BBK Season 10: ಬಿಗ್‌ ಬಾಸ್‌ನ ಮತ್ತೊಬ್ಬ ಸ್ಪರ್ಧಿ ಮೇಲೆ ಎಫ್‌ಐಆರ್! ಅರೆಸ್ಟ್‌ ಆಗ್ತಾರಾ ತನಿಷಾ ಕುಪ್ಪಂಡ? Vistara News

ಕರ್ನಾಟಕ

BBK Season 10: ಬಿಗ್‌ ಬಾಸ್‌ನ ಮತ್ತೊಬ್ಬ ಸ್ಪರ್ಧಿ ಮೇಲೆ ಎಫ್‌ಐಆರ್! ಅರೆಸ್ಟ್‌ ಆಗ್ತಾರಾ ತನಿಷಾ ಕುಪ್ಪಂಡ?

BBK Season 10: ಹುಲಿ ಉಗುರು ಧರಿಸಿದ್ದಕ್ಕೆ ಬಿಗ್‌ ಬಾಸ್‌ ಸ್ಪರ್ಧಿ ವರ್ತೂರ್‌ ಸಂತೋಷ್‌ನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದರು. ಇದೀಗ ಶೋನಲ್ಲಿ ವಡ್ಡ ಎಂಬ ಪದ ಪ್ರಯೋಗ ಮಾಡಿದ ತನಿಷಾ ಕುಪ್ಪಂಡ ವಿರುದ್ಧ (Tanisha Kuppanda) ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

Tanisha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್ ಸೀಸನ್‌ 10ರ ಸ್ಪರ್ಧಿಗಳಿಗೆ (BBK Season 10) ಅದ್ಯಾಕೋ ಕಂಟಕ ತಪ್ಪುವಂತೆ ಕಾಣುತ್ತಿಲ್ಲ. ಹುಲಿ ಉಗುರಿನ ವಿಚಾರಕ್ಕೆ ಇತ್ತೀಚೆಗೆ ಬಿಗ್‌ ಬಾಸ್‌ ಸ್ಪರ್ಧಿ ವರ್ತೂರ್‌ ಸಂತೋಷ್‌ ಜೈಲುಪಾಲಾಗಿ, ಬಳಿಕ ದೊಡ್ಡ ಮನೆಯನ್ನು ಸೇರಿದ್ದರು. ಇದೀಗ ಮತ್ತೊಬ್ಬ ಸ್ಪರ್ಧಿ ತನಿಷಾ ಕುಪ್ಪಂಡ (Tanisha Kuppanda) ವಿರುದ್ಧ ಎಸ್‌ಸಿ ಎಸ್‌ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾಗಿದೆ.

ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ದೂರು ನೀಡಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ವಡ್ಡ ಎಂಬ ಪದ ಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತನಿಷಾ ಕುಪ್ಪಂಡರನ್ನು ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು. ಎಸ್‌ಸಿ ಎಸ್‌ಟಿ ಕಾಯ್ದೆ ಅಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಡ್ಡ ಎಂದು ಹೇಳಿದ ಕಾರಣಕ್ಕೆ ಎಫ್‌ಐಆರ್ ದಾಖಲಾಗಿದೆ.

FIR filed against Bigg Boss contestant Tanisha Kuppanda

ಇಷ್ಟಕ್ಕೂ ಯಾವಾಗ ಏನ್‌ ಅಂದ್ರು?

ಬಿಗ್‌ಬಾಸ್‌ ಮನೆಯಲ್ಲಿ ತನಿಷಾ ಹಾಗೂ ಡ್ರೋನ್‌ ಪ್ರತಾಪ್‌ ನಡುವಿನ ಸಂಭಾಷಣೆಯಲ್ಲಿ ವಡ್ಡರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತನಿಷಾ ಪ್ರತಾಪ್‌ಗೆ ಒಡ್ಡನೋ ನೀನು ಒಡ್ಡನ ತರಹ ಆಕ್ಟ್‌ ಮಾಡ್ತೀಯಾ ಎಂದು ಪದ ಬಳಕೆ ಮಾಡಿದ್ದಾರೆ. ಇದು ಬೋವಿ ಜನಾಂಗಕ್ಕೆ ಅವಮಾನಕ್ಕೆ ಕಾರಣವಾಗಿದೆ ಎಂದಿದ್ದಾರೆ. ಜಾತಿ ಹಾಗೂ ಜನಾಂಗದ ಬಗ್ಗೆ ಮಾತಾಡಿರುವುದು ಸರಿಯಲ್ಲ. ಉದ್ದೇಶಪೂರ್ವಕವಾಗಿಯೇ ವಡ್ಡರ ಜನಾಂಗದ ಬಗ್ಗೆ ಅವಮಾನಕರವಾಗಿ ಮಾತನಾಡಿದ್ದಾರೆ. ಇವರನ್ನು ಕೂಡಲೇ ಬಿಗ್‌ಬಾಸ್‌ ಮನೆಯಿಂದ ಹೊರಹಾಕಬೇಕು ಜತೆಗೆ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಚರ್ಚೆ ಹುಟ್ಟು ಹಾಕಿದೆ ವರ್ತೂರು ಸಂತೋಷ್‌ ಮದುವೆ ವಿಚಾರ; ಅಸಲಿಯತ್ತೇನು?

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10 (BBK Season 10) ಹಲವು ವಿಚಾರಗಳಿಂದ ಚರ್ಚೆಗೆ ಕಾರಣವಾಗುತ್ತಿದೆ. ಸ್ಪರ್ಧಿಗಳ ವರ್ತನೆ, ಜಗಳ, ಸ್ನೇಹ ಎಲ್ಲವೂ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ವೈಯಕ್ತಿಕ ಕಾರಣದಿಂದ ಬಿಗ್‌ ಬಾಸ್‌ ಮನೆಯಿಂದ ಹೊರ ಹೋಗುವುದಾಗಿ ಹಠ ಹಿಡಿದಿದ್ದ ಕೃಷಿಕ ವರ್ತೂರು ಸಂತೋಷ್ (Varthur Santhosh)​ ಇದೀಗ ಮದುವೆಯ ವಿಚಾರಕ್ಕೂ ಸುದ್ದಿಯಲ್ಲಿದ್ದಾರೆ.

