Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ - Vistara News

ಬೆಳಗಾವಿ

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Belagavi News: ಬೆಳಗಾವಿಯ ವಡಗಾವಿ ಯಳ್ಳೂರು ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ನಗರದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11 ನೇ ವಾರ್ಷಿಕ ಮಹೋತ್ಸವವು ಇದೇ ಮೇ 29 ರಿಂದ ಮೇ 31 ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ ತಿಳಿಸಿದ್ದಾರೆ.

VISTARANEWS.COM


on

11th Annual Mahotsav of Sri Annapurneswari Temple in Belagavi from 29th May
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಬೆಳಗಾವಿಯ ವಡಗಾವಿ ಯಳ್ಳೂರು ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ನಗರದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವವು ಇದೇ ಮೇ 29 ರಿಂದ ಮೇ 31 ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ (Belagavi News) ತಿಳಿಸಿದ್ದಾರೆ.

ಇದನ್ನೂ ಓದಿ: Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

ಮೇ 29 ರಂದು ಬೆಳಗ್ಗೆ 6 ಗಂಟೆಗೆ ಶ್ರೀ ಅನ್ನಪೂರ್ಣೇಶ್ವರಿ ಸಹಿತ ಪರಿವಾರ ದೇವರಿಗೆ ಕಲಶಾಭಿಷೇಕ, 8 ಕ್ಕೆ ನಾಗದೇವರ ಬಿಂಬ ಪ್ರತಿಷ್ಠಾಪನೆ, ಕಲಶಾಭಿಷೇಕ ಮಹಾಪೂಜೆ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸನ್ನ ಪೂಜೆ, ಪ್ರಸಾದ, ಸಂಜೆ 5 ರಿಂದ ರಂಗ ಪೂಜೆ ಶ್ರೀ ದೇವಿಯ ಪಲ್ಲಕ್ಕಿ- ಮೆರವಣಿಗೆ, ದೀಪೋತ್ಸವ ನಡೆಯಲಿದೆ.

ಮೇ 30 ರಂದು ಬೆಳಗ್ಗೆ 7 ಕ್ಕೆ ಸಂಪ್ರೋಕ್ಷಣೆ, ಅನ್ನಪೂರ್ಣೇಶ್ವರಿ ಯಾಗ, ಸುಬ್ರಮಣ್ಯ ದೇವರಿಗೆ ಆಶ್ಲೇಷ ಬಲಿ, 8.30 ಕ್ಕೆ ಮಹಾ ಚಂಡಿಕಾ ಯಾಗ, ಸಂಜೆ 6 ಕ್ಕೆ ಕೀರ್ತನಾಕಾರರಿಂದ ಕೀರ್ತನೆ, ವ್ಯಾಖ್ಯಾನ ನಡೆಯಲಿದೆ.

ಇದನ್ನೂ ಓದಿ: New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

ಮೇ 31 ರಂದು ಬೆಳಗ್ಗೆ 9 ಕ್ಕೆ ದೇವಿಗೆ ವಿಶೇಷ ಅಲಂಕಾರ, ಪೂಜಾರಾಧನೆ, 10 ಕ್ಕೆ ಭಜನಾ ಮಂಡಳಿಯಿಂದ ಭಜನೆ, ಮಧ್ಯಾಹ್ನ 1 ರಿಂದ 3 ಗಂಟೆವರೆಗೆ ಮಹಾಪ್ರಸಾದ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Lakshmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಅಹವಾಲು ಸಲ್ಲಿಸಲು ಮಂಗಳವಾರ ವಿವಿಧ ಭಾಗಗಳಿಂದ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಸಚಿವರ ಮನೆಯ ಬಳಿ ಗೃಹ ಕಚೇರಿಗೆ ಆಗಮಿಸಿದ್ದರು. ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೂ ಊಟ, ತಿಂಡಿ ಬಿಟ್ಟು ಸಚಿವರು ಅಹವಾಲು ಸ್ವೀಕರಿಸಿದರು.

