ಶಾಲೆ ಎಂದರೆ ನೆನಪುಗಳ ಮೊಗಸಾಲೆ, ಐನಾಪುರದಲ್ಲಿ ಎಸ್ಸೆಸ್ಸೆಲ್ಸಿ ಬ್ಯಾಚ್‌ನ ಬೆಳ್ಳಿ ಹಬ್ಬ, ಗುರುವಂದನೆ, ಸ್ನೇಹಸಂಗಮ - Vistara News

ಬೆಳಗಾವಿ

ಶಾಲೆ ಎಂದರೆ ನೆನಪುಗಳ ಮೊಗಸಾಲೆ, ಐನಾಪುರದಲ್ಲಿ ಎಸ್ಸೆಸ್ಸೆಲ್ಸಿ ಬ್ಯಾಚ್‌ನ ಬೆಳ್ಳಿ ಹಬ್ಬ, ಗುರುವಂದನೆ, ಸ್ನೇಹಸಂಗಮ

ಕಾಗವಾಡ ತಾಲೂಕಿನ ಐನಾಪುರ ಪಟ್ಟಣದ ವಿಶ್ವನಾಥ ಸಭಾ ಭವನದಲ್ಲಿ ಕೆ ಆರ್ ಇ ಎಸ್ ಸಂಸ್ಥೆಯ ಹೈಸ್ಕೂಲ್‌ನ 1996-97ನೇ ಸಾಲಿನ ಎಸ್ಸೆಸ್ಸೆಲ್ಸಿ ಬ್ಯಾಚಿನ 25ನೇ ಬೆಳ್ಳಿ ಹಬ್ಬ, ಗುರುವಂದನಾ ಹಾಗೂ ಅಪೂರ್ವ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಸಂತಸ, ಸಂಭ್ರಮ ಮನೆಮಾಡಿತ್ತು.

VISTARANEWS.COM


on

Guruvandane
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಐನಾಪುರ: ಶಾಲೆ ಎಂದರೇನೆ ಹಾಗೆ. ಅಲ್ಲಿ ನೂರಾರು ನೆನಪುಗಳು ಮನೆ ಮಾಡಿ ಕೂತಿರುತ್ತವೆ. ಆಡಿದ ಆಟ, ಕಲಿತ ಪಾಠ, ಮಾಡಿದ ತುಂಟಾಟದ ಜತೆಗೆ ಜೀವನದ ಬುನಾದಿ ಗಟ್ಟಿಯಾಗುವುದು ಶಾಲೆಗಳಲ್ಲಿಯೇ. ಅದರಲ್ಲೂ, ಪ್ರೌಢಶಾಲೆ ಎಂದರೆ ಕೇಳಬೇಕೇ, ಅತ್ತ, ಹಿರಿಯರೂ ಅಲ್ಲದ, ಇತ್ತ ಕಿರಿಯರೂ ಅಲ್ಲದ ವಯಸ್ಸಿನಲ್ಲಿ ಪ್ರೌಢಶಾಲೆ ಅಂಗಳ, ತರಗತಿಗಳಲ್ಲಿ ಕಳೆದ ನೆನಪುಗಳು ಎದೆಯ ಗೂಡಲ್ಲಿ ಬೆಚ್ಚಗಿರುತ್ತವೆ.

ಇಂತಹ ಪ್ರೌಢಶಾಲೆಯ ನೆನಪುಗಳನ್ನು ಮೆಲುಕು ಹಾಕಲು, ಗುರುಗಳಿಗೆ ವಂದಿಸಲು ಹಾಗೂ ಎಲ್ಲ ಸ್ನೇಹಿತರನ್ನು ಒಂದೆಡೆ ಸೇರಿಸಲು ಭಾನುವಾರ(ಡಿ.25) ಕಾಗವಾಡ ತಾಲೂಕಿನ ಐನಾಪುರ ಪಟ್ಟಣದ ವಿಶ್ವನಾಥ ಸಭಾ ಭವನದಲ್ಲಿ ಕೆ ಆರ್ ಇ ಎಸ್ ಸಂಸ್ಥೆಯ ಹೈಸ್ಕೂಲ್‌ನ 1996-97ನೇ ಸಾಲಿನ ಎಸ್ಸೆಸ್ಸೆಲ್ಸಿ ಬ್ಯಾಚಿನ 25ನೇ ಬೆಳ್ಳಿ ಹಬ್ಬ, ಗುರುವಂದನಾ ಹಾಗೂ ಅಪೂರ್ವ ಸ್ನೇಹ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಋಣ ತೀರಿಸುವುದು ಅತ್ಯವಶ್ಯ
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಕೆಆರ್‌ಇ ಸಂಸ್ಥೆಯ ಹೈಸ್ಕೂಲ್ ನಿವೃತ್ತಿ ಶಿಕ್ಷಕರಾದ ಸಿ ಎಂ ಹಿರೇಮಠ್ ಮಾತನಾಡಿದರು. “ಮನುಷ್ಯ ಭೊಮಿಯ ಮೇಲೆ ಹುಟ್ಟಿದ ಮೇಲೆ ತಂದೆ-ತಾಯಿಗಳು, ಗುರು, ಸಮಾಜದ ಋಣಗಳನ್ನು ತೀರಿಸಬೇಕು” ಎಂದು ಹೇಳಿದರು.

”ಗುರು ತನ್ನ ಉಸಿರಿರುವರೆಗೂ ಬದುಕಿ ಬಾಳಲು ಸಾಧ್ಯವಾಗಿರುವಂಥ ವಿದ್ಯೆಯನ್ನು ಕೊಡುತ್ತಾನೆ. ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಸಂಸ್ಕಾರದ ಬೀಜವನ್ನು ಬಿತ್ತಿ ಬೆಳೆಸಿ, ಬದುಕಿಗೆ ದಾರಿ ದೀಪ ತೋರಿ ಕಲ್ಲಿನಂತಿರುವ ಮಕ್ಕಳನ್ನು, ಕಟೆದು ಸುಂದರ ಮೂರ್ತಿಯನ್ನಾಗಿ ರೂಪಿಸುತ್ತಾರೆ. ಅವರು ಯಾವುದೇ ಫಲಾಪೇಕ್ಷೆ ಇಲ್ಲದೆ ಅಜ್ಞಾನಿಗಳನ್ನು, ಸುಜ್ಞಾನಿಗಳನ್ನು ಮಾಡುತ್ತಾರೆ” ಎಂದರು.

ಇಂಗ್ಲಿಷ್ ಶಿಕ್ಷಕರಾಗಿದ್ದ ಐ ಎಂ ಹಿರೇಮಠ್, ಹಾಲಿ ಉಪಪ್ರಾಂಶುಪಾಲರಾದ ಎ.ಎಂ ಹುಲ್ಲೇನ್ನವರ್ ಮಾತನಾಡಿ, 1996-97ನೇ ಬ್ಯಾಚ್ ಹೇಗೆ ವಿಶಿಷ್ಟವಾಗಿತ್ತು ಎಂದು ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಉಪಪ್ರಾಂಶುಪಾಲರಾದ ಎಸ್‌ ಐ ಹೊನ್ನಳ್ಳಿ ಅವರು, “ವಿದ್ಯೆ ಧಾರೆ ಎರೆದ ಶಿಕ್ಷಕರನ್ನು 25 ವರ್ಷದ ಬಳಿಕ ಒಂದೆಡೆ ಸೇರಿಸಿ, ಅವರನ್ನು ಸತ್ಕರಿಸುತ್ತಿರುವುದು ಅಪೂರ್ವ ನಡೆ” ಎಂದು ಬಣ್ಣಿಸಿದರು.

