Site icon Vistara News

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೆರೆ ಒತ್ತುವರಿ ಮಾಡಿ ನಿರ್ಮಿಸಿದ್ದ ಚರ್ಚ್‌ ತೆರವು

ಚರ್ಚ್‌ ತೆರವು

ಬೆಂಗಳೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 192 ಬೇಗೂರು ವಾರ್ಡ್‌ ವ್ಯಾಪ್ತಿಯ ಬೆರಟೇನ ಅಗ್ರಹಾರದ ಲವ ಕುಶ ನಗರ ಮುಖ್ಯರಸ್ತೆಯಲ್ಲಿ ಪಾದ್ರಿಯೊಬ್ಬರು ಕೆರೆ ಒತ್ತುವರಿ ಮಾಡಿ ನಿರ್ಮಿಸಿದ್ದ ಚರ್ಚ್‌ ಅನ್ನು ಬಿಬಿಎಂಪಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಬೆರಟೇನ ಅಗ್ರಹಾರದಲ್ಲಿ ಸುಮಾರು 11.18 ಎಕರೆ ವಿಸ್ತೀರ್ಣದ ಸರ್ಕಾರಿ ಕೆರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧೀನದಲ್ಲಿದೆ. ಈ ಕೆರೆಯ ಒಂದು ಭಾಗವನ್ನು ಏಸುಮಣಿ ಎಂಬ ಪಾದ್ರಿ ಅತಿಕ್ರಮಣ ಮಾಡಿಕೊಂಡು ದಿ ಗೇಟ್‌ ಆಫ್‌ ಸಾಲ್ವೇಶನ್(The Gate of Salvation Church) ಎಂಬ ಪ್ರಾರ್ಥನಾ ಮಂದಿರವನ್ನು ನಿರ್ಮಿಸಿಕೊಂಡಿದ್ದರು.

ಈ ಬಗ್ಗೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಎನ್.ಆರ್.ರಮೇಶ್ ಮಾತನಾಡಿ, ಕೆರೆ ಒತ್ತುವರಿ ಮಾಡಿ ಚರ್ಚ್‌ ನಿರ್ಮಿಸಿದ್ದ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರು, ಬೊಮ್ಮನಹಳ್ಳಿ ವಲಯ ಆಯುಕ್ತರು ಮತ್ತು ಬೊಮ್ಮನಹಳ್ಳಿಯ ಜಂಟಿ ಆಯುಕ್ತರಿಗೆ ದಾಖಲೆ ಸಹಿತ ದೂರು ಕ್ರಮ ತೆಗೆದುಕೊಳ್ಳುವಂತೆ ಮನವಿ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ದಾಖಲೆಗಳನ್ನು ಬಿಬಿಎಂಪಿ ಅಧಿಕಾರಿಗಳು ಪರಿಶೀಲಿಸಿ, ಅನಧಿಕೃತವಾಗಿ ನಿರ್ಮಿಸಿರುವ ಪ್ರಾರ್ಥನಾ ಮಂದಿರವನ್ನು ತೆರವುಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Rajakaluve Encroachment | ಬಡವರ ಮನೆ ಮೇಲೆ ಬಿಬಿಎಂಪಿ ಸಿಂಹ ಗರ್ಜನೆ; ಪ್ರಭಾವಿಗಳಿಗೆ ಮೃದು ಧೋರಣೆ!

Exit mobile version