ದೊಡ್ಡ ಅಧಿಕಾರಿಗಳಾಗಬಹುದು ಎಂದರು.
ಇದನ್ನೂ ಓದಿ: SC ST Reservation: ಬೋವಿ, ಲಂಬಾಣಿ, ಕೊರಮ, ಕೊರಚ ಜನಾಂಗದವರೂ ಎಸ್‌ಸಿ ಪಟ್ಟಿಯಲ್ಲೇ ಇರುತ್ತಾರೆ: ಸಿಎಂ ಬೊಮ್ಮಾಯಿ
ನಂತರ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಸಂವಾದ ನಡೆಸಿದರು. ದೇಶದಲ್ಲಿ 130 ಕೋಟಿ ಜನ ಸಂಖ್ಯೆ ಇದೆ. ಜನಸಂಖ್ಯೆಗೆ ತಕ್ಕಷ್ಟು ವೈದ್ಯರಿಲ್ಲ. ದೇಶದಲ್ಲಿ ವೈದ್ಯಕಿಯ ಸೇವೆಗೆ ಸಾಕಷ್ಟು ಅವಕಾಶ ಇದೆ.
ಖಾಸಗಿ ಮತ್ತು ಸರ್ಕಾರಿ ಕ್ಷೇತ್ರದಲ್ಲಿ ವೈದ್ಯಕೀಯ ಸೇವೆ ಅಗತ್ಯವಿದೆ.
ಈ ಹಿಂದೆ ಗ್ರಾಮೀಣ ಭಾಗದಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಿತ್ತು. ಈಗ ವೈದ್ಯರ ಸಂಖ್ಯೆ ಹೆಚ್ಚಾದಂತೆ ನಕಲಿ ವೈದ್ಯರ ಸಂಖ್ಯೆ ಕಡಿಮೆ ಆಗಿದೆ. ನಮ್ಮ ಪ್ರಧಾನಿಗಳು ಆಯುಷ್ಮಾನ್ ಭಾರತ ಯೋಜನೆ ಜಾರಿಗೆ ತಂದ ಮೇಲೆ ಜನರು ಈ ಸೇವೆ ಪಡೆಯುತ್ತಿರುವುದರಿಂದ ನಕಲಿ ವೈದ್ಯರ ಸಂಖ್ಯೆ ಕಡಿಮೆಯಾಗಿದೆ ಎಂದರು. ಕರ್ನಾಟಕದಲ್ಲಿ ಅತಿ ಹೆಚ್ಚು ವೈದ್ಯಕೀಯ ಕಾಲೆಜುಗಳಿವೆ ಹಾಗೂ ಸಂಶೋಧನಾ ಸಂಸ್ಥೆಗಳಿವೆ. ಇಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಅದೃಷ್ಟಶಾಲಿಗಳು ಎಂದರು.