Site icon Vistara News

Belagavi News: ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಟೋ ರ‍್ಯಾಲಿ ನಡೆಸಿ ಮತಯಾಚನೆ

Minister Lakshmi Hebbalkar auto rally

ಬೆಳಗಾವಿ: ಲೋಕಸಭಾ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ಬೆಳಗಾವಿಯಲ್ಲಿ (Belagavi News) ಆಟೋ ರ‍್ಯಾಲಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ, ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಪರ ಆಟೋ ಚಾಲಕರಲ್ಲಿ ಮತಯಾಚನೆ ನಡೆಸಿದರು.

ನಗರದ ಟಿಳಕ ಚೌಕ, ರಾಮದೇವ್ ಹೋಟೆಲ್, ಚನ್ನಮ್ಮ ಸರ್ಕಲ್, ಬೋಗಾರ್ ವೇಸ್, ಚಿತ್ರಾ ಟಾಕೀಸ್, ಗಣೇಶಪುರ ಸೇರಿದಂತೆ ವಿವಿಧೆಡೆ ಆಟೋ ಸ್ಟ್ಯಾಂಡ್‌ಗಳಿಗೆ ಆಟೋದಲ್ಲಿಯೇ ತೆರಳಿದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಆಟೋ ಚಾಲಕರಿಂದ ಭಾರೀ ಸ್ವಾಗತ, ಬೆಂಬಲ ವ್ಯಕ್ತವಾಯಿತು. ಎಲ್ಲೆಡೆ ಹೂಗುಚ್ಛಗಳನ್ನು ನೀಡಿ ಸಚಿವರನ್ನು ಸ್ವಾಗತಿಸಿದರು.

ಇದನ್ನೂ ಓದಿ: Karnataka Weather : ಇನ್ನೆರಡು ದಿನ ದಕ್ಷಿಣ ಒಳನಾಡಲ್ಲಿ ಭರ್ಜರಿ ಮಳೆ; ಬೆಂಗಳೂರು ಸಖತ್‌ ಹಾಟ್!

ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾತನಾಡಿ, ಮೃಣಾಲ್‌ ಹೆಬ್ಬಾಳ್ಕರ್‌ ಸ್ಥಳೀಯ ಯುವಕನಿದ್ದು, ಕೆಲಸ ಮಾಡುವ ಉತ್ಸಾಹ ಹೊಂದಿದ್ದಾನೆ. ಬೆಳಗಾವಿಯವನಾಗಿದ್ದು, ಬೆಳಗಾವಿಯಲ್ಲೇ ಇದ್ದು ಕೆಲಸ ಮಾಡಲಿದ್ದಾನೆ. ಆಯ್ಕೆಯಾದ ನಂತರವೂ ನಿಮ್ಮ ಕೈಗೆ ಸಿಗಲಿದ್ದಾನೆ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಬೆಳಗಾವಿಯ ಸ್ವಾಭಿಮಾನ ಎತ್ತಿ ಹಿಡಿಯೋಣ. ಒಟ್ಟಾಗಿ ಬೆಳಗಾವಿ ಅಭಿವೃದ್ಧಿ ಮಾಡೋಣ ಎಂದು ಮನವಿ ಮಾಡಿದರು.

ಸಚಿವರು ಆಟೋ ನಿಲ್ದಾಣಗಳಿಗೆ, ಆಟೋದಲ್ಲೇ ಬಂದಿರುವುದನ್ನು ಗಮನಿಸಿ, ಆಟೋ ಚಾಲಕರು ಸಂತಸಗೊಂಡರು.

ಇದನ್ನೂ ಓದಿ: Sadguru Jaggi Vasudev: ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಸದ್ಗುರು ಜಗ್ಗಿ ವಾಸುದೇವ್‌ ಡಿಸ್‌ಚಾರ್ಜ್‌

ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಪ್ರಮುಖರು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಅನೇಕ ಪ್ರಮುಖರು ಸಾಥ್ ನೀಡಿದರು.

Exit mobile version