BBMP Budget 2023: ಕಾರ್ಪೊರೇಟರ್‌ಗಳಿಲ್ಲದೆ ಸತತ 3ನೇ ಬಾರಿ ಬಜೆಟ್‌ ಮಂಡನೆ; 11,158 ಕೋಟಿ ರೂಪಾಯಿಯ ಬಿಗ್‌ ಬಜೆಟ್‌ನಲ್ಲಿ ಏನುಂಟು, ಏನಿಲ್ಲ? - Vistara News

ಕರ್ನಾಟಕ

BBMP Budget 2023: ಕಾರ್ಪೊರೇಟರ್‌ಗಳಿಲ್ಲದೆ ಸತತ 3ನೇ ಬಾರಿ ಬಜೆಟ್‌ ಮಂಡನೆ; 11,158 ಕೋಟಿ ರೂಪಾಯಿಯ ಬಿಗ್‌ ಬಜೆಟ್‌ನಲ್ಲಿ ಏನುಂಟು, ಏನಿಲ್ಲ?

BBMP Budget 2023: ರಾಜಧಾನಿ ಬೆಂಗಳೂರಿನಲ್ಲಿ ಸತತ 3ನೇ ಬಾರಿಗೆ ಕಾರ್ಪೊರೇಟರ್‌ಗಳಿಲ್ಲದೆ 2023-24ನೇ ಸಾಲಿನ ಬಿಬಿಎಂಪಿ ಬಜೆಟ್‌ ಮಂಡನೆಯಾಗಿದೆ. ಈ ಬಾರಿ 11,158 ಕೋಟಿ ರೂ. ಬಜೆಟ್‌ ಗಾತ್ರವಾಗಿದೆ. ಈಗಾಗಲೇ ಇರುವ ಯೋಜನೆಗಳ ಅಭಿವೃದ್ಧಿ ಜತೆಗೆ ಒಂದಿಷ್ಟು ಹೊಸ ಯೋಜನೆಗಳಿಗೂ ಈ ಬಜೆಟ್‌ನಲ್ಲಿ ಸ್ಥಾನಮಾನ ಲಭಿಸಿದೆ. ಹಾಗಾದರೆ, ಈ ಸಾಲಿನ ಬಜೆಟ್‌ನಲ್ಲಿ ಏನೆಲ್ಲ ಇದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Budget presented for the third time in a row without corporators
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಬಿಎಂಪಿ 2023-24ನೇ ಸಾಲಿನ ಆಯವ್ಯಯ (BBMP Budget 2023) ಮಂಡನೆಯನ್ನು ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯಪುರ ಅವರು ನಗರದ ಟೌನ್ ಹಾಲ್‌ನಲ್ಲಿ ಗುರುವಾರ ಮಂಡಿಸಿದ್ದಾರೆ. ಕಳೆದ ಬಾರಿಗಿಂತ ಈ ವರ್ಷದ ಬಜೆಟ್‌ ಗಾತ್ರ ದೊಡ್ಡದಾಗಿದ್ದು, 11,158 ಕೋಟಿ ರೂ. ಮೊತ್ತದ ಬಜೆಟ್‌ ಮಂಡನೆ ಮಾಡಲಾಗಿದೆ.

Budget presented for the third time in a row without corporators
Budget presented for the third time in a row without corporators

ನಗರದಲ್ಲಿ ಕಾರ್ಪೋರೇಟರ್‌ಗಳಿಲ್ಲದೆ ಬಿಬಿಎಂಪಿ ಆಡಳಿತಾಧಿಕಾರಿಗಳೇ ಸತತ 3ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ನಗರದಲ್ಲಿ ಈಗಾಗಲೇ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೆ ಮಹತ್ವ ನೀಡಲಾಗಿದ್ದು, ಜತೆಗೆ ಮಹಿಳೆಯರಿಗೆ ಅನುಕೂಲವಾಗುವಂತಹ ಕೆಲ ಹೊಸ ಯೋಜನೆಗಳಿಗೂ ಕೈ ಹಾಕಲಾಗಿದೆ. ಕೆಲವು ಹೊಸ ಯೋಜನೆಗಳ ಹೊರತುಪಡಿಸಿ ಉಳಿದ ಎಲ್ಲ ಯೋಜನೆಗಳೂ ಹಳೆಯದ್ದೇ ಇದೆ. ಹಾಸಿಗೆ ಇದ್ದಷ್ಟೇ ಕಾಲು ಚಾಚು ಎಂಬ ಅಂಶವನ್ನು ವಿಶೇಷ ಆಯುಕ್ತರು ಉಲ್ಲೇಖಿಸಿದ್ದಾರೆ.

ಇಲಾಖೆಗಳಿಗೆ ಅನುದಾನ ಹಂಚಿಕೆ ಪ್ರಮಾಣ ಹೀಗಿದೆ

ಕೌನ್ಸಿಲ್- 13.25 ಕೋಟಿ ರೂ.
ಸಾಮಾನ್ಯ ಆಡಳಿತ- 602.42 ಕೋಟಿ ರೂ.
ಕಂದಾಯ- 524.69 ಕೋಟಿ ರೂ.
ನಗರ ಯೋಜನೆ-ನಿಯಂತ್ರಣ- 72.69 ಕೋಟಿ ರೂ.
ಸಾರ್ವಜನಿಕ ಕಾಮಗಾರಿ- 7103.53 ಕೋಟಿ ರೂ.
ಘನತ್ಯಾಜ್ಯ ನಿರ್ವಹಣೆ- 1643.72 ಕೋಟಿ ರೂ.
ಸಾರ್ವಜನಿಕ ಆರೋಗ್ಯ- 241.30 ಕೋಟಿ ರೂ.
ತೋಟಗಾರಿಕೆ- 129.85 ಕೋಟಿ ರೂ.
ನಗರ ಅರಣ್ಯೀಕರಣ- 57.15 ಕೋಟಿ ರೂ.
ಸಾರ್ವಜನಿಕ ಶಿಕ್ಷಣ- 152.61 ಕೋಟಿ ರೂ.
ಸಮಾಜ ಕಲ್ಯಾಣ- 513.16 ಕೋಟಿ ರೂ.

ಯಾವುದಕ್ಕೆ ಎಷ್ಟು ಅನುದಾನ?