VISTARANEWS.COM


on

Lakshmi Hebbalkar
Koo

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರಿಗೆ ಅಹವಾಲು ಸಲ್ಲಿಸಲು ಮಂಗಳವಾರ ವಿವಿಧ ಭಾಗಗಳಿಂದ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು. ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೂ ಊಟ, ತಿಂಡಿ ಬಿಟ್ಟು ಸಚಿವರು ಅಹವಾಲು ಸ್ವೀಕರಿಸಿದರು.

ಸಚಿವರು ಬೆಳಗಾವಿಯಲ್ಲಿದ್ದಾಗಲೆಲ್ಲ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡು ಸಚಿವರ ಮನೆಯ ಬಳಿ ಗೃಹ ಕಚೇರಿಗೆ ನೂರಾರು ಜನರು ಆಗಮಿಸುತ್ತಾರೆ. ತಾಳ್ಮೆಯಿಂದ ಎಲ್ಲರ ಅಹವಾಲು ಆಲಿಸಿ, ಸಮಾಧಾನ ಪಡಿಸಿ ಕಳುಹಿಸುತ್ತಾರೆ. ಮಂಗಳವಾರವೂ ದೊಡ್ಡ ಸಂಖ್ಯೆಯಲ್ಲೇ ಜನರು ಆಗಮಿಸಿದ್ದರು.

ಇದನ್ನೂ ಓದಿ: Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

ಕಳದ 4 ದಿನಗಳಿಂದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮೈಸೂರು, ಭದ್ರಾವತಿ, ಗದಗ ಪ್ರವಾಸದಲ್ಲಿದ್ದಾರೆ. ಸೋಮವಾರ ಗದಗ ಜಿಲ್ಲಾ ಪ್ರವಾಸ ಮಾಡಿ ಮಂಗಳವಾರ ಬೆಳಗಿನ ಜಾವ 2 ಗಂಟೆಗೆ ಬೆಳಗಾವಿ ತಲುಪಿದ್ದಾರೆ. ಮಂಗಳವಾರ ಸಂಜೆ ಬೆಂಗಳೂರಿಗೆ ತೆರಳಿ, ಬುಧವಾರ ಉಡುಪಿಗೆ ಹೋಗುವ ಕಾರ್ಯಕ್ರಮವಿದೆ. ಆದರೂ ಮಂಗಳವಾರ ಬಹು ಹೊತ್ತಿನವರೆಗೂ ಜನರ ಸಮಸ್ಯೆಗಳಿಗೆ ಕಿವಿಯಾದರು. ಬಂದ ಜನರು ಸಚಿವರ ಸ್ಪಂದನೆಗೆ ಧನ್ಯವಾದ ಸಲ್ಲಿಸಿ ಮರಳುತ್ತಿದ್ದರು.

Continue Reading

ಬೆಳಗಾವಿ

Murder Case : ಕಂಡವರ ಹೆಂಡ್ತಿ ಮೇಲೆ ವ್ಯಾಮೋಹ; ಸುಪಾರಿ ಕೊಟ್ಟು ಚಟ್ಟ ಕಟ್ಟಿದ ಕಿರಾತಕ

Murder Case : ಪರಸ್ತ್ರೀ ಮೇಲೆ ಕಣ್ಣು ಹಾಕಿದ್ದ ಕಿರಾತಕನೊಬ್ಬ, ಆಕೆಯನ್ನು ಒಲಿಸಿಕೊಳ್ಳಲು ಸುಪಾರಿ ಕೊಟ್ಟು ಮಹಿಳೆಯ ಗಂಡನನ್ನೇ ಕೊಲ್ಲಿಸಿದ್ದಾನೆ. ಸುಪಾರಿ ಪಡೆದವರು ಅರೆಸ್ಟ್‌ ಆಗಿದ್ದು, ಮುಖ್ಯ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

