Site icon Vistara News

ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ‘ಕೈ’ ರಣತಂತ್ರ: ಇಂದು ಸಭೆ

satish-jarakiholi-says-he-has-his-own-army-to-defend

ಬೆಳಗಾವಿ: ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಬಿಜೆಪಿ ನಾಯಕರ ಸಭೆ ಬೆನ್ನಲ್ಲೆ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಸಹ ತಂತ್ರ ರೂಪಿಸಲು ಮುಂದಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ಏರ್ಪಡಿಸಿದೆ.

ಪರಿಷತ್ ಚುನಾವಣೆ ಘೋಷಣೆ ಬಳಿಕ ಇದು ಕಾಂಗ್ರೆಸ್‌ ನಾಯಕರ ಮೊದಲ ಸಭೆ. ಶಾಸಕರಾದ ಗಣೇಶ ಹುಕ್ಕೇರಿ , ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ ಸೇರಿ ಬೆಳಗಾವಿ ಜಿಲ್ಲೆಯ ಹಾಲಿ, ಮಾಜಿ ಕಾಂಗ್ರೆಸ್ ಶಾಸಕರು, ಸಂಸದರು, ಎಂಎಲ್‌ಸಿಗಳು ಭಾಗವಹಿಸಲಿದ್ದಾರೆ.

ಇದನ್ನೂ ಓದಿ | ದೆಹಲಿಗೆ ಹೋದರೂ ಸಿಗದ ಅಮಿತ್‌ ಷಾ: ಫೋನ್‌ನಲ್ಲೆ ಮಾತಾಡಿ ಬಂದ CM

ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ದಿನಾಂಕ ತೀರ್ಮಾನವಾಗಲಿದೆ. ಶಿಕ್ಷಕರ ಮತಕ್ಷೇತ್ರದಿಂದ ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಹಾಗೂ ವಾಯವ್ಯ ಪದವೀಧರ ಮತಕ್ಷೇತ್ರದಿಂದ ಸುನೀಲ್ ಸಂಕ್ ಸ್ಪರ್ಧಿಸಲಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗೆ ಮಣೆ ಹಾಕಿದ್ದು, ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಮತಬೇಟೆಗೆ ರೂಪರೇಷೆ ಸಿದ್ಧಪಡಿಸಲಾಗುತ್ತಿದೆ.

ಕಳೆದ ಬಾರಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಲ್ಲಿ ಗೆದ್ದಂತೆ ಈ ಬಾರಿಯೂ ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಮಾಡಲಾಗುತ್ತಿದ್ದು, ಉಮೇದುವಾರಿಕೆ ಸಲ್ಲಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ | ರಸ್ತೆ ಜಗಳ ಪ್ರಕರಣ: ಕೊನೆಗೂ ಕೋರ್ಟ್‌ಗೆ ಶರಣಾದ ಕಾಂಗ್ರೆಸ್‌ ನಾಯಕ ಸಿಧು

Exit mobile version