Site icon Vistara News

Bear Attack: ಕರಡಿ ದಾಳಿಯಿಂದ ಇಬ್ಬರು ರೈತರಿಗೆ ಗಂಭೀರ ಗಾಯ

Bear attack in Gouladadi Farmer death

ಹಾವೇರಿ: ಜಮೀನಿಗೆ ತೆರಳಿದ್ದ ವೇಳೆ ಕರಡಿ ದಾಳಿ (Bear Attack) ಮಾಡಿದ್ದರಿಂದ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಶನಿವಾರ ನಡೆದಿದೆ.

ರೈತ ಬಸೀರ್ ಸಾಬ್ ಸವದತ್ತಿ (45), ರಜಾಕ್ (30) ಗಾಯಾಳುಗಳು. ಬಸವನಕಟ್ಟಿ ಗ್ರಾಮದ ಜಮೀನಿಗೆ ಇಬ್ಬರೂ ಹೋಗಿದ್ದರು. ಈ ವೇಳೆ ಏಕಾಏಕಿ ಕರಡಿ ದಾಳಿ ನಡೆಸಿದೆ. ಇದರಿಂದ ರೈತರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Land Dispute: ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ; ಯುವಕನ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ಗಂಡನಿಂದ ಚಾಕು ಇರಿತ, ಮಹಿಳೆಯ ಪ್ರಾಣ ಉಳಿಸಿದ ಪೊಲೀಸರು

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ಪತ್ನಿಗೆ ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಗೆ ಪೊಲೀಸರು ತಕ್ಷಣ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸಿದ್ದಾರೆ.

ನಿಖಿತಾ (28) ಎಂಬಾಕೆ ಪತಿ ಪತಿ ದಿವಾಕರ್ ಎಂಬಾತನಿಂದ ಚಾಕು ಇರಿತಕ್ಕೆ ಒಳಗಾದವರು. ಕಳೆದ ಎರಡು ದಿನಗಳ ಹಿಂದೆ ಪತಿ ಜತೆ ಈಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್ ನಿಲ್ಲಿಸಿ ನಡು ರಸ್ತೆಯಲ್ಲಿ ಪತ್ನಿಗೆ ದಿವಾಕರ್‌ ಐದು ಬಾರಿ ಚಾಕುವಿನಿಂದ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿಖಿತಾ ಅವರರನ್ನು ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ತೀವ್ರ ರಕ್ತಸ್ರಾವದ ಹಿನ್ನೆಲೆಯಲ್ಲಿ ಪೊಲೀಸರು ಆಕೆಗೆ ನಾಲ್ಕು ಬಾಟಲಿ ರಕ್ತ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: Harassment Case: ಲಿಫ್ಟ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟ ಫುಡ್‌ ಡೆಲಿವರಿ ಬಾಯ್‌ ಸೆರೆ

ನಿಖಿತಾ ಮತ್ತು ದಿವಾಕರ್ ಪ್ರೀತಿಸಿ ಮದುವೆಯಾಗಿದ್ದರು. ಪ್ರೀತಿಸಿ ಮದುವೆಯಾದ ಕಾರಣ ನಿಖಿತಾ ಪೋಷಕರಿಂದ ದೂರವಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆರೋಪಿ ಗಂಡ ದಿವಾಕರ್‌ ಕ್ಷುಲ್ಲಕ ಕಾರಣಕ್ಕೆ ಕಲಹ ತೆಗೆದು ನಿಖಿತಾರನ್ನು ಹಿಂಸಿಸುತ್ತಿದ್ದ ಎಂದು ಗೊತ್ತಾಗಿದೆ. ಸದ್ಯ ಆಸ್ಪತ್ರೆಯಲ್ಲಿರುವ ನಿಖಿತಾರನ್ನು ಬಾಣಸವಾಡಿ ಪೊಲೀಸರು ಆರೈಕೆ ಮಾಡುತ್ತಿದ್ದಾರೆ.

ಬಾಣಸವಾಡಿ ಪೊಲೀಸರು ಆರೋಪಿ ದಿವಾಕರನನ್ನು ಬಂಧಿಸಿದ್ದು, ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Exit mobile version