ಬಿಗ್‌ ಬಾಸ್‌ ಮನೆಯಲ್ಲಿ ವರ್ತೂರು ಸಂತೋಷ್ ಹಾಗೂ ತನಿಷಾ ಕುಪ್ಪಂಡ ಮಧ್ಯೆ ಸ್ನೇಹ, ಆತ್ಮೀಯತೆ ಇದೆ. ಹೀಗಾಗಿ ಇಬ್ಬರ ಮಧ್ಯೆ ಗೆಳತನಕ್ಕಿಂತ ವಿಶೇಷವಾದುದು ಏನೋ ಇದೆ ಎಂದು ಇತರ ಸ್ಪರ್ಧಿಗಳು ರೇಗಿಸುತ್ತಿದ್ದಾರೆ. ಜತೆಗೆ ವೀಕ್ಷಕರಿಗೂ ಅದೇ ರೀತಿಯ ಅನುಮಾನವೂ ಮೂಡುತ್ತಿದೆ. ಮಾತ್ರವಲ್ಲ ಇತ್ತೀಚಿನ ವೀಕೆಂಡ್‌ ಸಂಚಿಕೆಯಲ್ಲಿ ಸುದೀಪ್‌ ಕೂಡ ವರ್ತೂರು ಅವರನ್ನು ಈ ವಿಚಾರವಾಗಿ ರೇಗಿಸಿದ್ದರು. ಇದೆಲ್ಲದರ ಮಧ್ಯೆ ವರ್ತೂರು ಅವರದ್ದು ಎನ್ನಲಾದ ಮದುವೆ ಫೋಟೋಗಳು ಇದೀಗ ಎಲ್ಲೆಡೆ ಹರಿದಾಡುತ್ತಿವೆ.

ಫೋಟೊಗಳು ವೈರಲ್‌

ವರ್ತೂರು ಸಂತೋಷ್ ಅವರಿಗೆ ಅದಾಗಲೇ ಮದುವೆ ಆಗಿದೆ ಎನ್ನುವ ಸುದ್ದಿ ಚರ್ಚೆಗೆ ಗ್ರಾಸವಾಗಿರುವುದಲ್ಲದೆ ಈ ಕುರಿತಾದ ಫೋಟೊಗಳು ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿವೆ. ಅವರು ಮದುವೆಯಾಗಿ ವಿಚ್ಛೇದನ ಪಡೆದುಕೊಂಡಿದ್ದಾರಾ? ಎನ್ನುವ ಬಗ್ಗೆಯೂ ಹಲವರು ಮಾತನಾಡುತ್ತಿದ್ದಾರೆ. ಈ ಬಗ್ಗೆ ವರ್ತೂರು ಸಂತೋಷ್ ಆಗಲಿ, ಅವರ ಮನೆಯವರಾಗಲೀ ಬಾಯಿ ಬಿಟ್ಟಿಲ್ಲ.

ಅನುಮಾನ ಹುಟ್ಟು ಹಾಕಿದ್ದ ರಕ್ಷಕ್‌ ಮಾತು

ಇತ್ತೀಚೆಗೆ ಎಲಿಮಿನೇಟ್‌ ಆಗಿದ್ದ ಬುಲೆಟ್‌ ರಕ್ಷಕ್‌ ಹೇಳಿದ್ದ ಮಾತು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ʼʼಹೊರಗಡೆ ವರ್ತೂರು ಸಂತೋಷ್ ಅವರಿಗಾಗಿ ಹುಡುಗಿಯೊಬ್ಬರು ಕಾಯುತ್ತಿದ್ದಾರೆ. ‘ಬಿಗ್ ಬಾಸ್‌’ ಮನೆಯಿಂದ ಹೊರಗೆ ಬಂದ್ಮೇಲೆ ವರ್ತೂರು ಸಂತೋಷ್ ಜತೆ ಅವರ ನಿಶ್ಚಿತಾರ್ಥ ನಡೆಯಲಿದೆ. ತಮಾಷೆಗಾಗಿ ವರ್ತೂರು ಸಂತೋಷ್ ಮತ್ತು ತನಿಷಾ ಅವರನ್ನ ರೇಗಿಸುತ್ತಿದ್ವಿ. ವರ್ತೂರು ಸಂತೋಷ್ – ತನಿಷಾ ಮಧ್ಯೆ ಏನೂ ಇಲ್ಲ’’ ಎಂದು ರಕ್ಷಕ್ ಬುಲೆಟ್‌ ಸಂದರ್ಶನವೊಂದರಲ್ಲಿ ಹೇಳಿದ್ದರು. ಆದರೆ ಆ ಹುಡುಗಿ ಯಾರು ಎಂಬುದನ್ನು ಅವರು ಬಹಿರಂಗ ಪಡಿಸಿರಲಿಲ್ಲ. ಇದರ ಬೆನ್ನಲ್ಲೇ ವರ್ತೂರು ಅವರಿಗೆ ಈಗಾಗಲೇ ಮದುವೆಯಾಗಿದೆ ಎನ್ನುವ ವದಂತಿ ಹರಡಿದೆ. ಇನ್ನು ಕೆಲವರು ವರ್ತೂರು ಅವರಿಗೆ ಮದುವೆನೇ ಆಗಿಲ್ಲ. ಇದು ಸುಳ್ಳು ಸುದ್ದಿ ಎಂದು ವಾದಿಸುತ್ತಿದ್ದಾರೆ. ಮನೆಯವರು ಅಧಿಕೃತ ಹೇಳಿಕೆ ನೀಡಿದ ಬಳಿಕವಷ್ಟೇ ಈ ಗೊಂದಲ ನಿವಾರಣೆಯಾಗಲಿದೆ.

