ಬೆಳಗಾವಿ: ಓದಿಕೋ ಎಂದು ತಾಯಿ ಬುದ್ಧಿ ಹೇಳಿದ್ದರಿಂದ ಮನನೊಂದ ಮಗನೊಬ್ಬ ಆತ್ಮಹತ್ಯೆ (self harm) ಮಾಡಿಕೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ (belagavi news) ಮೂಡಲಗಿ ಪಟ್ಟಣದ ದೇಶಪಾಂಡೆ ಪ್ಲಾಟ್‌ನಲ್ಲಿ ಘಟನೆ ನಡೆದಿದೆ.
ಸಮರ್ಥ ಸುರೇಶ ಭಜಂತ್ರಿ (14) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಮೂಡಲಗಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ʼದೀಪಾವಳಿ ರಜೆ ಇದೆ ಅಂತ ತಿರುಗಬೇಡ, ಓದಿಕೋʼ ಎಂದು ತಾಯಿ ಬುದ್ಧಿ ಹೇಳಿದ್ದರು.
ಇಷ್ಟಕ್ಕೆ ಮನನೊಂದು ತಮ್ಮ ಮನೆಯ ಬೆಡ್‌ರೂಂನಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಪ್ಪ ಇದ್ದೇನೆ ಎಂದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ದೇಹತೂಕದ ಬಗೆಗಿದ್ದ ಜಿಗುಪ್ಸೆಯೇ ಆತ್ಮಹತ್ಯೆಗೆ ಕಾರಣ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ.
ಮಂಗಳೂರಿನ ಕುಂಟಿಕಾನದಲ್ಲಿರುವ ಎ.ಜೆ ಆಸ್ಪತ್ರೆ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡಾಕೆ. ನಿನ್ನೆ ಮುಂಜಾನೆ 3 ಗಂಟೆಗೆ ಎಜೆ ಮಹಿಳಾ ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಕೆ ಬರೆದಿಟ್ಟ ಹಲವು ಪುಟಗಳ ಡೆತ್ ನೋಟ್ ಪತ್ತೆಯಾಗಿದ್ದು, ʼದಪ್ಪ ಇದ್ದೀನಿ..ನೋಡೋಕೆ ಚನ್ನಾಗಿ ಕಾಣ್ತಾ ಇಲ್ಲʼ ಎಂದು ಬರೆದಿಟ್ಟಿದ್ದಾಳೆ. ʼಎಂಬಿಬಿಎಸ್ ಮುಗಿಸಬೇಕು ಅಂತ ತುಂಬಾ ಆಸೆ ಇತ್ತು. ಆದರೆ ನನ್ನ ಸೌಂದರ್ಯಕ್ಕೆ ದಪ್ಪ ಜೀವ ಅಡ್ಡಿಯಾಗಿದೆ. ತೂಕ ಇಳಿಸಲು ಸಾಕಷ್ಟು ಪ್ರಯತ್ನ ಪಟ್ಟರೂ ಆಗಲಿಲ್ಲ. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇನೆʼ ಎಂದು ಪ್ರಕೃತಿ ಬರೆದಿಟ್ಟಿದ್ದಾಳೆ.
ಇದನ್ನೂ ಓದಿ: Bengaluru News : ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಚಾಲಕ