ಬೆಳಗಾವಿ: ಇಲ್ಲಿನ ಬೈಲಹೊಂಗಲ ತಾಲೂಕಿನ ನಯಾನಗರದ ಮಲಪ್ರಭಾ ನದಿಗೆ ಹಾರಿ ವೃದ್ಧರೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಮೇಲಿಂದ ಹಾರಿ ಪ್ರಾಣ ಬಿಟ್ಟಿದ್ದಾರೆ.
ಇತ್ತ ಸ್ಥಳೀಯರು ವೃದ್ದನನ್ನು ಕಾಪಾಡಲು ನದಿಗೆ ಹಗ್ಗ ಬಿಟ್ಟು ಕಾಪಾಡಲು ಪ್ರಯತ್ನಿಸಿ, ಹರಸಾಹಸ ಪಟ್ಟರೂ ಸಹ ವೃದ್ಧ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಯಾರು? ಎಲ್ಲಿಯವರು ಎಂಬ ಮಾಹಿತಿ ತಿಳಿದು ಬಂದಿಲ್ಲ,
ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಹಾಗೂ ಎನ್ಡಿಆರ್ಎಫ್, ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದೆ. ನದಿಯಲ್ಲಿ ತೇಲಾಡುತ್ತಿರುವ ಮೃತದೇಹವನ್ನು ಹೊರ ತೆಗೆಯಲು ಮುಂದಾಗಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