Site icon Vistara News

Bike Accident : ಆಯತಪ್ಪಿ ಬೈಕ್‌ ಸಮೇತ 100 ಅಡಿ ಪ್ರಪಾತಕ್ಕೆ ಬಿದ್ದ ಸವಾರ!

Man falls into 100 feet gorge with bike

ಬೆಳಗಾವಿ: ಬೈಕ್ ಸಮೇತ 100 ಅಡಿ ಪ್ರಪಾತಕ್ಕೆ ಬಿದ್ದಿದ್ದ ವ್ಯಕ್ತಿಯ ರಕ್ಷಣೆ (Bike Accident) ಮಾಡಲಾಗಿದೆ. ಬೆಳಗಾವಿಯ ಖಾನಾಪೂರ ತಾಲೂಕಿನ ಚಿಕಲೆ ಫಾಲ್ಸ್ ಬಳಿ ಘಟನೆ ನಡೆದಿದೆ. ಬೆಳಗಾವಿ ಕ್ಯಾಂಪ್‌ ಪ್ರದೇಶದ ವಿನಾಯಕ ಬುತ್ತುಲ್ಕರ್ ಎಂಬಾತ ಪ್ರಪಾತಕ್ಕೆ ಬಿದ್ದವರು.

ವಿನಾಯಕ ತನ್ನ ಸ್ನೇಹಿತರ ಜತೆಗೆ ಚಿಕಲೆ ಫಾಲ್ಸ್ ನೋಡಲು ಹೋದಾಗ ಈ ಅವಘಡ ಸಂಭವಿಸಿದೆ. ಬೈಕ್‌ನಲ್ಲಿ ಹೋಗುವಾಗ ಆಯತಪ್ಪಿ 100 ಅಡಿ ಆಳದ ಪ್ರಪಾತಕ್ಕೆ ಬಿದ್ದಿದ್ದ. ಈ ವೇಳೆ ಆತನ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಖಾನಾಪುರ ಸಿಪಿಐ ರಾಮಚಂದ್ರ ನಾಯಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಪ್ರಪಾತಕ್ಕೆ ಬಿದ್ದು ನರಳಾಡುತ್ತಿದ್ದ ವಿನಾಯಕನನ್ನು ಸುರಕ್ಷತವಾಗಿ ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ವಿನಾಯಕ್‌ ಮುಖ ಹಾಗೂ ಕಾಲಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ತಮ್ಮ ಪ್ರಾಣವನ್ನು ಪಟ್ಟಕ್ಕಿಟ್ಟು ಗೆಳೆಯನನ್ನು ಕಾಪಾಡಿದ್ದಕ್ಕೆ ಯುವಕರು ಚಪ್ಪಾಳೆ ತಟ್ಟಿ ಧನ್ಯವಾದವನ್ನು ಸಲ್ಲಿಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version