ಹಳೆಯ ವಿದ್ಯಾರ್ಥಿಗಳಾದ ಬದರಿ ಉಮರ್ಜಿ, ಸೀತಾ ಕಟ್ಟಿ, ಶ್ರೀಕಾಂತ್ ಕುಡಚಿ, ಗುರುಪಾದ ಡೂಗನವರ, ರಾಜು ಕಟ್ಟಿ, ಮಧು ಬೋಗಾರ, ಕವಿತಾ ಜಾಧವ್, ಶಾಂತಾ ದಾನೋಳ್ಳಿ, ವಂದನಾ ಗಾಣಿಗೇರ, ಜ್ಯೋತಿ ಅಪರಾಜ, ರಮೇಶ್ ಕಾರೆ ಅವರು ತಮ್ಮ ಅನಿಸಿಕೆಗಳನ್ನು ಹೇಳಿದರು. ಕಾರ್ಯಕ್ರಮಕ್ಕೂ ಮುಂಚೆ ವಿದ್ಯಾರ್ಥಿಗಳು ತಾವು ಕಲಿತ ಶಾಲೆಗೆ ಭೇಟಿ, ನೀಡಿ ತಮ್ಮ ಹೈಸ್ಕೂಲ್ ದಿನಗಳನ್ನು ಮೆಲುಕು ಹಾಕಿದರು. ಆಗ ಮಾಡುತ್ತಿದ್ದ ಕೀಟಲೆ, ಕುಚೇಷ್ಟೆಗಳನ್ನು ಮತ್ತೆ ಮರುಸೃಷ್ಟಿಸಿ ಖುಷಿಪಟ್ಟರು. ಇದೊಂದು ಅಪೂರ್ವ ಸ್ನೇಹ ಸಮ್ಮಿಲನದ ಕಾರ್ಯಕ್ರಮವೇ ಆಗಿತ್ತು.

ಮೆರವಣಿಗೆಯಲ್ಲಿ ಸ್ವಾಗತ
ಕಾರ್ಯಕ್ರಮದಲ್ಲಿ ತಮ್ಮ ಬದುಕಿಗೆ ಭದ್ರ ಬುನಾದಿ ಹಾಕಿದ ಗುರುಗಳನ್ನು, ಗುರುಮಾತೆಯರಿಗೆ ಮೆರವಣಿಗೆಯಲ್ಲಿ ಪುಷ್ಪವೃಷ್ಟಿ ಮಾಡುತ್ತಾ, ವೇದಿಕೆಗೆ ವಿದ್ಯಾರ್ಥಿಗಳು ಬರಮಾಡಿಕೊಂಡರು. ಹೈಸ್ಕೂಲ್ ಶಿಕ್ಷಕರಾದ ಬಿ ಎ ಪಾಟೀಲ, ಆರ್ ಎಸ್ ಗೋಣಿ, ಪುಷ್ಪಾ ದೇಶಪಾಂಡೆ , ಸಿ ಎಂ ಹಿರೇಮಠ್, ಆರ್ ಬಿ ನೂಲಿ, ಎನ್ ಬಿ ಭೂವಿ, ಸಿ ಎಂ ಹಿರೇಮಠ್, ಸಿ ಎಂ ಯಾದವಾಡ, ಆರ್ ಎಸ್ ಕಡಕೋಳಮಠ, ಬಿ ಬಿ ಕತ್ತಿ, ಎಸ್ ಎಂ ಮಾಣಕೋಜಿ, ಉಪ ಪ್ರಾಂಶುಪಾಲರಾದ ಎ ಎಂ ಹುಲ್ಲೆನ್ನವರ್, ಕನ್ನಡ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ಎ ಪಾಟೀಲ್, ಕೆ ಆಯ್ ಅವಟಿ, ಟಿ ಬಿ ಭೊಸಲೆ, ಎಸ್ ಎಸ್ ಕಾಂಬಳೆ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಸನ್ಮಾನ ಮಾಡಲಾಯಿತು. ಆ ಮೂಲಕ ಹಳೆಯ ವಿದ್ಯಾರ್ಥಿಗಳು ಧನ್ಯತೆ ಮೆರೆದರು.