VISTARANEWS.COM


on

By

Murder Case
ಕೊಲೆ ಆರೋಪಿ ನಾಗಪ್ಪ ಹಾಗೂ ಹತ್ಯೆಯಾದ ಕಾಡಪ್ಪ
Koo

ಬೆಳಗಾವಿ: ಪರಸ್ತ್ರೀಯನ್ನು ಒಲಿಸಿಕೊಳ್ಳಲು ಕಿರಾತಕನೊಬ್ಬ ಆಕೆಯ ಗಂಡನಿಗೆ ಚಟ್ಟ ಕಟ್ಟಿದ್ದಾನೆ. ಪಾರ್ಟಿ ಮಾಡೋಣ ಬಾ ಎಂದು ಕರೆದಿದ್ದಾನೆ. ಬಳಿಕ ನಶೆಯಲ್ಲಿದ್ದಾಗಲೇ ಕುತ್ತಿಗೆಗೆ ಬಟ್ಟೆ ಬಿಗಿದು ಉಸಿರುಗಟ್ಟಿಸಿ ಕೊಲೆ (Murder Case) ಮಾಡಿ ಪರಾರಿ ಆಗಿದ್ದಾನೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೆನಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕಾಡಪ್ಪ ಶಿಗರಸಂಗಿ (42) ಕೊಲೆಯಾದ ದುರ್ದೈವಿ. ನಾಗಪ್ಪ ರೈನಾಪುರ ಎಂಬಾತ ಕೊಲ್ಲಲ್ಲು ಸುಪಾರಿ ಕೊಟ್ಟವನು. ಕೊಲೆಯಾದ ಕಾಡಪ್ಪನ ಪತ್ನಿಯ ಮೇಲೆ ಕಣ್ಣು ಹಾಕಿದ ನಾಗಪ್ಪ ಆಕೆಯನ್ನು ವ್ಯಾಮೋಹಿಸಿದ್ದ. ಹೀಗಾಗಿ ಕಾಡಪ್ಪನನ್ನು ಕೊಲ್ಲಲು 2.5 ಲಕ್ಷ ರೂ. ಸುಪಾರಿ ಕೊಟ್ಟಿದ್ದ.

ಕೊಲೆ ಮಾಡಲು ವ್ಯವಸ್ಥಿತ ಪ್ರೀ ಪ್ಲಾನ್ ಮಾಡಿದ್ದ ನಾಗಪ್ಪ, ಸುಪಾರಿ ಕೊಟ್ಟ ಆರೋಪಿ ಲಕ್ಷ್ಮಣ ಜತೆ ಕಡೆಯದಾಗಿ ಬೆನಕಟ್ಟಿಯ ಪೆಟ್ರೋಲ್ ಪಂಪ್ ಒಂದರಲ್ಲಿ ಕಾಣಿಸಿಕೊಂಡಿದ್ದ. ಇವರಿಬ್ಬರ ಚಲನವಲನ ಅಲ್ಲಿನ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಮೊದಲು ಲಕ್ಷ್ಮಣನನ್ನು ಸೆರೆಹಿಡಿದ ಪೊಲೀಸರು ವಿಚಾರಣೆ ನಡೆಸಿದಾಗ, ಕೊಲೆಯ ಸಂಪೂರ್ಣ ಸಂಚು ಬಯಲಾಗಿದೆ. ಸದ್ಯ ಐವರು ಆರೋಪಿಗಳ ಪೈಕಿ ಲಕ್ಷ್ಮಣ ವಿಠ್ಠಲ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ತಲೆ ಮರೆಸಿಕೊಂಡಿರುವ ನಾಗಪ್ಪ, ಶಿವಾನಂದ ಬಸವರಾಜ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮುರುಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

ಚೂರಿ ಹಿಡಿದು ಮ್ಯಾನೇಜರ್‌ನನ್ನು ಅಟ್ಟಾಡಿಸಿದ ಸೆಕ್ಯೂರಿಟಿ ಗಾರ್ಡ್‌!

ಸೆಕ್ಯೂರಿಟಿ ಗಾರ್ಡ್‌ನಿಂದ ಶೋರೂಂ ಕ್ಲಸ್ಟರ್ ಮ್ಯಾನೇಜರ್‌ ಚೂರಿಯಿಂದ ಇರಿದು ಅಟ್ಟಾಡಿಸಿಕೊಂಡು ಹೋಗಿರುವ ಘಟನೆ ನಡೆದಿದೆ. ಚೂರಿಯಿಂದ ಇರಿದ ದೃಶ್ಯ ವಿಸ್ತಾರ ನ್ಯೂಶ್‌ಗೆ ಲಭ್ಯವಾಗಿದೆ. ಉಡುಪಿಯ ಹರ್ಷ ಶೋರೂಂನಲ್ಲಿ ಘಟನೆ ನಡೆದಿದೆ.

ಹರ್ಷ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಇರಿತಕ್ಕೊಳಗಾದವರು. ಅಲ್ಲೇ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರಸಾದ್ ಹಲ್ಲೆ ನಡೆಸಿದವನು. ಪ್ರಸಾದ್‌ ಕೆಲಸದಲ್ಲಿ ಅಶಿಸ್ತು ತೋರಿದ್ದಕ್ಕಾಗಿ ರೋನ್ಸನ್‌ ವಾರ್ನಿಂಗ್ ನೀಡಿದ್ದರು. ಕೆಲಸದಿಂದ ತೆಗೆಯದಂತೆ ರೋನ್ಸನ್ ಬಳಿ ಪ್ರಸಾದ್ ಕೇಳಿಕೊಂಡಿದ್ದ. ಮರುದಿನ ಮೀಟಿಂಗ್‌ನಲ್ಲಿ ಚರ್ಚಿಸುವುದಾಗಿ ರೋನ್ಸನ್‌ ಹೇಳಿದ್ದರು.

ಆಗಸ್ಟ್ 10 ರ ಸಂಜೆ 7.30ರಂದು ಮಾತುಕತೆ ಬಳಿಕ ಗ್ರೌಂಡ್ ಫ್ಲೋರ್‌ನಲ್ಲಿ ಕಾದು ಕುಳಿತಿದ್ದ ಆರೋಪಿ ಪ್ರಸಾದ್ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಬರುತ್ತಿದ್ದಂತೆ ಚೂರಿಯಲ್ಲಿ ಇರಿದಿದ್ದ. ಕೂಡಲೇ ಈತನಿಂದ ತಪ್ಪಿಸಿಕೊಂಡು ರೋನ್ಸನ್‌ ಓಡಿದ್ದರು. ಆದರೂ ಬಿಡದೇ ಪ್ರಸಾದ್‌ ಬೆನ್ನಟ್ಟಿ ಹೋಗಿ ಕೊಲೆಗೆ ಯತ್ನಿಸಿದ್ದಾನೆ. ಇದೆಲ್ಲವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ ಮಳೆರಾಯ

Karnataka Weather Forecast : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ (Rain News) ರೈತರು ಕಂಗಲಾಗಿದ್ದಾರೆ. ಮಳೆಯ ಆರ್ಭಟಕ್ಕೆ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು ಜಮೀನುಗಳು ನೀರುಪಾಲಾಗಿವೆ.

VISTARANEWS.COM


on

By

karnataka Weather Forecast
Koo

ಹಾಸನ: ಮಳೆರಾಯ ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ್ದಾನೆ. ಮುಂದಿನ ಒಂದು ವಾರದಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ಹಾಸನದ ವಿವಿಧೆಡೆ ಕಳೆದ ರಾತ್ರಿಯಿಂದ ಧಾರಾಕಾರ ಮಳೆ ಸುರಿದಿದೆ. ಭಾರಿ ಮಳೆಗೆ ನಾಟಿ ಮಾಡಿದ್ದ ಭತ್ತದ ಸಸಿಗಳು ಕೊಚ್ಚಿ ಹೋಗಿವೆ. ಹಾಸನದ ಆಲೂರು ತಾಲೂಕಿನ ಬೆಂಬಳೂರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿದಿದೆ. ಭತ್ತದ ಗದ್ದೆಗಳಿಗೆ ಬಾರಿ ಪ್ರಮಾಣದ ನೀರು ನುಗ್ಗಿದೆ.