ಅಮೃತ್ ನಗರೋತ್ಥಾನ ಯೋಜನೆಯಡಿ 6000 ಕೋಟಿ ರೂ. ವೆಚ್ಚದಲ್ಲಿ 2,146 ಕಿ.ಮೀ. ರಸ್ತೆ ಅಭಿವೃದ್ಧಿ, ನಗರದಲ್ಲಿರುವ 67 ಕೆರೆಗಳ ಅಭಿವೃದ್ಧಿ, 11 ಹೊಸ ಪಾರ್ಕ್‌ಗಳ ನಿರ್ಮಾಣ, 42 ಹೊಸ ಶಾಲಾ ಕಟ್ಟಡಗಳ ನಿರ್ಮಾಣ, 26 ಹಳೆಯ ಶಾಲಾ ಕಟ್ಟಡಗಳ ನವೀಕರಣ, 84 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನವೀಕರಣವನ್ನು ಮಾಡಲು ನಿರ್ದರಿಸಲಾಗಿದೆ. 873 ಕೋಟಿ ರೂಪಾಯಿಯನ್ನು 2,558 ಕಾಮಗಾರಿಗಳ ನಿರ್ವಹಣೆಗೆ ಮೀಸಲಿಡಲಾಗಿದೆ. 273 ಕೋಟಿ ರೂ. ವೆಚ್ಚದಲ್ಲಿ ಹೈಡೆನ್ಸಿಟಿ ಕಾರಿಡಾರ್ ನಿರ್ಮಾಣ ಹಾಗೂ 1920 ಕೋಟಿ ರೂ. ವೆಚ್ಚದಲ್ಲಿ 195 ಕಿ.ಮೀ ರಾಜಕಾಲುವೆ ನಿರ್ವಹಣೆ, 200 ಕೋಟಿ ರೂ. ವೆಚ್ಚದಲ್ಲಿ 67 ಕೆರೆಗಳ ಅಭಿವೃದ್ಧಿ ಹಾಗೂ 15 ಕೋಟಿಯಲ್ಲಿ ಕೆರೆಗಳ ರಕ್ಷಣೆ, 1410 ಕೋಟಿ ವೆಚ್ಚದಲ್ಲಿ 150 ಕಿ.ಮೀ. ವೈಟ್ ಟಾಪಿಂಗ್ ಮಾಡಲು ಉದ್ದೇಶಿಸಲಾಗಿದೆ. ಜತೆಗೆ ನಗರದ 75 ಜಂಕ್ಷನ್‌ಗಳ ಅಭಿವೃದ್ಧಿಗೆ 150 ಕೋಟಿ ರೂ. ಮೀಸಲಿಡಲಾಗಿದ್ದು, 9 ಹೊಸ ಕಾಮಗಾರಿಗೆ 965 ಕೋಟಿ ರೂ. ಕಾಯ್ದಿರಿಸಲಾಗಿದೆ.

ಕಟ್ಟಡ ನಕ್ಷೆಗಳ ಡಿಜಟಲೀಕರಣಕ್ಕಾಗಿ 2 ಕೋಟಿ ರೂ. ಮೀಸಲಿಟ್ಟಿದ್ದರೆ, ಒತ್ತುವರಿ ತೆರವುಗೊಳಿಸಲು ವಲಯಕ್ಕೆ ಒಂದು ಕೋಟಿಯಂತೆ ಒಟ್ಟು 8 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಅನಧಿಕೃತ ಕಟ್ಟಡ ತೆರವುಗೊಳಿಸಲು 10 ಕೋಟಿ ರೂ., ಕಸಾಯಿಖಾನೆಗಳ ನಿರ್ವಹಣೆಗಾಗಿ 1 ಕೋಟಿ ರೂ. ಹಾಗೂ ಚಿತಾಗಾರಗಳ/ ರುದ್ರಭೂಮಿ ನಿರ್ವಹಣೆಗಾಗಿ 7.74 ಕೋಟಿ ರೂ. ಮೀಸಲಿಡಲಾಗಿದೆ. ಆರ್ಟಿರಿಯಲ್/ ಸಬ್ ಆರ್ಟಿರಿಯಲ್ ರಸ್ತೆಗಳ ನಿರ್ವಹಣೆಗಾಗಿ 60.10 ಕೋಟಿ ರೂ. ಹಾಗೂ ರೈಲ್ವೆ ಮೇಲು ಸೇತುವೆ ಮತ್ತು ಕೆಳ ಸೇತುವೆಗಳ ನಿರ್ವಹಣೆಗಾಗಿ 23.11 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ.

ಗುಂಡಿ ಮುಚ್ಚಲು ಪ್ರತಿ ವಾರ್ಡ್‌ಗೆ 15ಲಕ್ಷ ರೂ.

ವಾರ್ಡ್‌ನ ನಿರ್ವಹಣೆ ಕೆಲಸಗಳಿಗಾಗಿ ಪ್ರತಿ ವಾರ್ಡಗೆ 75 ಲಕ್ಷ ರೂಪಾಯಿಯಂತೆ ಒಟ್ಟಾರೆ 182.25 ಕೋಟಿ ರೂ. ಮೀಸಲಿಡಲಾಗಿದೆ. ಪ್ರಮುಖವಾಗಿ ಪ್ರತಿ ವಾರ್ಡ್‌ಗೆ ಹೂಳೆತ್ತುವ ಕಾಮಗಾರಿಗಳಿಗೆ 30 ಲಕ್ಷ ರೂ., ಗುಂಡಿ ಮುಚ್ಚುವ ಕಾಮಗಾರಿಗಳಿಗೆ 15 ಲಕ್ಷ ರೂ., ಪಾದವಾರಿ ಮಾರ್ಗಗಳ ದುರಸ್ತಿ ಕಾಮಗಾರಿಗಳಿಗೆ 25 ಲಕ್ಷ ರೂ. ಹಾಗೂ ಮಾನ್ಸೂನ್‌ ನಿರ್ವಹಣೆಗಾಗಿ 5 ಲಕ್ಷ ರೂ. ಮೀಸಲಿಡಲಾಗಿದೆ. ಬೃಹತ್ ಮಳೆ ನೀರುಗಾಲುವೆಗಳ ನಿರ್ವಹಣೆಗಾಗಿ 70.20 ಕೋಟಿ ರೂ., ತುರ್ತು ಮಾನ್ಸೂನ್ ಕಾಮಗಾರಿಗಾಗಿ 15 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಇದರಲ್ಲಿ ಹೊಸ ವಲಯಗಳಿಗೆ 2 ಕೋಟಿ ರೂ. ಹಾಗೂ ಹಳೇ ವಲಯಗಳಿಗೆ 1 ಕೋಟಿ ರೂ. ಮೀಸಲಿಡಲಾಗಿದೆ.

Budget presented for the third time in a row without corporators
Budget presented for the third time in a row without corporators

ಕೆರೆ ಸಂರಕ್ಷಣೆಗೂ ಒತ್ತು

ಬೀದಿ ದೀಪಗಳ ನಿರ್ವಹಣೆಗಾಗಿ 38 ಕೋಟಿ ರೂ., ಕೆರೆಗಳ ನಿರ್ವಹಣೆಗಾಗಿ ಈ ಬಾರಿಯ ಬಜೆಟ್‌ನಲ್ಲಿ 35 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಗಾಗಿ 100 ಕೋಟಿ ರೂ., ಕೆರೆ ಮತ್ತು ಇತರೆ ಖಾಲಿ ಜಾಗಗಳ ಸಂರಕ್ಷಣೆಗಾಗಿ 40 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಇನ್ನು ಹೊಸದಾಗಿ ರಚನೆಯಾದ ವಾರ್ಡ್‌ಗಳ ಕಚೇರಿ ನಿಮಾಣಕ್ಕಾಗಿ 12 ಕೋಟಿ ರೂ., ವಲಯ ಕಟ್ಟಡಗಳಿಗಾಗಿ 10 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

ಉಳಿದಂತೆ ವಿವಿದ್ಧೋದ್ದೇಶ ಎಂಜಿನಿಯರಿಂಗ್ ವಿಭಾಗದ ಕಾಮಗಾರಿಗಳಿಗೆ 25 ಕೋಟಿ ರೂ., ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸ್ಥಾಪನೆಗಾಗಿ 5 ಕೋಟಿ ರೂ., ಅಂಗನವಾಡಿಗಳ ನಿರ್ಮಾಣಕ್ಕಾಗಿ 4.50 ಕೋಟಿ ರೂ. ಹಾಗೂ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣಕ್ಕಾಗಿ 10 ಕೋಟಿ ರೂ., ಬೊಮ್ಮನಹಳ್ಳಿ ಮತ್ತು ಮಹದೇವಪುರ ವಲಯದಲ್ಲಿ ಆ್ಯಂಟಿ ರೇಬಿಸ್ ಕೇಂದ್ರ ಸ್ಥಾಪನೆಗಾಗಿ 5 ಕೋಟಿ ರೂ. ಮೀಸಲಿಡಲಾಗಿದೆ. ಹಾರೋಹಳ್ಳಿಯಲ್ಲಿ ಕಸಾಯಿಖಾನೆ ಅಭಿವೃದ್ಧಿ ಕಾಮಗಾರಿಗಳಿಗಾಗಿ 2.5 ಕೋಟಿ ರೂ., ಹೊಸ ಉದ್ಯಾನವನಗಳ ಅಭಿವೃದ್ಧಿಗಾಗಿ 15 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ.

ಹೊಸ ಚಿತಾಗಾರಗಳ ನಿರ್ಮಾಣಕ್ಕಾಗಿ 30 ಕೋಟಿ ರೂ., ಪ್ರಾಣಿಗಳ ಹೊಸ ಚಿತಾಗಾರಗಳ ನಿರ್ಮಾಣಕ್ಕಾಗಿ 5 ಕೋಟಿ ರೂ., ಕೆರೆಗಳ ಅಭಿವೃದ್ಧಿಗಾಗಿ 50 ಕೋಟಿ ರೂ., ಅಂಡರ್ ಗ್ರೌಂಡ್ ಪಾರ್ಕಿಂಗ್ ನಿರ್ಮಾಣಕ್ಕಾಗಿ 5 ಕೋಟಿ ರೂ., 75 ಜಂಕ್ಷನ್‌ಗಳ ಅಭಿವೃದ್ಧಿಗಾಗಿ 150 ಕೋಟಿ ರೂ. ಜತೆಗೆ ಪ್ರತಿ ವಾರ್ಡಗೆ 1.50 ಕೋಟಿ ರೂಪಾಯಿಗಳಂತೆ ವಾರ್ಡ್ ಕಾಮಗಾರಿಗಳಿಗಾಗಿ ಒಟ್ಟು 303.75 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

ದಾಸರಹಳ್ಳಿ ವಲಯದಲ್ಲಿ ಬೃಹತ್ ಮಳೆ ನೀರುಗಾಲುವೆ ತಡೆಗೋಡೆ ನಿರ್ಮಾಣಕ್ಕಾಗಿ 5 ಕೋಟಿ ರೂ., ಹೆಚ್ಚುವರಿ ವಿದ್ಯುತ್ ಫಿಟ್ಟಿಂಗ್‌ಗಳಿಗಾಗಿ ಒಟ್ಟು 17.25 ಕೋಟಿ ರೂ. ಇದ್ದು, ಇದರಲ್ಲಿ ಹೊಸ ವಲಯದ ಪ್ರತಿ ವಾರ್ಡ್‌ಗೆ 10 ಲಕ್ಷ ರೂ., ಹಳೆ ವಲಯದ ಪ್ರತಿ ವಾರ್ಡ್‌ಗೆ 5 ಲಕ್ಷ ರೂ. ಅನುದಾನ ಹಂಚಿಕೆ ಮಾಡಲಾಗಿದೆ.

ಸ್ವಾತಂತ್ರ್ಯ ಉದ್ಯಾನವನ (Freedom Park) ದಲ್ಲಿ ವಿಶೇಷ ಅಭಿವೃದ್ಧಿ ಕಾಮಗಾರಿಗಳಿಗಾಗಿ 5 ಕೋಟಿ ರೂ., 110 ಹಳ್ಳಿಗಳಲ್ಲಿ ವಿಶೇಷ ಅಭಿವೃದ್ಧಿ ಕಾಮಗಾರಿಗಳಿಗಾಗಿ 6 ಕೋಟಿ ರೂ., ಅಸಂಘಟಿತ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರ ವಸತಿ ನಿಲಯಗಳಿಗಾಗಿ 24 ಕೋಟಿ ರೂ. ಹಾಗೂ ಒಂಟಿ ಮನೆ ನಿರ್ಮಾಣಕ್ಕಾಗಿ ಫಲಾನುಭವಿಗಳಿಗೆ ಸಹಾಯಧನ ನೀಡಲು ಒಟ್ಟು 100 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.

ಲ್ಯಾಪ್‌ಟಾಪ್‌ಗಳ ವಿತರಣೆಗಾಗಿ 25 ಕೋಟಿ ರೂ., ಹೊಲಿಗೆ ಯಂತ್ರಗಳ ವಿತರಣೆಗಾಗಿ 9 ಕೋಟಿ ರೂ., ವೃದ್ಧಾಶ್ರಮಗಳಿಗಾಗಿ 16 ಕೋಟಿ ರೂ., ವಿದ್ಯಾರ್ಥಿ ವೇತನ ನೀಡಲು 5 ಕೋಟಿ ರೂ. ಹಾಗೂ ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆ ಸಂಸ್ಥೆಗೆ 700 ಕೋಟಿ ರೂ.ಗಳ ಸಹಾಯನುದಾನ, ಬೀದಿ ನಾಯಿಗಳ ನಿರ್ವಹಣೆಗಾಗಿ 20 ಕೋಟಿ ರೂ., ಇಂದಿರಾ ಕ್ಯಾಂಟೀನ್‌ಗಾಗಿ 50 ಕೋಟಿ ರೂ., ಬೆಂಗಳೂರು ಆರೋಗ್ಯ ವ್ಯವಸ್ಥೆಗಾಗಿ 2 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ: Viral News : ಕಚ್ಚಾ ಬಾದಾಮ್‌ ಗಾಯಕನಿಗೆ ಮೋಸ; ಕಾಪಿರೈಟ್ಸ್‌ ವಿಚಾರದಲ್ಲಿ ದೂರು ದಾಖಲಿಸಿದ ಭುಬನ್‌

