Site icon Vistara News

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah

ಬೆಳಗಾವಿ: ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿಯ ಕನ್ನಡ ಶಾಲೆಗಳಿಗೆ (Kannada Schools) ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಕನ್ನಡಿಗರ ಸಂಸ್ಕೃತಿ ಮತ್ತು ಪರಂಪರೆಯ ಹಾಳು ಮಾಡುತ್ತಿರುವ ಮಹಾರಾಷ್ಟ್ರ ಸರ್ಕಾರದ (Maharashtra Government) ಕನ್ನಡ ವಿರೋಧಿ ನೀತಿಯನ್ನು ಪ್ರತಿಭಟಿಸುವ ಕುರಿತು ಈಗ ಕನ್ನಡಿಗರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ (Belagavi News) ಬರೆದಿದ್ದಾರೆ.

ಈ ಬಗ್ಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಇತರರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಕುರಿತು ಗಮನ ಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಸರ್ಕಾರವು ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಎಲ್ಲ ಮರಾಠಿ ಶಾಲೆಗಳಿಗೆ ಸರ್ವ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಭಾಷಾ ಅಲ್ಪಸಂಖ್ಯಾತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮರಾಠಿ ಭಾಷಿಕರ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನೇ ನೇಮಿಸುತ್ತ ಬಂದಿದೆ. ಇದಕ್ಕೆ ತದ್ವಿರುದ್ಧವಾಗಿ ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಅಲ್ಲಿಯ ಕನ್ನಡಿಗರ ಹಿತಕ್ಕೆ ಧಕ್ಕೆ ತರುವಂಥ ಕನ್ನಡಿಗರ ಹಾಗೂ ಕನ್ನಡ ವಿರೋಧಿ ನಿಲುವನ್ನು ಮಹಾರಾಷ್ಟ್ರ ಸರ್ಕಾರ ತಳೆಯುತ್ತಿದೆ ಎಂದು ಹೇಳಿದ್ದಾರೆ.

ಸಾಂಗ್ಲಿ ಜಿಲ್ಲಾ ಪಂಚಾಯಿತಿಯು ಇತ್ತೀಚೆಗೆ ಕನ್ನಡ ಶಾಲೆಗಳಿಗಾಗಿ ನೇಮಕ ಮಾಡಿದ 24 ಶಿಕ್ಷಕರ ಪೈಕಿ ಕೇವಲ ನಾಲ್ವರು ಮಾತ್ರ ಕನ್ನಡಿಗರಾಗಿದ್ದಾರೆ. ಕನ್ನಡ ಡಿ.ಎಡ್. ಪದವಿ ಪಡೆದ ನೂರಾರು ಶಿಕ್ಷಕರು ಕನ್ನಡ ಪ್ರದೇಶಗಳಲಿದ್ದು ಅವರನ್ನು ಕನ್ನಡ ಶಾಲೆಗಳಿಗೆ ನೇಮಕ ಮಾಡದೇ ಮರಾಠಿ ಶಿಕ್ಷಕರನ್ನು ನೇಮಕ ಮಾಡುತ್ತಿರುವ ಅಲ್ಲಿಯ ಸರ್ಕಾರದ ಕ್ರಮವು ದುರದ್ದೇಶಪೂರಿತವಾಗಿದೆ. ಈ ಕ್ರಮದ ವಿರುದ್ಧ ಅಲ್ಲಿಯ ಕನ್ನಡಿಗರು, ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ, ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಅವರ ಬೆನ್ನಿಗೆ ಕರ್ನಾಟಕ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

ಮಹಾರಾಷ್ಟ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರವು ತನ್ನ ಸೂಕ್ತ ಹಾಗೂ ಸಮಂಜಸವಾದ ಪ್ರತಿಭಟನೆಯನ್ನು ತಿಳಿಸಬೇಕು. ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರನ್ನೊಳಗೊಂಡ ನಿಯೋಗವನ್ನು ಮಹಾರಾಷ್ಟ್ರಕ್ಕೆ ಕಳುಹಿಸಿ ಸಮಗ್ರವಾದ ವರದಿಯೊಂದನ್ನು ತಾವು ತರಿಸಿಕೊಂಡು ಮಹಾರಾಷ್ಟ್ರ ಸರ್ಕಾರದ ಗಮನಕ್ಕೆ ತರುವ ಮೂಲಕ ಅಲ್ಲಿಯ ಕನ್ನಡಿಗರ ಹಿತರಕ್ಷಣೆಗೆ ಕ್ರಮ ಕೈಕೊಳ್ಳುವಂತೆ ಒತ್ತಾಯಿಸಬೇಕೆಂದು ಕೋರುತ್ತೇವೆ ಎಂದು ಬೆಳಗಾವಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಸದಸ್ಯರು ಪತ್ರ ಬರೆದು ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಧೋರಣೆಯನ್ನು ಮನವರಿಕೆ ಮಾಡಿದ್ದಾರೆ.

Exit mobile version