ನೀರಿನ‌ ರಭಸಕ್ಕೆ ಗದ್ದೆಯ ಬದುಗಳು ಕೊಚ್ಚಿ ಹೋಗಿವೆ. ನಾಟಿ ಮಾಡಲು ಸಿದ್ಧತೆ ನಡೆಸಿದ್ದ ರೈತರ ಆಸೆಗೆ ಮಳೆರಾಯ ತಣ್ಣೀರು ಎರಚಿದ್ದಾನೆ. ಐವತ್ತಕ್ಕೂ ಹೆಚ್ಚು ಎಕರೆ ಪ್ರದೇಶದ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದೆ. ಧಾರಾಕಾರ ಮಳೆಯಿಂದ ಕಂಗಾಲಾದ ರೈತರು ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: CM Siddaramaiah: ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ, ರೈತರಿಗೆ ತೊಂದರೆಯಾಗದಂತೆ ಕ್ರಮ: ಸಿಎಂ

ಸರ್ಕಾರಿ ಶಾಲೆ ಜಲಾವೃತ, ರಸ್ತೆಗಳೆಲ್ಲವೂ ಗುಂಡಿ ಮಯ

ನಿನ್ನೆ ಸುರಿದ ಮಳೆಗೆ ಸರ್ಕಾರಿ ಶಾಲೆಯೊಂದು ಜಲಾವೃತಗೊಂಡಿದೆ. ಬೆಂಗಳೂರಿನ ವರ್ತೂರಿನ ಸಿದ್ದಾಪುರ ಸರ್ಕಾರಿ ಶಾಲೆಯ ಆವರಣದ ಸುತ್ತಲೂ ಮಳೆ ನೀರು ನಿಂತಿತ್ತು. ಬೆಳಗ್ಗೆ ಶಾಲೆಗೆ ಬಂದ ಮಕ್ಕಳು, ಎರಡು ಗಂಟೆಗಳ‌ ಕಾಲ ಶಾಲಾ ಕೊಠಡಿಗಳು ಸ್ವಚ್ಚತೆ ಮಾಡಿದರು.

ಇತ್ತ ಮಳೆ ನಿಂತು ಹೋದಮೇಲೆ ಗುಂಡಿಗಳು ಬಿದ್ದಿವೆ. ಎರಡು ದಿನದಿಂದ ಸುರಿದ ಮಳೆಗೆ ಬೆಂಗಳೂರಿನ ಟೌನ್ ಹಾಲ್ ಎದುರೇ 50ಕ್ಕೂ ಹೆಚ್ಚು ರಸ್ತೆ ಗುಂಡಿ ಬಿದ್ದಿವೆ. ಬಿಬಿಎಂಪಿಯಿಂದ 500 ಮೀಟರ್ ದೂರದಲ್ಲಿರುವ ಟೌನ್ ಹಾಲ್‌ ಸುತ್ತಮುತ್ತ ಇರುವ ಗುಂಡಿಗಳು ಬೈಕ್ ಸವಾರರ ಪಾಲಿಗೆ ಮೃತ್ಯುಕೂಪವಾಗಿದೆ.

