Site icon Vistara News

Basavaraja Bommai : ಸಿದ್ದರಾಮಯ್ಯ2.0 ಫುಲ್‌ ವೀಕ್‌, ಹೈಕಮಾಂಡೇ ಸ್ಟ್ರಾಂಗ್‌; ಬಸವರಾಜ ಬೊಮ್ಮಾಯಿ ವ್ಯಾಖ್ಯಾನ

Siddaramaiah Bommai

ಬೆಂಗಳೂರು: ಮುಖ್ಯಮಂತ್ರಿಯಾಗಿ ಎರಡನೇ ಅವಧಿಯಲ್ಲಿರುವ ಸಿದ್ದರಾಮಯ್ಯ ಅವರು ಫುಲ್‌ ವೀಕ್‌ ಆಗಿದ್ದಾರೆ. ಸಿದ್ದರಾಮಯ್ಯ1.0 (Siddaramaiah1.0) ಸಿಕ್ಕಾಪಟ್ಟೆ ಸ್ಟ್ರಾಂಗ್‌ (Strong Siddaramaiah) ಆಗಿದ್ದರು, ಸಿದ್ದರಾಮಯ್ಯ2.0 (Siddaramaiah2.0) ವೀಕ್‌ ಆಗಿದ್ದಾರೆ (Weak Siddaramaiah) ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ವಿಶ್ಲೇಷಣೆ ಮಾಡಿದ್ದಾರೆ.

ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಎರಡನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಸಾಕಷ್ಟು ವ್ಯತ್ಯಾಸ ಇದೆ. ಈಗಿನ ಸಿಎಂ ಸಿದ್ದರಾಮಯ್ಯ ಗೆ ಆಡಳಿತದ ಮೇಲಿನ ಹಿಡಿತ ತಪ್ಪಿದೆ ಎಂದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸರ್ಕಾರದ ಆರಂಭದಲ್ಲಿಯೇ ಇಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಶಾಸಕಾಂಗ ಸಭೆಯಲ್ಲಿಯೂ ಶಾಸಕರು ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟಿಲ್ಲ. ಟಾನ್ಸ್‌ಫರ್‌ ದಂಧೆ, ಸ್ವಜನ ಪಕ್ಷಪಾತ. ಅವ್ಯಾಹತವಾಗಿ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲದ ಸಂದರ್ಭದಲ್ಲಿ ಪ್ರವಾಹ, ಬರ ಇರುವ ಸಂದರ್ಭದಲ್ಲಿ ರಾಜ್ಯದಲ್ಲಿ ಆಡಳಿತ ವೈಫಲ್ಯತೆ ಕಾಣಿಸುತ್ತಿದೆ ಎಂದು ಮಾಜಿ ಸಿಎಂ ಹೇಳಿದರು.

ಸಿದ್ದರಾಮಯ್ಯ ಆರೋಗ್ಯ ಚೆನ್ನಾಗಿದೆ, ಆಡಳಿತ ದುರ್ಬಲವಾಗಿದೆ

ಸಿದ್ದರಾಮಯ್ಯ ಅವರ 76ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಶುಭಾಶಯ ತಿಳಿಸಿದ ಬೊಮ್ಮಾಯಿ ಅವರು, ಸಿದ್ದರಾಮಯ್ಯ ಅವರ ಆರೋಗ್ಯ ಚೆನ್ನಾಗಿದೆ. ಅವರು ಚೆನ್ನಾಗಿರಲಿ, ಆದರೆ, ಅವರು ಅಡಳಿತ ನಡೆಸುವಲ್ಲಿ ಮೊದಲಿನಷ್ಟು ಸ್ಟ್ರಾಂಗ್ ಇಲ್ಲ ಎಂದು ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರಕ್ಕೆ ದಿಲ್ಲಿ ನಿಯಂತ್ರಣ, ಕನ್ನಡ ಅಸ್ಮಿತೆಗೆ ಧಕ್ಕೆ

ʻʻರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಯಿಂದ ನಿಯಂತ್ರಿಸುತ್ತಿದೆ. ಎರಡೇ ತಿಂಗಳಲ್ಲಿ ಮುಖ್ಯಮಂತ್ರಿ ಗಳು ಸಂಪುಟದ ಸಚಿವರನ್ನು ಕರೆದುಕೊಂಡು ದೆಹಲಿಗೆ ಹೋಗಿ ಸಭೆ ನಡೆಸಿರುವುದು ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಅಂತ ಗೊತ್ತಾಗಿದೆʼʼ ಎಂದರು.

ʻʻಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ʻʻದೆಹಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ, ಇಡೀ ಸಂಪುಟ ದೆಹಲಿಗೆ ಹೋಗಿ ಪಕ್ಷದ ಸಭೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲಿ ನಡೆದಿರಲಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದ್ದು, ಕಾಂಗ್ರೆಸ್ ‌ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ ಎಂದು ದೂರಿದರು.

ಸಿದ್ದರಾಮಯ್ಯ ಕನ್ನಡದ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದರು. ಈಗ ಇಡೀ ಸಂಪುಟವನ್ನೇ ದೆಹಲಿಗೆ ಕರೆದುಕೊಂಡು ಹೊಗಿ ಕನ್ನಡದ ಅಸ್ಮಿತೆಗೆ ಧಕ್ಕೆ ತಂದಿದ್ದಾರೆ. ರಾಜ್ಯ ಸರ್ಕಾರದ ಆಡಳಿತವನ್ನು ಕಾಂಗ್ರೆಸ್ ಹೈ ಕಮಾಂಡ್ ನಿಯಂತ್ರಣ ಮಾಡುತ್ತಿದೆ. ಕರ್ನಾಟಕದ ಜನತೆಗೆ ಇವರು ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ದಲಿತ ವಿರೋಧಿ ನೀತಿ ಎಂದು ಆರೋಪಿಸಿದ ಬೊಮ್ಮಾಯಿ

ಎಸ್ಸಿಪಿ ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ್ದು ಸರ್ಕಾರದ ದಲಿತ ವಿರೋಧಿ ನೀತಿ ತೊರಿಸುತ್ತದೆ. ಎಸ್ಸಿಪಿ ಟಿಎಸ್ ಪಿ ಯೋಜನೆಗೆ ಮೀಸಲಿಟ್ಟ 34 ಸಾವಿರ ಕೋಟಿ ರೂ. ಅನುದಾನದಲ್ಲಿ ಸುಮಾರು 13 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ದಲಿತರ ಅಭಿವೃದ್ಧಿ ಹೊಡೆತ ಬೀಳಲಿದೆ. ಇದು ಕಾಂಗ್ರೆಸ್ ನ ದಲಿತ ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದರು ಬೊಮ್ಮಾಯಿ.

ಇನ್ನು ಮಾಜಿ ಸಚಿವ ಬಸವರಾಜ ರಾಯರೆಡ್ಡಿಯವರ ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ರಾಯರೆಡ್ಡಿಯವರು ಅತ್ಯಂತ ಮೇಧಾವಿಗಳು ಅವರು ಯಾವಾಗ ಯಾರ ಬಗ್ಗೆ ಏನು ಮಾತನಾಡುತ್ತಾರೆ ಎನ್ನುವುದು ತಿಳಿಯುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Karnataka Politics : ಬೊಮ್ಮಾಯಿಗಿಲ್ಲ ವಿಪಕ್ಷ ನಾಯಕ ಸ್ಥಾನ? ಒಂಟಿ ಮಾಡಿದ ಜಂಟಿ ಪ್ರೆಸ್‌ಮೀಟ್‌!

ಬೆಂಗಳೂರು: ಮುಖ್ಯಮಂತ್ರಿಯಾಗಿ ಎರಡನೇ ಅವಧಿಯಲ್ಲಿರುವ ಸಿದ್ದರಾಮಯ್ಯ ಅವರು ಫುಲ್‌ ವೀಕ್‌ ಆಗಿದ್ದಾರೆ. ಸಿದ್ದರಾಮಯ್ಯ1.0 (Siddaramaiah1.0) ಸಿಕ್ಕಾಪಟ್ಟೆ ಸ್ಟ್ರಾಂಗ್‌ (Strong Siddaramaiah) ಆಗಿದ್ದರು, ಸಿದ್ದರಾಮಯ್ಯ2.0 (Siddaramaiah2.0) ವೀಕ್‌ ಆಗಿದ್ದಾರೆ (Weak Siddaramaiah) ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ವಿಶ್ಲೇಷಣೆ ಮಾಡಿದ್ದಾರೆ.

Exit mobile version