ಹಳೆಯ ವಿದ್ಯಾರ್ಥಿಗಳಾದ ಬಾಹುಬಲಿ ಪಾಟೀಲ್, ಪ್ರಕಾಶ್ ಮಾನೆ, ಭೀಮಣ್ಣಾ ಅಪರಾಜ್, ತಮಣ್ಣಾ ಕಮತೆ, ಸಂಜು ಪಾಟೀಲ್, ಸಂಜು ರೆಡ್ಡಿ, ಬಸವರಾಜ್ ಅಕಿವಾಟೆ, ಕಿರಣ್ ಪೋತದಾರ್, ಕಿರಣ ಬಾಗಿ, ಬಾಳು ನಧಾಪ, ಬಾಳು ಪಾವಲಿ, ರೇಖಾ ಸತ್ತಿ, ಅರ್ಪಣಾ ಕಟ್ಟಿ, ವೀಣಾ ಪಾಟೀಲ್, ಸಂಗೀತಾ ಬಾಲೋಜಿ, ಗೀತಾ ಪಾವಲಿ, ಹಣಮಂತ ಸೋಂದಕರ್, ಸಂತೋಷ್ ಶಿರಗುಪ್ಪಿ ಸೇರಿದಂತೆ 120ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಹಾಗೂ ಕುಟುಂಬದ ಸದಸ್ಯರು ಸಭೆಗೆ ಆಗಮಿಸಿ, ಕಾರ್ಯಕ್ರಮಕ್ಕೆ ಶೋಭೆ ತಂದರು.

ಹಳೆಯ ವಿದ್ಯಾರ್ಥಿಗಳಾದ ಪತ್ರಕರ್ತ ಮಲ್ಲಿಕಾರ್ಜುನ ತಿಪ್ಪಾರ ಸ್ವಾಗತಿಸಿದರು. ವೈದೇಹಿ ಉಮರ್ಜಿ ಪ್ರಾರ್ಥಿಸಿದರು. ಶಿಕ್ಷಕ ಶಿವಶಂಕರ್ ಕುಂಬಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಮೋದ್ ಲಿಂಬಿಕಾಯಿ ವಂದನಾರ್ಪಣೆ ಮಾಡಿದರು. ಶಿಕ್ಷಕ ವಿಜಯ್ ಹುದ್ದಾರ್ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಇದನ್ನೂ ಓದಿ | ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ | ಗುಣಮಟ್ಟದ ಶಿಕ್ಷಣಕ್ಕೆ ದಿಟ್ಟ ಹೆಜ್ಜೆ, ವಿಸ್ತಾರ ನ್ಯೂಸ್‌ ಅಭಿಯಾನಕ್ಕೆ ಅದ್ಧೂರಿ ಚಾಲನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. 50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಮರದಡಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುತ್ತದೆ.

ಇದನ್ನೂ ಓದಿ: Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

ಆರೆಂಜ್‌, ಯೆಲ್ಲೋ ಅಲರ್ಟ್‌

ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯೊಂದಿಗೆ ಗುಡುಗು, ಬಿರುಗಾಳಿಯು ಗಂಟೆಗೆ 30-40 ಕಿ.ಮೀ ಬೀಸಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Rain News: ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

VISTARANEWS.COM


on

Rain News Boy dies after being struck by lightning in Banavasi Heavy rains lash Chikkamagaluru and Hassan
ಮೃತ ಆಸ್ಪಕ್ ಅಲಿ
Koo

