Self Harm: ಓದು ಎಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗ - Vistara News

ಕ್ರೈಂ

Self Harm: ಓದು ಎಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗ

ಓದುವಂತೆ ಹೇಳಿದ ತಾಯಿಯ ಬುದ್ಧಿಮಾತಿನಿಂದ ನೊಂದ ಬಾಲಕ ಆತ್ಮಹತ್ಯೆ (self Harm) ಮಾಡಿಕೊಂಡಿದ್ದಾನೆ.

VISTARANEWS.COM


on

student self harm belagavi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಓದಿಕೋ ಎಂದು ತಾಯಿ ಬುದ್ಧಿ ಹೇಳಿದ್ದರಿಂದ ಮನನೊಂದ ಮಗನೊಬ್ಬ ಆತ್ಮಹತ್ಯೆ (self harm) ಮಾಡಿಕೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ (belagavi news) ಮೂಡಲಗಿ ಪಟ್ಟಣದ ದೇಶಪಾಂಡೆ ಪ್ಲಾಟ್‌ನಲ್ಲಿ ಘಟನೆ ನಡೆದಿದೆ.

ಸಮರ್ಥ ಸುರೇಶ ಭಜಂತ್ರಿ (14) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಮೂಡಲಗಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ʼದೀಪಾವಳಿ ರಜೆ ಇದೆ ಅಂತ ತಿರುಗಬೇಡ, ಓದಿಕೋʼ ಎಂದು ತಾಯಿ ಬುದ್ಧಿ ಹೇಳಿದ್ದರು.

ಇಷ್ಟಕ್ಕೆ ಮನನೊಂದು ತಮ್ಮ ಮನೆಯ ಬೆಡ್‌ರೂಂನಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಪ್ಪ ಇದ್ದೇನೆ ಎಂದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ದೇಹತೂಕದ ಬಗೆಗಿದ್ದ ಜಿಗುಪ್ಸೆಯೇ ಆತ್ಮಹತ್ಯೆಗೆ ಕಾರಣ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ.

ಮಂಗಳೂರಿನ ಕುಂಟಿಕಾನದಲ್ಲಿರುವ ‌ಎ.ಜೆ ಆಸ್ಪತ್ರೆ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡಾಕೆ. ನಿನ್ನೆ ಮುಂಜಾನೆ 3 ಗಂಟೆಗೆ ಎಜೆ ಮಹಿಳಾ ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕದ್ರಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ಈಕೆ ಬರೆದಿಟ್ಟ ಹಲವು ಪುಟಗಳ ಡೆತ್ ನೋಟ್ ಪತ್ತೆಯಾಗಿದ್ದು, ʼದಪ್ಪ ಇದ್ದೀನಿ..ನೋಡೋಕೆ ಚನ್ನಾಗಿ ಕಾಣ್ತಾ ಇಲ್ಲʼ ಎಂದು ಬರೆದಿಟ್ಟಿದ್ದಾಳೆ. ʼಎಂಬಿಬಿಎಸ್ ಮುಗಿಸಬೇಕು ಅಂತ ತುಂಬಾ ಆಸೆ ಇತ್ತು. ಆದರೆ ನನ್ನ ಸೌಂದರ್ಯಕ್ಕೆ ದಪ್ಪ ಜೀವ ಅಡ್ಡಿಯಾಗಿದೆ. ತೂಕ ಇಳಿಸಲು ಸಾಕಷ್ಟು ಪ್ರಯತ್ನ ಪಟ್ಟರೂ ಆಗಲಿಲ್ಲ. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇನೆ‌ʼ ಎಂದು ಪ್ರಕೃತಿ ಬರೆದಿಟ್ಟಿದ್ದಾಳೆ.

ಇದನ್ನೂ ಓದಿ: Bengaluru News : ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಚಾಲಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಳಗಾವಿ

Road Accident : ಮರಕ್ಕೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ

Road accident : ಮದುವೆ ಮುಗಿಸಿ ಕಾರಲ್ಲಿ ವಾಪಸ್ ತೆರಳುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Car hits tree Six killed in road accident
Koo

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಆರು ಮಂದಿ ದಾರುಣವಾಗಿ (Road Accident) ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಈ ದುರ್ಘಟನೆ ನಡೆದಿದೆ.

ಕಾರು ಚಾಲಕ ಶಾರುಖ್ ಪೆಂಡಾರಿ (30), ಇಕ್ಬಾಲ್ ಜಮಾದಾರ್ (50), ಸಾನಿಯಾ ಲಂಗೋಟಿ (37) ಹಾಗೂ ಉಮರ್ ಲಂಗೋಟಿ (12), ಶಬನಮ್ ಲಂಗೋಟಿ ( 37), ಫರಾನ್ ಲಂಗೋಟಿ (13) ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮದುವೆ ಮುಗಿಸಿ ವಾಪಸ್‌ ಮರಳುತ್ತಿದ್ದರು ಎನ್ನಲಾಗಿದೆ. ಸ್ವಿಫ್ಟ್ ಕಾರಿನಲ್ಲಿ ಸುಮಾರು 10 ಮಂದಿ ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಇವರೆಲ್ಲರೂ ಧಾರವಾಡ ಮೂಲದವರಾಗಿದ್ದು, ಧಾರವಾಡದಿಂದ ಗೋಲಿಹಳ್ಳಿಗೆ ಹೊರಟಿದ್ದರು ಎನ್ನಲಾಗಿದೆ. ನಾಲ್ವರು ಗಾಯಾಳುಗಳನ್ನು ಸ್ಥಳೀಯ ಹಾಗೂ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಡಾ. ಭೀಮಾಶಂಕರ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸುತ್ತಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರಗೊಂಡಿದೆ.

ಇದನ್ನೂ ಓದಿ: Attempt To Murder : ಬಸ್‌ ತಡೆದು ಅಪ್ರಾಪ್ತೆಯ ಕತ್ತು ಕೊಯ್ದ ಬಾಲಕರು!

ಪಲ್ಟಿ ಹೊಡೆದ ಗೂಡ್ಸ್ ಗಾಡಿಯಲ್ಲಿ ಬೆಂಕಿ

ಕೊಡಗಿನ ಮಾಕುಟ್ಟ ಬಳಿ ಗೂಡ್ಸ್ ಗಾಡಿಗೆ ಬೆಂಕಿ ತಗುಲಿದೆ. ವೀರಾಜಪೇಟೆ- ಕೇರಳ ಅಂತರರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಪಿಕ್ ಅಪ್ ವಾಹನದಲ್ಲಿ ಗ್ಲೂಕೋಸ್ ಸಾಗಿಸಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿಕೊಂಡಿದೆ, ಆಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಸತೀಶ್ ಸೇರಿದಂತೆ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಮಾಕುಟ್ಟ ಅರಣ್ಯಪ್ರದೇಶದ ಬಳಿ ರಾತ್ರಿ ಈ ಘಟನೆ ನಡೆದಿದೆ. ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಸ್ಕಿಡ್‌ ಆದ ಬೈಕ್‌, ಇಬ್ಬರು ಗಂಭೀರ

ಚಿತ್ರದುರ್ಗದ ಕೊಳಹಾಳ್ ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ಬೈಕ್‌ ಸ್ಕಿಡ್‌ ಆಗಿ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಆಲಘಟ್ಟ ಗ್ರಾಮ ನಿವಾಸಿ ಪ್ರದೀಪ್, ನಾಗರಾಜಪ್ಪಗೆ ಗಂಭೀರ ಗಾಯವಾಗಿದೆ. ಭರಮಸಾಗರ ಕಡೆಗೆ ಹೋಗುವಾಗ ಬೈಕ್ ಸ್ಕಿಡ್ ಆಗಿ ಡಿವೈಡೆರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಗಾಯಾಳುಗಳು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಭರಮಸಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Attempt To Murder : ಬಸ್‌ ತಡೆದು ಅಪ್ರಾಪ್ತೆಯ ಕತ್ತು ಕೊಯ್ದ ಬಾಲಕರು!

Attempt To Murder : ಬೈಕ್‌ನಲ್ಲಿ ಬಂದ ಬಾಲಕರಿಬ್ಬರು ಚಲಿಸುತ್ತಿದ್ದ ಬಸ್‌ ತಡೆದು ನಿಲ್ಲಿಸಿ ಬಾಲಕಿಯೊಬ್ಬಳ ಕತ್ತು ಕೊಯ್ದಿದ್ದಾರೆ.

VISTARANEWS.COM


on

By

Boys stabbed the girl with a knife in kalaburagi
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ
Koo

ಕಲಬುರಗಿ: ಕಲಬುರಗಿಯಲ್ಲಿ (Kalaburagi News) ಸಿನಿಮೀಯ ರೀತಿಯಲ್ಲಿ ಅಪ್ರಾಪ್ತೆ ಮೇಲೆ ದಾಳಿ ಮಾಡಿ, ಚಾಕುವಿನಿಂದ ಇರಿಯಲಾಗಿದೆ. ಬಸ್‌ನಲ್ಲಿ ತೆರಳುತ್ತಿದ್ದ ಅಪ್ರಾಪ್ತೆಗೆ ಬೈಕ್‌ನಲ್ಲಿ ಬಂದ ಬಾಲಕರಿಬ್ಬರು ಬಸ್ ನಿಲ್ಲಿಸಿದ್ದಾರೆ. ಏಕಾಏಕಿ ಚಾಕುವಿನಿಂದ ಬಾಲಕಿಯ (Attempt To Murder) ಕತ್ತು ಕೊಯ್ದಿದ್ದಾರೆ.