ಮರಗಳ ಗಣತಿಗಾಗಿ 4 ಕೋಟಿ ರೂ., ಸಸಿಗಳ ಬೆಳೆಸುವಿಕೆ ಮತ್ತು ನಿರ್ವಹಣೆಗಾಗಿ 7.5 ಕೋಟಿ ರೂ. ಹಾಗೂ Tree canopy ನಿರ್ವಹಣೆಗಾಗಿ 14 ಕೋಟಿ ರೂ., ಹೈ-ಟೆಕ್ ನರ್ಸರಿಗಳಿಗಾಗಿ 8 ಕೋಟಿ ಹಂಚಿಕೆ ಮಾಡಲಾಗಿದೆ. ಶಾಲಾ ವಿದ್ಯಾರ್ಥಿಗಳ ಸಮವಸ್ತ್ರ, ಶೂ ನೀಡಲು 25 ಕೋಟಿ, ಬೀದಿ ವ್ಯಾಪಾರಿಗಳ ವಲಯಗಳಿಗಾಗಿ 25 ಕೋಟಿ ರೂ. ಮೀಸಲಿಡಲಾಗಿದೆ.

ಇದು ವಾಸ್ತವದ ಬಜೆಟ್‌ ಅಲ್ಲ
ಬಿಬಿಎಂಪಿ ಮಂಡಿಸಿರುವ ಬಜೆಟ್‌ ಸತ್ಯದಿಂದ ದೂರವಿದೆ. ಕಾರ್ಪೊರೇಟರ್‌ಗಳಿಲ್ಲದ ಕಾರಣ ಪಾಲಿಕೆಯ ಒಳಗೆ ಏನಾಗುತ್ತಿದೆ ಎಂದು ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ತಮಗೆ ಬೇಕಾದಂತಹ ಲೆಕ್ಕಗಳನ್ನು ತೋರಿಸಿಕೊಂಡು ವಾಸ್ತವಕ್ಕೆ ದೂರವಾದ ಬಜೆಟ್ ಮಂಡಿಸಿದ್ದಾರೆ. ಕಳೆದ ವರ್ಷದ ಬಜೆಟ್‌ನಲ್ಲಿ ಎಷ್ಟು ಉಳಿತಾಯವಾಗಿದೆ? ಗುತ್ತಿಗೆದಾರರಿಗೆ ನೀಡಬೇಕಿರುವ ಬಾಕಿ ಮೊತ್ತವನ್ನು ಬಿಬಿಎಂಪಿ ಲೆಕ್ಕ ಹಾಕಿದರೆ ಸಾಕು, ಇದು ವಾಸ್ತವದ ಬಜೆಟ್ ಅಲ್ಲ ಎಂಬುದು ಅರಿವಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಅಮರೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

BJP-JDS Padayatra: ರಾಜ್ಯದ ಹಣ ಲೂಟಿ ಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ: ಕಾಂಗ್ರೆಸ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ

BJP-JDS Padayatra: “ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಿ” ಎಂಬ ಘೋಷಣೆಯಡಿ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಯಾತ್ರೆಯನ್ನು ಬಿಡದಿಯಿಂದ ಇಂದು ಪುನರಾರಂಭಿಸಲಾಗಿದ್ದು ಎರಡೂ ಪಕ್ಷಗಳ ಮುಖಂಡರು ಭಾಗಿಯಾಗಿದ್ದಾರೆ. ʼʼಆಡಳಿತ ಪಕ್ಷ ಕಾಂಗ್ರೆಸ್ ನಡೆಸುವ ಭ್ರಷ್ಟಾಚಾರ ಎಲ್ಲರ ಗಮನದಲ್ಲಿದೆ. ರಾಜ್ಯದ ಹಣ ಲೂಟಿ ಮಾಡಿ, ಗಾಂಧಿ ಕುಟುಂಬಕ್ಕೆ ಕಪ್ಪಕಾಣಿಕೆ ಕೊಡುತ್ತಿದ್ದಾರೆʼʼ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ವಿಜಯೇಂದ್ರ ವಾಗ್ದಾಳಿ ನಡೆಸಿದರು.

VISTARANEWS.COM


on

BJP-JDS Padayatra
Koo

ಬೆಂಗಳೂರು: “ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಿ” ಎಂಬ ಘೋಷಣೆಯಡಿ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ (BJP-JDS Padayatra) ಶನಿವಾರ ಬೆಳಗ್ಗೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಚಾಲನೆ ದೊರೆತಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಯಾತ್ರೆಯನ್ನು ಬಿಡದಿಯಿಂದ ಇಂದು ಪುನರಾರಂಭಿಸಲಾಗಿದ್ದು ಎರಡೂ ಪಕ್ಷಗಳ ಮುಖಂಡರು ಭಾಗಿಯಾಗಿದ್ದಾರೆ. ʼʼಆಡಳಿತ ಪಕ್ಷ ಕಾಂಗ್ರೆಸ್ ನಡೆಸುವ ಭ್ರಷ್ಟಾಚಾರ ಎಲ್ಲರ ಗಮನದಲ್ಲಿದೆ. ರಾಜ್ಯದ ಹಣ ಲೂಟಿ ಮಾಡಿ, ಗಾಂಧಿ ಕುಟುಂಬಕ್ಕೆ ಕಪ್ಪಕಾಣಿಕೆ ಕೊಡುತ್ತಿದ್ದಾರೆʼʼ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ವಿಜಯೇಂದ್ರ ವಾಗ್ದಾಳಿ ನಡೆಸಿದರು.

ʼʼಮೈಸೂರು ಚಲೋ ಯಶಸ್ವಿಯಾಗಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಚಾಮುಂಡೇಶ್ವರಿ ತಾಯಿ ಆಶಿರ್ವಾದ ಪಡೆದು ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡೆಯನ್ನು ಎಲ್ಲರೂ ಗಮನಿಸಿದ್ದೀರಿ. ಪ್ರತಿಪಕ್ಷಗಳನ್ನು ಪ್ರಶ್ನೆ ಮಾಡಿದ್ದನ್ನ ನೋಡಿದ್ದೀರಿ. ಆಡಳಿತ ಪಕ್ಷ ಮೊದಲ ಬಾರಿ ಪ್ರತಿಪಕ್ಷವನ್ನು ಪ್ರಶ್ನೆ ಮಾಡಿದೆʼʼ ಎಂದ ಅವರು ʼʼಆಡಳಿತ ಕಾಂಗ್ರೆಸ್‌ ನಾಯಕರ ಭ್ರಷ್ಟಾಚಾರ ಎಲ್ಲರ ಗಮನದಲ್ಲಿದೆ. ರಾಜ್ಯದ ಹಣ ಲೂಟಿ ಮಾಡಿ, ಗಾಂಧಿ ಕುಟುಂಬಕ್ಕೆ ಕಪ್ಪಕಾಣಿಕೆ ಕೊಡುತ್ತಿದ್ದಾರೆʼʼ ಎಂದು ಆರೋಪಿಸಿದರು.