ಕಾರವಾರ/ಬೆಂಗಳೂರು: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ (Rain News) ಆಗುತ್ತಿದ್ದು, ಸಾಕಷ್ಟು ಹಾನಿಯನ್ನುಂಟು ಮಾಡಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಾಲಕನೊಬ್ಬ ಆಟ ಆಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ, ಭಾನುವಾರ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು – ಸಿಡಿಲು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಹೆಚಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast Report) ಹೇಳಿದೆ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಬಾಲಕನೊಬ್ಬ ಆಟವಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಆಸ್ಪಕ್ ಅಲಿ (16) ಮೃತ ದುರ್ದೈವಿ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೂ ಭಾರಿ ಮಳೆ

ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಹಳ್ಳ ಕೊಳ್ಳಗಳು ಉಕ್ಕಿ ಹರಿದಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿದಿದೆ. ಸುತ್ತಮುತ್ತಲಿನ ತೋಟ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

Continue Reading

ಮಳೆ

Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

Heavy rain : ಶನಿವಾರದಂದು ಚಿಕ್ಕಮಗಳೂರು, ಹಾಸನ, ತುಮಕೂರಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆ ಮೇಲೆ ನದಿಯಂತೆ ನೀರು ಹರಿಯುತ್ತಿದೆ. ರಾಜ್ಯಾದ್ಯಂತ ಇನ್ನೊಂದು ವಾರ ಮಳೆ (Rain News) ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast Rain alert
Koo

ಚಿಕ್ಕಮಗಳೂರು/ಹಾಸನ: ರಾಜ್ಯಾದ್ಯಂತ ಗುಡುಗು ಸಹಿತ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿಯುತ್ತಿರುದೆ.

ಇನ್ನೂ ಭಾರಿ ಮಳೆಗೆ ಸುತ್ತಮುತ್ತಲಿನ ತೋಟ, ಗದ್ದೆಯು ಸಂಪೂರ್ಣ ಜಲಾವೃತಗೊಂಡಿದೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನ ಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಾಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Gas Cylinder Blast: ಲೈಟ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟ; ಪತಿ- ಪತ್ನಿ ಗಂಭೀರ

Gas Cylinder Blast : ಗ್ಯಾಸ್‌ ಸಿಲಿಂಡರ್‌ ಸೋರಿಕೆ ಆಗಿದ್ದು, ಅಡುಗೆ ಮನೆಯ ಲೈಟ್‌ ಆನ್‌ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟಗೊಂಡಿದೆ. ಪರಿಣಾಮ ಮನೆಯಲ್ಲಿದ್ದ ವೃದ್ಧರಿಬ್ಬರಿಗೆ ಗಂಭೀರ ಗಾಯವಾಗಿದದೆ. ಸ್ಫೋಟದ ತೀವ್ರತೆಗೆ ಅಕ್ಕ ಪಕ್ಕದ ಮನೆಯವರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

By

Gas Cylinder Blast
Koo

ಬೆಳಗಾವಿ: ಬೆಳ್ಳಂಬೆಳಿಗ್ಗೆ ಭೀಕರ ಗ್ಯಾಸ್‌ ಸಿಲಿಂಡರ್ ಸ್ಫೋಟ (LPG Cylinder Blast) ಸಂಭವಿಸಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಬೆಳಗಾವಿಯ ಸುಳಗಾದಲ್ಲಿ ಈ ಭೀಕರ ಸ್ಫೋಟ (Gas Cylinder Blast) ಸಂಭವಿಸಿದೆ.

