ಬೆಳಗಾವಿ: ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಹೀಗಾಗಿ ಗಡಿ ಜಿಲ್ಲೆಯಾದ ಬೆಳಗಾವಿಯಲ್ಲಿ ಆತಂಕ ಹೆಚ್ಚಾಗಿದೆ. ಆದರೂ ಗಡಿ ಭಾಗದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ. ಮಹಾರಾಷ್ಟ್ರದ ಪ್ರಯಾಣಿಕರು ಬಿಂದಾಸ್ ಆಗಿ ರಾಜ್ಯದೊಳಗೆ ಪ್ರವೇಶಿಸುತ್ತಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿ ಆಸ್ಪತ್ರೆ ಸೇರುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಮತ್ತೆ ಕಠಿಣ ನಿಯಮಗಳು ಜಾರಿಗೆ ಬಂದಿವೆ. ಜೂನ್ ತಿಂಗಳ ಆರಂಭದಿಂದ ಕೋವಿಡ್ ಪ್ರಕರಣಗಳು ಗಣನೀಯವಾಗಿ ಏರಿಕೆ ಆಗುತ್ತಲೇ ಇದೆ. ಹೀಗಾಗಿ ಕರ್ನಾಟಕ, ಮಹಾರಾಷ್ಟ್ರ ಸೇರಿ 5 ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ| ಕೋವಿಡ್ ಬಳಿಕ ಹೆಚ್ಚಿದೆ ದೈವ ಭಕ್ತಿ, ಧಾರ್ಮಿಕ ಪ್ರವಾಸೋದ್ಯಮಕ್ಕೆ ಭಾರಿ ಡಿಮ್ಯಾಂಡ್
ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಗಡಿಜಿಲ್ಲೆಗಳಲ್ಲಿ ಎಚ್ಚರಿಕೆ ಅಗತ್ಯ ಆಗಿದೆ. ಬೆಳಗಾವಿಯ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟು ನಿಟ್ಟಿನ ತಪಾಸಣೆ ಅನಿವಾರ್ಯ ಮಾಡಿದಾರೆ. ಬೆಳಗಾವಿ ಜಿಲ್ಲಾಡಳಿತಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿಲ್ಲ ಅಂದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹೇಳಲಾಗಿದೆ.