Kukke Temple : ಕುಕ್ಕೆ ದೇವಳದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಆಶ್ಲೇಷಾ ಬಲಿ ಸೇವೆ Vistara News
Connect with us

ಕರ್ನಾಟಕ

Kukke Temple : ಕುಕ್ಕೆ ದೇವಳದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಆಶ್ಲೇಷಾ ಬಲಿ ಸೇವೆ

ಕೇಂದ್ರ ಗೃಹ ಮಂತ್ರಿ ಅಮಿತ್​ಶಾ ಅವರ ಹೆಸರಿನಲ್ಲಿ ಶ್ರೀ ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ದೇಣಿಗೆ ನೀಡಿದ ಪುತ್ರ ಜಯ್​ ಶಾ.

VISTARANEWS.COM


on

Jay sha at kukke temple
Koo

ಸುಬ್ರಹ್ಮಣ್ಯ: ಇಲ್ಲಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾಋ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಪುತ್ರ ಜಯ್‌ ಶಾ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದ್ದಾರೆ. ಅವರೊಂದಿಗೆ ಪತ್ನಿ ರಿಷಿತಾ ಶಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಜತೆಗಿದ್ದರು.

ಶ್ರೀ ದೇವಳದ ಒಳಗೆ ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ಸಮರ್ಪಿಸಿದರು. ಬಳಿಕ ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಜಯ್‌ಶಾ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದ ಅವರು ಪೂಜೆ ಸಲ್ಲಿಸಿದರು. ಬಳಿಕ ಶ್ರೀ ದೇವಳದಲ್ಲಿ ಷಾ ಕುಟುಂಬಸ್ಥರು ಪ್ರಸಾದ ಬೋಜನ ಸ್ವೀಕರಿಸಿದರು. ಕೇಂದ್ರ ಗೃಹ ಮಂತ್ರಿ ಅಮಿತ್​ಶಾ ಅವರ ಹೆಸರಿನಲ್ಲಿ ಶ್ರೀ ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ದೇಣಿಗೆ ನೀಡಿದರು.

ಗೌರವಾರ್ಪಣೆ

ದೇವರ ಸೇವೆ ಬಳಿಕ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿಗೆ ಭೇಟಿ ನೀಡಿದ ಜಯ್‌ಷಾ ಅವರಿಗೆ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶೋಭಾ ಗಿರಿಧರ್, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್ ಹಾಗೂ ಮನೋಜ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಠಾಣಾಧಿಕಾರಿ ಮಂಜುನಾಥ್. ಟಿ ಸೂಕ್ತ ಬಂದೋಬಸ್ತ್ ಮಾಡಿದ್ದರು.

ಇದನ್ನೂ ಓದಿ : World Cup 2023 : ಭಾರತ, ಪಾಕಿಸ್ತಾನ ಪಂದ್ಯದ ತಾಣ ಬದಲು; ಜಯ್​ ಶಾ ಸ್ಪಷ್ಟನೆ ಏನು?

ಶ್ರೀ ದೇವರ ದರುಶನದಿಂದ ಅತೀವ ಸಂತಸ: ಜಯ್‌ ಶಾ

ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಪಡೆದ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಶ್ರೀ ದೇವರ ದರುಶನ ಪಡೆದುದು ಅತೀವ ಸಂತಸ ತಂದಿದೆ. ನನಗೆ ಶ್ರೀ ದೇವರ ದರುಶನ ಮಾಡಿ ಸೇವೆ ನೆರವೇರಿಸಲು ಉತ್ತಮವಾದ ವ್ಯವಸ್ಥೆ ಮಾಡಿಕೊಟ್ಟ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ, ಸದಸ್ಯರಿಗೆ ಮತ್ತು ದೇವಳದ ಆಡಳಿತ ಮಂಡಳಿಗೆ ತುಂಬು ಹೃದಯದ ಧನ್ಯವಾದಗಳು. ಮುಂದೆ ಅನೇಕ ಬಾರಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರುಶನ ಪಡೆಯುವ ಕನಸು ಹೊಂದಿದ್ದೇನೆ. ಇದನ್ನು ಶ್ರೀ ದೇವರು ನೆರವೇರಿಸುತ್ತಾರೆ ಎಂಬ ನಂಬಿಕೆ ನನ್ನದು ಎಂದು ಜಯ್‌ಶಾ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Bangalore Bandh : ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಪ್ರತಿಭಟನೆ: ಕುರುಬೂರು ಶಾಂತ ಕುಮಾರ್‌ ಪೊಲೀಸ್‌ ವಶಕ್ಕೆ

Bangalore Bandh : ಬೆಂಗಳೂರಿನಲ್ಲಿ ಬಂದ್‌ ಆರಂಭವಾಗಿದ್ದು ಉತ್ತಮ ಪ್ರತಿಕ್ರಿಯೆ ದೊರಕಿದೆ. ಈ ನಡುವೆ, ಬಂದ್‌ಗೆ ಕರೆ ನೀಡಿದ್ದ ಕುರುಬೂರು ಶಾಂತ ಕುಮಾರ್‌ ಅವರನ್ನು ಬೆಳಗ್ಗೆಯೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Edited by

bangalore Bandh kuruburu deatained
Koo

ಬೆಂಗಳೂರು: ಕಾವೇರಿ ನೀರು ಬಿಡುಗಡೆಯನ್ನು ನಿಲ್ಲಿಸಬೇಕು (Cauvery water Dispute) ಎಂದು ಒತ್ತಾಯಿಸಿ ಬಂದ್‌ಗೆ ಕರೆ ನೀಡಿರುವ ಜಲ ಸಂರಕ್ಷಣಾ ಸಮಿತಿಯ ಮುಖ್ಯಸ್ಥರಲ್ಲಿ ಒಬ್ಬರಾದ ರೈತ ಮುಖಂಡ ಕುರುಬೂರು ಶಾಂತ ಕುಮಾರ್‌ (Kuruburu Shantha kumar) ಅವರನ್ನು ಪೊಲೀಸರು ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ (Kuruburu Shantha kumar Detained)

ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ (Mysore Bank Circle) ಜಮಾವಣೆಗೊಂದು ಪ್ರತಿಭಟನೆ ನಡೆಸಿ ಅಲ್ಲಿಂದ ಟೌನ್‌ ಹಾಲ್‌ ಕಡೆಗೆ ಹೋಗುವ ಪ್ಲ್ಯಾನ್‌ ಹೊಂದಿದ್ದ ಕುರುಬೂರು ಶಾಂತ ಕುಮಾರ್‌ ಅವರನ್ನು ಸರ್ಕಲ್‌ನಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಐಪಿಸಿ ಸೆಕ್ಷನ್‌ 144 ಅಡಿ ಜಾರಿ ಮಾಡಿರುವ ನಿಷೇಧಾಜ್ಞೆ ನಿಯಮದಡಿ ಅವರನ್ನು ಬಂಧಿಸಿದ್ದಾರೆ. ಆದರೆ, ಇದೊಂದು ಗೂಂಡಾಗಿರಿ ಎಂದು ಶಾಂತ ಕುಮಾರ್‌ ಮತ್ತು ಅವರ ಬೆಂಬಲಿಗರು ಆಕ್ಷೇಪಿಸಿದ್ದಾರೆ. ಶಾಂತಕುಮಾರ್‌ ಅವರ ಜತೆ ಇನ್ನೂ 20 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಸೆಕ್ಷನ್‌ ಹಾಕಿದ್ದಕ್ಕೆ ಕುರುಬೂರು ಆಕ್ಷೇಪ

ಪೊಲೀಸರು ವಶಕ್ಕೆ ಪಡೆದ ಸಂದರ್ಭದಲ್ಲಿ ಮಾತನಾಡಿದ ಕುರುಬೂರು ಶಾಂತ ಕುಮಾರ್‌, ತಮಿಳುನಾಡಿನಲ್ಲಿ ಜಲ್ಲಿಕಟ್ಟು ಮೊದಲಾದ ರಾಜ್ಯದ ಅಸ್ಮಿತೆಯ ವಿಚಾರ ಬಂದಾಗ ಪೊಲೀಸರು ಪ್ರತಿಭಟನಾಕಾರರಿಗೆ ಬೆಂಬಲ ಕೊಡುತ್ತಾರೆ. ಆದರೆ, ಇಲ್ಲಿ ದಮನ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿದರು.

ಪೊಲೀಸರು ಪ್ರತಿಭಟನಾಕಾರರಿಗೆ ತೊಂದರೆ ಕೊಡುತ್ತಿದ್ದಾರೆ. ದಿಕ್ಕು ತಪ್ಪಿಸುವ ಕೆಲಸವಾಗುತ್ತಿದೆ ಎಂದು ಹೇಳಿದ ಅವರು, ಕುಡಿಯುವ ನೀರಿಲ್ಲ ಅಂದ್ರೆ ಮನೆಗೆ ಹೋದಾಗ ಏನು ಹೇಳ್ತೀರಾ ಎಂದು ಪೊಲೀಸರನ್ನೇ ಪ್ರಶ್ನಿಸಿದರು.

ʻʻಸದ್ಯದವರೆಗೂ ಬಂದ್ ಯಶಸ್ವಿಯಾಗಿದೆ. ಎಲ್ಲರೂ ಬೆಂಬಲ ನೀಡಿದ್ದಾರೆ. ನಮ್ಮ ಹೋರಾಟ, ಚಳುವಳಿ ಮುಂದುವರಿಯಲಿದೆʼʼ ಎಂದು ಕುರುಬೂರು ಇದೇ ಸಂದರ್ಭದಲ್ಲಿ ಹೇಳಿದರು.

ʻʻರಾಜ್ಯದ ರೈತರು ಗಮನಿಸುತ್ತಿದ್ದಾರೆ. ಇಲ್ಲಿ ಏನೇ ನಡೆದರೂ ಇಡೀ ರಾಜ್ಯಕ್ಕೆ ಸಂದೇಶ ಹೋಗುತ್ತದೆ. ಹೀಗಾಗಿ ಪೋಲಿಸರು ಎಚ್ಚರಿಕೆಯಿಂದ ಇರಬೇಕುʼʼ ಎಂದು ಕುರುಬೂರು ಎಚ್ಚರಿಸಿದರು.

ಪೊಲೀಸರು-ಪ್ರತಿಭಟನಾಕಾರರ ನಡುವೆ ವಾಗ್ವಾದ

ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಸೇರಿದ್ದ ರೈತರನ್ನೂ ಪೊಲೀಸರು ಚದುರಿಸಿದರು. ಈ ವೇಳೆ ಪ್ರತಿಭನಾಕಾರರು ಪೋಲೀಸರ ಗೂಂಡಾಗಿರಿಗೆ ಧಿಕ್ಕಾರ ಎಂದು ಕೂಗಿದರು.

ಮೈಸೂರು ಬ್ಯಾಂಕ್‌ ಸರ್ಕಲ್‌ನಿಂದ ಪ್ರತಿಭಟನಾಕಾರರನ್ನು ಟೌನ್ ಗೆ ಹೋಗದಂತೆ ಪೊಲೀಸರು ತಡೆದ ಹಿನ್ನೆಲೆಯಲ್ಲಿ ಭಾರಿ ವಾಗ್ವಾದ ನಡೆಯಿತು. ಸರ್ಕಾರ 144ನೇ ಸೆಕ್ಷನ್‌ ಹಾಕಿ ದಬ್ಬಾಳಿಕೆ ಮಾಡ್ತಿದೆ. ಕಾನೂನಿಗೆ ನಾವು ಗೌರವ ಕೊಡ್ತಿವಿ ಎಂದು ಹೇಳಿದರು.

ʻʻನೀವೂ ಹೋರಾಟ ಮಾಡಬೇಕಿತ್ತು. ಕಾವೇರಿ ನದಿ ನೀರು ನಿಮಗೆ ಬೇಡ್ವಾ..? ಪೊಲೀಸನವರು ರಜಾ ಹಾಕಿ ಭಾಗವಹಿಸಬೇಕು. ನಾವು ಯಾವುದೇ ತೊಂದರೆ ಮಾಡಲ್ಲʼʼ ಎಂದು ಪೊಲೀಸರಿಗೇ ಪ್ರತಿಭಟನಾಕಾರರು ಬುದ್ಧಿ ಹೇಳಿದರು.

ಹೇಗಿದೆ ಬೆಂಗಳೂರು ಬಂದ್‌?

ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ಬೆಂಗಳೂರಿನ ಪ್ರಮುಖ ಭಾಗಗಳಾದ ಮೆಜೆಸ್ಟಿಕ್‌ನಲ್ಲಿ ಜನ ಸಂಚಾರ ಕಡಿಮೆ ಇತ್ತು. ಬಿಎಂಟಿಸಿ ಬಸ್‌ಗಳು ಹೊರಟಿವೆಯಾದರೂ ಜನ ಸಂಚಾರ ಕಡಿಮೆ ಇತ್ತು. ಮೆಟ್ರೋ ಸಂಚಾರ ಎಂದಿನಂತೆ ಇದ್ದು, ಜನರೂ ದೊಡ್ಡ ಸಂಖ್ಯೆಯಲ್ಲಿ ಓಡಾಡುತ್ತಿದ್ದಾರೆ. ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ ಬಿಕೋ ಎನ್ನುತ್ತಿದೆ.

ಬೆಂಗಳೂರಿನ ಹಲವು ಭಾಗಗಳಲ್ಲಿ ಬಂದ್‌ ಹೆಚ್ಚು ಪರಿಣಾಮ ಬೀರಿಲ್ಲ. ಜನ ಜೀವನ ಎಂದಿನಂತೆಯೇ ಇದೆ. ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದರಿಂದ ಮಕ್ಕಳಿಗೆ ಏನೂ ಸಮಸ್ಯೆ ಆಗಿಲ್ಲ.

Continue Reading

ದಕ್ಷಿಣ ಕನ್ನಡ

Road Accident: ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ.

VISTARANEWS.COM


on

Edited by

bus auto accident
Koo

ಮಂಗಳೂರು: ಶಾಲಾ ಬಸ್ ಹಾಗೂ ಆಟೋ ನಡುವೆ (bus auto accident) ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ದುರ್ಮರಣ ಹೊಂದಿದ ಘಟನೆ (Road Accident) ಕೇರಳ- ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪ ಈ ದುರ್ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಾಸರಗೋಡಿನ ಮೊಗ್ರಾಲ್ ಪುತ್ತೂರು ಎಂಬಲ್ಲಿನ ಆಟೋ ರಿಕ್ಷಾಗೆ ಪೆರ್ಲ ಸಮೀಪದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಸ್‌ ಪಲ್ಟಿಯಾಗಿ 10 ಜನರಿಗೆ ಗಾಯ

ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ವಿಜಯನಗರದ MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಗಾಯಗೊಂಡ ಡ್ರೈವರ್ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಿಂದ ಕಲ್ಬುರ್ಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident: ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

Continue Reading

Live News

Bangalore Bandh Live: ಬೆಂಗಳೂರು ಬಂದ್‌ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?

ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್‌ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಎಲ್ಲೆಲ್ಲಿ ಏನಾಗುತ್ತಿದೆ ಎಂಬುದರ ಅಪ್‌ಡೇಟ್‌ ಇಲ್ಲಿದೆ. .

VISTARANEWS.COM


on

Edited by

bangalore bandh
Koo

ಬೆಂಗಳೂರು: ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್‌ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಎಲ್ಲೆಲ್ಲಿ ಏನಾಗುತ್ತಿದೆ ಎಂಬುದರ ಅಪ್‌ಡೇಟ್‌ ಇಲ್ಲಿದೆ. .

Continue Reading

ಕರ್ನಾಟಕ

ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ

Vistara Editorial: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನಕ್ಕೆ ಹೊಸ ಆಯಾಮ ನೀಡುತ್ತಿರುವುದು ಸ್ವಾಗತಾರ್ಹ. ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ.

VISTARANEWS.COM


on

Edited by

Vistara Editorial, Janata Darshan by CM must appreciated
Koo

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸೂಚನೆಯಂತೆ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆದಿದೆ. ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಗದಗ ಮತ್ತು ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ. ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ʼʼನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ‌ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ‌ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆʼʼ ಎನ್ನುವ ಅಭಿಪ್ರಾಯ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ(Vistara Editorial).

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಡಿಪಿ ಸಭೆಗಳನ್ನು ಅತ್ಯಂತ ಗಂಭೀರವಾಗಿ ನಡೆಸುತ್ತಿದ್ದಾರೆ. ಅವರು ಜಿಲ್ಲೆಗಳಿಗೆ ಭೇಟಿ ನೀಡುವಾಗ ಹಲವಾರು ಮಂದಿ ಅವರ ಮುಂದೆ ಅಹವಾಲು ಹೇಳಿಕೊಳ್ಳಲು ಬರುತ್ತಿದ್ದಾರೆ. ಇದನ್ನು ಗಮನಿಸಿದ ಅವರು ಸಿಎಂ ಬಂದಾಗ ಜನರ ದೂರು ನೀಡಲು ಬರುತ್ತಾರೆ ಎಂದರೆ ಅವರಿಗೆ ಹೇಳಿಕೊಳ್ಳಲು ಇದೆ ಎಂದಾಯಿತು. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲೂ ಜನತಾ ದರ್ಶನ ನಡೆಸಬೇಕು ಎಂಬ ಸೂಚನೆಯನ್ನು ನೀಡಿದ್ದರು. ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳ ಮೀಟಿಂಗ್‌ನಲ್ಲಿ ಈ ಸೂಚನೆ ನೀಡಲಾಗಿತ್ತು. ಇದು ಸಫಲವಾಗಿದೆ ಎನ್ನುವುದಕ್ಕೆ ಇವತ್ತಿನ ದೃಶ್ಯವೇ ಸಾಕ್ಷಿ. ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.

ಜನರಿಗೆ ದೂರುಗಳಿದ್ದೇ ಇರುತ್ತವೆ. ಜನ ಯಾವಾಗ ಮಂತ್ರಿಗಳ ಬಳಿಗೆ ಬರುತ್ತಾರೆ ಎಂಬುದನ್ನೂ ಗಮನಿಸಬೇಕು. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ನೋಂದಣಿ, ಕಂದಾಯ ಹೀಗೆ ವಿಭಾಗವಾರು ಇಲಾಖೆಗಳಲ್ಲಿ ಕೇಸ್‌ ವರ್ಕರ್‌ಗಳು ತಮ್ಮ ಅರ್ಜಿಗಳ ವಿಲೇವಾರಿ ಮಾಡಲು ವಿಫಲರಾದಾಗ, ಮೇಲಧಿಕಾರಿಗಳತ್ತ ಜನ ಎಡತಾಕುವುದು ಸಾಮಾನ್ಯ. ಆದರೆ ಮೇಲಧಿಕಾರಿಗಳು ಇಂಥ ಅರ್ಜಿಗಳನ್ನು ʼಸರಿಯಾದ ರೀತಿಯಲ್ಲಿʼ (through proper channel) ಬರಲಿ ಎಂದು ಮತ್ತೆ ಅದನ್ನು ಕೆಳಗಿನ ಮೇಜುಗಳ ಕಡೆಗೆ ತಳ್ಳುವುದೂ ಸಾಮಾನ್ಯ. ಹೀಗೆ ಪ್ರಭಾವಿಗಳಲ್ಲದ ಜನಸಾಮಾನ್ಯರು ಮೇಜಿನಿಂದ ಮೇಜಿಗೆ ಅಲೆದಾಡುವುದು, ನಾಳೆ ಬಾ ಎಂದು ಹೇಳಿಸಿಕೊಳ್ಳುವುದು ಅತಿ ಸಾಮಾನ್ಯ ದೃಶ್ಯ. ಅನೇಕ ಮಂದಿಯ ಬದುಕು ಹೀಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಲೇ ʼತಬರನ ಕಥೆʼಯಂತೆ ಮುಗಿದುಹೋಗುತ್ತದೆ. ಇದೊಂದು ದಃಸ್ವಪ್ನವೇ ಸರಿ. ಇದರಿಂದ ಪಾರಾಗಲು ಸಣ್ಣ ಸಣ್ಣ ವಿಚಾರಗಳಿಗೂ ಜನ ಪುಢಾರಿಗಳ ಮೊರೆ ಹೋಗುತ್ತಾರೆ; ಅಥವಾ ದಲ್ಲಾಳಿಗಳನ್ನು ಹಿಡಿದುಕೊಳ್ಳುತ್ತಾರೆ. ಇವರ ಮೂಲಕ ಕೆಲಸ ಮಾಡಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೆ.