ʼʼಕಾಂಗ್ರೆಸ್‌ ಸರ್ಕಾರ ಪರಿಶಿಷ್ಟರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಹಗರಣ ಮಾಡಿದ್ದಾರೆ. ವಚನ ಭ್ರಷ್ಟ ಕಾಂಗ್ರೆಸ್ ಸರ್ಕಾರ ನಮ್ಮನ್ನ ಪ್ರಶ್ನೆ ಮಾಡೋದಲ್ಲ, ನಿಮ್ಮನ್ನ ನೀವು ಪ್ರಶ್ನೆ ಮಾಡಿಕೊಳ್ಳಿ‌. ಅಧಿಕಾರದ ದರ್ಪ ನಿಮ್ಮ ಬಾಯಲ್ಲಿ ಏನೇನೋ ಮಾತನ್ನು ಬರಿಸುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ದುರಹಂಕಾರದ ವರ್ತನೆಯಿಂದ ಲೂಟಿ ಮಾಡಿಕೊಂಡು ಕುಳಿತಿದ್ದೀರಿʼʼ ಎಂದು ವಿಜಯೇಂದ್ರ ದೂರಿದರು.

ʼʼಲಂಚದ ಬೇಡಿಕೆ ಇಟ್ಟ ಕಾರಣ ಯಾದಗಿರಿಯಲ್ಲಿ ಪಿಎಸ್ಐ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಸಕ ಮತ್ತು ಅವರ ಪುತ್ರ ಲಂಚಕ್ಕೆ ಬೇಡಿಕೆ ಇಟ್ಟ ಕಾರಣ ಪಿಎಸ್ಐ ಪರಶುರಾಮ್ ಮೃತಪಟ್ಟಿದ್ದಾರೆʼʼ ಎಂದು ನೇರವಾಗಿ ಆರೋಪಿಸಿದರು.

ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದೇನು?

ಪಾದಯಾತ್ರೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವ, ಜೆಡಿಎಸ್‌ ನಾಯಕ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ʼʼಈ ಸರ್ಕಾರ ಬಂದಾಗಿನಿಂದಲೇ ಅಂಗಡಿ ಬಾಗಿಲು ತೆಗೆದು ಕುಳಿತಿದೆ. ಐದು ಗ್ಯಾರಂಟಿ ತಂದಿದ್ದೇವೆ ಎಂದು ಹೇಳಿದ್ದಾರೆ. ಇದರ ಜತೆಗೆ ಬಡತನವನ್ನೂ ತಂದಿದ್ದಾರೆ. ನಾಡಿನ ಕಲ್ಯಾಣಕ್ಕೆ ಬಳಕೆಯಾಗಬೇಕಿರುವ ಹಣ ಲೂಟಿಯಾಗುತ್ತಿದೆ. ಪ್ರತಿಯೊಬ್ಬ ಸಚಿವರೂ ಲೂಟಿಗೆ ಇಳಿದಿದ್ದಾರೆʼʼ ಎಂದು ಹೇಳಿದರು.

ಇದನ್ನೂ ಓದಿ: BJP-JDS Padayatra: ಮೈಸೂರು ಚಲೋ ಪಾದಯಾತ್ರೆ ಆರಂಭ; ದಲಿತರು, ರೈತರಿಗೆ ನ್ಯಾಯ ಕೊಡಿಸಲು ಹೋರಾಟ ಎಂದ ವಿಜಯೇಂದ್ರ

ʼʼಬಿಜೆಪಿ ವಿರುದ್ಧ ದಾಖಲೆ ಇಲ್ಲದೆ ಸರ್ಕಾರ ಜಾಹೀರಾತು ಹೊರಡಿಸಿದೆ. ಬಿಜೆಪಿ ವಿರುದ್ಧ ಒಂದೇ ಒಂದು ಪ್ರಕರಣ ತನಿಖೆಗೆ ನೀಡಲು ಈ ಸರ್ಕಾರಕ್ಕೆ ಆಗಿಲ್ಲ. ಸುಮ್ಮನೆ ಭಾಷಣ ಹೊಡೆಯುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ದಾಖಲೆ ಸಹಿತ ಸದನದಲ್ಲಿ ಇಡಲಾಗಿದೆ. ಮುಡಾ ಹಗರಣ ಮೈಸೂರು ನಗರದ ಉಸ್ತುವಾರಿ ವಹಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿದೆ. ಅವರ ಗಮನಕ್ಕೆ ಬರದೆ ಇದು ಆಗಿಲ್ಲ. ಸಿಎಂ ಧರ್ಮಪತ್ನಿ ಹೆಸರಿಗೆ ಸೈಟ್ ಪಡೆದಿರುವುದಕ್ಕೆ ನಮ್ಮ ವಿರೋಧ ಇಲ್ಲ. ಇಲ್ಲಿ ಅಕ್ರಮವಾಗಿ ಸೈಟ್ ಪಡೆದಿದ್ದೀರಿ. ಕಾನೂನಿನ ವ್ಯಾಪ್ತಿಯಲ್ಲಿ ಇನ್ನೂ ನೂರು ಸೈಟ್ ಪಡೆಯಿರಿ ನಮ್ಮ ಅಭ್ಯಂತರ ಇಲ್ಲ‌. ಆದರೆ ಅಕ್ರಮವಾಗಿ ಪಡೆದಿರುವುದು ತಪ್ಪುʼʼ ಎಂದು ತಿಳಿಸಿದರು.

Continue Reading

ಬೆಂಗಳೂರು

Road Accident : ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

Road Accident : ಗೂಡ್ಸ್‌ ಚಾಲಕನ ಯಡವಟ್ಟಿಗೆ ವ್ಯಕ್ತಿಯೊಬ್ಬರ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ. ಕುಡಿದ ಮತ್ತಿನಲ್ಲಿ ಗೂಡ್ಸ್‌ ವಾಹನ ಚಲಾಯಿಸಿದ್ದು, ಸರಣಿ ಅಪಘಾತ ಸಂಭವಿಸಿದೆ.

VISTARANEWS.COM


on

By

Road Accident
Koo

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ತಡರಾತ್ರಿ ಭೀಕರ ಅಪಘಾತ (Road Accident) ಸಂಭವಿಸಿದೆ. ಅಪಘಾತದಲ್ಲಿ ಎಲಿವೇಟೆಡ್ ಫ್ಲೈ ಓವರ್ ಸಿಬ್ಬಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಎಲಿವೇಟೆಡ್ ಫ್ಲೈ ಓವರ್ ಸಿಬ್ಬಂದಿ ಮಂಜುನಾಥ್ (42) ಮೃತ ದುರ್ದೈವಿ.