ಕಲಬುರಗಿ ಜಿಲ್ಲೆಯ ಅಟ್ಟೂರ ಕ್ರಾಸ್ ಬಳಿ ಘಟನೆ ನಡೆದಿದೆ. ಬೆಳಮಗಿ ಗ್ರಾಮದಿಂದ ವಿಕೆ ಸಲಗರದ ಗ್ರಾಮಕ್ಕೆ ತೆರಳುವಾಗ ಈ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಹಲ್ಲೆ ಮಾಡಿದ ಬಾಲಕರು ಪರಿಚಿತರಾ? ಯಾಕಾಗಿ ಹಲ್ಲೆ ನಡೆಸಿದ್ದಾರೆ ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ. ಇನ್ನು ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಬಾಲಕಿ ಮೇಲೆ ದಾಳಿ ಮಾಡಿರುವುದು ಪೋಷಕರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಇದನ್ನೂ ಓದಿ: cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

ಹೆಂಡ್ತಿ ಕೊಲ್ಲುತ್ತಾಳೆ ಎಂದು ಮಕ್ಕಳೊಂದಿಗೆ ವಿಷ ಸೇವಿಸಿದ ಗಂಡ

ವಿಜಯನಗರ: ಕಳೆದ ನಾಲ್ಕೈದು ದಿನದ ಹಿಂದೆ ಕೂಡ್ಲಿಗಿ ತಾಲೂಕಿನ ಕಂಚೋಬನಳ್ಳಿ ಗ್ರಾಮದಲ್ಲಿ ತಂದೆ ಹಾಗೂ ಮಕ್ಕಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ (Self Harming) ಯತ್ನಿಸಿದ್ದರು. ಮೊದಮೊದಲು ಇದು ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇದೀಗ ಈ ಕೇಸ್‌ಗೆ ಟ್ವಿಸ್ಟ್‌ ಸಿಕ್ಕಿದ್ದು, ಹೆಂಡತಿ ಕೊಲೆ (Attempt To Murder) ಮಾಡುತ್ತಾಳೆ ಎನ್ನುವ ಭೀತಿಗೆ ಆತ್ಮಹತ್ಯೆಗೆ ಯತ್ನಿಸಿರುವುದು ಗೊತ್ತಾಗಿದೆ.

ಮಾರಪ್ಪ (38) ಎಂಬಾತ ತನ್ನಿಬ್ಬರು ಮಕ್ಕಳಾದ ಚಂದನ (16), ರಮೇಶ್(18) ಒಟ್ಟಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ವಿಚಾರಣೆ ವೇಳೆ ಬೀದಿ ಹೆಣ ಆಗುವುದಕ್ಕಿಂತ ಆತ್ಮಹತ್ಯೆ ಮಾಡಿಕೊಳ್ಳುವುದೇ ಸೂಕ್ತ ಎಂದು ಯೋಚಿಸಿ, ವಿಷ ಸೇವಿಸಿರುವುದಾಗಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Bengaluru News : ಬೆಂಗಳೂರಲ್ಲಿ ವೃದ್ಧ ದಂಪತಿ ಸೂಸೈಡ್‌

ಮಾರಪ್ಪನ ಪತ್ನಿ ದುರಗಮ್ಮ ಎಂಬಾಕೆಗೆ ಗೋವಿಂದಗಿರಿ ತಾಂಡಾ ನಿವಾಸಿ ಬೆಂಕಿನಾಯ್ಕ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದ ಮಾರಪ್ಪ, ದುರಗಮ್ಮಳ ಮೊಬೈಲ್ ಕಸಿದುಕೊಂಡು ಅವನ ಸಹವಾಸ ಬಿಡು ಎಂದು ತಾಕೀತು ಮಾಡಿದ್ದರು. ಮಾತ್ರವಲ್ಲ ಮಾರಪ್ಪ ಮತ್ತು ಮಕ್ಕಳಿಬ್ಬರು ದುರಗಮ್ಮಳನ್ನು ಕೂರಿಸಿಕೊಂಡು ಬುದ್ಧಿವಾದ ಹೇಳಿದ್ದರು.

Fear of wife killing Husband consumes poison with children
ಆತ್ಮಹತ್ಯೆಗೆ ಯತ್ನಿಸಿದ್ದ ಮಾರಪ್ಪ ಹಾಗೂ ಅವರ ಇಬ್ಬರು ಮಕ್ಕಳು

ಆದರೆ ಇವರ ಯಾವ ಮಾತಿಗೂ ಕ್ಯಾರೆ ಎನ್ನದ ದುರಗಮ್ಮ ಸಿಟ್ಟಾಗಿದ್ದಳು. ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಗಾಲು ಹಾಕಿದ್ದ ಗಂಡ, ಮಕ್ಕಳನ್ನು ಕೊಲ್ಲುವ ತೀರ್ಮಾನಕ್ಕೆ ಬಂದಿದ್ದಳು. ದುರಗಮ್ಮ, ಪ್ರಿಯಕರ ಬೆಂಕಿನಾಯ್ಕ್ ಸಹೋದರ ಶಿವಕುಮಾರ್ ಸೇರಿ ಕೊಲೆಗೆ ಸಂಚು ರೂಪಿಸಿದ್ದಾರೆ.