ಕಲ್ಲಪ್ಪ ಪಾಟೀಲ್ (62), ಸುಮನ್ ಪಾಟೀಲ್(60) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲಪ್ಪ ಹಾಗೂ ಸುಮನ್ ಅವರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿವೆ. ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

ಬೆಳಗ್ಗೆ 4 ಗಂಟೆಗೆ ಸುಮನ್‌ ಪಾಟೀಲ್‌ ಅವರು ಎದ್ದು, ಅಡುಗೆ ಮನೆಗೆ ಹೋಗಲು ಲೈಟ್ ಸ್ವಿಚ್ ಆನ್ ಮಾಡಿದ್ದಾರೆ. ಈ ವೇಳೆ ಏಕಾಏಕಿ ಸಿಲಿಂಡರ್‌ ಬ್ಲಾಸ್ಟ್ ಆಗಿದೆ. ಗ್ಯಾಸ್‌ ಸಿಲಿಂಡರ್ ಸಮೀಪ ಹೋಗದಿದ್ದರೂ ಸ್ಫೋಟಗೊಂಡಿದೆ. ಗ್ಯಾಸ್‌ ಲಿಂಕ್‌ ಆಗಿದ್ದರಿಂದ ಏಕಾಏಕಿ ಲೈಟ್‌ ಆನ್‌ ಮಾಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್ ಸಿಡಿದ ತೀವ್ರತೆಗೆ ಮನೆಯು ಡ್ಯಾಮೇಜ್ ಆಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿದೆ. ಸ್ಫೋಟದ ತೀವ್ರತೆಗೆ ಜನತೆ ಬೆಚ್ಚಿಬಿದ್ದಿದ್ದಾರೆ. ಮನೆಯ ಇಂಟೀರಿಯರ್ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಟ್ರಜರಿ,ವಸ್ತ್ರ ದವಸ ಧಾನ್ಯಗಳು ಮನೆಯ ತುಂಬ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಮಕೂರಿನಲ್ಲೂ ಸಿಲಿಂಡರ್‌ ಸ್ಫೋಟಕ್ಕೆ ಆರು ಮಂದಿಗೆ ಗಾಯ

ತುಮಕೂರಿನ ಕುಣಿಗಲ್‌ ಪಟ್ಟಣದ ಸಿದ್ಧಾರ್ಥ ಪ್ರೌಢಶಾಲೆ ಪಕ್ಕದ ರಸ್ತೆಯಲ್ಲಿ ರವಿಕುಮಾರ್ ಎಂಬುವರ ಮನೆಯಲ್ಲಿ ಗ್ಯಾಸ್‌ ಸಿಲಿಂಡ‌ರ್ ಸ್ಫೋಟಗೊಂಡಿದೆ. ಸಿಲಿಂಡರ್ ಸ್ಫೋಟಕ್ಕೆ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಸಾಮಾಗ್ರಿಗಳು ಸುಟ್ಟು ಭಸ್ಮವಾಗಿವೆ.

ಸಮೀನ(46), ಕುಶಾಲ್ (11)‌ ಎಂಬುವವರು ಗಂಭೀರ ಗಾಯಗೊಂಡಿದ್ದರೆ, ಮಂಜಮ್ಮ (42), ಶಿವಣ್ಣ(45), ಶ್ರುತಿ (45), ಹೇಮಲತಾ (16) ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಸ್ಫೋಟದ ಶಬ್ಧ ಕೇಳಿ ನೋಡಲು ಮನೆಗೆ ಬಂದವರಿಗೂ ಸಹ ಗಾಯವಾಗಿದೆ. ಈ ಅವಘಡದಿಂದ ಲಕ್ಷಾಂತರ ರೂ. ನಷ್ಟವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: Accident Case : ಟ್ರ್ಯಾಕ್ಟರ್ ರೋಟವೇಟರ್‌ಗೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರ

ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

ಆನೇಕಲ್: ಬೆಂಗಳೂರು ಹೊರವಲಯ (Bangalore rural) ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ (Sarjapura murder) ನಿನ್ನೆ ನಡೆದ ಹದಿನೈದು ವರ್ಷದ ಬಾಲಕನ ಕೊಲೆ ಪ್ರಕರಣದಲ್ಲಿ (boy murder case) ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಮ್ಮನನ್ನೇ ಕೊಲೆಗೈದ ಪಾಪಿ ಅಣ್ಣ (brother) ಅಂದರ್ ಆಗಿದ್ದಾನೆ.