ಕಾರೊಂದು ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಕೆಟ್ಟು ನಿಂತಿತ್ತು. ಹಿಗಾಗಿ ಫ್ಲೈ ಓವರ್ ಸಿಬ್ಬಂದಿ ಟೋಯಿಂಗ್ ವೆಹಿಕಲ್ ಕರೆಸಿ ತೆರವು ಮಾಡಿಸುತ್ತಿದ್ದರು. ಈ ವೇಳೆ ಮಂಜುನಾಥ್‌ ಅವರು ಫ್ಲೈಓವರ್ ಟ್ರಾಫಿಕ್ ನಿಯಂತ್ರಣ ಮಾಡುತ್ತಿದ್ದರು.

ಇನ್ನೇನು ಕಾರು ಟೋಯಿಂಗ್ ಮಾಡಬೇಕು ಎನ್ನುವ ವೇಳೆ ಅತಿವೇಗವಾಗಿ ಬಂದ ಗೂಡ್ಸ್‌ ವಾಹನದಿಂದ ಸರಣಿ ಅಪಘಾತ ಸಂಭವಿಸಿದೆ. ಗೂಡ್ಸ್‌ ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಫ್ಲೈ ಓವರ್ ಟೋಲ್ ಸಿಬ್ಬಂದಿ ವಾಹನ ಮತ್ತು ಕಾರಿಗೆ ಗೂಡ್ಸ್‌ ವಾಹನ ಡಿಕ್ಕಿ ಹೊಡೆದು ಬಳಿಕ ಪಲ್ಟಿ ಹೊಡೆದಿದೆ.

ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜುನಾಥ್ ಸೇರಿದಂತೆ ಮೂವರಿಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ. ಉಳಿದ ಇಬ್ಬರಿಗೆ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Road Accident
Road Accident

ಮಗಳ ಮದುವೆ ಸಿದ್ಧತೆಯಲ್ಲಿದ್ದ ಮಂಜುನಾಥ್‌

ಇದೇ ತಿಂಗಳ 10ರಂದು ಮಗಳ ಮದುವೆ ಇತ್ತು. ಹೀಗಾಗಿ ಮಂಜುನಾಥ್‌ ಅವರು ಮದುವೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ನಿನ್ನೆ ಶನಿವಾರ ಬೆಳಗ್ಗೆಯೂ ಸಹ ಮದುವೆಯ ಆಮಂತ್ರಣ ಪತ್ರಿಕೆ ಹಂಚಿ ಬಂದಿದ್ದರು. ನೈಟ್ ಶಿಫ್ಟ್ ಕೆಲಸಕ್ಕೆ ಹಾಜರಾಗಿದ್ದ ಮಂಜುನಾಥ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಗಳ ಮದುವೆ ಸಂಭ್ರಮದಲ್ಲಿ ಇರಬೇಕಾದ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದೆ.

ಇದನ್ನೂ ಓದಿ: KEA : ವೈದ್ಯಕೀಯ ಅರ್ಹತಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ; ಪದ್ಮನಾಭ ಮೆನನ್‌ಗೆ ಮೊದಲ ಸ್ಥಾನ

ರಸ್ತೆ ಗುಂಡಿಯಿಂದಾಗಿ ಕಾಲುವೆಗೆ ಬಿದ್ದ ಬೈಕ್; ಓರ್ವ ನಾಪತ್ತೆ

ಬೆಳಗಾವಿ: ರಸ್ತೆ ಗುಂಡಿಗೆ ಬಿದ್ದ ಬೈಕ್‌ ಬಳಿಕ ಆಯ ತಪ್ಪಿ ಕಾಲುವೆಗೆ ಬಿದ್ದಿರುವ ಘಟನೆ ಬೆಳಗಾವಿ ತಾಲೂಕಿನ ಅಲತಗಾ ಗ್ರಾಮದಲ್ಲಿ ‌ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಹಿಂಬದಿ ಸವಾರ ಓಂಕಾರ್ ಅರುಣ್ ಪಾಟೀಲ್ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದು ನಾಪತ್ತೆಯಾಗಿದ್ದು, ಬೈಕ್‌ ಓಡಿಸುತ್ತಿದ್ದ ಜ್ಯೋತಿನಾಥ್‌ ಪಾಟೀಲ್ ಈಜಿ ದಡ ಸೇರಿದ್ದಾರೆ. ಓಂಕಾರ್ ಅರುಣ್ ಪಾಟೀಲ್ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭವಾಗಿದ್ದು, ಡಿಸಿಪಿ ಸ್ನೇಹಾ, ತಹಶಿಲ್ದಾರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಎನ್‌ಡಿಆರ್‌ಎಫ್‌ ತಂಡವೂ ಸ್ಥಳದಲ್ಲಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

KEA : ವೈದ್ಯಕೀಯ ಅರ್ಹತಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ; ಪದ್ಮನಾಭ ಮೆನನ್‌ಗೆ ಮೊದಲ ಸ್ಥಾನ

KEA : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೈದ್ಯಕೀಯ ಅರ್ಹತಾ ಪಟ್ಟಿ ಪ್ರಕಟಿಸಿದೆ. ಪದ್ಮನಾಭ ಮೆನನ್‌ ಎಂಬಾತ ಅತಿ ಹೆಚ್ಚು ಅಂಕ ಗಳಿಸಿ ಮೊದಲ ಸ್ಥಾನದಲ್ಲಿ ಇದ್ದಾರೆ.

VISTARANEWS.COM


on

By

KEA
Koo

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಯೂನಾನಿ ಮತ್ತು ಹೋಮಿಯೋಪಥಿ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆದು, ರಾಜ್ಯದವರೆಂದು ಕ್ಲೇಮ್ ಮಾಡಿರುವ 92,858 ಮಂದಿಯ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ ಸೈಟ್ ನಲ್ಲಿ (KEA) ಪ್ರಕಟಿಸಿದೆ.

ಪಟ್ಟಿಯಲ್ಲಿ ಅತಿ ಹೆಚ್ಚು ಅಂಕ (716 ಅಂಕ) ಪಡೆದ ಪದ್ಮನಾಭ ಮೆನನ್ ಮೊದಲ ಸ್ಥಾನದಲ್ಲಿ ಇದ್ದಾರೆ. ಅತಿ ಕಡಿಮೆ ಅಂದರೆ 127 ಅಂಕ ಪಡೆದವರು ಕೂಡ ಈ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ‌ ಪಡೆದಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ವೈದ್ಯಕೀಯ ಕೋರ್ಸ್‌ಗೆ ಅರ್ಹತೆ ಪಡೆದು ಇನ್ನೂ ಅರ್ಜಿ ಸಲ್ಲಿಸದೇ ಇರುವವರಿಗೆ ಒಂದೆರಡು ದಿನದಲ್ಲಿ ಹೊಸದಾಗಿ ನೋಂದಣಿ ಮಾಡಿಕೊಳ್ಳಲು ಲಿಂಕ್ ಬಿಡುಗಡೆ ಮಾಡಲಾಗುವುದು. ಅದರ ನಂತರ ನೀಟ್ ಅಂಕ ದಾಖಲಿಸಲು ಎಲ್ಲ ಅರ್ಹರಿಗೂ ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