ಕ್ಯಾರೆ ಎನ್ನದ ಬಿಬಿಎಂಪಿ

ಗುಂಡಿ ಫೋಟೋ ತೆಗೆದು ಕಳಿಸಿ ಅಂದರೆ ಬಿಬಿಎಂಪಿ ಕೆಲಸ ಮುಗಿತಾ? ಕೇವಲ ಆ್ಯಪ್ ಮಾಡಿ ಕೈತೊಳೆದು ಕೊಳ್ಳುತ್ತಿದೆ. ಮೊಣಕಾಲು ಉದ್ದ ಗುಂಡಿ ಇದ್ದರೂ ಬಿಬಿಎಂಪಿ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಬೆಂಗಳೂರಿನ ಸಿಂಗಯ್ಯನಪಾಳ್ಯ ರಸ್ತೆಯ ಮಧ್ಯದಲ್ಲಿ ಯಮ ಸ್ವರೂಪಿ ಗುಂಡಿ ಬಿದ್ದಿದೆ. ಸ್ವಲ್ಪ ಎಚ್ಚರ ತಪ್ಪಿದ್ದರೂ, ಜೀವಕ್ಕೆ ಅಪಾಯ ಗ್ಯಾರಂಟಿ. ಇನ್‌ಸ್ಟಾಗ್ರಾಂ‌ಮ್‌ನಲ್ಲಿ ಪೋಸ್ಟ್ ಹಾಕಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Tungabhadra Dam: ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

ನಾಳೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲೂ ಮಳೆಯು ಅಬ್ಬರಿಸಲಿದೆ. ಇತ್ತ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಸಾಥ್‌ ನೀಡಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕೋಡಿ

Murder Case : ಕೆಲ್ಸ ಜಾಸ್ತಿ ಮನೆಗೆ ಬರಲ್ಲ ಎಂದವನು, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬೀದಿ ಹೆಣವಾದ

Murder case : ಕೆಲಸ ಜಾಸ್ತಿ ಇದೆ ಇಂದು ಮನೆಗೆ ಬರುವುದಿಲ್ಲ ಎಂದವನು ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಅಥಣಿ ಸಮೀಪ ವ್ಯಕ್ತಿಯೊಬ್ಬ ಕೊಲೆಯಾಗಿ ಹೋಗಿದ್ದಾನೆ. ಇತ್ತ ಉಡುಪಿಯಲ್ಲಿ ಕೆಲಸದಲ್ಲಿ ಅಶಿಸ್ತು ತೋರಿದ ಸೆಕ್ಯೂರಿಟಿ ಗಾರ್ಡ್‌ಗೆ ವಾರ್ನಿಂಗ್‌ ಕೊಟ್ಟ ಮ್ಯಾನೇಜರ್‌ಗೆ ಹಲ್ಲೆ ನಡೆಸಲಾಗಿದೆ.

VISTARANEWS.COM


on

By

Murder case
Koo

ಚಿಕ್ಕೋಡಿ: ಬೆಳಗಾವಿಯ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಬಸ್ ನಿಲ್ದಾಣದಲ್ಲಿ ಕೊಲೆಯಾದ (Murder Case) ಸ್ಥಿತಿಯಲ್ಲಿ ವ್ಯಕ್ತಿಯ ಶವ (Dead body Found) ಪತ್ತೆಯಾಗಿದೆ. ಮಧಬಾವಿ ಗ್ರಾಮದ ಅಪ್ಪಾಸಾಬ ಕಾಂಬಳೆ (37) ಕೊಲೆಯಾದವರು.

ಅಪ್ಪಾಸಾಬ ಕಾಂಬಳೆ ದುಡಿಯಲು ನಿತ್ಯ ಪಕ್ಕದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು. ಕಳೆದ ರಾತ್ರಿ 9 ಗಂಟೆಗೆ ಪತ್ನಿಗೆ ಕರೆ ಮಾಡಿದ ಅಪ್ಪಾಸಾಬ ಇಂದು ಕೆಲಸ ಇದೆ ಮನೆ ಬರಲು ಆಗುವುದಿಲ್ಲ ಎಂದು ಮಾಹಿತಿ ನೀಡಿದ್ದರು. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಅಪ್ಪಾಸಾಬ ಬೀದಿ ಹೆಣವಾಗಿದ್ದಾರೆ.