ಪ್ರಾಣೇಶ್ (15) ಕೊಲೆಯಾಗಿದ್ದ ಬಾಲಕ. ಶಿವಕುಮಾರ್ (18) ಕೊಲೆ ಮಾಡಿದ ಪಾಪಿ ಸಹೋದರ. ಆನ್ಲೈನ್ ಗೇಮ್ ಆಡಲು ಮೊಬೈಲ್ ನೀಡಲಿಲ್ಲ ಅಂತ ಪಾತಕಿ, ತಮ್ಮನನ್ನು ಸಾಯಿಸಿದ್ದಾನೆ. ಕೊಲೆ ಆರೋಪಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರೂ ಮೂಲತಃ ಆಂಧ್ರ ಮೂಲದ ಸೂಳೆಕೆರಿ ಗ್ರಾಮದ ಚನ್ನಮ್ಮ ಮತ್ತು ಬಸವರಾಜ್ ದಂಪತಿಯ ಮಕ್ಕಳು. ಈ ಕುಟುಂಬ ಕೆಲಸ ಅರಸಿಕೊಂಡು ಕಳೆದ ಮೂರು ತಿಂಗಳ ಹಿಂದೆ ನೆರಿಗಾ ಗ್ರಾಮಕ್ಕೆ ಬಂದಿತ್ತು. ಪತಿ-ಪತ್ನಿ ಹಾಗೂ ಹಿರಿಯ ಮಗ ಶಿವಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ದ್ವಿತೀಯ ಪುತ್ರ ಪ್ರಾಣೇಶ್ ಸೂಳಕೆರೆ ಗ್ರಾಮದಲ್ಲಿ ಅಜ್ಜಿಯ ಜೊತೆಗೆ ವಾಸವಿದ್ದ.

ಬೇಸಿಗೆ ರಜೆಗೆ ನೆರಿಗಾ ಗ್ರಾಮದಲ್ಲಿನ ತಂದೆ ತಾಯಿ ಬಳಿಗೆ ಪ್ರಾಣೇಶ್‌ ಬಂದಿದ್ದ. ಮನೆಯಲ್ಲಿದ್ದ ಮೊಬೈಲಿನಲ್ಲಿ ಶಿವಕುಮಾರ್ ಯಾವಾಗ್ಲೂ ಆನ್ಲೈನ್ ಗೇಮ್ ಆಡುತ್ತಿದ್ದ. ಪ್ರಾಣೇಶ್ ಮನೆಗೆ ಬಂದವನೇ ಮೊಬೈಲ್‌ನಲ್ಲಿ ತಾನು ಗೇಮ್ ಆಡಲು ಶುರು ಮಾಡಿದ್ದ. ಪ್ರಾಣೇಶ್ ಬಳಿ ಮೊಬೈಲ್ ನೀಡುವಂತೆ ಶಿವಕುಮಾರ್ ಕೇಳುತ್ತಿದ್ದ. ಆದರೆ ಪ್ರಾಣೇಶ್‌ ಮೊಬೈಲ್ ನೀಡುತ್ತಿರಲಿಲ್ಲ.

ನನಗೆ ಆನ್ಲೈನ್ ಗೇಮ್ ಆಡಲು ಮೊಬೈಲ್ ಸಿಗುತ್ತಿಲ್ಲ ಎಂದು ಶಿವಕುಮಾರ ಕುಪಿತಗೊಂಡಿದ್ದ. ಇಬ್ಬರೂ ಮೊಬೈಲ್‌ಗಾಗಿ ಆಗಾಗಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಕಳೆದ ಹದಿನೈದನೇ ತಾರೀಕು ಗಾರೆ ಕೆಲಸಕ್ಕೆ ಹೋದ ಶಿವಕುಮಾರ ತಮ್ಮನನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ. ಕೆಲಸ ಮಾಡುತ್ತಿದ್ದ ಜಾಗದಿಂದ ಸಣ್ಣ ಸುತ್ತಿಗೆಯನ್ನು ಜೇಬಿನಲ್ಲಿ ಇಟ್ಟುಕೊಂಡು ಬಂದಿದ್ದ.