ಪಿಜಿ ದಂತ ವೈದ್ಯ: ಆ.3ರಿಂದ 2ನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಸ್ನಾತಕೋತ್ತರ ದಂತ ವೈದ್ಯಕೀಯ (ಪಿಜಿಇಟಿ- ಎಂಡಿಎಸ್-24) ಕೋರ್ಸ್‌ ನ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆಗಸ್ಟ್ 3ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಛಾಯ್ಸ್-2 ಆಯ್ಕೆ ಮಾಡಿ, ಶುಲ್ಕ ಪಾವತಿಸಿರುವವರು; ಛಾಯ್ಸ್-3 ಅನ್ನು ಆಯ್ಕೆ ಮಾಡಿರುವವರು ಹಾಗೂ ಯಾವುದೇ ಸೀಟು ಹಂಚಿಕೆಯಾಗದೇ ಇರುವವರು ಆ.3ರಿಂದ ಕೆಇಎ ಕಚೇರಿಯಲ್ಲಿ ತಮ್ಮ ಎಲ್ಲ ಮೂಲ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ದಾಖಲೆ ಸಲ್ಲಿಸದಿದ್ದರೆ ಅಂತಹವರಿಗೆ ಸೀಟು ಹಂಚಿಕೆ ಮಾಡಲಾಗುವುದಿಲ್ಲ ಎಂದು ಪ್ರಸನ್ನ ತಿಳಿಸಿದ್ದಾರೆ.

ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆ.3ರಂದು ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುತ್ತದೆ. ಆ.4ರಿಂದ 6ರವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಸಮಯ ನೀಡಲಾಗುತ್ತದೆ. ಆ.7ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆ.8ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಲು ಹಾಗೂ ಕಾಲೇಜಿಗೆ ವರದಿ ಮಾಡಿಕೊಳ್ಳಲು ಆ.13 ಕೊನೆ ದಿನ ಎಂದು ಅವರು ವಿವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder Case: ಜಮೀನು ವಿವಾದಕ್ಕೆ ಹರಿಯಿತು ನೆತ್ತರು: ತಂಗಿಯ ಗಂಡನಿಗೇ ಚಾಕು ಇರಿದು ಕೊಂದವನ ಅರೆಸ್ಟ್‌ 

Murder Case: ಜಮೀನು ವಿಚಾರಕ್ಕೆ ಸಂಬಂಧಿಸಿ ಸೋದರ ಸಂಬಂಧಿಯನ್ನೇ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರದ ವಿಜಿನಾಪುರದಲ್ಲಿ ನಡೆದಿದೆ. ಬಾಬುರೆಡ್ಡಿ ಕೊಲೆಯಾದ ವ್ಯಕ್ತಿ. ಸದ್ಯ ಆರೋಪಿಗಳಾದ ಬಾಬುರೆಡ್ಡಿ ಅವರ ಸಹೋದರಿಯ ಪತಿ ಗೋಪಾಲ್ ರೆಡ್ಡಿ, ಅಣ್ಣನ ಮಗ ಭರತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Murder Case
Koo

ಬೆಂಗಳೂರು: ಜಮೀನು ವಿಚಾರಕ್ಕೆ ಸಂಬಂಧಿಸಿ ಸೋದರ ಸಂಬಂಧಿಯನ್ನೇ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರದ ವಿಜಿನಾಪುರದಲ್ಲಿ ನಡೆದಿದೆ. ಬಾಬುರೆಡ್ಡಿ ಕೊಲೆಯಾದ ವ್ಯಕ್ತಿ. ಸದ್ಯ ಆರೋಪಿಗಳಾದ ಬಾಬುರೆಡ್ಡಿ ಅವರ ಸಹೋದರಿಯ ಪತಿ ಗೋಪಾಲ್ ರೆಡ್ಡಿ, ಅಣ್ಣನ ಮಗ ಭರತ್‌ನನ್ನು ಪೊಲೀಸರು ಬಂಧಿಸಿದ್ದಾರೆ (Murder Case).

ಜಮೀನು ವ್ಯಾಜ್ಯ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆಯಿಂದ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಹಿನ್ನೆಲೆ

ಬಾಬುರೆಡ್ಡಿ ಮತ್ತು ಗೋಪಾಲ್ ರೆಡ್ಡಿ ಅವರಿಗೆ ಸಂಬಂಧಿಸಿದ ಜಮೀನು ಹಂಚಿಕೆಯ ವ್ಯಾಜ್ಯ ಕೋರ್ಟ್‌ನಲ್ಲಿತ್ತು. ಈ ಹಿನ್ನೆಲೆಯಲ್ಲಿ ಜಮೀನು ಭಾಗದ ವಿಚಾರವಾಗಿ ಮಾತುಕತೆ ಮಾಡಲು ಪಂಚಾಯಿತಿ ನಡೆಸಲಾಗಿತ್ತು. ಪಂಚಾಯಿತಿ ವೇಳೆ ಮಾತಿಗೆ ಮಾತು ಬೆಳೆದು ಬಾಬುರೆಡ್ಡಿ ಮತ್ತು ಸಂಬಂಧಿಕರ ನಡುವೆ ಗಲಾಟೆ ಆರಂಭವಾಗಿತ್ತು. ಈ ವೇಳೆ ಭರತ್ ಹಾಗೂ ಗೋಪಾಲ್ ರೆಡ್ಡಿ ಸಿಟ್ಟಿನಿಂದ ಬಾಬುರೆಡ್ಡಿಗೆ ಚಾಕುವಿನಿಂದ ಇರಿದು ಬಿಟ್ಟಿದ್ದರು.

ಚಾಕು ಇರಿತದಿಂದ ತೀವ್ರ ರಕ್ತಸ್ರಾವವಾಗಿ ಬಾಬುರೆಡ್ಡಿ ಮೃತಪಟ್ಟಿದ್ದರು. ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭರತ್ ಹಾಗೂ ಗೋಪಾಲ್ ರೆಡ್ಡಿಯನ್ನು ಬಂಧಿಸಲಾಗಿದೆ.

ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ ಪ್ರಕರಣ: ಮೃತನ ಗುರುತು ಪತ್ತೆ

ಬೆಂಗಳೂರು: ಶನಿವಾರ ನಗರದ ದೊಡ್ಡಕಲ್ಲಸಂದ್ರ ಬಳಿ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತನನ್ನು 35 ವರ್ಷದ  ನವೀನ್ ಕುಮಾರ್ ಅರೋರಾ ಎಂದು ಗುರುತಿಸಲಾಗಿದ್ದು, ಈತ ಮೂಲತಃ ಉತ್ತರಪ್ರದೇಶದ ಆಲಿಘಡ್‌ನವನು.