ಹಂತಕರು ಯಾರೋ ಅಪ್ಪಾಸಾಬನನ್ನು ಕೊಲೆ ಮಾಡಿ ಅನಂತಪುರ ಬಸ್ ನಿಲ್ದಾಣದಲ್ಲಿ ಹಾಕಿ ಹೋಗಿದ್ದಾರೆ. ಮೈಮೇಲೆ ಹೊಡೆದಿರುವ ಗಾಯದ ಗುರುತುಗಳು ಪತ್ತೆಯಾಗಿವೆ. ಬೇರೆಡೆ ಕೊಲೆ ಮಾಡಿ ಶವ ಹಾಕಿ ಹೋಗಿರುವ ಶಂಕೆ ಇದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುರಿಸಿದ್ದಾರೆ.

ಇದನ್ನೂ ಓದಿ: Love Failure : ಹುಬ್ಬಳ್ಳಿ ಬಳಿಕ ಮಂಗಳೂರಿನಲ್ಲಿ ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಪಾಗಲ್‌ ಪ್ರೇಮಿ

ಚೂರಿ ಹಿಡಿದು ಮ್ಯಾನೇಜರ್‌ನನ್ನು ಅಟ್ಟಾಡಿಸಿದ ಸೆಕ್ಯೂರಿಟಿ ಗಾರ್ಡ್‌!

ಸೆಕ್ಯೂರಿಟಿ ಗಾರ್ಡ್‌ನಿಂದ ಶೋರೂಂ ಕ್ಲಸ್ಟರ್ ಮ್ಯಾನೇಜರ್‌ ಚೂರಿಯಿಂದ ಇರಿದು ಅಟ್ಟಾಡಿಸಿಕೊಂಡು ಹೋಗಿರುವ ಘಟನೆ ನಡೆದಿದೆ. ಚೂರಿಯಿಂದ ಇರಿದ ದೃಶ್ಯ ವಿಸ್ತಾರ ನ್ಯೂಶ್‌ಗೆ ಲಭ್ಯವಾಗಿದೆ. ಉಡುಪಿಯ ಹರ್ಷ ಶೋರೂಂನಲ್ಲಿ ಘಟನೆ ನಡೆದಿದೆ.

ಹರ್ಷ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಇರಿತಕ್ಕೊಳಗಾದವರು. ಅಲ್ಲೇ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರಸಾದ್ ಹಲ್ಲೆ ನಡೆಸಿದವನು. ಪ್ರಸಾದ್‌ ಕೆಲಸದಲ್ಲಿ ಅಶಿಸ್ತು ತೋರಿದ್ದಕ್ಕಾಗಿ ರೋನ್ಸನ್‌ ವಾರ್ನಿಂಗ್ ನೀಡಿದ್ದರು. ಕೆಲಸದಿಂದ ತೆಗೆಯದಂತೆ ರೋನ್ಸನ್ ಬಳಿ ಪ್ರಸಾದ್ ಕೇಳಿಕೊಂಡಿದ್ದ. ಮರುದಿನ ಮೀಟಿಂಗ್‌ನಲ್ಲಿ ಚರ್ಚಿಸುವುದಾಗಿ ರೋನ್ಸನ್‌ ಹೇಳಿದ್ದರು.

ಆಗಸ್ಟ್ 10 ರ ಸಂಜೆ 7.30ರಂದು ಮಾತುಕತೆ ಬಳಿಕ ಗ್ರೌಂಡ್ ಫ್ಲೋರ್‌ನಲ್ಲಿ ಕಾದು ಕುಳಿತಿದ್ದ ಆರೋಪಿ ಪ್ರಸಾದ್ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಬರುತ್ತಿದ್ದಂತೆ ಚೂರಿಯಲ್ಲಿ ಇರಿದಿದ್ದ. ಕೂಡಲೇ ಈತನಿಂದ ತಪ್ಪಿಸಿಕೊಂಡು ರೋನ್ಸನ್‌ ಓಡಿದ್ದರು. ಆದರೂ ಬಿಡದೇ ಪ್ರಸಾದ್‌ ಬೆನ್ನಟ್ಟಿ ಹೋಗಿ ಕೊಲೆಗೆ ಯತ್ನಿಸಿದ್ದಾನೆ. ಇದೆಲ್ಲವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Ashwini Ponnappa
ಪ್ರಮುಖ ಸುದ್ದಿ6 hours ago