ಇತ್ತ ಕೊಲೆಗೆ ಸಂಚು ರೂಪಿಸಿದ್ದ ವಿಷಯವು ಹೇಗೋ ಮಾರಪ್ಪನ ಕಿವಿಗೆ ಬಿದ್ದಿತ್ತು. ಇದರಿಂದ ಮಾರಪ್ಪನ ಕುಟುಂಬ ಅಘಾತಕ್ಕೆ ಒಳಗಾಗಿದ್ದರು. ಇವರಿಂದ ಬೀದಿ ಹೆಣವಾಗುವ ಬದಲು ಆತ್ಮಹತ್ಯೆ ಮಾಡಿಕೊಳ್ಳುವುದೇ ಸೂಕ್ತ ಎಂದು ಯೋಚಿಸಿದ್ದರು. ಹೀಗಾಗಿ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದರು. ಸದ್ಯ, ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

cotton candy : ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್‌ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ತಮಿಳುನಾಡಲ್ಲಿ ಬ್ಯಾನ್‌ ಮಾಡಲಾಗಿದೆ. ಇದೀಗ ಕರ್ನಾಟಕದಲ್ಲೂ ಕ್ಯಾಟನ್ ಕ್ಯಾಂಡಿ ಬ್ಯಾನ್‌ ಆಗುತ್ತಾ? ಇಂತಹದೊಂದು ಚಿಂತನೆ ನಡೆದಿದೆ.

VISTARANEWS.COM


on

By

Catton Candy contain cancer Will there be a ban in Karnataka
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜಾತ್ರೆ ಸಮಾರಂಭಗಳಲ್ಲಿ ಮಕ್ಕಳ ಅಚ್ಚುಮೆಚ್ಚಿನ ತಿನಿಸು ಎಂದರೆ ಅದು ಬಾಂಬೆ ಮಿಠಾಯಿ. ಬೆಂಗಳೂರು ಸೇರಿದಂತೆ ಹಲವೆಡೆ ಬಸ್‌ ಸ್ಟ್ಯಾಂಡ್‌ನಲ್ಲೂ ಕಾಟನ್‌ ಕ್ಯಾಂಡಿಯನ್ನು (cotton candy) ಮಾರಾಟ ಮಾಡಲಾಗುತ್ತದೆ. ನೀವೆನಾದರೂ ಬಾಯಿ ಚಪ್ಪರಿಸಿಕೊಂಡು ಬಾಂಬೆ ಮಿಠಾಯಿ ತಿನ್ನುತ್ತೀರಾ? ಹಾಗಾದರೆ ಹುಷಾರು, ನಿಮ್ಮ ದೇಹವನ್ನು ಸಿಹಿಯಾದ ಮಾರಕ ವಿಷವು ಸೇರುತ್ತಿರಬಹುದು.

ಕಾಟನ್ ಕ್ಯಾಂಡಿಯಲ್ಲಿ ವಿಷಕಾರಿ ಅಂಶ ಪತ್ತೆಯಾದ ಕಾರಣಕ್ಕೆ ಈಗಾಗಲೇ ತಮಿಳುನಾಡಲ್ಲಿ ಬಾಂಬೆ ಮಿಠಾಯಿಯನ್ನು ಬ್ಯಾನ್‌ ಮಾಡಲಾಗಿದೆ. ಬಾಂಬೆ ಮಿಠಾಯಿಯಲ್ಲಿ ಮಾರಕ ರೋಡಮೈನ್-ಬಿ ಅಂಶ ಪತ್ತೆಯಾಗಿದೆ. ಇದು ಕ್ಯಾನ್ಸರ್​​ಕಾರಕವಾಗಿದ್ದು, ಮೆದುಳಿಗೂ ಹಾನಿ ಮಾಡುತ್ತದೆ. ಈ ಬಗ್ಗೆ ತಮಿಳುನಾಡಿನಲ್ಲಿ ಆಘಾತಕಾರಿ ವರದಿಯೊಂದು ಹೊರಬಿದ್ದಿದೆ.

ತಮಿಳುನಾಡು ಬಳಿಕ ಈಗ ಕರ್ನಾಟಕದಲ್ಲೂ ಬಾಂಬೆ ಮಿಠಾಯಿ ಬ್ಯಾನ್ ಮಾಡಲು ಚಿಂತನೆ ನಡೆದಿದೆ ಎನ್ನಲಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್​ ರೋಗಕ್ಕೆ ಕಾರಣವಾಗುವ ಅಂಶ ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲೂ ಸ್ಯಾಂಪಲ್​ ಸಂಗ್ರಹಕ್ಕೆ ಮೌಖಿಕ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಒಂದು ವೇಳೆ ಮಾರಕವಾದ ಅಂಶ ಪತ್ತೆಯಾದರೆ ಕರ್ನಾಟಕದಲ್ಲಿಯೂ ಬಾಂಬೆ ಮಿಠಾಯಿ ಬ್ಯಾನ ಮಾಡುವ ಸಾಧ್ಯತೆ ಇದೆ. ಈಗಾಗಲೇ ಕೇರಳ ಸರ್ಕಾರವು ಬಾಂಬೆ ಮಿಠಾಯಿ ಉತ್ಪಾದನೆ ಹಾಗೂ ಮಾರಾಟವನ್ನು ಬ್ಯಾನ್‌ ಮಾಡಿದೆ.

