ಬೆಳಗಾವಿ: ಮತ್ತೊಮ್ಮೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B.S. Yediyurappa) ಮಹತ್ವದ ಘೋಷಣೆ ಮಾಡಿದ್ದಾರೆ. ಯಾವುದೇ ಕಾರಣಕ್ಕೆ ತಾವು ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಕುರಿತು ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಈಗಾಗಲೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದವನು ನಾನು. ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ಮತ್ತೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.
ಇದನ್ನೂ ಓದಿ : Karnataka Election: ಯಡಿಯೂರಪ್ಪ ಎಲ್ಲರೂ ಒಪ್ಪಿರುವ ಧೀಮಂತ ನಾಯಕ; ಅವರಿಗೆ ಕಲ್ಲು ಹೊಡೆದರೆ ಬಿಜೆಪಿಗೆ ನಷ್ಟ: ವಿಜಯೇಂದ್ರ
ರಾಘವೇಂದ್ರ ಈಗಾಗಲೆ ಸಂಸದರಾಗಿದ್ದಾರೆ. ವಿಜಯೇಂದ್ರ ಸಹ ರಾಜಕಾರಣದಲ್ಲಿ ಬೆಳೆಯುತ್ತಿದ್ದಾರೆ, ರಾಜ್ಯಾದ್ಯಂತ ಸಂಚಾರ ನಡೆಸುತ್ತಿದ್ದಾರೆ. ನಾನಂತೂ ರಾಷ್ಟ್ರ ರಾಜಕಾರಣಕ್ಕೆ ತೆರಳುವ ಪ್ರಶ್ನೆಯೇ ಇಲ್ಲ. ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರು ಕರೆದಾಗಲೇ ಹೋಗಿಲ್ಲ. ಈಗಂತೂ ಹೋಗುವ ಮಾತಿಲ್ಲ ಎಂದು ಹೇಳಿದರು.
ಈಗಾಗಲೆ ಶಿಕಾರಿಪುರ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.