ಹೀಗೆ ಸರ್ಕಾರಿ ಕೆಲಸದ ಕೆಂಪು ಪಟ್ಟಿಯ ವಿಳಂಬ ನರಕದಿಂದ ಬೇಸತ್ತ ಜನಸಾಮಾನ್ಯನಿಗೆ, ಪಾರಾಗುವ ಒಂದು ಕಿಂಡಿಯಂತೆ ಜನತಾ ದರ್ಶನ ಕಾಣಿಸಿದರೆ ಆಶ್ಚರ್ಯವಿಲ್ಲ. ನೇರವಾಗಿ ಜಿಲ್ಲಾಧಿಕಾರಿ ಅಥವಾ ಮಂತ್ರಿಗಳಿಗೆ ಅರ್ಜಿ ಸಲ್ಲಿಸಿದರೆ ತಮ್ಮ ಕೆಲಸ ಕೂಡಲೇ ಆಗಬಹುದು ಎಂಬ ಆಸೆ ಅವರಲ್ಲಿ ಮೂಡುವುದು ಸಹಜ. ಹೀಗಾಗಿಯೇ ಇಂಥ ಕಾರ್ಯಕ್ರಮಗಳಿಗೆ ಜನಸ್ಪಂದನ ದೊಡ್ಡ ಪ್ರಮಾಣದಲ್ಲಿ ವ್ಯಕ್ತವಾಗುತ್ತದೆ. ಜನ ಸರ್ಕಾರಿ ಕಚೇರಿಗಳ ಬಾಗಿಲಿಗೆ ಅಲೆದಾಡುವ ಬದಲು, ಜನತಾ ದರ್ಶನದ ಮೂಲಕ ಸರ್ಕಾರವೇ ಜನರ ಬಳಿ ಹೋಗುವುದು ಆಶಾದಾಯಕ. ಈ ಹಿಂದಿನ ಮುಖ್ಯಮಂತ್ರಿಗಳೂ ಇಂಥದೊಂದು ಪ್ರಯತ್ನ ಮಾಡಿದ್ದುಂಟು. ಆದರೆ ಇಷ್ಟೊಂದು ವ್ಯಾಪಕವಾಗಿ ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮಾಡಿರಲಿಲ್ಲ. ಆ ನಿಟ್ಟಿನಿಂದ ಇದು ಸ್ವಾಗತಾರ್ಹ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ವಂದೇ ಭಾರತ್‌; ಭಾರತದಲ್ಲಿ ರೈಲು ಕ್ರಾಂತಿ

ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ. ಸ್ವಲ್ಪ ಆಳವಾಗಿ ವಿಮರ್ಶೆ ಮಾಡಿದರೆ, ಜನತಾ ದರ್ಶನಗಳು ಸರ್ಕಾರಗಳ ವೈಫಲ್ಯವನ್ನು ಕಾಣಿಸುವ ಕಾರ್ಯಕ್ರಮವೇ ಹೊರತು ಸಾಫಲ್ಯವನ್ನಲ್ಲ. ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯ ಸಮಯದಲ್ಲಿ ಕೆಲಸ ಆಗುತ್ತಿಲ್ಲ ಅನ್ನುವ ಕಾರಣಕ್ಕಾಗಿ ತಾನೇ ಜನತಾ ದರ್ಶನದ ಸಮಯದಲ್ಲಿ ಅಷ್ಟೊಂದು ಪ್ರಮಾಣದ ಅಹವಾಲುಗಳು ಬರುವುದು? ಮೊದಲು ಗ್ರಾಮ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಜನತೆಗೆ ತಮ್ಮ ಕಚೇರಿಯಲ್ಲಿಯೇ ದರ್ಶನ ಕೊಡಬೇಕು. ಕೆಳಹಂತದ ಅಧಿಕಾರಿಗಳ ಜನತಾ ದರ್ಶನ ಮೊದಲಾಗಲಿ. ಅವರ ಮೇಲೆ ಮೇಲಧಿಕಾರಿಗಳು ನಿಗೂ ಇಡುವುದೂ ಆಗಲಿ. ಹಾಗೇ ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಪರಿಣಾಮಕಾರಿಯಾಗಿ ನಡೆದಿದ್ದೇ ಆದಲ್ಲಿ ಜನ ದೂರದ ವಿಧಾನ ಸೌಧದವರೆಗೆ ದೂರುದುಮ್ಮಾನ ಹಿಡಿದುಕೊಂಡು ಮುಖ್ಯಮಂತ್ರಿಗಳನ್ನು ಹುಡುಕಿಕೊಂಡು ಬರುವ ಪ್ರಶ್ನೆಯೇ ಬರುವುದಿಲ್ಲ. ಜನತಾ ದರ್ಶನದ ಅರ್ಜಿಗಳನ್ನೇ ಕಾಲಕಾಲಕ್ಕೆ ವಿಲೇವಾರಿ ಮಾಡುವ ಒಂದು ವ್ಯವಸ್ಥೆ ರೂಪುಗೊಳ್ಳಬೇಕು. ಆಗ ಮಾತ್ರ ಜನತಾ ದರ್ಶನದ ಬಗ್ಗೆ ಜನತೆಯಲ್ಲಿ ವಿಶ್ವಾಸ ಮೂಡಬಹುದು. ಇಲ್ಲದಿದ್ದಲ್ಲಿ ಇದೂ ಹತ್ತರಲ್ಲಿ ಇನ್ನೊಂದು ಎಂಬಂತಾಗುತ್ತದೆ.

ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading
Advertisement
viral news kannada
ಕ್ರಿಕೆಟ್12 mins ago

Kapil Dev Kidnap: ವಿಶ್ವಕಪ್​ ವಿಜೇತ ನಾಯಕ ಕಪಿಲ್ ದೇವ್​ ಕಿಡ್ನಾಪ್​; ವಿಡಿಯೊ ವೈರಲ್​

bangalore Bandh kuruburu deatained
ಕರ್ನಾಟಕ13 mins ago

Bangalore Bandh : ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಪ್ರತಿಭಟನೆ: ಕುರುಬೂರು ಶಾಂತ ಕುಮಾರ್‌ ಪೊಲೀಸ್‌ ವಶಕ್ಕೆ

pakistan Team
ಕ್ರಿಕೆಟ್51 mins ago

Pakistan team: ಕೊನೆಗೂ ಬಗೆಹರಿದ ಪಾಕ್ ತಂಡದ​ ವೀಸಾ ಸಮಸ್ಯೆ; ಬುಧವಾರ ಭಾರತ ಪ್ರಯಾಣ

bus auto accident
ದಕ್ಷಿಣ ಕನ್ನಡ53 mins ago

Road Accident: ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

home lizard
ಲೈಫ್‌ಸ್ಟೈಲ್1 hour ago

Lizards in home: ಹಲ್ಲಿಯನ್ನು ಮನೆಯಿಂದ ಓಡಿಸುವ ಕಲೆ ನಿಮಗೆ ಗೊತ್ತೇ? ಇಲ್ಲಿವೆ ಟಿಪ್ಸ್!

healthy children food
Relationship2 hours ago

Parenting Tips: ನಿಮ್ಮ ಮಕ್ಕಳು ಅಡ್ಡ ಬೆಳೆಯದೆ, ಉದ್ದ ಬೆಳೆಯಬೇಕೆಂದರೆ ಈ ಆಹಾರವನ್ನೇ ನೀಡಿ!

Reality Shows neads a break
ಅಂಕಣ2 hours ago

Raja Marga Column : ನಿಮ್ಮ ಮಕ್ಕಳನ್ನು ಸೂಪರ್‌ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್!

bangalore bandh
Live News2 hours ago

Bangalore Bandh Live: ಬೆಂಗಳೂರು ಬಂದ್‌ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?

Vistara Editorial, Janata Darshan by CM must appreciated
ಕರ್ನಾಟಕ3 hours ago

ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ

Dina Bhavishya
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ16 hours ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ18 hours ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ20 hours ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ21 hours ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