ಇದನ್ನೂ ಓದಿ: BBK Season 10: ಹೊರಗೆ ಹೋಗ್ತೀನಿ ಎಂದು ಕಣ್ಣೀರಿಟ್ಟ ವರ್ತೂರ್‌; ವೇದಿಕೆ ತೊರೆದ ಸುದೀಪ್‌!

ಕೆಲವು ದಿನಗಳಿಂದ ಸುದ್ದಿಯಲ್ಲಿರುವ ವರ್ತೂರು

‘ಹಳ್ಳಿಕಾರ್ ಒಡೆಯ’ ಎಂದೇ ಜನಪ್ರಿಯತೆ ಪಡೆದಿರುವ ವರ್ತೂರು ಸಂತೋಷ್‌ ಬಿಗ್‌ಬಾಸ್‌ ಪ್ರವೇಶಿಸಿದ ಬಳಿಕ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ಹುಲಿ ಉಗುರು (Tiger Nail) ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಅವರು ಬಳಿಕ ಆಟ ಮುಂದುವರಿಸಿದ್ದರು. ಈ ಮಧ್ಯೆ ಅವರು ವೈಯಕ್ತಿಕ ಕಾರಣ ನೀಡಿ ಸಾಕಷ್ಟು ವೋಟ್‌ ಬಂದಿದ್ದರೂ ಸ್ಪರ್ಧೆಯನ್ನು ಅರ್ಧದಲ್ಲೇ ಮೊಟಕುಗೊಳಿಸುವ ನಿರ್ಧಾರ ಪ್ರಕಟಿಸಿದ್ದರು. ಮಾತ್ರವಲ್ಲ ತನಿಷಾ ಜತೆಗಿನ ಒಡನಾಟವೂ ಸದ್ದು ಮಾಡುತ್ತಿದೆ. ಇದೀಗ ಅವರ ಮದುವೆ ವಿಚಾರವೂ ಮತ್ತೆ ಚರ್ಚೆಗೆ ಕಾರಣವಾಗಿದೆ. ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Congress Guarantee: ಸಿಎಂ ಸಿದ್ದರಾಮಯ್ಯ ತವರಲ್ಲೇ ಸಿಗದ ಗ್ಯಾರಂಟಿ ಯೋಜನೆಗಳು; ಸ್ಲಂ ನಿವಾಸಿಗಳ ಪರದಾಟ

Congress Guarantee: ಗ್ಯಾರಂಟಿ ಯೋಜನೆಗಳು ಜಾರಿಯಾಗಿ ಹಲವು ತಿಂಗಳುಗಳೇ ಕಳೆದರೂ ಮೈಸೂರಿನಲ್ಲಿ ಹಲವು ಕುಟುಂಬಗಳು ಸೌಲಭ್ಯ ವಂಚಿತವಾಗಿರುವುದು ಕಂಡುಬಂದಿದೆ.

VISTARANEWS.COM


on

Mysore people
Koo

ಮೈಸೂರು: ಜನರ ಜೀವನ ಮಟ್ಟ ಸುಧಾರಣೆ ಮಾಡಲು 5 ಗ್ಯಾರಂಟಿ ಯೋಜನೆಗಳನ್ನು (Congress Guarantee) ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರಿ ಯೋಜನೆಗಳು ಕೆಲ ಪ್ರದೇಶಗಳಲ್ಲಿ ಬಡವರಿಗೆ ಮರೀಚಿಕೆಯಾಗಿವೆ. ಯೋಜನೆಗಳು ಜಾರಿಯಾಗಿ ಹಲವು ತಿಂಗಳುಗಳೇ ಕಳೆದರೂ ಇಂದಿಗೂ ನೂರಾರು ಕುಟುಂಬಗಳು ಸೌಲಭ್ಯ ವಂಚಿತವಾಗಿರುವುದು ನಗರದಲ್ಲಿ ಕಂಡುಬಂದಿದೆ.

ಹೌದು, ನಗರದ ಎಲ್ಲಮ್ಮ ಬಡಾವಣೆಯ ಹಲವು ಕುಟುಂಬಗಳು ಗ್ಯಾರಂಟಿ ಯೋಜನೆಗಳ ಸೌಲಭ್ಯದಿಂದ ವಂಚಿತವಾಗಿವೆ. ಸುಮಾರು 15-20 ವರ್ಷಗಳಿಂದ ನಗರದಲ್ಲಿ ವಾಸಿಸುತ್ತಿದ್ದರೂ ಕೆಲವರಿಗೆ ಆಧಾರ್‌, ರೇಷನ್ ಕಾರ್ಡ್ ಸಿಕ್ಕಿಲ್ಲ. ಇದರಿಂದ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ತೊಂದರೆಯಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಿಎಂ ತವರಲ್ಲೇ ಬಡವರು ಸಮಸ್ಯೆ ಎದುರಿಸುವಂತಾಗಿದೆ.

ಉಳ್ಳವರಿಗೆ ಮಾತ್ರ ಸರ್ಕಾರದ ಯೋಜನೆಗಳು ಅನುಕೂಲವಾಗುತ್ತಿದ್ದು, ಗ್ಯಾರಂಟಿ ಯೋಜನೆಗಳು ಬಡವರ ಪಾಲಿಗೆ ನಿರೀಕ್ಷೆಯಾಗಿಯೇ ಉಳಿದಿವೆ. ಜನಪ್ರತಿನಿಧಿಗಳು ವೋಟಿಗಾಗಿ ಮತದಾರರ ಗುರುತಿನ ಚೀಟಿ ಮಾಡಿಸಿಕೊಟ್ಟಿದ್ದಾರೆ. ಆದರೆ ಅಕ್ಕಿ, ಗೋಧಿ ಪಡೆಯಲು ಶಾಸಕ ತನ್ವೀರ್ ಸೇಠ್ ಅವರು ರೇಷನ್ ಕಾರ್ಡ್ ಮಾಡಿಸಿಕೊಟ್ಟಿಲ್ಲ, ಇದರಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ ಎಂದು ಸ್ಲಮ್ ನಿವಾಸಿಗಳು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | TN Seetharam: ನನ್ನ ರಾಜಕೀಯ ಪ್ರವೇಶಕ್ಕೆ ಪ್ರೊ. ನಂಜುಂಡಸ್ವಾಮಿ ಕಾರಣ: ಸಿಎಂ ಸಿದ್ದರಾಮಯ್ಯ

