Site icon Vistara News

Border Dispute: ನಮ್ಮ ಭೂಮಿ, ನಮ್ಮ ಭಾಷೆಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್

DK Shivakumar

Karnataka High Court hears petitions challenging withdrawal of consent for CBI probe into DK Shivakumar Case

ಬೆಂಗಳೂರು: “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಗಡಿ ವಿವಾದದ (Border Dispute) ಪ್ರತಿಕ್ರಿಯೆ ನೀಡಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚುತ್ತಿದ್ದು, ಕಚೇರಿ ತೆರೆಯಲು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎನ್ನುವ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು.

ಇದನ್ನೂ ಓದಿ: HSRP Number Plate ಅವಧಿ ಮತ್ತೆ 3 ತಿಂಗಳು ವಿಸ್ತರಣೆ; ವಿಧಾನ ಪರಿಷತ್‌ನಲ್ಲಿ ಸರ್ಕಾರ ಘೋಷಣೆ

ಬೆಳಗಾವಿಯ ಗ್ರಾಮೀಣ ಭಾಗದ ಜನರಿಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲತೆಗಳನ್ನು ಕಲ್ಪಿಸಿಕೊಟ್ಟಿದೆ. ಅವರು ನಮ್ಮ ನೀರು, ಗಾಳಿ ಕುಡಿಯುತ್ತಿದ್ದಾರೆ. ನಮ್ಮ ಭೂಮಿಯಲ್ಲಿ ವಾಸವಾಗಿದ್ದಾರೆ, ವ್ಯವಸಾಯ ಮಾಡುತ್ತಿದ್ದಾರೆ. ಈ ಬಜೆಟ್ ಅಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಕೃಷಿ ಭೂಮಿಗಳಿಗೆ ನೀರನ್ನು ಒದಗಿಸಲು ರೂ.900 ಕೋಟಿ ವೆಚ್ಚದಲ್ಲಿ ಯೋಜನೆ ಘೋಷಣೆ ಮಾಡಲಿದ್ದೇವೆ ಎಂದು ಹೇಳಿದರು.

ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಸಿಎಂ ಜತೆ ಚರ್ಚೆ

ಲೋಕಸಭಾ ಚುನಾವಣೆ ವಿಚಾರವಾಗಿ ಕೇಳಿದಾಗ “ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಅಂತಿಮ ಹಂತಕ್ಕೆ ತೆಗೆದುಕೊಂಡು ಹೋಗುತ್ತೇವೆ. ಈ ವಿಚಾರವಾಗಿ ನಾನು ಮತ್ತು ಮುಖ್ಯಮಂತ್ರಿಗಳು ಒಂದು ಸುತ್ತಿನ ಮಾತುಕಥೆ ನಡೆಸಿದ್ದೇವೆ. ಈಗ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಸಭೆ ಮಾಡುತ್ತೇವೆ, ನಂತರ ಸ್ಕ್ರೀನಿಂಗ್ ಸಮಿತಿ ಸದಸ್ಯರು ಚರ್ಚಿಸಿ ಹೈಕಮಾಂಡ್‌ಗೆ ಪಟ್ಟಿ ಕಳಿಸುತ್ತೇವೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ರಾಜ್ಯಸಭೆ ಟಿಕೆಟ್‌ ಬಗ್ಗೆ ಹೈಕಮಾಂಡ್‌ ತೀರ್ಮಾನ ಅಂತಿಮ

ರಾಜ್ಯಸಭೆಗೆ ರಾಜ್ಯದಿಂದ ಹೆಸರು ಸೂಚಿಸಲಾಗುವುದೇ ಎಂದು ಕೇಳಿದಾಗ, “ರಾಜ್ಯಸಭೆಗೆ ನಾವು ಹೆಸರುಗಳನ್ನು ಸೂಚಿಸುತ್ತೇವೆ. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Karnataka Budget Session 2024: ಕುಕ್ಕರ್‌ ಬ್ಲಾಸ್ಟ್‌ ಮಾಡಿದ್ದ ಬ್ರದರ್‌ ಬಗ್ಗೆ ಹೇಳುತ್ತೀರಿ, ಹಾವೇರಿ ಸಿಸ್ಟರ್‌ ಬಗ್ಗೆಯೂ ಮಾತಾಡಿ: ಅಶೋಕ್!

40 ಪರ್ಸೆಂಟ್ ಕಮಿಷನ್ ತನಿಖೆಯನ್ನು ಸಮಿತಿ ಮಾಡುತ್ತದೆ

40 ಪರ್ಸೆಂಟ್ ಕಮಿಷನ್ ವಿಚಾರವಾಗಿ ತನಿಖೆ ನಿಧಾನಗತಿಯಲ್ಲಿ ಸಾಗಿದೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, “ಹೈಕೋರ್ಟ್ ಅಭಿಪ್ರಾಯವನ್ನು ಗೌರವಿಸುತ್ತೇವೆ. ನಾವು ತನಿಖೆಯನ್ನು ಸಮಿತಿಗೆ ನೀಡಿದ್ದು, ಅವರ ಕರ್ತವ್ಯವನ್ನು ಅವರು ಮಾಡುತ್ತಾರೆ” ಎಂದು ಹೇಳಿದರು.

Exit mobile version