ಇದನ್ನೂ ಓದಿ: Water supply : ಮುಕ್ಕಾಲು ಬೆಂಗಳೂರಲ್ಲಿ ಕುಡಿಯುವ ನೀರು ಸ್ಥಗಿತ; ಯಾವಾಗ? ಎಲ್ಲೆಲ್ಲಿ ವ್ಯತ್ಯಯ

ಏನಿದು ರೋಡಮೈನ್‌-ಬಿ?

ತಮಿಳುನಾಡಿನ ಸರ್ಕಾರಿ ಲ್ಯಾಬ್‌ನಲ್ಲಿ ನಡೆಸಲಾದ ಪರೀಕ್ಷೆಯಲ್ಲಿ ಕಾಟನ್‌ ಕ್ಯಾಂಡಿಯಲ್ಲಿ ರೋಡಮೈನ್‌-ಬಿ ಅಂಶ ಇರುವುದು ದೃಢಪಟ್ಟಿತ್ತು. ಇದು ಕ್ಯಾನ್ಸರ್‌ ರೋಗಕ್ಕೆ ಕಾರಣವಾಗುವ ಹಿನ್ನೆಲೆಯಲ್ಲಿ ಬ್ಯಾನ್‌ ಮಾಡಿದೆ. ಒಂದು ವೇಳೆ ಯಾರಾದರೂ ಮಾರಾಟ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದೆ. ಇನ್ನೂ ಪಾಂಡಿಚೆರಿಯಲ್ಲಿ ಇದೇ ರೀತಿಯ ದೂರುಗಳು ಕೇಳಿ ಬಂದ ಕಾರಣಕ್ಕೆ ಅಲ್ಲಿನ ಆರೋಗ್ಯ ಇಲಾಖೆ ಪರೀಕ್ಷಿಸಿ ಖಚಿತ ಪಡಿಸಿದ ನಂತರ ಪಾಂಡಿಚೆರಿ ಕೇಂದ್ರಾಡಳಿತ ಕಾಟನ್‌ ಕ್ಯಾಂಟಿಯನ್ನು ನಿಷೇಧಿಸಿದೆ.

ಅಂದಹಾಗೇ ರಾಸಾಯನಿಕ ಪದಾರ್ಥವಾಗಿರುವ ರೋಡಮೈನ್‌-ಬಿ ಅಥವಾ ಆರ್‌ಎಚ್‌ವಿಯನ್ನು ಜವಳಿ, ಕಾಗದ, ಚರ್ಮ ಮತ್ತು ಬಣ್ಣಗಳ ಉದ್ಯಮದಲ್ಲಿ ಬಳಕೆ ಮಾಡಲಾಗುತ್ತದೆ. ಕೆಂಪು ಮತ್ತು ಗುಲಾಬಿ ಬಣ್ಣ ಪಡೆಯಲು ಈ ರಾಸಾಯನಿಕವನ್ನು ಬಳಸಲಾಗುತ್ತದೆ. ಪುಡಿ ರೂಪದಲ್ಲಿರುವ ಈ ರಾಸಾಯನಿಕವು ಹಸಿರು ಬಣ್ಣದಲ್ಲಿರುತ್ತದೆ. ನೀರಿಗೆ ಸೇರಿಸಿದಾಗ ಇದು ಗುಲಾಬಿ ಬಣ್ಣಕ್ಕೆ ತಿರುಗುತ್ತದೆ. ಈ ರಾಸಾಯನಿಕವು ದೇಹದೊಳಗೆ ಹೋದರೆ ಮಾರಕ ರೋಗ ಬರುವುದು ಗ್ಯಾರಂಟಿ ಆಗಿದೆ. ಕ್ಯಾನ್ಸರ್ ರೋಗದ ಜತೆ ಮೆದುಲಿಗೂ ಇದು ಹಾನಿ ಮಾಡುತ್ತದೆ.

ಬಾಂಬೆ ಮಿಠಾಯಿ ಇತಿಹಾಸವೇನು?

ಮುಂಬೈನಲ್ಲಿ ಬಾಂಬೆ ಮಿಠಾಯಿ ತಯಾರು ಮಾಡುವ ಯಂತ್ರ ಹುಟ್ಟಿಕೊಂಡಿತ್ತು. ಈ ಬಾಂಬೆ ಮಿಠಾಯಿಯಲ್ಲಿ ಸಕ್ಕರೆಗೆ ಗುಲಾಬಿ ಬಣ್ಣ ಬೆರೆಸಲಾಗುತ್ತದೆ. ರಂಧ್ರದಲ್ಲಿ ಹಾಕಿ ಯಂತ್ರದ ಹಿಡಿಕೆಯನ್ನು ತಿರುಗಿಸಬೇಕು. ಹೀಗೆ ತಿರುಗಿಸುವಾಗ ಯಂತ್ರವು ಬಿಸಿಯಾಗುತ್ತಾ ಹೋದಂತೆ ಸಕ್ಕರೆ ಕರಗಿ ಹತ್ತಿಯಂತಾಗುತ್ತದೆ. ಪಾಲಿಥಿನ್ ಚೀಲದಲ್ಲಿ ತುಂಬಿಸಿಟ್ಟು ಮಾರಾಟ ಮಾಡಲಾಗುತ್ತದೆ.

