Site icon Vistara News

Belagavi Chalo | ಬಿಸಿಯೂಟ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಆಗ್ರಹ: ಡಿ. 28ರಂದು ಬೆಳಗಾವಿ ಚಲೋ

Mid day meal Belagavi Chalo

ಶಿವಮೊಗ್ಗ: ಬಿಸಿಯೂಟ ಯೋಜನೆಯಡಿ ದುಡಿಯುವ ಅಕ್ಷರ ದಾಸೋಹ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ. 28ರಂದು ಬೆಳಗಾವಿ ಚಲೋ (Belagavi Chalo) ಹಮ್ಮಿಕೊಳ್ಳಲಾಗಿದೆ ಎಂದು ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಹನುಮಮ್ಮ ತಿಳಿಸಿದ್ದಾರೆ.

ಇಲ್ಲಿ ಶುಕ್ರವಾರ (ಡಿ.೨೩) ಸುದ್ದಿಗೋಷ್ಠಿ ಮೂಲಕ ಈ ವಿಷಯ ತಿಳಿಸಿದ ಅವರು, ಬಿಸಿಯೂಟ ನೌಕರರಿಗೆ ಶಿಕ್ಷಣ ಇಲಾಖೆಯ ಶಿಫಾರಸಿನಂತೆ 6 ಸಾವಿರಕ್ಕೆ ವೇತನ ಹೆಚ್ಚಿಸಬೇಕು. ಬಜೆಟ್‌ನಲ್ಲಿ ಹೆಚ್ಚಳ ಮಾಡಿದ ಸಾವಿರ ರೂ. ವೇತನವನ್ನು ಜ. 2022ರಿಂದಲೇ ಅನ್ವಯಿಸಿ ಜಾರಿ ಮಾಡಬೇಕು. 60 ವರ್ಷ ವಯಸ್ಸಿನ ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುವಾಗ ನಿವೃತ್ತಿ ವೇತನ ಅಥವಾ ಇಡುಗಂಟು ನೀಡಬೇಕು. ಬೇಸಿಗೆ ಮತ್ತು ದಸರಾ ವೇತನ ಕಡ್ಡಾಯವಾಗಿ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದರೆ ಅವರ ಕುಟುಂಬ ವರ್ಗದವರಿಗೆ ಕೆಲಸ ನೀಡಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ 2 ಜನ ಅಡುಗೆಯವರು ಇರಬೇಕು. 2022ರಲ್ಲಿ 6 ಸಾವಿರ ಬಿಸಿಯೂಟ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಅವರನ್ನು ಮರು ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೇ, ಶಾಲೆಗಳಲ್ಲಿ ವಾರಕ್ಕೆ 2 ಬಾರಿ ಮೊಟ್ಟೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ಅಥವಾ ಬೇರೆ ತಿನಿಸು ಕೊಡಲಾಗುತ್ತಿದೆ. ಕೆಲವು ನಮ್ಮ ಸಂಘಟನೆಗಳೇ ಮೊಟ್ಟೆ ಕೊಡುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ. ಇದು ಸುಳ್ಳು. ಎಲ್ಲಾ ಶಾಲೆಗಳಲ್ಲೂ ಕಡ್ಡಾಯವಾಗಿ ಮೊಟ್ಟೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | IPL Auction 2023 | ಐಪಿಎಲ್​ ಹರಾಜಿನಲ್ಲಿ ಗರಿಷ್ಠ ಮೊತ್ತ ಪಡೆದ ಆಟಗಾರರ ಪಟ್ಟಿ ಇಲ್ಲಿದೆ

Exit mobile version