ಬೆಳಗಾವಿ: ನಗರದಲ್ಲಿ ಅತಿವೃಷ್ಟಿಯಿಂದ(Rain News) ಕೆಲವು ಮನೆಗಳಿಗೆ ನೀರು ನುಗ್ಗಿರುವುದರಿಂದ ಸಂತ್ರಸ್ತ ಕುಟುಂಬಗಳಿಗೆ ನಗರದ ಮಂಡೋಳಿ ರಸ್ತೆಯ ಕೈವಲ್ಯ ಯೋಗ ಮಂದಿರದಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಾಳಜಿ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಮೂಲಸೌಕರ್ಯ ವ್ಯವಸ್ಥೆ ಪರಿಶೀಲಿಸಿದರು. ಈ ಕಾಳಜಿ ಕೇಂದ್ರದಲ್ಲಿ ಹದಿನೈದು ಜನರು ಆಶ್ರಯ ಪಡೆದುಕೊಂಡಿದ್ದು, ಅವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು ಮತ್ತು ಮಕ್ಕಳು ಇರುವುದರಿಂದ ವೈದ್ಯಕೀಯ ತಂಡ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಮನೆಗೆ ನೀರು ನುಗ್ಗಿರುವ ಕುಟುಂಬಗಳಿಗೆ ಪರಿಹಾರವನ್ನು ನೀಡಲಾಗಿದೆ. ಕೆಲವು ಕುಟುಂಬಗಳಿಗೆ ಸಂಬಂಧಿಸಿದಂತೆ ದಾಖಲೆಗಳು ದೊರಕದಿರುವುದರಿಂದ ಪರಿಹಾರ ವಿಳಂಬವಾಗಿದೆ. ಅವರಿಗೂ ಶೀಘ್ರ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಉಪ ಆಯುಕ್ತೆ ಭಾಗ್ಯಶ್ರೀ ಹುಗ್ಗಿ ಉಪಸ್ಥಿತರಿದ್ದರು.
ಇದನ್ನೂ ಓದಿ | Heavy Rain | ಕಾಲು ಸಂಕ ದಾಟುವಾಗ ಜಾರಿ ಬಿದ್ದು ಶಾಲಾ ಬಾಲಕಿ ನೀರು ಪಾಲು