ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದ ಸುತ್ತ ನಾಲ್ಕು ಮಹನೀಯರ ಪ್ರತಿಮೆಗಳನ್ನು ಸ್ಥಾಪಿಸಲು ಸಿಎಂ ಬಸವರಾಜ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಿದರು.
ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಪುತ್ಥಳಿಯನ್ನು ಸ್ಥಾಪಿಸಲಾಗುತ್ತದೆ. ಚೆನ್ನಮ್ಮ ಹಾಗೂ ರಾಯಣ್ಣ ಪ್ರತಿಮೆ ಕುರಿತು ಸಿಎಂ ಕಳೆದ ವರ್ಷ ಘೋಷಣೆ ಮಾಡಿದ್ದರು.
ಕಾರ್ಯಕ್ರಮದಲ್ಲಿ ಸ್ಪೀಕರ್ ವಿಶ್ವೇಶರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಸಂಸದೆ ಮಂಗಳಾ ಅಂಗಡಿ ಉಪಸ್ಥಿತರಿದ್ದರು.
ಇದನ್ನೂ ಓದಿ | ಬೆಳಗಾವಿ ಅಧಿವೇಶನ | ಅಮಿತ್ ಶಾ ಆಮೇಲ್ ಬನ್ರಿ ಅಂತ ಹೇಳ್ಬೇಕಿತ್ತು? ಆ ದಮ್ ಇಲ್ಲ ಇವ್ರಿಗೆ: ಸದನ ಮೊಟಕಿಗೆ ಸಿದ್ದರಾಮಯ್ಯ ಕುಟುಕು