ಎಲ್ಲಮ್ಮ ಬಡಾವಣೆಯ ಕೆಲವರಿಗೆ ಆಧಾರ್, ರೇಷನ್ ಕಾರ್ಡ್ ಇಲ್ಲ. ರೇಷನ್ ಕಾರ್ಡ್ ಇಲ್ಲದ ಪರಿಣಾಮ ಇತ್ತ ಶಾಲೆಯಲ್ಲಿ ಸ್ಕಾಲರ್‌ಶಿಪ್ ಪಡೆಯಲೂ ವಿದ್ಯಾರ್ಥಿಗಳಿಗೆ ಕಷ್ಟವಾಗಿದೆ. ಅನ್ನಭಾಗ್ಯ, ಗೃಹ ಲಕ್ಷ್ಮಿ ಯೋಜನೆ ಸೇರಿ ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯ ಕೊಡಿಸುವಲ್ಲಿ ಮೈಸೂರು ಜಿಲ್ಲಾಡಳಿತ ವಿಫಲವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ


Continue Reading

ಕರ್ನಾಟಕ

Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋದಲ್ಲಿ ಹೋಗುತ್ತಿದ್ದ ಮುಸ್ಲಿಂ ವಿದ್ಯಾರ್ಥಿ ಜೋಡಿಯ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.

VISTARANEWS.COM


on

Moral policing
Koo

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ (Moral Policing) ನಡೆದಿದೆ. ಆಟೋದಲ್ಲಿ ಹೋಗುತ್ತಿದ್ದ ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ. ವಾರದ ಹಿಂದೆ ನಡೆದಿರುವ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆಟೋದಲ್ಲಿ ಹೋಗುತ್ತಿದ್ದ ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದಿರುವ ಕೆಲವರು, ವಿದ್ಯಾರ್ಥಿಯನ್ನು ಕೆಳಗಿಳಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲ್ಲೆಗೆ ಯತ್ನಿಸಿದ ಆರೋಪಿಗಳು ಪರಾರಿಯಾಗಿದ್ದು, ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದಾವಣಗೆರೆಯಲ್ಲಿ ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟ ಹಿಂದು ಯುವಕನಿಗೆ ಥಳಿತ

ದಾವಣಗೆರೆ: ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟ ಎಂದು ಹಿಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಾವಣಗೆರೆಯ ಆರ್‌ಟಿಒ ಕಚೇರಿ ಬಳಿ ನಡೆದಿದೆ. ಜಾಲಿ ನಗರದ ನಿವಾಸಿ ಶ್ರೀನಿವಾಸ್ (29) ಹಲ್ಲೆಗೊಳಗಾದ ಯುವಕ. ಮನೆಯ ಪಕ್ಕದಲ್ಲಿರುವ ಮುಸ್ಲಿಂ ಯುವತಿಯನ್ನು ಬೈಕ್‌ನಲ್ಲಿ ಡ್ರಾಪ್ ಮಾಡಲು ಹೋಗಿದ್ದಾಗ ಶ್ರೀನಿವಾಸ್‌ನನ್ನು ಅಡ್ಡಗಟ್ಟಿ ಹಲ್ಲೆ ನಂತರ, ತಾಜ್ ಪ್ಯಾಲೇಸ್‌ಗೆ ಕರೆದೊಯ್ದು ಇಡೀ ರಾತ್ರಿ ಯುವಕರ ತಂಡ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಬಳಿಕ ಶ್ರೀನಿವಾಸ್‌ನನ್ನು ನಿರ್ಜನ ಪ್ರದೇಶದಲ್ಲಿ ತಂದು ಯುವಕರು ಬಿಸಾಡಿದ್ದರು. ಶನಿವಾರ ಬೆಳಗ್ಗೆ ಶ್ರೀನಿವಾಸ್ ಪೋಷಕರಿಗೆ ಪೋನ್‌ ಮಾಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಗಾಯಾಳುವನ್ನು ದಾವಣಗೆರೆ ಜಿಲ್ಲಾಸ್ಪತ್ರೆಯಗೆ ದಾಖಲಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಮುಂಭಾಗ ಹಿಂದು ಸಂಘಟನೆಯ ಮುಖಂಡರು ಜಮಾಯಿಸಿ ಆಕ್ರೋಶ ಹೊರಹಾಕಿದ್ದಾರೆ.

ನಂತರ ಶ್ರೀನಿವಾಸ್ ಮೇಲೆ ಯುವತಿ ಕಡೆಯವರು ಪೋಕ್ಸೊ ಪ್ರಕರಣ ದಾಖಲಿಸಿ, ಅತ್ಯಾಚಾರ ಮಾಡಿದ್ದಾನೆ ದೂರು ನೀಡಿದ್ದಾರೆ. ಹೀಗಾಗಿ ಯುವಕನ‌ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಹಿಂದು ಸಂಘಟನೆಗಳು ಆಗ್ರಹಿಸಿವೆ. ಇದರ ಹಿಂದೆ ಷಡ್ಯಂತ್ರವಿದ್ದು ಹಿಂದು ಯುವಕನ ಮೇಲೆ ಹಲ್ಲೆ ಮಾಡಿದ್ದು ಏಕೆ? ಅವನು ತಪ್ಪು ಮಾಡಿದ್ದರೇ ಪೊಲೀಸರಿಗೆ ಒಪ್ಪಿಸಬೇಕಾಗಿತ್ತು. ಯುವಕನಿಗೆ ಈಗಾಗಲೆ ಎಂಗೇಜ್ಮೆಂಟ್ ಆಗಿದ್ದು, ಮದುವೆ ಪಿಕ್ಸ್ ಆಗಿದೆ. ಆತ ತಪ್ಪು ಮಾಡಿದ್ದರೇ ಶಿಕ್ಷೆ ಕೊಡುವುದಕ್ಕೆ ಕಾನೂನು ಇದೆ. ಆದ್ದರಿಂದ ನೈತಿಕ ಪೊಲೀಸ್ ಗಿರಿ ಮಾಡಿದವರನ್ನು ಬಂಧಿಸಬೇಕು ಎಂದು ಹಿಂದು ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ | Physical Abuse : 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟ ನಿವೃತ್ತ ಕ್ಲರ್ಕ್!

