Site icon Vistara News

Border Dispute | ಮಹಾರಾಷ್ಟ್ರ ಗಡಿ ಸಮನ್ವಯ ಸಚಿವರ ಎದುರು ಎಂಇಎಸ್ ಮುಖಂಡರಿಂದ ನಾಡದ್ರೋಹಿ ಘೋಷಣೆ

Border Dispute

ಬೆಳಗಾವಿ: ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಶಂಭುರಾಜ್ ದೇಸಾಯಿ ಭೇಟಿ ವೇಳೆ ಎಂಇಎಸ್ ಕಾರ್ಯಕರ್ತರು ನಾಡದ್ರೋಹಿ ಘೋಷಣೆ ಕೂಗಿ ಉದ್ಧಟತನ ಮೆರೆದಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಬಾಲ್ಕಿ ಮಹಾರಾಷ್ಟ್ರಕ್ಕೆ (Border Dispute) ಸೇರಬೇಕು ಎಂದು ಎಂಇಎಸ್ ಮುಖಂಡರು ಘೋಷಣೆ ಕೂಗಿದ್ದಾರೆ.

ಗಡಿ ಭಾಗದ ಮಹಾರಾಷ್ಟ್ರದ ಶಿನೋಳ್ಳಿ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕೆ ಸಚಿವ ಶಂಭುರಾಜ್ ದೇಸಾಯಿ ಶುಕ್ರವಾರ ಆಗಮಿಸಿದ್ದರು. ಹೀಗಾಗಿ 10ಕ್ಕೂ ಹೆಚ್ಚು ಎಂಇಎಸ್ ಮುಖಂಡರು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಚಳಿಗಾಲದ ಅಧಿವೇಶನಕ್ಕೆ ಪ್ರತಿಯಾಗಿ ಡಿಸೆಂಬರ್ ‌19ರಂದು ಬೆಳಗಾವಿಯ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ‌ಮಹಾಮೇಳಾವ್ ನಡೆಸಲು ಎಂಇಎಸ್ ನಿರ್ಧಾರ ಮಾಡಿದೆ. ಹೀಗಾಗಿ ಶಂಭುರಾಜ್ ದೇಸಾಯಿಗೆ ಸಮ್ಮೇಳನಕ್ಕೆ ಬರುವಂತೆ ಆಹ್ವಾನ ನೀಡಿದ ಎಂಇಎಸ್‌ ಮುಖಂಡರು, ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಬಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆಗಳನ್ನು ಕೂಗಿದ್ದಾರೆ.

S

ಇದನ್ನೂ ಓದಿ | Kannada Sahitya Sammelana | ಕನ್ನಡ ರಥದ ಅದ್ಧೂರಿ ಮೆರವಣಿಗೆ; ಸಮಸ್ತ ಕನ್ನಡಿಗರಿಗೆ ಅಕ್ಷರ ಜಾತ್ರೆಗೆ ಆಹ್ವಾನ ನೀಡಿದ ಕಸಾಪ

Exit mobile version