ಬೆಂಗಳೂರು: ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬೆಂಗಳೂರು ನಗರ ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಿರುವ ರಾಜ್ಯ ಸರ್ಕಾರ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಯೋಜನೆ 110.50 ಕೋಟಿ ರೂ. ಕ್ರಿಯಾ ಯೋಜನೆಗೆ ಅನುದಾನ ಬಿಡುಗಡೆ ಮಾಡಿದೆ.
ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಅಮೃತ ನಗರೋತ್ಥಾನ ಹಂತ-4ರ 9ನಗರ ಸ್ಥಳೀಯ ಸಂಸ್ಥೆಗಳ 110.50 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಬೆಂಗಳೂರು ದಕ್ಷಿಣ ಶಾಸಕ ಎಂ.ಕೃಷ್ಣಪ್ಪ, ದಾಸರಹಳ್ಳಿ ಶಾಸಕ ಮಂಜುನಾಥ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಇದನ್ನೂ ಓದಿ | Veer Savarkar | ವೀರ ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದಿದ್ದೇಕೆ?