ಸಾವಿನಲ್ಲೂ ಒಂದಾದ ಪ್ರೇಮಿಗಳು; ರಸ್ತೆ ಅಪಘಾತದಲ್ಲಿ ಮೃತ್ಯು

ramanagar road accident

ರಾಮನಗರ: ನೂರಾರು ಕನಸುಗಳನ್ನು ಹೊತ್ತಿದ್ದ ಆ ಜೋಡಿ ಸಾವಿನಲ್ಲೂ ಒಂದಾಗಿದೆ. ಶಾಲಾ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ (Road Accident) ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಪ್ರೇಮಿಗಳು (Lovers Death) ಮೃತಪಟ್ಟಿದ್ದಾರೆ. ಕೆಬ್ಬೆಹಳ್ಳಿ ಗ್ರಾಮದ ದೀಪು (25), ತಿಪ್ಪೂರು ಗ್ರಾಮದ ಶೈಲ (20) ಮೃತ ದುರ್ದೈವಿಗಳು.

ಶನಿವಾರ ರಾತ್ರಿ ಕನಕಪುರ ತಾಲೂಕಿನ ಕೋಡಿಹಳ್ಳಿ ಮುಖ್ಯ ರಸ್ತೆಯ ನಾರಾಯಣಪುರದ ನಂಜಪ್ಪನ ಕಟ್ಟೆ ಬಳಿ ಈ ದುರ್ಘಟನೆ ನಡೆದಿದೆ. ಶೈಲಾಳನ್ನು ಮನೆಗೆ ಡ್ರಾಪ್‌ ಮಾಡುವ ಸಲುವಾಗಿ ಕನಕಪುರದಿಂದ ದೀಪು ತನ್ನ ಕಾರಲ್ಲಿ ಹೊರಟ್ಟಿದ್ದರು. ಈ ವೇಳೆ ಎದುರಿಗೆ ಬಂದ ಶಾಲಾ ಬಸ್‌ವೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಛಿದ್ರ ಛಿದ್ರಗೊಂಡಿದ್ದು, ಒಳಗಿದ್ದ ದೀಪು, ಶೈಲು ಗಂಭೀರ ಗಾಯಗೊಂಡಿದ್ದರು.

ಇದನ್ನೂ ಓದಿ | Accident Case : ಕಿಟಕಿ ಒರೆಸುವಾಗ ಜಾರಿದ ಕಾಲು; 5ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

ಅಪಘಾತದಲ್ಲಿ ಶೈಲ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ದೀಪುನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಾಗ ಜೀವ ಬಿಟ್ಟಿದ್ದಾನೆ. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Karnataka weather: ಬೆಂಗಳೂರಲ್ಲಿ ನಾಳೆ ಇಡೀ ದಿನ ಮೋಡ ಕವಿದ ವಾತಾವರಣ; ಇಲ್ಲಷ್ಟೇ ಮಳೆ ಸೂಚನೆ

Rain News: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Cloudy weather in Bengaluru for the entire day Rain Forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ಜತೆಗೆ ಗುಡುಗು ಮಿಂಚಿನ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನೆರಡು ದಿನಗಳು ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರಲ್ಲಿ ಮಳೆ ನಿರೀಕ್ಷೆ ಇದೆ.

ಇದನ್ನೂ ಓದಿ: Model Fashion Life: ಕಲಾತ್ಮಕ ರೆಟ್ರೊ ಫ್ಯಾಷನ್ ಪ್ರಿಯೆ ಮಾಡೆಲ್ ಲುಸಿ ಸರೆರಿಯಾ

ಭಾಗಶಃ ಮೋಡ ಕವಿದ ವಾತಾವರಣ!

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇಲ್ಲೆಲ್ಲ ಶುಷ್ಕ ವಾತಾವರಣ

ದಕ್ಷಿಣ ಒಳನಾಡಿ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಹಾಗೂ ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಇನ್ನು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯೇ ಇರಲಿದೆ.

ಶನಿವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಮೂಲ್ಕಿ, ಪುತ್ತೂರು, ಮಂಗಳೂರು ವಿಮಾಣ ನಿಲ್ದಾಣದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಪಣಂಬೂರಲ್ಲಿ 2, ಮಣಿ, ಮಂಗಳೂರು, ಉಪ್ಪಿನಂಗಡಿ, ಶ್ರವಣಬೆಳಗೊಳದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕನಿಷ್ಠ ಉಷ್ಣಾಂಶ 13.9 ಡಿ.ಸೆ ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Physical Abuse : 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟ ನಿವೃತ್ತ ಕ್ಲರ್ಕ್!

Physical Abuse : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ವಿಷಯವನ್ನು ಪೋಷಕರಿಗೆ ಹೇಳದಂತೆ ಬೆದರಿಕೆ ಹಾಕಿದ್ದ ನ್ಯಾಯಾಲಯದ ನಿವೃತ್ತ ಕ್ಲರ್ಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Retired clerk jagadish sexually abuses girl
Koo

ಮೈಸೂರು: ನಾಲ್ಕನೇ ತರಗತಿ ಓದುತ್ತಿರುವ ಬಾಲಕಿಗೆ ಲೈಂಗಿಕ ಕಿರುಕುಳ (Physical Abuse) ನೀಡುತ್ತಿದ್ದ ವ್ಯಕ್ತಿಯ ಬಂಧನವಾಗಿದೆ. ತಿ.ನರಸೀಪುರ ಪಟ್ಟಣದ ಹೌಸಿಂಗ್ ಬೋರ್ಡ್‌ನಲ್ಲಿ ಈ ಘಟನೆ ನಡೆದಿದೆ. ಹೌಸಿಂಗ್ ಬೋರ್ಡ್ ನಿವಾಸಿ ಜಗದೀಶ್ ಬಂಧಿತ ಆರೋಪಿಯಾಗಿದ್ದಾನೆ.

ಜಗದೀಶ್‌ ತಿ.ನರಸೀಪುರ ನ್ಯಾಯಾಲಯದಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸಿ, ನಿವೃತ್ತಿ ಹೊಂದಿದ್ದ. ಹೌಸಿಂಗ್ ಬೋರ್ಡ್‌ನಲ್ಲಿ ವಾಸವಿದ್ದ ಜಗದೀಶ್‌ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಾಲಕಿಯನ್ನು ಕರೆಸಿಕೊಂಡ ಈ ವೃದ್ಧ ಮರ್ಮಾಂಗವನ್ನು ಹಿಡಿದುಕೊಳ್ಳುವಂತೆ ಪೀಡುತ್ತಿದ್ದ. ಜತೆಗೆ ಬಟ್ಟೆಯನ್ನು ಬಿಚ್ಚುವಂತೆ ತಿಳಿಸುತ್ತಿದ್ದ. ಬಾಲಕಿ ಇದನ್ನೂ ನಿರಾಕರಿಸಿದಾಗ ಈ ವಿಚಾರವನ್ನು ಪೋಷಕರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆಯನ್ನು ಹಾಕಿದ್ದಾನೆ.

ಇತ್ತ ಬಾಲಕಿಯು ಎಂದಿನಂತೆ ಚಟುವಟಿಕೆಯಲ್ಲಿ ಇಲ್ಲದನ್ನೂ ಗಮನಿಸಿ ಪೋಷಕರು ವಿಚಾರಿಸಿದಾಗ ವಿಷಯವು ಬಹಿರಂಗವಾಗಿದೆ. ಕೂಡಲೇ ಪೋಷಕರು ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ 2 ದಿನ ಕಳೆದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಈ ವಿಷಯವು ಸ್ಥಳೀಯ ನಿವಾಸಿ ಹಾಗೂ ರೈತ ಸಂಘಕ್ಕೆ ತಿಳಿದು ಆರೋಪಿ ಜಗದೀಶ್‌ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಗೆ ಸರಿಯಾದ ಶಿಕ್ಷೆ ಆಗಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಟಿ.ನರಸೀಪುರ ಬಂದ್‌ ಮಾಡುವುದಾಗಿ ರೈತ ಸಂಘದ ಮುಖಂಡರು ಎಚ್ಚರಿಕೆಯನ್ನು ನೀಡಿದ್ದಾರೆ.

ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

ವಿಜಯಪುರ ನಗರದ ಝಂಡಾ ಕಟ್ಟಿ ಬಳಿ ಯುವಕನ ಬರ್ಬರ ಹತ್ಯೆ ಆಗಿದೆ. ತಲೆಯ ಮೇಲೆ ಕಲ್ಲು ಎತ್ತು ಹಾಕಿ ಹತ್ಯೆ ಮಾಡಲಾಗಿದೆ. ಸಾಹಿಲ್ ಭಾಂಗಿ (21) ಹತ್ಯೆಯಾದವರು. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident : ಸಾವಿನಲ್ಲೂ ಒಂದಾದ ಪ್ರೇಮಿಗಳು; ರಸ್ತೆ ಅಪಘಾತದಲ್ಲಿ ಮೃತ್ಯು

ಎಣ್ಣೆಗೆ ಕಾಸು ಕೊಡದ ಪತ್ನಿಯನ್ನೇ ಕೊಂದ!

ಮುಂಬೈ: ಮದ್ಯ ಖರೀದಿಗೆ ಪತ್ನಿ ಹಣ ಕೊಡಲಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಕೊಲೆಗೈದ ಆಘಾತಕಾರಿ ಘಟನೆ ಮುಂಬೈಯಲ್ಲಿ ನಡೆದಿದೆ. ಘಟನೆ ಸಂಬಂಧ 42 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೊಯಿನುದ್ದೀನ್ ನಸ್ರುಲ್ಲಾ ಅನ್ಸಾರಿ ಎಂದು ಗುರುತಿಸಲಾಗಿದೆ. ಆತನ ಪತ್ನಿ ಪರ್ವೀನ್ ಮೊಯಿನುದ್ದೀನ್ ಅನ್ಸಾರಿ (36) ಮೃತೆ (Crime News).

ಘಟನೆಯ ವಿವರ

ಈ ದಂಪತಿ ಗೋರೆಗಾಂವ್ ಮತ್ತು ಮಲಾಡ್ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯ ಬದಿಯಲ್ಲಿ ವಾಸಿಸುತ್ತಿದ್ದರು. ಗುರುವಾರ (ಡಿಸೆಂಬರ್‌ 7) ಮದ್ಯ ಖರೀದಿಸಲು ಮೊಯಿನುದ್ದೀನ್ ನಸ್ರುಲ್ಲಾ ಅನ್ಸಾರಿ ತನ್ನ ಪತ್ನಿಯನ್ನು ಒತ್ತಾಯಿಸಿದ್ದ. ಆದರೆ ಆಕೆ ಹಣ ನೀಡಲು ನಿರಾಕರಿಸಿದ್ದರು. ಇದರಿಂತ ಕುಪಿತನಾದ ಆತ ಆಕೆಯ ಮೇಲೆ ದಾಳಿ ನಡೆಸಿ ಬಿದಿರಿನ ಕೋಲಿನಿಂದ ಮನಸೋಇಚ್ಛೆ ಹೊಡೆದಿದ್ದ. ಇದರಿಂದ ತೀವ್ರ ಅಸ್ವಸ್ಥಗೊಂಡ ಪರ್ವೀನ್ ಮೃತಪಟ್ಟಿದ್ದಾರೆ ಎಂದು ಬೋರಿವಾಲಿ ಸರ್ಕಾರಿ ರೈಲ್ವೆ ಪೊಲೀಸರು (GRP) ತಿಳಿಸಿದ್ದಾರೆ.

