ಬೆಳಗಾವಿ: ಉತ್ತರ ಕರ್ನಾಟಕದ (North Karnataka) ಅಭಿವೃದ್ಧಿಗೆ ಸರ್ಕಾರವು ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ (Separate State) ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಮಂಡಲದಲ್ಲಿ ಶುಕ್ರವಾರ ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನವಾಗಿದೆ. ಏಕೀಕರಣಕ್ಕಾಗಿ ಬಹಳ ಜನ ಹೋರಾಡಿದರು. ಭಾಷಾವಾರು ಪ್ರಾಂತ್ರ್ಯ ರಚನೆಯಾಗಲೂ ಹೋರಾಟ ಮಾಡಿದವರಿದ್ದಾರೆ ಎಂದರು.
ಇದನ್ನೂ ಓದಿ: Raichur News: ಲಿಂಗಸುಗೂರಿನಲ್ಲಿ ಡಿ.29, 30ರಂದು ರಾಜ್ಯಮಟ್ಟದ 3ನೇ ವೈಜ್ಞಾನಿಕ ಸಮ್ಮೇಳನ: ಹುಲಿಕಲ್ ನಟರಾಜ್
ಹೈದರಾಬಾದ್ ಕರ್ನಾಟಕಕ್ಕೆ 371 ಗೆ ತಿದ್ದುಪಡಿ ಆಗಿ 371 ಜೆ ಪರಿಚ್ಛೇದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್, ವೈಜನಾಥ್ ಪಾಟೀಲ್ ಸೇರಿದಂತೆ ಮುಂತಾದವರು ಹೋರಾಡಿದರು. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 2014 ಮತ್ತು 2017 ರಲ್ಲಿ ಉತ್ತರ ಕರ್ನಾಟಕದದ ಬಗ್ಗೆ ಚರ್ಚೆಯಾಗಿತ್ತು. ಒಮ್ಮೆ ಈ ಬಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಉತ್ತರ ನೀಡಿದ್ದೆ ಎಂದರು.
ಇದನ್ನೂ ಓದಿ: Uttara Kannada News: ಯಲ್ಲಾಪುರದಲ್ಲಿ ಡಿ.16ರಂದು ʼವಿಶ್ವದರ್ಶನ ಸಂಭ್ರಮʼ ಕಾರ್ಯಕ್ರಮ
ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ಖರ್ಚಾಗಿ ಅಭಿವೃದ್ಧಿಯಾಗಬೇಕು. ಕಿತ್ತೂರು ಕರ್ನಾಟದ 5 ತಾಲೂಕುಗಳು ಸೇರಿದಂತೆ ಅತಿ ಹಿಂದುಳಿದ, ಅತ್ಯಂತ ಹಿಂದುಳಿದ ತಾಲೂಕುಗಳಿಗೂ ಅನುದಾನ ಕೊಡಲಾಗುವುದು. ಕಲ್ಯಾಣ ಕರ್ನಾಟಕಕ್ಕೆ 2013-14 ರಿಂದ ಈವರೆಗೆ 14877.36 ಕೋಟಿ ರೂ.ಗಳು ಮೀಸಲಿಡಲಾಗಿದೆ. ಅದರಲ್ಲಿ 10280 ಕೋಟಿ ರೂ. ಬಿಡುಗಡೆಯಾಗಿದ್ದು ಹಾಗೂ 8330 ಕೋಟಿ ರೂ. ವೆಚ್ಚವಾಗಿದೆ. ಮುಂದಿನ ವರ್ಷದಿಂದ 5000 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗುವುದು. ಮುಂಬೈ ಕರ್ನಾಟಕದ ಹಿಂದುಳಿದ ತಾಲೂಕುಗಳಿಗೂ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.