Site icon Vistara News

Belagavi News: ಬೀಗರಿಗೆ ಟಿಕೆಟ್ ತಪ್ಪಿಸಿದ ಶೆಟ್ಟರ್ ಸ್ವಾರ್ಥ ರಾಜಕಾರಣಿ: ಹೆಬ್ಬಾಳ್ಕರ್

Minister Lakshmi Hebbalkar latest statement in Belagavi

ಬೆಳಗಾವಿ: ಹುಬ್ಬಳ್ಳಿ ಧಾರವಾಡ ಜನರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar), ಬೆಳಗಾವಿಯಲ್ಲಿ ಸಲ್ಲಲು ಹೇಗೆ ಸಾಧ್ಯ? ಸ್ವತಃ ಬೀಗರಿಗೆ ಟಿಕೆಟ್ ತಪ್ಪಿಸಿ ತಾವೇ ಅಭ್ಯರ್ಥಿಯಾಗುವ ಮೂಲಕ ಸ್ವಾರ್ಥ ರಾಜಕಾರಣಿ ಎಂದು ನಿರೂಪಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Belagavi News) ಆರೋಪಿಸಿದರು.

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸತತವಾಗಿ ಆರು ಬಾರಿ ಆರಿಸಿದ ಹುಬ್ಬಳ್ಳಿ ಧಾರವಾಡ ಜನತೆಯನ್ನು ಮರೆತ ಶೆಟ್ಟರ್ ಅವರಿಂದ ಬೆಳಗಾವಿ ಜ‌ನತೆ ಅಭಿವೃದ್ಧಿ ನಿರೀಕ್ಷಿಸುವುದು ಅಸಾಧ್ಯ ಎಂದು ಆರೋಪಿಸಿದ ಅವರು, ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಬೆಳವಾಡಿ ಮಲ್ಲಮ್ಮ ಅವರಂತಹ ಮಹನೀಯರು ಹುಟ್ಟಿ ಬೆಳೆದ ಜಿಲ್ಲೆಗೆ ಇಂಥ ನಾಯಕರು ಬೇಡ ಎಂದು ಹೇಳಿದರು.

ಇದನ್ನೂ ಓದಿ: Drink Water In Summer: ಬೇಸಿಗೆಯಲ್ಲಿ ನೀರು ಎಷ್ಟು ಮತ್ತು ಹೇಗೆ ಕುಡಿಯಬೇಕೆನ್ನುವುದು ತಿಳಿದಿರಲಿ

ಜಗದೀಶ್ ಶೆಟ್ಟರ್ ತಮ್ಮ 32 ವಯಸ್ಸಿಗೆ ಮೊದಲ ಬಾರಿಗೆ ಶಾಸಕರಾಗಿದ್ದರು. ಅವರಿಗೆ ಬಿಜೆಪಿ ಅಂಥ ಅವಕಾಶಗಳನ್ನು ನೀಡಿದ್ದಕ್ಕೆ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷರಾದರು. ಅವರು ಯುವಕರಾಗಿದ್ದಗಲೇ ಸಿಕ್ಕ ಅವಕಾಶದಿಂದಲೇ ದೊಡ್ಡ ನಾಯಕರೆನಿಸಿಕೊಂಡರು. ನನ್ನ ಮಗನಿಗೆ ಟಿಕೆಟ್ ನೀಡಿದ್ದಕ್ಕೆ ಇನ್ನೂ ಯುವಕ ಎಂದು ಹೇಳಲಾಗುತ್ತಿದೆ. ಯುವಕರಿಗೆ ಅವಕಾಶ ನೀಡೋದು ತಪ್ಪೆ ಎಂದು ಪ್ರಶ್ನಿಸಿದರು.

ಕಳೆದ 11 ‌ವರ್ಷಗಳಿಂದ ಕ್ಷೇತ್ರದ ಜನರೊಂದಿಗೆ ನನ್ನ ಮಗ ಉತ್ತಮ ಒಡನಾಟ ಹೊಂದಿದ್ದಾನೆ. ಈ ಕ್ಷೇತ್ರದ ನಾಡಿ ಮಿಡಿತದ ಅರಿವು ಅವನಿಗಿದೆ. ನನಗೆ ಆಶೀರ್ವದಿಸಿದಂತೆ ನನ್ನ ಮಗನಿಗೂ ಜನ ಸೇವೆ ಮಾಡಲು ಅವಕಾಶ ನೀಡಬೇಕು ಎಂದು ತಿಳಿಸಿದರು.

ಬೆಳಗಾವಿ ಲೋಕಸಭೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಮೃಣಾಲ್ ಉತ್ಸುಕನಾಗಿದ್ದು, ಈಗಾಗಲೇ ಜನಸೇವೆಯ ಮೂಲಕ ಸಮಾಜದಲ್ಲಿ ಸಾಕಷ್ಟು ಕೆಲಸ ಮಾಡಿರುವುದು ಎಲ್ಲರಿಗೂ ಗೊತ್ತಿರುವ ವಿಷಯ, ಬೆಳಗಾವಿಯ ಸರ್ವತೋಮುಖದ ಅಭಿವೃದ್ಧಿಗಾಗಿ ಈ ಬಾರಿ ಮೃಣಾಲ್ ಹೆಬ್ಬಾಳ್ಕರ್‌ಗೆ ಒಂದು ಅವಕಾಶ ನೀಡಿರಿ ಎಂದು ವಿನಂತಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿನಂತಿಸಿಕೊಂಡರು.

ಇದನ್ನೂ ಓದಿ: LPG Aadhaar Link: ಎಲ್‌ಪಿಜಿ ಕನೆಕ್ಷನ್‌ಗೆ ಆಧಾರ್ ಲಿಂಕ್ ಮಾಡಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್, ವಿನೋದ್ ಚೌವ್ಹಾನ್, ಆಶೀಫ್ ಮುಲ್ಲಾ, ಶಂಕರಗೌಡ ಪಾಟೀಲ, ನಾಗೇಶ್ ದೇಸಾಯಿ, ರಾಮಚಂದ್ರ ಚವ್ಹಾನ್, ಸಂಜಯ್ ಚಾಟೆ, ಬಾಗಣ್ಣ ನರೋಟಿ, ಸಮೀರ್, ಬಸವರಾಜ ಮ್ಯಾಗೋಟಿ, ಗೋರೆಸಾಬ್ ಜಮಾದಾರ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

Exit mobile version