ಮಾರಣಾಂತಿಕ ಗಾಯಗಳಾಗಿದ್ದ ಪರ್ವೀನ್ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದರು ಎಂದು ಮೂಲಗಳು ತಿಳಿಸಿವೆ. ಬೋರಿವಾಲಿ ಜಿಆರ್‌ಪಿ ಮೊಯಿನುದ್ದೀನ್ ಅನ್ಸಾರಿ ವಿರುದ್ಧ ಕೊಲೆಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ನಗರದಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಮಲಾಡ್‌ನ ಮಾಲ್ವಾನಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಯಿನುದ್ದೀನ್ ಅನ್ಸಾರಿ ಈ ಹಿಂದೆಯೂ ಹಲವು ಬಾರಿ ಹಣಕ್ಕಾಗಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇವರಿಬ್ಬರು 2005ರಲ್ಲಿ ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ.

ರಜಪೂತ ನಾಯಕನ ಹತ್ಯೆ ಸಂಚು ನಡೆದಿದ್ದು ಕೆನಡಾದಲ್ಲಿ; ಇದರ ಹಿಂದೆ ಇರೋದು ಯಾರು?

ನವದೆಹಲಿ: ರಾಷ್ಟ್ರೀಯ ರಜಪೂತ್ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೇಡಿ (Sukhdev Singh Gogamedi) ಅವರ ಹತ್ಯೆಗೆ ಸಂಬಂಧಿಸಿದ ಒಂದೊಂದೇ ರಹಸ್ಯಗಳು ಬಯಲಾಗುತ್ತಿದೆ. ಸುಖದೇವ್ ಸಿಂಗ್ ಅವರ ಮನೆಯೊಳಗೆ ಹತ್ತಿರದಿಂದಲೇ ಹಲವು ಸುತ್ತು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶೂಟರ್‌ಗಳು ಸೇರಿ ಮೂವರನ್ನು ಹರಿಯಾಣದಲ್ಲಿ ಈಗಾಗಲೇ ಬಂಧಿಸಲಾಗಿದೆ. ರೋಹಿತ್ ರಾಥೋಡ್, ನಿತಿನ್ ಫೌಜಿ, ಉಧಮ್ ಸಿಂಗ್ ಬಂಧಿತರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರಿಗೆ ಹತ್ಯೆಯ ಬೇರು ಕೆನಡಾದವರೆಗೂ ಹರಡಿರುವುದು ಕಂಡು ಬಂದಿದೆ. ಹತ್ಯೆಯ ಪಿತೂರಿ ಹೇಗೆ ನಡೆಯಿತು ಎನ್ನುವುದನ್ನು ಅವರು ಹಂತ ಹಂತವಾಗಿ ವಿವರಿಸಿದ್ದಾರೆ.

ಸುಖದೇವ್ ಸಿಂಗ್ ಅವರನ್ನು ಹತ್ಯೆ ಮಾಡುವ ಸಂಚಿನ ಮಾಸ್ಟರ್ ಮೈಂಡ್ ರಾಜಸ್ಥಾನದ ದರೋಡೆಕೋರ ರೋಹಿತ್ ಗೋದಾರಾ, ಕೆನಡಾದಲ್ಲಿ ವಾಸಿಸುತ್ತಿದ್ದಾನೆ ಎಂದು ಶಂಕಿಸಲಾಗಿದೆ. ಕಳೆದ ವರ್ಷ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರ ಹತ್ಯೆಗೆ ಸಂಬಂಧಿಸಿದ ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ರೋಹಿತ್ ಗೋದಾರಾ ನಿಕಟ ಸಂಬಂಧ ಹೊಂದಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಸುಖದೇವ್ ಸಿಂಗ್ ಅವರನ್ನು ಹತ್ಯೆ ಮಾಡುವ ಮತ್ತು ಶೂಟರ್‌ಗಳನ್ನು ನೇಮಿಸುವ ಜವಾಬ್ದಾರಿಯನ್ನು ಗೋದಾರಾ ತನ್ನ ಸಹಚರ ವೀರೇಂದ್ರ ಚರಣ್‌ಗೆ ವಹಿಸಿದ್ದ. ಅತ್ಯಾಚಾರ ಪ್ರಕರಣದಲ್ಲಿ ರಾಜಸ್ಥಾನದ ಅಜ್ಮೀರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾಗ ಚರಣ್ ಮತ್ತು ಗೋದಾರಾ ಭೇಟಿಯಾಗಿದ್ದರು. ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎನ್ನುವ ಕಾರಣಕ್ಕೆ ಸುಖದೇವ್ ಸಿಂಗ್ ವಿರುದ್ಧ ಗೋದಾರಾ ದ್ವೇಷ ಕಟ್ಟಿಕೊಂಡಿದ್ದ. ಇದಕ್ಕಾಗಿ ಸೇಡು ತೀರಿಸಿಕೊಳ್ಳಲು ಯೋಜನೆ ರೂಪಿಸಿದ್ದ ಎಂದು ಮೂಲಗಳು ತಿಳಿಸಿವೆ.

ಬಂಧಿತ ನಿತಿನ್ ಫೌಜಿ ವಿದೇಶಕ್ಕೆ ತೆರಳಿ ಅಲ್ಲಿ ನೆಲೆಸಲು ಬಯಸಿದ್ದ. ಇದನ್ನೇ ಬಂಡವಾಳವಾಗಿಸಿಕೊಂಡ ಚರಣ್ ಆತನಿಗೆ ಹತ್ಯೆಯ ಜವಾಬ್ದಾರಿ ವಹಿಸಿ, ಕೆಲಸ ಮುಗಿದ ನಂತರ ವಿದೇಶಕ್ಕೆ ತೆರಳಲು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದ. ಹೀಗೆ ರೋಹಿತ್ ರಾಥೋಡ್, ನಿತಿನ್ ಫೌಜಿ ಅವರಿಗೆ ಹತ್ಯೆ ಮಾಡಲು ಸೂಚಿಸಿದ ಚರಣ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ.