ಇದನ್ನೂ ಓದಿ: Hasana News : ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದವಾಗಿ ವಿದ್ಯಾರ್ಥಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಗೋಬಿ ಮಂಚೂರಿಯನ್‌ಗೆ ಬಟ್ಟೆ ಒಗೆಯುವ ಪುಡಿ ಬಳಕೆ

ಗೋಬಿ ಮಂಚೂರಿಯನ್‌ನಲ್ಲೂ ವಿಷಕಾರಿ ಅಂಶ ಇದ್ಯಂತೆ. ಗೋಬಿಯಲ್ಲಿ ಹೆಚ್ಚು ಕೆಮಿಕಲ್ ಬಣ್ಣ ಬಳಸುವುದರಿಂದ ಆರೋಗ್ಯಕ್ಕೆ ಇದು ಎಫೆಕ್ಟ್‌ ಆಗಲಿದೆ. ಗೋವಾದಲ್ಲಿ ಗೋಬಿಗೆ ಬಟ್ಟೆ ಒಗೆಯುವ ಪುಡಿಯನ್ನು ಬಳಕೆ ಮಾಡಿದ ಹಿನ್ನೆಲೆಯಲ್ಲಿ ಗೋಬಿ ಬ್ಯಾನ್ ಮಾಡಲಾಗಿತ್ತು. ಹೀಗಾಗಿ ಕರ್ನಾಟಕದಲ್ಲೂ ಗೋಬಿ ಮಂಚೂರಿಯನ್ ಬ್ಯಾನ್‌ ಆಗುತ್ತಾ ಎಂಬ ಚರ್ಚೆ ನಡೆಯುತ್ತಿದೆ. ಕರ್ನಾಟಕದಲ್ಲೂ ಅಧಿಕಾರಿಗಳಿಗೆ ಸ್ಯಾಂಪಲ್​ ಸಂಗ್ರಹಕ್ಕೆ ಮೌಖಿಕ ಸೂಚನೆ ನೀಡಲಾಗಿದೆ.

ಗೋಬಿ ಮಂಚೂರಿ ಇತಿಹಾಸವೇನು?

-ಚಿಕನ್‌ ಮಂಚೂರಿಯನ್‌ಗೆ ಪರ್ಯಾಯ ಸಸ್ಯಾಹಾರಿಗಳ ಖಾದ್ಯ ಗೋಬಿ ಮಂಚೂರಿಯನ್‌
-ಚೈನಿಸ್ ಖಾದ್ಯ ಹಾಗೂ ಗೋಬಿ ಮಂಚೂರಿಯನ್‌ ಸೃಷ್ಟಿಕರ್ತ ಖ್ಯಾತ ಬಾಣಸಿಗ ನೆಲ್ಸನ್ ವಾಂಗ್
-1970ರಲ್ಲಿ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾಗೆ ಕೆಟರಿಂಗ್‌ನಲ್ಲಿ ಚಿಕನ್ ಮಂಚೂರಿಯನ್‌ ಆವಿಷ್ಕಾರ
-ಚಿಕನ್ ಮಂಚೂರಿಯನ್‌ಗೆ ಪರ್ಯಾಯವಾಗಿ ಗೋಬಿ ಮಂಚೂರಿಯನ್‌ ಆವಿಷ್ಕಾರ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Hasana News : ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದವಾಗಿ ವಿದ್ಯಾರ್ಥಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Hasana News: ಕಾಲೇಜಿನಿಂದ ಹಾಸ್ಟೆಲ್‌ಗೆ ಬಂದಿದ್ದ ವಿದ್ಯಾರ್ಥಿಯೊಬ್ಬ ( Student death ) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ವಿದ್ಯಾರ್ಥಿ ಸಾವಿಗೆ ವಾರ್ಡನ್ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

VISTARANEWS.COM


on

By

Student found dead in hostel Found hanging
ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ ಹಾಗೂ ವಿಕಾಶ್‌
Koo

ಹಾಸನ: ಹಾಸ್ಟೆಲ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ (Self harming) ಪತ್ತೆಯಾಗಿದೆ. ಹಾಸನ ನಗರದ ಉದಯಗಿರಿಯಲ್ಲಿರುವ (Hasana News) ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. ವಿಕಾಶ್ (18) ಮೃತ ದುರ್ದೈವಿ.

ಚನ್ನರಾಯಪಟ್ಟಣ ತಾಲೂಕಿನ ಬೆಳಗುಲಿ ಗ್ರಾಮದ ಸುರೇಶ್ ಹಾಗೂ ಮಮತಾ ದಂಪತಿಯ ಪುತ್ರ ವಿಕಾಸ್ ಎಂಬಾತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಮಾಸ್ಟರ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಕಾಶ್‌ ಅಲ್ಲಿನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಫೆ.22ರ ಗುರುವಾರ ಬೆಳಗ್ಗೆ ಕಾಲೇಜಿಗೆ ತೆರಳಿ ನಂತರ ಒಬ್ಬನೇ ಹಾಸ್ಟೆಲ್‌ಗೆ ವಾಪಸ್‌ ಆಗಿದ್ದ. ಬಳಿಕ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ವಿಕಾಶ್‌ ಪೋಷಕರು ಸ್ಥಳಕ್ಕಾಗಮಿಸಿದ್ದು, ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. ಮಗನ ಸಾವಿಗೆ ಹಾಸ್ಟೆಲ್ ವಾರ್ಡನ್ ಕಾರಣ ಎಂದು ಆರೋಪಿಸಿದ್ದಾರೆ. ಆಡಳಿತ ಮಂಡಳಿಯ ಪ್ರಮುಖರು ಬರುವವರೆಗೂ ಮೃತದೇಹವನ್ನು ತೆಗೆಯಲು ಬಿಡಲ್ಲ ಎಂದು ಪಟ್ಟು ಹಿಡಿದರು.

ಇದನ್ನೂ ಓದಿ: Bengaluru News : ಬೆಂಗಳೂರಲ್ಲಿ ವೃದ್ಧ ದಂಪತಿ ಸೂಸೈಡ್‌

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮೃತನ ಸಂಬಂಧಿಕರು ಪೊಲೀಸರ ಜತೆಗೆ ವಾಗ್ವಾದ ನಡೆಸಿದರು. ಘಟನೆ ನಡೆದು ಮೂರು ಗಂಟೆಯಾದರೂ ಆಡಳಿತ ಮಂಡಳಿಯ ಯಾವ ಸಿಬ್ಬಂದಿಯು ಬಂದಿಲ್ಲ ಎಂದು ಕಿಡಿಕಾರಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಮತ್ತೊಂದು ಕಡೆ ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿತ್ತು.

ಇನ್ನೂ ಇದೇ ವೇಳೆ ಆಡಳಿತ ಮಂಡಳಿಯ ಪರವಾಗಿ ಮಾತನಾಡಿದ ವ್ಯಕ್ತಿಯನ್ನು ಸುತ್ತುವರೆದು ಹಲ್ಲೆಗೆ ಯತ್ನಿಸಿದ ಘಟನೆಯು ನಡೆದಿದೆ. ಕೂಡಲೆ ಎಚ್ಚೆತ್ತ ಪೊಲೀಸರು ಆ ವ್ಯಕ್ತಿಯನ್ನು ಕರೆದೊಯ್ದಲು ಮುಂದಾಗಿದ್ದಾರೆ, ಈ ವೇಳೆ ಯುವಕನ ಕುಟುಂಬಸ್ಥರು ಪೊಲೀಸ್ ಜೀಪ್ ಸುತ್ತುವರೆದು ಆಕ್ರೋಶಿಸಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ನಿಯೋಜನೆ ಮಾಡಿ ಪರಿಸ್ಥಿತಿಯನ್ನು ಪೊಲೀಸರು ತಿಳಿಗೊಳಿಸಿದರು. ಪೋಷಕರ‌ ಜತೆ ಮಾತನಾಡಿ ಮನವೊಲಿಸಿ ಮೃತದೇಹವನ್ನು ಹಾಸನದ ಹಿಮ್ಸ್‌ ಆಸ್ಪತ್ರೆಗೆ ರವಾನಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
BJP hits out at Rahul Gandhi for insulting Actor aishwarya rai bachchan
ದೇಶ4 mins ago

Rahul Gandhi: ಐಶ್ವರ್ಯಾ ರೈರನ್ನು ಅವಮಾನಿಸಿದ ರಾಹುಲ್‌ ಗಾಂಧಿಗೆ ಬಿಜೆಪಿ ತರಾಟೆ

INDIA Alliance partners Congress and AAP Seal seat deal for Goa, Haryana, Gujarat
ದೇಶ37 mins ago

INDIA Alliance: ದಿಲ್ಲಿ ಬಳಿಕ ಗೋವಾ, ಹರ್ಯಾಣ, ಗುಜರಾತ್‌ನಲ್ಲೂ ಕಾಂಗ್ರೆಸ್-ಆಪ್ ಸೀಟು ಹಂಚಿಕೆ ಫೈನಲ್!

Aryaman Ashok Shankar
ಚಾಮರಾಜನಗರ39 mins ago

Social Sevice : ಶ್ರವಣದೋಷವುಳ್ಳ ಮಕ್ಕಳ ಕೇಂದ್ರಕ್ಕೆ ಕ್ರೀಡಾಪರಿಕರಗಳ ವಿತರಣೆ

ರಾಜಕೀಯ44 mins ago

Karnataka Budget Session 2024: ಈ ಸರ್ಕಾರದಿಂದ ಹಿಂದೂಗಳಿಗೆ ದ್ರೋಹ: ಆರ್‌. ಅಶೋಕ್‌

Mudda Hanumegowda joins Congress
ತುಮಕೂರು44 mins ago

Mudda hanumegowda : ಕೆಲವರ ಅತೃಪ್ತಿ ನಡುವೆ ಮತ್ತೆ ಕೈ ಸೇರಿದ ಮುದ್ದಹನುಮೇಗೌಡ

D. hiremath foundation
ಉತ್ತರ ಕನ್ನಡ1 hour ago

Arun Yogiraj : ರಾಮಲಲ್ಲಾ ವಿಗ್ರಹ ಕೆತ್ತಿದ ಅರುಣ್​ ಯೋಗಿರಾಜ್​ಗೆ ‘ಅಭಿನವ ಅಮರ ಶಿಲ್ಪಿ’ ಪುರಸ್ಕಾರ

