Site icon Vistara News

ಆಪರೇಷನ್‌ Single use plastic; 2 ವಾರದಲ್ಲಿ 8 ಲಕ್ಷ ದಂಡ ವಿಧಿಸಿದ ಬಿಬಿಎಂಪಿ!

ಬಿಬಿಎಂಪಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಕ್ಕೆ ಒತ್ತು ಕೊಡಲಾಗಿದ್ದು, ಕಳೆದೆರಡು ವಾರದಿಂದ ನಗರದಾದ್ಯಂತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಏಕ ಬಳಕೆಯ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದನಾ ಘಟಕಗಳ ಮೇಲೆ ಅನಿರೀಕ್ಷಿತ ದಾಳೆ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಜತೆಗೆ ದಂಡ ವಿಧಿಸಲಾಗುತ್ತಿದೆ. ಈ ಪೈಕಿ ಗುರುವಾರ (ಜು.೧೩) ಒಂದೇ ದಿನ 8 ಕಡೆ ದಾಳಿ ನಡೆಸಿ ಒಟ್ಟು 154.2 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನವನ್ನು ಜಪ್ತಿ ಮಾಡಿ 1,02,500 ರೂ. ದಂಡ ವಿಧಿಸಲಾಗಿದೆ.

ಜು.1ರಿಂದ ಜು.13ರ ವರೆಗೆ 1,319 ಕಡೆ ಒಟ್ಟು 1,926.8 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ಜಪ್ತಿ ಮಾಡಿ 8,36,300 ರೂ. ದಂಡ ವಿಧಿಸಿದಂತಾಗಿದೆ.

ಇದನ್ನೂ ಓದಿ | Traffic | ಹೆಬ್ಬಾಳ ಜಂಕ್ಷನ್‌ ಯೋಜನೆ ಪರಿಶೀಲನೆಗೆ ಕನ್ಸಲ್ಟೆಂಟ್‌ ಸಂಸ್ಥೆ ನೇಮಕ: ಬಿಬಿಎಂಪಿ ಸಭೆಯಲ್ಲಿ ನಿರ್ಧಾರ

ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಬರುವ ಎಲ್ಲ ವಾರ್ಡ್‌ಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಲ್ಲಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಘನತ್ಯಾಜ್ಯ ವಿಭಾಗದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಅದರಂತೆ ಪಾಲಿಕೆಯ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್‌ಗಳ ಮೇಲ್ವಿಚಾರಕರು ಹಾಗೂ ಮಾರ್ಷಲ್‌ಗಳ ತಂಡವು ಅನಿರೀಕ್ಷಿತವಾಗಿ ಸಗಟು ವ್ಯಾಪಾರ ಮಳಿಗೆಗಳು, ಅಂಗಡಿಗಳು, ಹೋಟೆಲ್ ಉದ್ದಿಮೆ, ಪ್ಲಾಸ್ಟಿಕ್ ಉತ್ಪಾದಿಸುವ ಉದ್ದಿಮೆಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಜಪ್ತಿ ಮಾಡುವುದರ ಜತೆಗೆ ದಂಡ ವಿಧಿಸುತ್ತಿದೆ. ಮತ್ತೊಮ್ಮೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.

ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಕೆ ಬದಲು ಪುನರ್ ಬಳಕೆ ಮಾಡಬಹುದಾದ ಬಟ್ಟೆ ಬ್ಯಾಗ್, ನಾರಿನ ಬ್ಯಾಗ್, ಪೇಪರ್‌ನಿಂದ ತಯಾರಿಸಿದ ಚೀಲಗಳನ್ನು ಬಳಸುವ ಬಗ್ಗೆ ಪಾಲಿಕೆ ವತಿಯಿಂದ ಮಾರಾಟಗಾರರು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ.

ಇದನ್ನೂ ಓದಿ | ಚಾಮರಾಜಪೇಟೆ ಮೈದಾನ: ದಾಖಲೆ ಇದ್ದರೂ ಒಪ್ಪದ ಬಿಬಿಎಂಪಿ, ದ್ವಂದ್ವ ಮುಂದುವರಿಕೆ

Exit mobile version