ಗನ್‌ ಸಂಗ್ರಹ

ಚರಣ್ ತನ್ನ ಪ್ರಭಾವ ಬಳಸಿ ಇಬ್ಬರು ಶೂಟರ್‌ಗಳಿಗೂ ಬಂದೂಕುಗಳನ್ನು ತಲುಪಿಸಿದ್ದ. ಹತ್ಯೆಯ ನಂತರ ಇಬ್ಬರೂ ಬಂದೂಕುಗಳನ್ನು ನಗರದ ಹೋಟೆಲ್ ಬಳಿ ಹೂತು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂದೂಕುಗಳನ್ನು ವಶಪಡಿಸಿಕೊಳ್ಳಲು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಗೋದಾರಾ ಮತ್ತು ಸುಖದೇವ್ ಸಿಂಗ್ ನಡುವಿನ ಆಸ್ತಿ ವಿವಾದ ಬೆಳಕಿಗೆ ಬಂದಿದೆ. ಅಲ್ಲದೆ ಜಾತಿ ಸಮೀಕರಣದ ವಿಚಾರದಲ್ಲಿಯೂ ತನಿಖೆ ಮಾಡಲಾಗುತ್ತಿದೆ.

ಒಟ್ಟಿಗೆ ಚಹಾ ಸೇವಿಸಿದ್ದ ಕೊಲೆ ಪಾತಕಿಗಳು

ಬಲಪಂಥೀಯ ಸಂಘಟನೆಯಾಗಿರುವ ರಾಷ್ಟ್ರೀಯ ರಜಪೂತ್ ಕರ್ಣಿ ಸೇನಾದ ಮುಖ್ಯಸ್ಥ ಸುಖದೇವ್ ಸಿಂಗ್ ಗೋಗಮೇಡಿ ಅವರನ್ನು ಡಿಸೆಂಬರ್‌ 5ರಂದು ಹತ್ಯೆ ಮಾಡುವ ಮೊದಲು ಜೈಪುರದ ಅವರ ಮನೆಯಲ್ಲಿ ಆರೋಪಿಗಳು ಅವರೊಂದಿಗೆ ಚಹಾ ಸೇವಿಸಿದ್ದರು. ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಏಕಾಏಕಿ ಎದ್ದು ಆರೋಪಿಗಳು ಸುಖದೇವ್ ಸಿಂಗ್ ಅವರ ಬೆಂಗಾವಲು ಸಿಬ್ಬಂದಿ ಸೇರಿದಂತೆ ಹಲವರ ಮೇಲೆ ಗುಂಡಿನ ದಾಳಿ ಮಾಡಿದ್ದರು. ಬಳಿಕ ಸುಖ್​ದೇವ್ ಅವರ ತಲೆಗೆ ರಿವಾಲ್ವರ್ ಇಟ್ಟು ಗುಂಡು ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
man accused of murder wins acquittal after studying law and fighting own Case
ದೇಶ3 mins ago

ಜೋಡಿ ಕೊಲೆ ಪ್ರಕರಣದಲ್ಲಿ ತಪ್ಪಾಗಿ ಆರೋಪಿಯಾಗಿದ್ದ ವ್ಯಕ್ತಿ, ಲಾ ಓದಿ ತನ್ನ ಕೇಸ್‌ನ್ನೇ ತಾನೇ ಗೆದ್ದ!

Kate Cross reveals ‘soft spot for RCB’ after bagging deal
ಕ್ರಿಕೆಟ್4 mins ago

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

Mysore people
ಕರ್ನಾಟಕ11 mins ago

Congress Guarantee: ಸಿಎಂ ಸಿದ್ದರಾಮಯ್ಯ ತವರಲ್ಲೇ ಸಿಗದ ಗ್ಯಾರಂಟಿ ಯೋಜನೆಗಳು; ಸ್ಲಂ ನಿವಾಸಿಗಳ ಪರದಾಟ

Winter Food Tips
ಆಹಾರ/ಅಡುಗೆ27 mins ago

Winter Food Tips: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವ ದೇಸೀ ಸಿಹಿತಿಂಡಿಗಳಿವು!

ipl fans
ಕ್ರಿಕೆಟ್56 mins ago

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

Moral policing
ಕರ್ನಾಟಕ1 hour ago

Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

Akash anand is BSP Leader mayawati's political heir
ದೇಶ1 hour ago

Akash Anand: ಯಾರಿವರು ಮಾಯಾವತಿ ಉತ್ತರಾಧಿಕಾರಿ ಆಕಾಶ್ ಆನಂದ್?

Cloudy weather in Bengaluru for the entire day Rain Forecast
ಉಡುಪಿ1 hour ago

Karnataka weather: ಬೆಂಗಳೂರಲ್ಲಿ ನಾಳೆ ಇಡೀ ದಿನ ಮೋಡ ಕವಿದ ವಾತಾವರಣ; ಇಲ್ಲಷ್ಟೇ ಮಳೆ ಸೂಚನೆ

money guide
ಮನಿ-ಗೈಡ್1 hour ago

Money Guide: ನಿವೃತ್ತಿಯ ನಂತರವೂ ಆರ್ಥಿಕವಾಗಿ ಸದೃಢರಾಗಬೇಕೆ?; ಈ ಯೋಜನೆಗಳಲ್ಲಿ ಹೂಡಿಕೆ ಮಾಡಿ

rohit sharma jay shah
ಕ್ರಿಕೆಟ್2 hours ago

Rohit Sharma: ಜಯ್​ ಶಾ ಕೈಯಲ್ಲಿದೆ ರೋಹಿತ್​ ಟಿ20 ವಿಶ್ವಕಪ್ ಭವಿಷ್ಯ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ3 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ5 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ13 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