For Registration Movie Telugu Dubbing Rights sold for huge amount
ಸಿನಿಮಾ1 hour ago

For Registration Movie: ರಿಲೀಸ್‌ಗೂ ಮೊದ್ಲೇ ’ಫಾರ್ ರಿಜಿಸ್ಟ್ರೇಷನ್’ಗೆ ಡಿಮ್ಯಾಂಡ್! ತೆಲುಗಿಗೂ ಹೊರಟ ಪೃಥ್ವಿ-ಮಿಲನಾ

Uttara Kannada ZP CEO eshwar Kandu visited Dayanilaya specially abled School in Kumta
ಉತ್ತರ ಕನ್ನಡ1 hour ago

Uttara Kannada News: ಸಾಧಿಸುವ ಛಲವಿದ್ದರೆ ಸಾಧನೆಯ ಹಾದಿ ಕಷ್ಟವಲ್ಲ: ಜಿ.ಪಂ ಸಿಇಒ ಈಶ್ವರ ಕಾಂದೂ

Chakravarthi sulibele spoke in Namo Bharat programme at Kudligi
ವಿಜಯನಗರ1 hour ago

Vijayanagara News: ಸರ್ವ ಶ್ರೇಷ್ಠ ಭಾರತಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು: ಚಕ್ರವರ್ತಿ ಸೂಲಿಬೆಲೆ

DY Chandrachud
ಪ್ರಮುಖ ಸುದ್ದಿ2 hours ago

C J Chandrachud : ಯೋಗ, ಸಸ್ಯಾಹಾರ; ಒತ್ತಡ ನಿವಾರಣೆ ತಂತ್ರ ವಿವರಿಸಿದ ಸುಪ್ರಿಂ ಕೋರ್ಟ್​​ ಮುಖ್ಯ​ ನ್ಯಾಯಮೂರ್ತಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Catton Candy contain cancer Will there be a ban in Karnataka
ಬೆಂಗಳೂರು3 hours ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

Swarnavalli Mutt appoints successor ceremony
ಕರ್ನಾಟಕ7 hours ago

Swarnavalli Mutt: ಸ್ವರ್ಣವಲ್ಲೀ ಶ್ರೀಗಳ ಶಿಷ್ಯ ಸ್ವೀಕಾರ ಸಂಪನ್ನ; ಇಲ್ಲಿದೆ ಲೈವ್‌ ವಿಡಿಯೊ

read your daily horoscope predictions for february 21 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ3 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

read your daily horoscope predictions for february 19 2024
ಭವಿಷ್ಯ4 days ago

Dina Bhavishya : ನಿಮ್ಮನ್ನು ದ್ವೇಷಿಸುವವರೇ ಸ್ನೇಹಿತರಾಗಿ ಬದಲಾಗುತ್ತಾರೆ

read your daily horoscope predictions for february 18 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಇಂದು ನೀರಿನಂತೆ ಹಣವನ್ನು ಖರ್ಚು ಮಾಡ್ತಾರೆ

Challenging Darsha
ಪ್ರಮುಖ ಸುದ್ದಿ5 days ago

Actor Darshan : ಚಾಲೆಂಜಿಂಗ್ ಸ್ಟಾರ್​ ದರ್ಶನ್​ ‘ಬೆಳ್ಳಿ ಪರ್ವ’ ಕಾರ್ಯಕ್ರಮದ ಲೈವ್​ ಇಲ್ಲಿ ವೀಕ್ಷಿಸಿ

Children lock up their mother for property
ಕರ್ನಾಟಕ5 days ago

Inhuman Behaviour : ಆಸ್ತಿಗಾಗಿ ಹೆತ್ತ ತಾಯಿಯನ್ನೇ ಗೃಹ ಬಂಧನದಲ್ಲಿಟ್ಟರು ಮಕ್ಕಳು!

read your daily horoscope predictions for february 17 2024
ಭವಿಷ್ಯ6 days ago

Dina Bhavishya : ಈ ರಾಶಿಯವರು ಸೀಕ್ರೆಟ್‌ ವಿಷ್ಯವನ್ನು ರಿವೀಲ್‌ ಮಾಡಿದ್ರೆ ಅಪಾಯ ಗ್ಯಾರಂಟಿ!

Karnataka Budget Session 2024 siddaramaiah use cinema Lines
ಸಿನಿಮಾ6 days ago

Karnataka Budget Session 2024: ಡಾಲಿ ಧನಂಜಯ್‌ ಬರೆದ ಸಾಲುಗಳು ಬಜೆಟ್‌ನಲ್ಲಿ ಹೈಲೈಟ್‌!

ಟ್ರೆಂಡಿಂಗ್‌