ಬಯಲು ಶೌಚಕ್ಕೆ ಹೋಗಿದ್ದ ಪ್ರಾಣೇಶನನ್ನು ಹಿಂಬಾಲಿಸಿಕೊಂಡು ಹೋಗಿದ್ದ ಶಿವಕುಮಾರ್, ಅಲ್ಲಿ ಸುತ್ತಿಗೆಯಿಂದ ತಲೆ ಹಾಗೂ ಎದೆ ಭಾಗಕ್ಕೆ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಪ್ರಾಣೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ತಂದೆ ತಾಯಿ ಸಂಜೆ ಮನೆಗೆ ಬಂದು ಎಲ್ಲೆಡೆ ಹುಡುಕಾಡಿದ್ದರು. ಈ ವೇಳೆ ತಮ್ಮನ ಶವ ಬಿದ್ದಿದೆ ಎಂದು ಓಡೋಡಿ ಬಂದು ಪೋಷಕರಿಗೆ ತಿಳಿಸಿದ್ದ ಶಿವಕುಮಾರ.

ಸರ್ಜಾಪುರ ಪೋಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆಗೆ ಇಳಿದಿದ್ದರು. ತಮ್ಮನ ಶವವನ್ನು ನಾನೇ ಮೊದಲು ನೋಡಿದೆ ಎಂದು ಹೇಳುತ್ತಿದ್ದ ಶಿವಕುಮಾರನ ಮೇಲೆ ಪೋಲೀಸರಿಗೆ ಅನುಮಾನ ಮೂಡಿತ್ತು. ವಿಚಾರಣೆ ನಡೆಸಿದಾಗ ಆರೋಪಿ ಬಾಯಿ ಬಿಟ್ಟಿದ್ದಾನೆ. ಆರೋಪಿ ಶಿವಕುಮಾರ್‌ನನ್ನು ಬಂಧಿಸಿದ ಸರ್ಜಾಪುರ ಪೋಲೀಸರು ಜೈಲಿಗೆ ಕಳುಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Job Alert
ಉದ್ಯೋಗ10 mins ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

Electric shock in udupi
ಉಡುಪಿ53 mins ago

Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Anjali Murder Case
ಕರ್ನಾಟಕ1 hour ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

IT Raid
ದೇಶ1 hour ago

IT Raid: ಶೂ ವ್ಯಾಪಾರಿಗಳಿಗೆ ಐಟಿ ಶಾಕ್‌; 40 ಕೋಟಿ ರೂ. ಸೀಜ್‌-ಕಂತೆ ಕಂತೆ ನೋಟು ನೋಡಿ ದಂಗಾದ ಅಧಿಕಾರಿಗಳು

Suspicious Case in Mysuru
ಮೈಸೂರು1 hour ago

Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

IPL 2024 The people paid revenge for the controversial post ashwini Puneeth Rajkumar
ಸ್ಯಾಂಡಲ್ ವುಡ್1 hour ago

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

Kattappa To Turn Modi Sathyaraj To Play Biopic On Prime Minister
ಬಾಲಿವುಡ್2 hours ago

Kattappa To Turn Modi: ಮೋದಿ ಪಾತ್ರದಲ್ಲಿ `ಬಾಹುಬಲಿ’ ಕಟ್ಟಪ್ಪ!

yelahanka flyover
ಬೆಂಗಳೂರು2 hours ago

Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

Bomb Threat
ಕರ್ನಾಟಕ2 hours ago

Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

Gold Rate Today
ಕರ್ನಾಟಕ2 hours ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