Ashwini Ponnappa : ಷಟ್ಲರ್​ಗಳನ್ನೇ ಗುರಿಯಾಗಿಸಿದ ಕ್ರೀಡಾ ಇಲಾಖೆ ವಿರುದ್ಧವೇ ತಿರುಗಿ ಬಿದ್ದ ಅಶ್ವಿನಿ ಪೊನ್ನಪ್ಪ

Sowmya Reddy
ರಾಜಕೀಯ6 hours ago

Sowmya Reddy: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

Cricket News
ಪ್ರಮುಖ ಸುದ್ದಿ6 hours ago

Cricket News : ಬಾಂಗ್ಲಾದೇಶ ವಿರುದ್ಧದ ಸರಣಿಯ ವೇಳಾಪಟ್ಟಿ ಬದಲಾಯಿಸಿದ ಬಿಸಿಸಿಐ

Koppala News
ಕೊಪ್ಪಳ6 hours ago

Koppala News: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ನಿರ್ಮಾಣದಲ್ಲೂ ಕಮಿಷನ್ ರಾಜಕೀಯ; ಕಾಂಗ್ರೆಸ್ ಮುಖಂಡನಿಂದಲೇ ಆರೋಪ

Koppala News
ಕರ್ನಾಟಕ7 hours ago

Koppala News: ಮಕ್ಕಳ ತಟ್ಟೆಯಲ್ಲಿನ ಮೊಟ್ಟೆ ಕಸಿದುಕೊಂಡ ಅಂಗನವಾಡಿಗೆ ನ್ಯಾಯಾಧೀಶರ ದಿಢೀರ್ ಭೇಟಿ!

Kannada New Movie
ಬೆಂಗಳೂರು7 hours ago

Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ʼಸ್ವಪ್ನ ಮಂಟಪʼ ಚಿತ್ರ

Independence Day 2024
ದೇಶ7 hours ago

Independence Day 2024: ಬ್ರಿಟಿಷ್‌ ಕಾಲದ ಚಿನ್ನದ ನಾಣ್ಯದಿಂದ ಹಿಡಿದು ಸ್ವತಂತ್ರ ಭಾರತದ ರೂಪಾಯಿವರೆಗಿನ ಇತಿಹಾಸ ಕುತೂಹಲಕರ!

Vinesh Phogat
ಪ್ರಮುಖ ಸುದ್ದಿ7 hours ago

Vinesh Phogat : ವಿನೇಶ್​ ಪೋಗಟ್​ ಅನರ್ಹತೆ ತೀರ್ಪು ಆಗಸ್ಟ್​​​ 16ಕ್ಕೆ ಮುಂದೂಡಿಕೆ

Cauvery Water Dispute
ಕರ್ನಾಟಕ7 hours ago

Cauvery Water Dispute: ಕಾವೇರಿ ನೀರು ನಿಗದಿಗಿಂತ ಹೆಚ್ಚು ಹರಿಸಿದರೂ ತಮಿಳುನಾಡು ಆಕ್ಷೇಪ!

Sheikh Hasina
ಪ್ರಮುಖ ಸುದ್ದಿ8 hours ago

Sheikh Hasina : ಬಾಂಗ್ಲಾದಿಂದ ಪಲಾಯನ ಮಾಡಿದ ಬಳಿಕ ಮೊದಲ ಬಾರಿ ಹೇಳಿಕೆ ನೀಡಿದ ಶೇಖ್​ ಹಸೀನಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