Site icon Vistara News

ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಮಧ್ಯಮ, ಬೃಹತ್ ನೀರಾವರಿ ಯೋಜನೆಗಳು ಪೂರ್ಣ: ರಾಮಲಿಂಗಾರೆಡ್ಡಿ

14 Medium and Large Irrigation Projects Completed in Kalyana Karnataka says Minister Ramalinga reddy

ಬೆಳಗಾವಿ: ಕೃಷ್ಣ ಭಾಗ್ಯ ಜಲ ನಿಗಮದ ಅಡಿಯಲ್ಲಿ ಕಲ್ಯಾಣ ಕರ್ನಾಟಕ (Kalyana Karnataka) ಭಾಗದ ಕಲಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ 6 ನೀರಾವರಿ ಯೋಜನೆಗಳಲ್ಲಿ (Irrigation Projects) ಮೂರು, ಕರ್ನಾಟಕ ನೀರಾವರಿ ನಿಗಮದ ಅಡಿಯಲ್ಲಿ 11 ಯೋಜನೆಗಳು ಪೂರ್ಣಗೊಂಡಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್‌ನಲ್ಲಿ ಗುರುವಾರ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ವಿಧಾನ ಪರಿಷತ್‌ ಸದಸ್ಯ ತಳವಾರ ಸಾಬಣ್ಣ ಅವರು, ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ವ್ಯಾಪ್ತಿಯಲ್ಲಿರುವ ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳು ಮತ್ತು ಈ ಯೋಜನೆಗಳಿಗೆ ಕಳೆದ 5 ವರ್ಷಗಳಲ್ಲಿ ಮಾಡಿದ ವೆಚ್ಚ, ಕಾಲುವೆಗಳ ದುಸ್ಥಿತಿ ಸೇರಿದಂತೆ ಅಧಿಕಾರಿಗಳ, ಗುತ್ತಿಗೆದಾರರ ವಂಚನೆ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಇದನ್ನೂ ಓದಿ: Job News: ಕೇಂದ್ರ ಸರ್ಕಾರ, ರಕ್ಷಣಾ ಇಲಾಖೆಗಳಲ್ಲಿ ಶೇ.14ರಷ್ಟು ಉದ್ಯೋಗ ಹೆಚ್ಚಳ

ಎರಡು ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಗೆಜೆಟ್ ತಯಾರಾಗಬೇಕು. ಈ ವೇಳೆ ಆಂಧ್ರ ಮತ್ತು ತೆಲಂಗಾಣ ರಾಜ್ಯದವರು ಗೆಜೆಟ್ ತಯಾರಿಸದಂತೆ ನ್ಯಾಯಲಯದ ಮೊರೆ ಹೋದ ಕಾರಣ ಕೆಲಸ ಮುಂದುವರೆದಿಲ್ಲ. ಬೂದಿಹಾಳ- ವೀರಾಪುರ ಏತ ನೀರಾವರಿ ಯೋಜನೆ ವಿಸ್ತರಣೆ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ವ್ಯಾಪ್ತಿಯ ಕೃಷ್ಣ ಜಲಭಾಗ್ಯ ನಿಗಮದ ಯೋಜನೆಗಳಿಗೆ 1,306 ಕೋಟಿ ಹಣವನ್ನು ಕಳೆದ 5 ವರ್ಷದಲ್ಲಿ ವೆಚ್ಚ ಮಾಡಲಾಗಿದೆ. ಕರ್ನಾಟಕ ನೀರಾವರಿ ನಿಗಮದ 11 ಯೋಜನೆಗಳಿಗೆ ಕಳೆದ 5 ವರ್ಷದಲ್ಲಿ 489 ಕೋಟಿ ಹಣ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Flax Seeds Benefits For Hair: ಚಳಿಗಾಲದಲ್ಲಿ ಕೂದಲ ಆರೋಗ್ಯಕ್ಕೆ ಅಗಸೆಬೀಜ ಸೂಪರ್‌!

ಹೂಳು, ಅವಶ್ಯಕ ದುರಸ್ತಿ ಸೇರಿದಂತೆ ನೀರು ಹರಿಸಲು ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಎಲ್ಲಾ ಟೆಂಡರ್‌ಗಳನ್ನು ಇ- ಪ್ರಕ್ಯೂರ್ಮೆಂಟ್ ಮೂಲಕವೇ ಪಾರದರ್ಶಕವಾಗಿ ಮಾಡಲಾಗಿದೆ. ಗುಣಮಟ್ಟ ಖಾತರಿಗೂ ಆದ್ಯತೆ ನೀಡಲಾಗಿದ್ದು, ಯಾವುದೇ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳನ್ನು ನೀಡುತ್ತಿಲ್ಲ ಎಂದು ಹೇಳಿದರು.

Exit mobile version