ನವೀನ್ ಕುಮಾರ್ ಕುಟುಂಬ ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ‌ ನೆಲೆಸಿದೆ. ನವೀನ್‌ ಈ ಹಿಂದೆ ಬೆಂಗಳೂರಿನಲ್ಲಿ‌ ಹಾರ್ಡ್‌ವೇರ್‌ ಅಂಗಡಿ ನಡೆಸುತ್ತಿದ್ದ. ಐದಾರು ವರ್ಷದ ಹಿಂದೆ ಬ್ಯುಸಿನೆಸ್ ಲಾಸ್ ಆಗಿದ್ದ ಕಾರಣ ನವೀನ್ ಕುಮಾರ್ ಸಂಪೂರ್ಣ ಉದ್ಯೋಗ ಕೈ ಬಿಟ್ಟಿದ್ದ. ನಂತರ ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುತ್ತಿದ್ದ,

ಐದಾರು ವರ್ಷದಿಂದ ಕುಟುಂಬದಿಂದ ಬೇರೆಯಾಗಿ ಒಂಟಿ‌ ಬದುಕುತ್ತಿದ್ದ ನವೀನ್‌ ಉದ್ಯೋಗವೂ ಇಲ್ಲದೇ ನೊಂದಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಶನಿವಾರ ಸಂಜೆಯ ವೇಳೆಗೆ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ನವೀನ್ ನಂತರ ಬರುತ್ತಿರುವ ಮೆಟ್ರೋದ ಎದುರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಸದ್ಯ ನವೀನ್ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಮೆಟ್ರೋ ಅಧಿಕಾರಿಗಳ ವಿರುದ್ಧ ಆಕ್ರೋಶ

ನವೀನ್‌ ಆತ್ಮಹತ್ಯೆ ಮಾಡಿಕೊಂಡ ಬಳಿಕ ಪ್ರಯಾಣಿಕರನ್ನು ಮಧ್ಯದಲ್ಲೇ ಇಳಿಸಲಾಗಿದೆ ಎಂದು ಮೆಟ್ರೋ ಅಧಿಕಾರಿಗಳ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಟ್ರೋವನ್ನು ಅರ್ಧದಲ್ಲೇ ನಿಲ್ಲಿಸಿ ಇಳಿಯಲು ಸೂಚಿಸಿದ್ದರಿಂದ ಹಳಿಯ ಪಕ್ಕದಲ್ಲಿ ಪ್ರಯಾಣಿಕರು ಭಯದಲ್ಲಿಯೇ ಹೆಜ್ಜೆ ಹಾಕಿದ್ದಾರೆ. ಸಾಲು ಸಾಲು ಅವಘಡ ಸಂಭವಿಸಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎನ್ನುವ ದೂರು ಕೇಳಿ ಬಂದಿದೆ. ನವೀನ್‌ ಮೆಟ್ರೋ ಹಳಿಗೆ ಜಂಪ್ ಮಾಡುತ್ತಿದ್ದಂತೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು. ಹೀಗಾಗಿ ಮೆಟ್ರೋ ಹಳಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಈ ವೇಳೆ ಮೆಟ್ರೋದಲ್ಲಿದ್ದ ಪ್ರಯಾಣಿಕರನ್ನು ಸಿಬ್ಬಂದಿ ಇಳಿಸಿದ್ದರು.

ʼʼಹಳಿಯಲ್ಲಿ ಮೃತದೇಹ ಇದ್ದಿದ್ದರಿಂದ ಅರ್ಧದಲ್ಲೇ ಪ್ರಯಾಣ ಮೊಟಕುಗೊಳಿಸಲಾಗಿತ್ತು. ಪರಿಣಾಮವಾಗಿ ಮೆಟ್ರೋ ಟ್ರ್ಯಾಕ್, ಬ್ರಿಡ್ಜ್ ಮೇಲೆಯೇ ಪ್ರಯಾಣಿಕರು ಓಡಾಡುವಂತಾಯ್ತುʼʼ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾನೆ.

Continue Reading
Advertisement
IND vs SL
ಕ್ರೀಡೆ11 mins ago

IND vs SL: ದ್ವಿತೀಯ ಏಕದಿನ ಪಂದ್ಯಕ್ಕೂ ಮುನ್ನ ಲಂಕಾ ತಂಡಕ್ಕೆ ಆಘಾತ; ಸರಣಿಯಿಂದ ಹೊರಬಿದ್ದ ಸ್ಟಾರ್​ ಆಟಗಾರ

BJP-JDS Padayatra
ರಾಜಕೀಯ17 mins ago

BJP-JDS Padayatra: ರಾಜ್ಯದ ಹಣ ಲೂಟಿ ಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ: ಕಾಂಗ್ರೆಸ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ

Road Accident
ಬೆಂಗಳೂರು30 mins ago

Road Accident : ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

KEA
ಬೆಂಗಳೂರು54 mins ago

KEA : ವೈದ್ಯಕೀಯ ಅರ್ಹತಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ; ಪದ್ಮನಾಭ ಮೆನನ್‌ಗೆ ಮೊದಲ ಸ್ಥಾನ

Rashami Desai Homeless Rashami Desai lived in an Audi
ಕಿರುತೆರೆ54 mins ago

Rashami Desai: ಡಿವೋರ್ಸ್‌ ಬಳಿಕ ಮನೆ ಇಲ್ಲದೆ, ರೋಡ್‌ ಸೈಡ್‌ ಊಟ ತಿಂದು ಕಾರಿನಲ್ಲಿ ಮಲಗಿದ್ದರಂತೆ ʻಮುದ್ದು ಬಂಗಾರʼ ಖ್ಯಾತ ನಟಿ!

Paris Olympics
ಕ್ರೀಡೆ1 hour ago

Paris Olympics: ವಿಕ್ಟರ್‌ ವಿರುದ್ಧ ಲಕ್ಷ್ಯ ಸೇನ್​ಗೆ ಒಲಿಯಲಿ ಗ್ರೇಟ್​ ವಿಕ್ಟರಿ; ಇಂದು ಸೆಮಿ ಫೈನಲ್​

Gold Rate Today
ವಾಣಿಜ್ಯ1 hour ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Murder Case
ಕ್ರೈಂ2 hours ago

Murder Case: ಜಮೀನು ವಿವಾದಕ್ಕೆ ಹರಿಯಿತು ನೆತ್ತರು: ತಂಗಿಯ ಗಂಡನಿಗೇ ಚಾಕು ಇರಿದು ಕೊಂದವನ ಅರೆಸ್ಟ್‌ 

Ram Gopal Varma calls The Kerala Story one of the best films
ಟಾಲಿವುಡ್2 hours ago

Ram Gopal Varma: ʻದಿ ಕೇರಳ ಸ್ಟೋರಿʼ ನಾನು ನೋಡಿದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದು ಎಂದ ರಾಮ್ ಗೋಪಾಲ್ ವರ್ಮಾ!

Rashid Khan
ಕ್ರಿಕೆಟ್2 hours ago

Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ23 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